Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ಮನೆಗೆ ನುಗ್ಗಿ 120 ಗ್ರಾಂ...

Vijayapura | ಮನೆಗೆ ನುಗ್ಗಿ 120 ಗ್ರಾಂ ಚಿನ್ನ ಕಳವು : ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಮನೆಯವರು

ವಾರ್ತಾಭಾರತಿವಾರ್ತಾಭಾರತಿ9 Oct 2026 5:45 PM IST
share
Vijayapura | ಮನೆಗೆ ನುಗ್ಗಿ 120 ಗ್ರಾಂ ಚಿನ್ನ ಕಳವು : ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಮನೆಯವರು

ದೇವನಹಳ್ಳಿ : ದೇವನಹಳ್ಳಿ ತಾಲೂಕು ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಬ್ಬರಗುಂಟೆ ಗ್ರಾಮದಲ್ಲಿ ಮನೆಗೆ ನುಗ್ಗಿ 120 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯನ್ನು ಮನೆಯವರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಗೊಬ್ಬರಗುಂಟೆ ಗ್ರಾಮದ ಕೃಷ್ಣಪ್ಪ ಎಂಬುವವರ ಮನೆಗೆ ನುಗ್ಗಿದ ಆರೋಪಿ 120 ಗ್ರಾಂ ಚಿನ್ನ ಕಳವು ಮಾಡಿದ್ದಾನೆ. ಮನೆಯವರೆಲ್ಲರೂ ವಿಜಯಪುರದಲ್ಲಿ ಸಿನಿಮಾ ವೀಕ್ಷಿಸಲು ತೆರಳಿದ್ದಾಗ, ಅವರ ಚಲನವಲನಗಳ ಮೇಲೆ ದೂರದಿಂದಲೇ ನಿಗಾ ಇಟ್ಟಿದ್ದ ಆರೋಪಿ, ಮಧ್ಯಾಹ್ನ 1.50ರ ಸುಮಾರಿಗೆ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ.

ಕೃಷ್ಣಪ್ಪ ಅವರು ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಗಮನಿಸಿದ್ದಾರೆ. ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ಸಂದರ್ಭದಲ್ಲಿ ಒಳಗಿನಿಂದ ಬಾಗಿಲು ಲಾಕ್ ಮಾಡಿದ್ದು ಯಾರು ಎಂಬ ಅನುಮಾನ ಮೂಡಿದ್ದರಿಂದ, ತಕ್ಷಣ ತಮ್ಮ ಮಗನಿಗೆ ಫೋನ್ ಮಾಡಿದ್ದಾರೆ. ಆಗ ಸಿನಿಮಾ ವೀಕ್ಷಿಸುತ್ತಿದ್ದ ಮಗ, ಮೊಬೈಲ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಮನೆಗೆ ನುಗ್ಗಿರುವುದು ತಿಳಿದುಬಂದಿದೆ.

ತಕ್ಷಣ ಮನೆಗೆ ಬಂದ ಮಗ, ಬಾಗಿಲು ಒಡೆದು ಒಳಪ್ರವೇಶಿಸಿ ಹುಡುಕಾಟ ನಡೆಸಿದ್ದಾನೆ. ಈ ವೇಳೆ ಒಂದು ಕೊಠಡಿಯಲ್ಲಿ ಮಂಚದ ಕೆಳಗೆ ಅವಿತುಕೊಂಡಿದ್ದ ಆರೋಪಿಯನ್ನು ಹಿಡಿದಿದ್ದಾರೆ. ಕಳವು ಮಾಡಿದ್ದ 120 ಗ್ರಾಂ ಚಿನ್ನ ಆತನ ಜೇಬಿನಲ್ಲಿ ಪತ್ತೆಯಾಗಿದ್ದು, ಚಿನ್ನದ ಸಮೇತ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ಚಿತ್ತಿಲಪಲ್ಲಿ ಮೂಲದ ಅಜಯ್ ಎಂದು ಗುರುತಿಸಲಾಗಿದೆ. ಆತ ಯಲಹಂಕದ ಸಮೀಪದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದು, ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಕಳ್ಳತನಕ್ಕೂ ಮುನ್ನ ಎರಡು-ಮೂರು ದಿನಗಳಿಂದ ಮನೆಯವರ ಚಲನವಲನಗಳನ್ನು ಗಮನಿಸಿ, ಸೂಕ್ತ ಸಮಯಕ್ಕಾಗಿ ಕಾಯ್ದು ಕೃತ್ಯ ಎಸಗಿರುವುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags

policeHouse BreakVijayapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X