ವಿಜಯಪುರ: ಮನೆ ಕಳ್ಳತನ ಪ್ರಕರಣದ ಆರೋಪಿಗಳ ಬಂಧನ

ವಿಜಯಪುರ: ಕಳೆದ ಸೆಪ್ಟೆಂಬರ್ ನಲ್ಲಿ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಲಾದಗಿ ಅಬ್ದುಲ್ಲ( 30 ), ಲೋಕಾಪುರದ ಹೀರಾ (29) ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ 02 ಮೋಟಾರ್ ಸೈಕಲ್ ಗಳನ್ನು ಹಾಗೂ ಕಳ್ಳತನ ಮಾಡಿದ್ದ 4,50,000/- ಮೌಲ್ಯದ 40 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಮಸೂತಿ ಗ್ರಾಮದ ದಾನಮ್ಮಅವರ ಮನೆಯ ಕಳೆದ ಸೆ.19 ರಂದು ಬಾಗಿಲು ಮುರಿದು ಮನೆಯಲ್ಲಿದ್ದ 40 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಕುರಿತು ಕೂಡಗಿ ಪೊಲೀಸ್ ಠಾಣೆ ಗುನ್ನೆ ನಂ: 69/2025 ಕಲಂ: 331(3), 331(4), 305 ಬಿಎನ್ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Next Story





