Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura: ಇಂಡಿ ಶಾಸಕ ಯಶವಂತರಾಯಗೌಡ...

Vijayapura: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ23 Sept 2026 2:32 PM IST
share
Vijayapura: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ: ಬರ ಪೀಡಿತ ತಾಲೂಕು ಘೋಷಣೆಯಲ್ಲಿ ಸರ್ಕಾರದ ನಿಲುವನ್ನು ಖಂಡಿಸಿ ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಬರಗಾಲಕ್ಕೆ ತುತ್ತಾಗಿದೆ. ಆರಂಭದಲ್ಲಿ ಸ್ವಲ್ಪ ಮಳೆ ಬಿದ್ದ ಪ್ರಯುಕ್ತ ರೈತರು ಸಾಲ ಮಾಡಿ ಬೀಜ, ಗೊಬ್ಬರಗಳನ್ನು ಖರೀದಿಸಿ ಬಿತ್ತನೆ ಮಾಡಿದ್ದರು. ಆದರೆ, ಸಕಾಲಕ್ಕೆ ಮಳೆಯಾಗದ ಕಾರಣ ಬೆಳೆಗಳು ಬತ್ತಿಹೋಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಆಗಸ್ಟ್ 28ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಇಂಡಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಕೋರಲಾಗಿತ್ತು. ಆದರೆ, ವಿಜಯಪುರ ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಹೊರತುಪಡಿಸಿ, ಇದುವರೆಗೆ ರಾಜ್ಯದ 188 ತಾಲೂಕುಗಳನ್ನು ಮಾತ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರಾಗಿದ್ದರೂ, ಸರ್ಕಾರದ ಮುಜುಗರ ತಪ್ಪಿಸಲು ಸೂಕ್ಷ್ಮಮತಿಯಾಗಿ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೂ ಸಹ ನಮ್ಮ ಮಾತಿಗೆ ಹಾಗೂ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದ್ದು, ಇಂದಿನ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಮತ್ತು ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಪ್ರಯುಕ್ತ ತಾವು ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿರುವ ಅವರು, ದಯವಿಟ್ಟು ಇದನ್ನು ಅಂಗೀಕರಿಸಿ ಎಂದು ವಿಧಾನಸಭಾ ಸ್ಪೀಕರ್ ಜಿ.ಎಸ್. ಪಾಟೀಲ್ ಅವರಿಗೆ ಪತ್ರದ ಮೂಲಕ ಕೋರಿದ್ದಾರೆ.

ಈ ಹಿಂದೆ ಸಚಿವ ಸ್ಥಾನದ ವಿಚಾರವಾಗಿಯೂ ಅವರು ರಾಜೀನಾಮೆ ನೀಡಿದ್ದು, ಪಕ್ಷದ ಹಿರಿಯ ನಾಯಕರ ಮನವೊಲಿಕೆಯ ನಂತರ ಅದನ್ನು ಹಿಂಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X