Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ಜಮೀನು ವಿವಾದ: ತಂದೆ, ಮಗನ...

Vijayapura | ಜಮೀನು ವಿವಾದ: ತಂದೆ, ಮಗನ ಕೊಲೆ

ವಾರ್ತಾಭಾರತಿವಾರ್ತಾಭಾರತಿ13 Nov 2026 10:53 PM IST
share
Vijayapura | ಜಮೀನು ವಿವಾದ: ತಂದೆ, ಮಗನ ಕೊಲೆ

ವಿಜಯಪುರ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ ತಂದೆ-ಮಗ ಹತ್ಯೆಯಾಗಿ, ಮೂವರು ಗಾಯಗೊಂಡಿರುವ ಘಟನೆ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಹನುಮಂತ ಸಾಲೋಟಗಿ ಹಾಗೂ ಅವರ ಮಗ ಮಂಜುನಾಥ ಸಾಲೋಟಗಿ ಕೊಲೆಯಾದವರು. ತಡಲಗಿ ಗ್ರಾಮದಲ್ಲಿ ಹನುಮವ್ವ ಮೇಟಿ ಎಂಬವರ ಹೆಸರಿನಲ್ಲಿರುವ ಸುಮಾರು ಎಂಟು ಎಕರೆ ಜಮೀನಿಗೆ ಸಂಬಂಧಿಸಿದಂತೆ ಅವರ ಸಂಬಂಧಿಕರಾದ ಗಿರಿಯಪ್ಪ ಮೇಟಿ, ರಾಮಪ್ಪ ಮೇಟಿ, ಹನುಮಂತ ಮೇಟಿ ಹಾಗೂ ಇತರರೊಂದಿಗೆ ತಕರಾರು ಇತ್ತು. ಹನುಮವ್ವ ಮೇಟಿ ಕಳೆದ ಮೂರು ವರ್ಷಗಳಿಂದ ಈ ಜಮೀನನ್ನು ಕೃಷಿ ಮಾಡಲು ಹನುಮಂತ ಸಾಲೋಟಗಿ ಹಾಗೂ ಅವರ ಪುತ್ರ ಮಂಜುನಾಥ ಸಾಲೋಟಗಿ ಅವರಿಗೆ ನೀಡಿದ್ದರು. ಈ ಜಮೀನಿನಲ್ಲಿ ಕಳೆದ ಎರಡು ವರ್ಷಗಳಲ್ಲಿ ಈರುಳ್ಳಿ, ಗೋವಿನಜೋಳ ಹಾಗೂ ಕಳೆದ ವರ್ಷ ಕಬ್ಬು ಬೆಳೆಯಲಾಗಿತ್ತು.

ಶುಕ್ರವಾರ ಬೆಳಗ್ಗೆ ಹನುಮಂತ ಸಾಲೋಟಗಿ ಮತ್ತು ಮಂಜುನಾಥ ಸಾಲೋಟಗಿ ಕಬ್ಬು ಕಟಾವು ಮಾಡಲು ಕಾರ್ಮಿಕರೊಂದಿಗೆ ಜಮೀನಿಗೆ ತೆರಳಿದ್ದರು. ಈ ವೇಳೆ ‘ಕಬ್ಬು ಗ್ಯಾಂಗ್‌ಗಳು ಬಂದಿದ್ದು, ನಾವು ಕಬ್ಬು ಕಟಾವು ಮಾಡ್ತೀವಿ’ ಎಂದಾಗ, ಎದುರಾಳಿ ಕುಟುಂಬದವರು ‘ನೀವು ಹೇಗೆ ಕಬ್ಬು ಕಡಿತೀರಿ’ ಎಂದು ಪ್ರಶ್ನಿಸಿ ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಹನುಮಂತ ಮತ್ತು ಮಂಜುನಾಥ್ ಮೇಲೆ ಹಲ್ಲೆ ನಡೆಸಲಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆೆ.

ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಘಟನೆಗೆ ಸಂಬಂಧಿಸಿದಂತೆ ಒಟ್ಟು 12 ಜನರ ಹೆಸರನ್ನು ನಮೂದಿಸಿ ಎಫ್‌ಐಆರ್ ದಾಖಲಿಸಲಾಗಿದೆ. ಈಗಾಗಲೇ ಗಿರಿಯಪ್ಪ, ರಾಮಪ್ಪ, ಹನುಮಂತ, ಕೆಂಚಪ್ಪ ಸೇರಿದಂತೆ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆಗೆ ಸಂಬಂಧಿಸಿದ ಕೆಲವು ದೃಶ್ಯಾವಳಿಗಳೂ ನಮಗೆ ಲಭ್ಯವಿವೆ. ಉಳಿದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಆದಷ್ಟು ಬೇಗ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X