Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ಕೊಲೆ ಆರೋಪಿಯನ್ನು ಕಾಲಿಗೆ...

Vijayapura | ಕೊಲೆ ಆರೋಪಿಯನ್ನು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ7 Nov 2026 11:57 AM IST
share
Vijayapura | ಕೊಲೆ ಆರೋಪಿಯನ್ನು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ವಿಜಯಪುರ, ನ.7: ಎರಡು ದಿನಗಳ ಹಿಂದೆ ನಗರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡೇವಾಡಿ ಆಸ್ಪತ್ರೆ ಹತ್ತಿರ ನಡೆದಿದ್ದ ಫೈರಿಂಗ್ ಹಾಗೂ ಯಾಸೀನ್ ಝುಬೇರ್ ಎಂಬಾತನ ಹತ್ಯೆ ಪ್ರಕರಣದ ಪ್ರಕರಣದ ಪ್ರಮುಖ ಆರೋಪಿಯ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ.

ಸಮೀರ್ ಮುಲ್ಲಾ ಬಂಧಿತ ಆರೋಪಿ. ಬಂಧನ ಕಾರ್ಯಾಚರಣೆಯು ಅತಾಲಟ್ಟಿ ಗ್ರಾಮದ ಬಳಿ ಶನಿವಾರ ಮುಂಜಾನೆ ನಡೆದಿದೆ. ಈ ಕಾರ್ಯಾಚರಣೆಯ ವೇಳೆ ಆರೋಪಿ ಸಮೀರ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಇಬ್ಬರ ಆರೋಗ್ಯ ಸ್ಥಿತಿಯೂ ಸ್ಥಿರವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಕಳೆದ ಅ.18ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಟಕ್ಕೇ ಗ್ರಾಮದಲ್ಲಿ ಜರುಗಿದ ಉರೂಸ್ ಕಾರ್ಯಕ್ರಮದ ವೇಳೆ ಸೌಂಡ್ ಬಾಕ್ಸ್ ಹಚ್ಚುವ ವಿಚಾರವಾಗಿ ಯಾಸೀನ್ ಝುಬೇರ್ ಹಾಗೂ ಸಮೀರ್ ಮುಲ್ಲಾ ತಂಡಗಳ ಮಧ್ಯೆ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಯಾಸೀನ್ ಹಾಗೂ ತಂಡವು ಸಮೀರ್ ಮುಲ್ಲಾ ಮತ್ತು ತಂಡದ ಮೇಲೆ ಹಲ್ಲೆ ನಡೆಸಿತ್ತು. ಈ ಸಂಬಂಧ ಅ. 19ರಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಯಾಸೀನ್ ಸೇರಿದಂತೆ ನಾಲ್ವರ ಬಂಧನವಾಗಿತ್ತು. ಆದರೆ ಅ.25ರಂದು ಯಾಸೀನ್ ಜಾಮೀನಿನ ಮೇಲೆ ಬಿಡುಗಡೆಗೊಂಡು ಹೊರಬಂದಿದ್ದನು.

ಈ ಗಲಾಟೆಯ ಹಿನ್ನೆಲೆಯಲ್ಲಿ ಯಾಸೀನ್ ಝುಬೇರ್ ಮೇಲೆ ಸಮೀರ್ ಮುಲ್ಲಾ ಹಾಗೂ ಆತನ ಸಹಚರರು ನ.5ರಂದು ಸೇಡಿನ ದಾಳಿ ನಡೆಸಿದ್ದಾರೆ. ಅಂದು ಮುಂಡೇವಾಡಿ ಆಸ್ಪತ್ರೆ ಬಳಿ ಪತ್ನಿಯೊಂದಿಗೆ ತೆರಳಿದ್ದ ಯಾಸೀನ್ ಮೇಲೆ ಮಾರಕಾಯಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮೃತನ ಪತ್ನಿ ಗಾಂಧಿ ಚೌಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹತ್ಯೆ ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತನಿಖೆಯಿಂದ ಒಟ್ಟು ಆರು ಮಂದಿ ಆಭಾಗಿಯಾಗಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದರು. ಈ ಸಂಬಂಧ ಈಗಾಗಲೇ ರಶೀದ್, ಇರ್ಷಾದ್, ಕದೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯ ಆರೋಪಿ ಸಮೀರ್ ಮುಲ್ಲಾ ಅತಾಲಟ್ಟಿ ಗ್ರಾಮದ ಬಳಿ ಅಡಗಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ. ಈ ವೇಳೆ ಸಮೀರ್ ತನ್ನ ಬಳಿಯಿದ್ದ ಕಂಟ್ರಿ ಮೇಡ್ ಪಿಸ್ತೂಲ್ ನಿಂದ ಪೊಲೀಸರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸರು ಎಚ್ಚರಿಕೆ ನೀಡಿದರೂ ದಾಳಿಗೆ ಮುಂದಾದಾಗ, ಆತ್ಮರಕ್ಷಣೆಗಾಗಿ ಆತನ ಬಲಗಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ನಡೆದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಆರೋಪಿ ಹಾಗೂ ಪೊಲೀಸ್ ಸಿಬ್ಬಂದಿ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊರರಾಜ್ಯದಿಂದ ಕಂಟ್ರಿ ಮೇಡ್ ಪಿಸ್ತೂಲ್ ತಂದಿರುವ ಬಗ್ಗೆ ಮಾಹಿತಿ ಲಭ್ಯವಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

Tags

VijayapuraMurder AccusedShot in LegArrested by Police
share
ವಾರ್ತಾಭಾರತಿ
ವಾರ್ತಾಭಾರತಿ
Next Story
X