Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ಪೊಲೀಸ್ ಕಾನ್ಸ್‌ಟೇಬಲ್...

Vijayapura | ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ವೇಳೆ ಗೊಂದಲ; ತಿಕೋಟಾದಲ್ಲಿ ಅಭ್ಯರ್ಥಿಗಳ ಆಕ್ರೋಶ, ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Aug 2026 6:29 PM IST
share
Vijayapura | ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ವೇಳೆ ಗೊಂದಲ; ತಿಕೋಟಾದಲ್ಲಿ ಅಭ್ಯರ್ಥಿಗಳ ಆಕ್ರೋಶ, ಪ್ರತಿಭಟನೆ

ವಿಜಯಪುರ : ಬಿಗಿ ಭದ್ರತೆಯಲ್ಲಿ ನಡೆದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಆಯ್ಕೆ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಶ್ರೀ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ (OMR) ಶೀಟ್ ನಡುವೆ ವ್ಯತ್ಯಾಸ ಕಂಡುಬಂದಿದ್ದರಿಂದ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ವಿತರಿಸಲಾದ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಶೀಟ್‌ಗಳ ನಡುವೆ ಹೊಂದಾಣಿಕೆಯಾಗದೇ ವ್ಯತ್ಯಾಸವಾಗಿರುವುದು ಈ ಗೊಂದಲಕ್ಕೆ ಮುಖ್ಯ ಕಾರಣವಾಗಿದೆ ಎನ್ನಲಾಗಿದೆ. ಅಲ್ಲದೆ, ಬೆಳಿಗ್ಗೆ 10:30ಕ್ಕೆ ನೀಡಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಅರ್ಧ ಗಂಟೆ ತಡವಾಗಿ ಅಂದರೆ 11:00 ಗಂಟೆಗೆ ವಿತರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದರಿಂದ ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಗೇಟ್ ಅನ್ನು ತಳ್ಳಿ ಒಳಗಡೆ ನುಗ್ಗಲು ಯತ್ನಿಸಿದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದು, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಮತ್ತು ಅಭ್ಯರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

ಅಭ್ಯರ್ಥಿಗಳ ಅಳಲು ಮತ್ತು ಆಗ್ರಹ:

"ನಾವು ಐದು ನಿಮಿಷ ತಡವಾಗಿ ಬಂದರೂ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡುವುದಿಲ್ಲ. ಆದರೆ ಪರೀಕ್ಷಾ ಮಂಡಳಿಯವರೇ ಅರ್ಧ ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ನೀಡಿದ್ದಾರೆ. ನಾವು ವರ್ಷಗಟ್ಟಲೆ ಪಟ್ಟ ಶ್ರಮಕ್ಕೆ ಬೆಲೆಯೇ ಇಲ್ಲವೇ? ಓಎಂಆರ್ ಕೊಡುವುದು ವಿಳಂಬವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪರೀಕ್ಷೆ ಸರಿಯಾಗಿ ಬರೆಯಲು ಸಾಧ್ಯವಾಗದೇ ನಮಗೆ ತೀವ್ರ ಅನ್ಯಾಯವಾಗಿದೆ" ಎಂದು ಆಕ್ರೋಶ ಹೊರಹಾಕಿದ ಅಭ್ಯರ್ಥಿಗಳು, ಈ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಅಧಿಕಾರಿಗಳ ಭೇಟಿ:

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ. ಆನಂದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ಘಟನೆ ಕುರಿತು ಅಧಿಕಾರಿಗಳು ಇದುವರೆಗೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

Tags

VijayapuraPolice Constable
share
ವಾರ್ತಾಭಾರತಿ
ವಾರ್ತಾಭಾರತಿ
Next Story
X