ವಿಜಯಪುರ | ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತ್ಯು

ವಿಜಯಪುರ : ಮೂವರು ಮಕ್ಕಳು ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಾದೇವ ವಸ್ತಿಯಲ್ಲಿ ಗುರುವಾರ ನಡೆದಿದೆ.
ಅಕ್ಕ ಸ್ವಪ್ನಾ ರಾಜು ರಾಠೋಡ (10), ತಮ್ಮ ಶಿವಂ ರಾಜು ರಾಠೋಡ (8) ಹಾಗೂ ಕಾರ್ತಿಕ ವಿಶ್ವ ರಾಠೋಡ (8) ಮೃತ ಮಕ್ಕಳು ಎಂದು ಗುರುತಿಸಲಾಗಿದೆ.
ಸಂಜೆ ಮಕ್ಕಳು ಕುರಿಗಳ ಜೊತೆಗೆ ಆಟವಾಡುತ್ತಾ ಕೃಷಿ ಹೊಂಡದ ಬಳಿ ತೆರಳಿದ್ದು, ಈ ವೇಳೆ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ವಿಜಯಪುರ ತಹಶೀಲ್ದಾರ್ ಪ್ರಶಾಂತ್ ಚೆನಗೊಂಡ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





