Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಖಾಸಗಿ ಶಿಕ್ಷಣ ಮಂಡಳಿಗಳಿಗೆ ಸರಕಾರಿ...

ಖಾಸಗಿ ಶಿಕ್ಷಣ ಮಂಡಳಿಗಳಿಗೆ ಸರಕಾರಿ ಶಾಲೆಗಳ ದತ್ತು: ಸರಕಾರದಿಂದ ಪ್ರಸ್ತಾವ

ಮೂಲಸೌಕರ್ಯಗಳಿಗಾಗಿ ದಾನಿಗಳ ಮೊರೆ ಹೋಗಲು ನಿರ್ಧಾರ

ಜಿ.ಮಹಾಂತೇಶ್ಜಿ.ಮಹಾಂತೇಶ್18 Aug 2023 11:41 AM IST
share
ಖಾಸಗಿ ಶಿಕ್ಷಣ ಮಂಡಳಿಗಳಿಗೆ ಸರಕಾರಿ ಶಾಲೆಗಳ ದತ್ತು: ಸರಕಾರದಿಂದ ಪ್ರಸ್ತಾವ

ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಸುಮಾರು 50,000 ಶಿಕ್ಷಕರ ಕೊರತೆ ನೀಗಿಸಲು ಸರಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಮಂಡಳಿಗಳಿಗೆ ದತ್ತು ನೀಡಲು ಸರಕಾರವು ಪ್ರಸ್ತಾಪಿಸುವುದು ಮತ್ತು ಶಾಲೆಗಳ ಮೂಲಸೌಕರ್ಯಗಳಿಗಾಗಿ ದಾನಿಗಳ ನೆರವು ಪಡೆಯುವ ಬಗ್ಗೆ ಒಡಂಬಡಿಕೆ ತಯಾರಿಸಲು ನಿರ್ಧರಿಸಿರುವುದು ಇದೀಗ ಬಹಿರಂಗವಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಿಎಸ್ಆರ್ ಅನುದಾನ ಕುರಿತು 2023ರ ಆಗಸ್ಟ್ 16ರಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 1:1 ಅನುಪಾತದಲ್ಲಿ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ಖಾಸಗಿ ಶಿಕ್ಷಣ ಮಂಡಳಿಗಳನ್ನು ಸಂಪರ್ಕಿಸಿ ಪ್ರಸ್ತಾವ ಸಲ್ಲಿಸುವ ಕುರಿತು ಚರ್ಚೆಯಾಗಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘thefile.in’ಗೆ ಖಚಿತಪಡಿಸಿದ್ದಾರೆ.

ದತ್ತು ನೀಡುವ ಯೋಜನೆಯನ್ನೂ ಸೇರಿಸಿದಂತೆ ಸಭೆಯಲ್ಲಿ ಕೈಗೊಂಡ ನಿರ್ಣಯಗಳಿಗೆ ಅನುಸಾರವಾಗಿ ತ್ವರಿತಗತಿಯಲ್ಲಿ ಒಂದು ವಿಸ್ತೃತ ಪ್ರಸ್ತಾವವನ್ನು ತಯಾರಿಸಿ ಒಂದು ವಾರದ ಒಳಗಾಗಿ ಉಪ ಮುಖ್ಯಮಂತ್ರಿಗೆ ಪ್ರಸ್ತುತ ಪಡಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಅದೇ ರೀತಿ ಸಿಎಸ್ಆರ್ ಅನುಷ್ಠಾನ ಸಮಿತಿ ರಚಿಸಿರುವ ಸರಕಾರವು ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಸೂಚಿಸಲಾಗಿದೆ.

‘ಪ್ರಸ್ತುತ ರಾಜ್ಯದ ಸರಕಾರಿ ಶಾಲೆಗಳಲ್ಲಿ ಸುಮಾರು 50,000 ಶಿಕ್ಷಕರ ಕೊರತೆ ಇದೆ. ಈ ಕೊರತೆಯನ್ನು ಅತಿಥಿ ಶಿಕ್ಷಕರನ್ನು ನಿಯೋಜಿಸುವ ಮೂಲಕ ಇಲಾಖೆ ಸರಿದೂಗಿಸುತ್ತಿರುವುದು ಸರಿಯಷ್ಟೇ. ಆದರೆ, ಸದರಿ ಶಿಕ್ಷಕರಿಂದ ಬದ್ಧತೆಯ ಕೊರತೆಯಿಂದಾಗಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದರು. ಆದ್ದರಿಂದ ಶಿಕ್ಷಕರ ಕೊರತೆಯನ್ನು ನೀಗಿಸಲು ಖಾಸಗಿ ಶಿಕ್ಷಣ ಆಡಳಿತ ಮಂಡಳಿಯನ್ನು ಸಂಪರ್ಕಿಸಿ 1:1 ಅನುಪಾತದಲ್ಲಿ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ಹೆಚ್ಚುವರಿ ಗುಣಮಟ್ಟದ ಶಿಕ್ಷಕರನ್ನು ಒದಗಿಸಲು ಹಾಗೂ ಪ್ರಶಿಕ್ಷಣ ತರಬೇತಿ ನೀಡಲು ಪ್ರಸ್ತಾಪಿಸಬೇಕು,’ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಅಲ್ಲದೇ ಶಾಲೆಗಳ ಮೂಲಸೌಕರ್ಯಗಳನ್ನು ಒದಗಿಸಿಕೊಳ್ಳಲು ದಾನಿಗಳ ಮೊರೆ ಹೋಗಲು ನಿರ್ಣಯಿಸಿದೆ. ದಾನಿಗಳ ಕೊಡುಗೆಗೆ ಅನುಗುಣವಾಗಿ ಸರಕಾರಿ ಶಾಲೆ/ಕೊಠಡಿಯ ಮುಂದೆ ಇನ್ನಿತರ ಮೂಲ ಸೌಕರ್ಯಗಳ ಮುಂದೆ ದಾನಿಗಳ ಹೆಸರನ್ನು ಸೇರಿಸಲು ಅವಕಾಶ ಕಲ್ಪಿಸು ವುದು ಹಾಗೂ ಇನ್ನಿತರ ಷರತ್ತುಗಳನ್ನು ಸೇರಿ ಒಂದು ಒಡಂಬಡಿಕೆ ತಯಾ ರಿಸಬೇಕು ಎಂಬ ನಿರ್ಣಯವನ್ನೂ ಕೈಗೊಳ್ಳಲಾಗಿದೆ ಎಂದು ಗೊತ್ತಾಗಿದೆ.

ರಾಜ್ಯಕ್ಕೆ ಕನಿಷ್ಠ 5,000 ಕೋಟಿ ರೂ. ಸಿಎಸ್ಆರ್ ಅಡಿಯಲ್ಲಿ ಕಂಪೆನಿಗಳ ಕಾಯ್ದೆ ಪ್ರಕಾರ ಶಿಕ್ಷಣ ಕ್ಷೇತ್ರದಲ್ಲಿ ಉಪಯೋಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2023ರ ಆಗಸ್ಟ್ 4ರಂದು ನಡೆದಿದ್ದ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಇದನ್ನು ಕಾರ್ಯಗತಗೊಳಿಸಲು 2023ರ ಆಗಸ್ಟ್ 16ರಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿಯೇ ಶಿಕ್ಷಕರ ಕೊರತೆ ನೀಗಿಸಲು ಸರಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಮಂಡಳಿಗಳಿಗೆ ದತ್ತು ನೀಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಈಗಾಗಲೇ 285 ಕರ್ನಾಟಕ ಪಬ್ಲಿಕ್ ಶಾಲೆಗಳು ಅಸ್ತಿತ್ವದಲ್ಲಿವೆ. ಇದೇ ಮಾದರಿಯಂತೆ ರಾಜ್ಯದ 6,000 ಗ್ರಾಮ ಪಂಚಾಯತ್ಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸಿಎಸ್ಆರ್ ಸಹಯೋಗದೊಂದಿಗೆ ಪ್ರಾರಂಭಿಸಲು ಕ್ರಿಯಾ ಯೋಜನೆ ತಯಾರಿಸಲು ಡಿ.ಕೆ.ಶಿವಕುಮಾರ್ ಸೂಚಿಸಿರುವುದು ತಿಳಿದು ಬಂದಿದೆ.

6,000 ಗ್ರಾಮ ಪಂಚಾಯತ್ಗಳ ಪೈಕಿ ಪ್ರಥಮ ಹಂತದಲ್ಲಿ 500 ಪಂಚಾಯತ್ ಮಟ್ಟದಲ್ಲಿ ಒಂದು ಕರ್ನಾಟಕ ಪಬ್ಲಿಕ್ ಶಾಲೆಯನ್ನು ಸ್ಥಾಪಿಸಲು ಸೂಕ್ತ ಸರಕಾರಿ ಶಾಲೆಯನ್ನು ಆಯ್ಕೆ ಮಾಡುವುದು. ಈ ಸ್ಥಳದಲ್ಲಿ ಇರುವ ಮೂಲಸೌಕರ್ಯ (ಕಟ್ಟಡಗಳು, ಶೌಚಾಲಯ, ಪೀಠೋಪಕರಣಗಳು) ಹಾಗೂ ಶಿಕ್ಷಕರು, ಸಿಬ್ಬಂದಿಯ ವಿವರಗಳನ್ನು ಕ್ರೋಡೀಕರಿಸಬೇಕು. ಹಾಗೆಯೇ ಶಾಲೆವಾರು ಇರುವ ಮೂಲಸೌಕರ್ಯ ಹಾಗೂ ಶಿಕ್ಷಕರ ಕೊರತೆಯನ್ನು ನಿಖರವಾಗಿ ಮಂಡಿಸಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸ್ಥಳ ಲಭ್ಯ ಇಲ್ಲದೆ ಇರುವ ಶಾಲೆಗಳಲ್ಲಿ 3 ಎಕರೆ ಭೂಮಿಯನ್ನು ಸಿಎಸ್ಆರ್ ಅಡಿಯಲ್ಲಿ ಖರೀದಿಸಿದಲ್ಲಿ ಭೂ ಪರಿವರ್ತನೆ ಶುಲ್ಕ, ನೋಂದಣಿ ಶುಲ್ಕ, ಇತ್ಯಾದಿಗಳಿಗೆ ಸರಕಾರದಿಂದ ವಿನಾಯಿತಿ ನೀಡಲು ನೀತಿ ರೂಪಿಸಬೇಕು. ಮಾದರಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಒಂದೇ ವಿನ್ಯಾಸ ಮತ್ತು ಅದರ ಅಂದಾಜು ಪತ್ರಿಕೆಯನ್ನು ತಯಾರಿಸಿ ಅದನ್ನು ಸಿಎಸ್ಆರ್ ಸಂಸ್ಥೆಗಳಿಗೆ ಒದಗಿಸಬೇಕು. ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲ ಅವಶ್ಯವಾದ ಇಲಾಖಾ ಅನುಮೋದನೆಗಳನ್ನು ಶಾಲಾ ಶಿಕ್ಷಣ ಇಲಾಖೆಯ ಸಮನ್ವಯದಿಂದ ನೀಡಬೇಕು ಎಂದೂ ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X