Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಿಎಸ್‌ಆರ್ ನಿಧಿಗಳ ವೆಚ್ಚ ನಿಯಂತ್ರಿಸಲು...

ಸಿಎಸ್‌ಆರ್ ನಿಧಿಗಳ ವೆಚ್ಚ ನಿಯಂತ್ರಿಸಲು ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಶಾಸನಬದ್ಧ ಅಧಿಕಾರ ಇಲ್ಲ

ಜಿ. ಮಹಾಂತೇಶ್ಜಿ. ಮಹಾಂತೇಶ್6 Nov 2026 8:56 AM IST
share
ಸಿಎಸ್‌ಆರ್ ನಿಧಿಗಳ ವೆಚ್ಚ ನಿಯಂತ್ರಿಸಲು ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಶಾಸನಬದ್ಧ ಅಧಿಕಾರ ಇಲ್ಲ

ಬೆಂಗಳೂರು : ಕೈಗಾರಿಕೆ ಮತ್ತು ಕಾರ್ಪೋರೇಟ್ ಕಂಪೆನಿಗಳ ಸಿಎಸ್‌ಆರ್ ನಿಧಿಗಳ ವೆಚ್ಚದ ಬಗ್ಗೆ ನಿಯಂತ್ರಿಸಲು ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವೇ ಇಲ್ಲ.

ಹೀಗೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ವಿಧಾನ ಪರಿಷತ್‌ನಲ್ಲಿ ಉತ್ತರಿಸಿರುವುದು ಇದೀಗ ಬಹಿರಂಗವಾಗಿದೆ.

ರಾಜ್ಯದಲ್ಲಿ ಲಭ್ಯವಿರುವ 10 ಸಾವಿರ ಕೋಟಿ ರೂ.ಸಿಎಸ್‌ಆರ್ ನಿಧಿಯ ಪ್ರತಿಯೊಂದು ಪೈಸೆಯು ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗಷ್ಟೇ ತಾಕೀತು ಮಾಡಿದ್ದರು. ಅಲ್ಲದೇ ಗ್ರಾಮೀಣ ಸರಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲು ಸರಕಾರವು ಸಿಎಸ್‌ಆರ್ ಹೊಸ ನೀತಿಯನ್ನು ಜಾರಿಗೊಳಿಸಿದೆ ಎಂದು ಖುದ್ದು ಮುಖ್ಯಮಂತ್ರಿಯವರು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ವಿಧಾನ ಪರಿಷತ್‌ನಲ್ಲಿ ನೀಡಿದ್ದ ಉತ್ತರವು ಮುನ್ನೆಲೆಗೆ ಬಂದಿದೆ.

ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳು ಮತ್ತು ಕಾರ್ಪೋರೇಟ್ ಕಂಪೆನಿಗಳು ತಮ್ಮ ಲಾಭಾಂಶದಲ್ಲಿ ಸಿಎಸ್‌ಆರ್ ನಿಧಿಯನ್ನು ರಾಜ್ಯದ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿನಿಯೋಗಿಸುವ ನಿಟ್ಟಿನಲ್ಲಿ ಕಾನೂನು ನಿಯಮಾವಳಿ ರಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ನಿಯಮ 330ರ ಅಡಿಯಲ್ಲಿ ಸೂಚನೆ ಮಂಡಿಸಿದ್ದರು.

ಈ ಸೂಚನೆಗೆ ಉತ್ತರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ‘ಕಂಪೆನಿಗಳ ಸಿಎಸ್‌ಆರ್ ನಿಧಿಗಳ ವೆಚ್ಚದ ಬಗ್ಗೆ ನಿಯಂತ್ರಿಸಲು ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಶಾಸನಬದ್ಧ ಅಧಿಕಾರ ಇರುವುದಿಲ್ಲ,’ ಎಂದು ಉತ್ತರಿಸಿದ್ದಾರೆ.

ಅಲ್ಲದೇ ಭಾರತ ಸರಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯವು ಸಿಎಸ್‌ಆರ್ ಜಾರಿಗೆ ಸಂಬಂಧಿಸಿದಂತೆ ನಿಯಂತ್ರಣಾತ್ಮಕ ಪಾತ್ರ ಹೊಂದಿದೆ. ಕಂಪೆನಿಗಳು ಸಿಎಸ್‌ಆರ್ ಪಾಲನೆ ಬಗ್ಗೆ ವರದಿಯನ್ನು ಎಂಸಿಎ 221 ಪೋರ್ಟಲ್‌ನಲ್ಲಿ ಸಲ್ಲಿಸಬೇಕು. ಇದನ್ನು ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯವು ಮೇಲ್ವಿಚಾರಣೆ ಮಾಡುತ್ತದೆ ಎಂದು ಉತ್ತರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಭಾರತದಲ್ಲಿ ಕಳೆದ 5 ಹಣಕಾಸು ವರ್ಷಗಳಲ್ಲಿ (2020-21 ರಿಂದ 2024-25) ಒಟ್ಟು 1,60,000 ಕೋಟಿ ರೂ.ಗೂ ಹೆಚ್ಚು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯನ್ನು ಕಂಪೆನಿಗಳು ವ್ಯಯಿಸಿವೆ. ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಮತ್ತು ವಿವಿಧ ಸಿಎಸ್‌ಆರ್ ವರದಿಗಳ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಸಿಎಸ್‌ಆರ್ ನಿಧಿ ಸಂಗ್ರಹಣೆ ಮತ್ತು ಖರ್ಚು ದಾಖಲೆ ಮಟ್ಟದಲ್ಲಿ ಹೆಚ್ಚಾಗಿದೆ ಎಂದು ಗೊತ್ತಾಗಿದೆ.

2020-21ರಲ್ಲಿ 26,210.95 ಕೋಟಿ ರೂ., 2021-22ರಲ್ಲಿ 27,141.45 ಕೋಟಿ ರೂ., 2022-23ರಲ್ಲಿ 30,932.08 ಕೋಟಿ ರೂ., 2023-24ರಲ್ಲಿ 34,908.75 ಕೋಟಿರೂ., 2024-25ರಲ್ಲಿ 40,794 ಕೋಟಿ ರೂ.(ದಾಖಲೆ ವೆಚ್ಚ) ಒಟ್ಟು 1,59,987 ಕೋಟಿ ರೂ.ನಷ್ಟು ಸಂಗ್ರಹವಾಗಿತ್ತು.

ಭಾರತದಲ್ಲಿ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಅಡಿಯಲ್ಲಿ ಸಂಗ್ರಹವಾಗಿರುವ ಮತ್ತು ಖರ್ಚು ಮಾಡಲಾದ ಒಟ್ಟು ನಿಧಿಯ ಮೊತ್ತವು ಇತ್ತೀಚಿನ ವರ್ಷಗಳಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ಇತ್ತೀಚಿನ ವರದಿಗಳ ಪ್ರಕಾರ, 2024-25ರ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ಸಿಎಸ್‌ಆರ್ ವೆಚ್ಚವು 40,794 ಕೋಟಿ ರೂ.ಗಳಿಗೆ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (1,309 ಕೋಟಿ ರೂ.) ಅತಿ ಹೆಚ್ಚು ಸಿಎಸ್‌ಆರ್ ವೆಚ್ಚ ಮಾಡಿದ ಕಂಪೆನಿಯಾಗಿದೆ. ನಂತರದ ಸ್ಥಾನಗಳಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ (1,039 ಕೋಟಿ ರೂ.) ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಇವೆ. ಸಂಗ್ರಹವಾದ ನಿಧಿಯಲ್ಲಿ ಶೇ.98 ರಷ್ಟು ಭಾಗವನ್ನು (39,851 ಕೋಟಿ ರೂ.) ಕಂಪೆನಿಗಳು ನೇರವಾಗಿ ಸಾಮಾಜಿಕ ಯೋಜನೆಗಳಿಗೆ ಬಳಸಿದ್ದು, ಕೇವಲ ಶೇ.2ರಷ್ಟು ಹಣವನ್ನು ಮಾತ್ರ ಸರಕಾರಿ ನಿಧಿಗಳಿಗೆ ವರ್ಗಾಯಿಸಿವೆ ಎಂದು ಗೊತ್ತಾಗಿದೆ.

ಭಾರತದಲ್ಲೇ ಅತಿ ಹೆಚ್ಚು ಸಿಎಸ್‌ಆರ್ ನಿಧಿ ಪಡೆದ ರಾಜ್ಯವಾಗಿ ಮಹಾರಾಷ್ಟ್ರ (8,631 ಕೋಟಿ ರೂ.) ಮೊದಲ ಸ್ಥಾನದಲ್ಲಿದೆ. ಗುಜರಾತ್, ಕರ್ನಾಟಕ (ಸುಮಾರು 2,254 ಕೋಟಿ ರೂ.ಗೂ ಹೆಚ್ಚು), ದಿಲ್ಲಿ ಮತ್ತು ತಮಿಳುನಾಡು ನಂತರದ ಸ್ಥಾನಗಳಲ್ಲಿವೆ. (ಕರ್ನಾಟಕದಲ್ಲಿ ಪ್ರಸ್ತುತ ಸುಮಾರು 10,000 ಕೋಟಿ ರೂ.ಯಷ್ಟು ಒಟ್ಟು ಸಿಎಸ್‌ಆರ್ ನಿಧಿ ಲಭ್ಯತೆಯಿದ್ದು, ಇದನ್ನು ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಬಳಸಲು ರಾಜ್ಯ ಸರಕಾರ ಆದ್ಯತೆ ನೀಡುತ್ತಿದೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆರೋಗ್ಯ ರಕ್ಷಣೆ ಮತ್ತು ನೈರ್ಮಲ್ಯೀಕರಣ ಯೋಜನೆಗಳಿಗೆ ಬಳಸಲಾಗುತ್ತಿದೆ. ಸಿಎಸ್‌ಆರ್ ನಿಧಿಯ ಹೆಚ್ಚಿನ ಪಾಲು ಮಹಾರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕದಂತಹ ಕೈಗಾರಿಕಾ ಪ್ರಗತಿ ಹೊಂದಿದ ರಾಜ್ಯಗಳಿಗೆ ಲಭಿಸುತ್ತಿದೆ.


share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X