Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಾಲ್ಕು ವರ್ಷಗಳಲ್ಲಿ ಲೋಕಾಯುಕ್ತದಲ್ಲಿ...

ನಾಲ್ಕು ವರ್ಷಗಳಲ್ಲಿ ಲೋಕಾಯುಕ್ತದಲ್ಲಿ 1,248 ಪ್ರಕರಣಗಳು ದಾಖಲು

ಜಿ.ಮಹಾಂತೇಶ್ಜಿ.ಮಹಾಂತೇಶ್4 Sept 2026 8:17 AM IST
share
ನಾಲ್ಕು ವರ್ಷಗಳಲ್ಲಿ ಲೋಕಾಯುಕ್ತದಲ್ಲಿ 1,248 ಪ್ರಕರಣಗಳು ದಾಖಲು

ಬೆಂಗಳೂರು : ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆ ಮತ್ತು ಕರ್ತವ್ಯದಲ್ಲಿ ವಿವಿಧ ಲೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 1,248 ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. ಅದರಲ್ಲೂ ವಿಶೇಷವಾಗಿ ಕಳೆದ 3 ವರ್ಷಗಳಲ್ಲಿ 887 ಪ್ರಕರಣಗಳು ಲಂಚಕ್ಕೆ ಸಂಬಂಧಿಸಿದ್ದಾಗಿವೆ.

ದೇಶಾದ್ಯಂತ ಸರಕಾರಿ ಸಂಸ್ಥೆಗಳ ವಿರುದ್ಧ 2025ರಲ್ಲಿ 70,584 ಭ್ರಷ್ಟಾಚಾರ ಸಂಬಂಧಿತ ದೂರುಗಳು ದಾಖಲಾಗಿವೆ ಎಂದು ಕೇಂದ್ರ ಜಾಗೃತ ಆಯೋಗವು ವರದಿ ನೀಡಿತ್ತು. ಈ ವರದಿಯ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತದಲ್ಲಿಯೂ ಕಳೆದ ನಾಲ್ಕು ವರ್ಷಗಳಲ್ಲಿ 1,248 ಪ್ರಕರಣಗಳು ಮತ್ತು ಲಂಚಕ್ಕೆ ಸಂಬಂಧಿಸಿದಂತೆ 887 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಲಂಚ ಪಡೆಯುತ್ತಿದ್ದ ಪ್ರಕರಣಗಳಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಸರಕಾರಿ ಅಧಿಕಾರಿಗಳು, ನೌಕರರ ವಿವರಗಳ ಕುರಿತು ವಿಧಾನ ಪರಿಷತ್‌ನಲ್ಲಿ ಸದಸ್ಯ ಮಧು ಜಿ.ಮಾದೇಗೌಡ ಮತ್ತು ಡಾ.ಧನಂಜಯ ಸರ್ಜಿ ಅವರು 2026ರ ಆಗಸ್ಟ್ 20ರಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು.

ಈ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಲ್ಕು ವರ್ಷಗಳಲ್ಲಿ ಲಂಚ ಮತ್ತು ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣಗಳು ದಾಖಲಾಗಿರುವ ಕುರಿತು ಸುದೀರ್ಘವಾದ ಉತ್ತರ ನೀಡಿದ್ದಾರೆ.

ಈ ಉತ್ತರದ ಪ್ರತಿಯು ‘ಣhe-ಜಿiಟe.iಟಿ’ಗೆ ಲಭ್ಯವಾಗಿದೆ.

2022ರ ಸೆಪ್ಟಂಬರ್ 10ರಿಂದ 2026ರ ಆಗಸ್ಟ್ 13ರವರೆಗೆ ನೀಡಿರುವ ಮಾಹಿತಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ (ದಾಳಿ) ಪ್ರಕರಣಗಳ ಸಂಖ್ಯೆ 939 ರಷ್ಟಿರುವುದು ಗೊತ್ತಾಗಿದೆ.

ಮತ್ತೊಂದು ವಿಶೇಷವೆಂದರೇ ಐಎಎಸ್ ಮತ್ತು ಐಪಿಎಸ್ ವರ್ಗದಲ್ಲಿ ತಲಾ ಒಂದು ಪ್ರಕರಣ ಮಾತ್ರ ಇದೆ. ಕೆಎಎಸ್ ವರ್ಗದಲ್ಲಿ 27, ಗ್ರೂಪ್ ಎ ವರ್ಗದಲ್ಲಿ 12, ಗ್ರೂಪ್ ಬಿನಲ್ಲಿ 376, ಗ್ರೂಪ್ ಸಿ ನಲ್ಲಿ 733 ಮತ್ತು ಡಿ ಗ್ರೂಪ್‌ನಲ್ಲಿ 28, 49 ಮಂದಿ ಹೊರಗುತ್ತಿಗೆ ನೌಕರರ ವಿರುದ್ಧವೂ ಲೋಕಾಯಕ್ತದಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.

2022ರ ಸೆಪ್ಟಂಬರ್ 10ರಿಂದ 2026ರ ಆಗಸ್ಟ್ 13ರವರೆಗಿನ ಒಟ್ಟು 1,248 ಪ್ರಕರಣಗಳಲ್ಲಿ 218 ಪ್ರಕರಣಗಳಲ್ಲಿ ನ್ಯಾಯಾಲಯದ ತಡೆಯಾಜ್ಞೆ ಇವೆ. 18 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. 364 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಉಳಿದ 648 ಪ್ರಕರಣಗಳು ತನಿಖೆಯಲ್ಲಿವೆ ಎಂದು ಡಿ.ಕೆ.ಶಿವಕುಮಾರ್ ಅವರು ಉತ್ತರಿಸಿರುವುದು ಗೊತ್ತಾಗಿದೆ.

2023ರ ಜನವರಿ 1ರಿಂದ 2026ರ ಆಗಸ್ಟ್ 13ರವರೆಗೆ ಭ್ರಷ್ಟಾಚಾರ ನಿಗ್ರಹ 1988ರ ಅಡಿಯಲ್ಲಿ 887 ಲಂಚ ಪ್ರಕರಣಗಳ ಪೈಕಿ 126 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ ಎಂದು ಮಾಹಿತಿ ಒದಗಿಸಿದ್ದಾರೆ.

ಅದೇ ರೀತಿ ಈ 1,248 ಪ್ರಕರಣಗಳಲ್ಲಿ ಕೆಲವು ಪ್ರಕರಣಗಳು ತನಿಖಾ/ನ್ಯಾಯಾಲಯಗಳ ತಡೆಯಾಜ್ಞೆ, ನ್ಯಾಯಾಲಯಗಳಲ್ಲಿ ವಿಚಾರಣೆ, ಅಪೀಲು ಹಂತಗಳಲ್ಲಿವೆ. ಇಲ್ಲಿಯವರೆಗೆ ನ್ಯಾಯಾಲಯಗಳಿಂದ ಯಾವುದೇ ಸರಕಾರಿ ನೌಕರರನ್ನು ತಪ್ಪಿತಸ್ಥರು ಎಂದು ನಿರ್ಣಯಿಸಿಲ್ಲ ಎಂದು ಉತ್ತರದಲ್ಲಿ ಮಾಹಿತಿ ನೀಡಿರುವುದು ತಿಳಿದು ಬಂದಿದೆ.

2023ನೇ ಸಾಲಿನಿಂದ ಇಲ್ಲಿಯವರೆಗೆ ನ್ಯಾಯಾಲಯದ ವಿಚಾರಣೆಯಲ್ಲಿರುವ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಅಡಿಯಲ್ಲಿ ಸಂಬಂಧಪಟ್ಟ ಪ್ರಕರಣಗಳಲ್ಲಿ ನ್ಯಾಯಾಲಯಗಳು ವಿಚಾರಣೆ ಮುಗಿಸಿವೆ. ಒಟ್ಟು 148 ಪ್ರಕರಣಗಳಲ್ಲಿ ಶಿಕ್ಷೆಯನ್ನು ಪ್ರಕಟಿಸಿವೆ ಎಂದು ವಿವರಿಸಿರುವುದು ಗೊತ್ತಾಗಿದೆ.

ಆರೋಗ್ಯಾಧಿಕಾರಿ, ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟಂಟ್ ಇಂಜಿನಿಯರ್, ವಾಣಿಜ್ಯ ತೆರಿಗೆ ಅಧಿಕಾರಿಗಳು, ಪೊಲೀಸ್ ಇನ್‌ಸ್ಪೆಕ್ಟರ್‌ಗಳು, ಹೆಡ್ ಕಾನ್‌ಸ್ಟೇಬಲ್, ಸಹಾಯಕ ಲೆಕ್ಕ ಪರಿಶೋಧಕರು, ಮುಖ್ಯ ಇಂಜಿನಿಯರ್, ಸರಕಾರಿ ಅಭಿಯೋಜಕರು, ಎಪಿಪಿಗಳು, ಪಿಎಸ್‌ಐಗಳು, ಕಚೇರಿ ಅಧೀಕ್ಷಕರು, ಶಾಖಾಧಿಕಾರಿಗಳು, ಎಸಿಪಿ, ಸರ್ವೇಯರ್‌ಗಳು, ಆಹಾರ ನಿರೀಕ್ಷಕರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Tags

casesLokayukta
share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X