Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 6 ವರ್ಷಗಳಲ್ಲಿ ಹೊರ ರಾಜ್ಯದವರಿಂದ 490...

6 ವರ್ಷಗಳಲ್ಲಿ ಹೊರ ರಾಜ್ಯದವರಿಂದ 490 ಎಕರೆ ಕೃಷಿ ಜಮೀನು ಖರೀದಿ

ಜಿ. ಮಹಾಂತೇಶ್ಜಿ. ಮಹಾಂತೇಶ್23 Sept 2026 8:47 AM IST
share
6 ವರ್ಷಗಳಲ್ಲಿ ಹೊರ ರಾಜ್ಯದವರಿಂದ 490 ಎಕರೆ ಕೃಷಿ ಜಮೀನು ಖರೀದಿ

ಬೆಂಗಳೂರು : ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ ಕಲಂ 79 ಎ, 79 ಬಿ ಮತ್ತು 79 ಸಿ ರದ್ದುಪಡಿಸಿದ ನಂತರ ಕಳೆದ 6 ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು ಮಾರಾಟವಾಗಿರುವ 24 ಲಕ್ಷ ಎಕರೆ ಕೃಷಿ ಜಮೀನಿನ ಪೈಕಿ 490 ಎಕರೆ ವಿಸ್ತಿರ್ಣದ ಕೃಷಿ ಜಮೀನು ಹೊರ ರಾಜ್ಯದವರು ಖರೀದಿಸಿದ್ದಾರೆ. ಅದೇ ರೀತಿ 7 ಜಿಲ್ಲೆಗಳಲ್ಲಿರುವ ಖಾಸಗಿ ವ್ಯಕ್ತಿ, ಸಂಘ, ಸಂಸ್ಥೆಗಳು ಸಹ 15,059 ಎಕರೆ ವಿಸ್ತೀರ್ಣದಷ್ಟು ಕೃಷಿ ಜಮೀನನ್ನು ಖರೀದಿ ಮಾಡಿವೆ. ಒಟ್ಟಾರೆ 15,549 ಎಕರೆ ವಿಸ್ತೀರ್ಣದ ಕೃಷಿ ಜಮೀನು ಈ ವರ್ಗಗಳ ಕೈಯಲ್ಲಿವೆ.

ಅಳಂದ ಶಾಸಕ ಬಿ.ಆರ್. ಪಾಟೀಲ್ ಅವರು 2026ರ ಆಗಸ್ಟ್‌ನಲ್ಲಿ ವಿಧಾನಸಭೆಯಲ್ಲಿ ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಇಲಾಖೆಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.

ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ ಮತ್ತು ಬಿ ನಿರ್ಬಂಧವನ್ನು ಹಿಂದಿನ ಬಿಜೆಪಿ ಸರಕಾರವು ತೆಗೆದು ಹಾಕಿತ್ತು. ಕೃಷಿ ಜಮೀನನ್ನು ಉಳ್ಳವರ ಪಾಲಾಗಿಸುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಕೂಡ ಅಬ್ಬರಿಸಿತ್ತು. ಆದರೀಗ ಈ ನಿರ್ಬಂಧವನ್ನು ಪುನರ್ ಸ್ಥಾಪಿಸುವ ಪ್ರಸ್ತಾಪವೇ ಇಲ್ಲ ಎಂದು ಕಾಂಗ್ರೆಸ್ ನೇತೃತ್ವದ ಸರಕಾರವು ಹೇಳಿಕೆ ನೀಡಿರುವ ಬೆನ್ನಲ್ಲೇ ಹೊರ ರಾಜ್ಯ ಮತ್ತು ಖಾಸಗಿ ಸಂಘ ಸಂಸ್ಥೆಗಳ ಕೈಯಲ್ಲಿ 15,059 ಎಕರೆ ಕೃಷಿ ಜಮೀನು ಇರುವುದು ಮುನ್ನೆಲೆಗೆ ಬಂದಿದೆ.

ವಿಶೇಷವೆಂದರೆ ಕಂದಾಯ ಇಲಾಖೆಯು ಕೇವಲ 7 ಜಿಲ್ಲೆಗಳ ಮಾಹಿತಿಯನ್ನಷ್ಟೇ ನೀಡಿವೆ. ಆದರೂ ಈ ಮಾಹಿತಿಯನ್ನು ವಿಧಾನಸಭೆಗೆ ಒದಗಿಸಿರುವ ಪಟ್ಟಿಯಲ್ಲಿ ನೀಡಿಲ್ಲ. ವಿಧಾನಸಭೆಗೆ ಮಂಡಿಸಿರುವ ಉತ್ತರವನ್ನು "the-file.in" ಪರಿಶೀಲಿಸಿದ ಸಂದರ್ಭದಲ್ಲಿ ಹೊರರಾಜ್ಯ ಮತ್ತು ಖಾಸಗಿ ಸಂಘ ಸಂಸ್ಥೆಗಳು ಎಷ್ಟು ಪ್ರಮಾಣದಲ್ಲಿ ಕೃಷಿ ಜಮೀನು ಖರೀದಿಸಲಾಗಿದೆ ಎಂಬ ವಿವರಗಳು ಸಚಿವರ ಉತ್ತರದಲ್ಲಿ ಕಂಡು ಬಂದಿಲ್ಲ.

ಬಿಜೆಪಿ ಸರಕಾರದ ಅವಧಿಯಲ್ಲಿ ಸಹಕಾರ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್ ಅವರು ಅಧ್ಯಕ್ಷರಾಗಿದ್ದ ಕರ್ನಾಟಕ ರಾಜ್ಯ ವಸತಿ ಮಹಾಮಂಡಲ ಸೇರಿದಂತೆ ವಿವಿಧ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಗಳು ಕರ್ನಾಟಕ ಭೂ ಸುಧಾರಣೆ ಕಾಯ್ದೆ 79 ಎ ಮತ್ತು 79 ಬಿ ಕಲಂನ್ನು ಉಲ್ಲಂಘಿಸಿ ಅಂದಾಜು 10 ಸಾವಿರ ಕೋಟಿ ರೂ. ಬೆಲೆ ಬಾಳುವ 5,027 ಎಕರೆ ವಿಸ್ತೀರ್ಣದ ಕೃಷಿ ಭೂಮಿಯನ್ನು ಮಧ್ಯವರ್ತಿಗಳ ಮೂಲಕ ಖರೀದಿಸಿದ್ದವು.

ಆದರೆ, 79 ಎ, ಬಿ ಮತ್ತು ಸಿ ಕಲಂಗಳ ನಿರ್ಬಂಧ ತೆರವುಗೊಳಿಸಿದ ನಂತರ ಖಾಸಗಿ ಸಂಘ ಸಂಸ್ಥೆಗಳು 15,049 ಎಕರೆ ವಿಸ್ತೀರ್ಣದಷ್ಟು ಕೃಷಿ ಜಮೀನನ್ನು ಖರೀದಿಸಿವೆ. ಈ ಪೈಕಿ ಕಲಬುರಗಿ ಜಿಲ್ಲೆಯೊಂದರಲ್ಲೇ ಅತೀ ಹೆಚ್ಚು ಎಂದರೇ 8,071 ಎಕರೆಯಷ್ಟು ಕೃಷಿ ಜಮೀನನ್ನು ಖಾಸಗಿ ವ್ಯಕ್ತಿ, ಸಂಘ ಸಂಸ್ಥೆಗಳು ಖರೀದಿಸಿರುವುದು ಉತ್ತರದಿಂದ ತಿಳಿದು ಬಂದಿದೆ.

ವಿಜಯಪುರದಲ್ಲಿ 48 ಎಕರೆ, ಧಾರವಾಡ ಜಿಲ್ಲೆಯಲ್ಲಿ 1,103 ಎಕರೆ, ಗದಗ್ ಜಿಲ್ಲೆಯಲ್ಲಿ 60 ಎಕರೆ, ಬೀದರ್ ಜಿಲ್ಲೆಯಲ್ಲಿ 3,997 ಎಕರೆ, ಯಾದಗಿರಿ ಜಿಲ್ಲೆಯಲ್ಲಿ 1,720 ಎಕರೆ ವಿಸ್ತೀರ್ಣದ ಕೃಷಿ ಜಮೀನು ಖಾಸಗಿ ವ್ಯಕ್ತಿ, ಸಂಘ ಸಂಸ್ಥೆಗಳು ಖರೀದಿಸಿವೆ.

ಅದೇ ರೀತಿ ಹೊರ ರಾಜ್ಯಕ್ಕೆ ಸೇರಿರುವ ಈ 7 ಜಿಲ್ಲೆಗಳಲ್ಲಿ ಹೊರರಾಜ್ಯಕ್ಕೆ ಸೇರಿದ 241 ಮಂದಿ 490 ಎಕರೆ ವಿಸ್ತೀರ್ಣದ ಕೃಷಿ ಜಮೀನನ್ನು ಖರೀದಿಸಿದ್ದಾರೆ. ಹೊರ ರಾಜ್ಯಕ್ಕೆ ಸೇರಿದ 29 ಮಂದಿ ವಿಜಯಪುರ ಜಿಲ್ಲೆಯಲ್ಲಿ 83 ಎಕರೆ ಕೃಷಿ ಜಮೀನು ಖರೀದಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 39 ಎಕರೆ 25 ಗುಂಟೆ, ರಾಯಚೂರು ಜಿಲ್ಲೆಯಲ್ಲಿ 368 ಎಕರೆ ಕೃಷಿ ಜಮೀನು ಖರೀದಿಸಿರುವುದು ತಿಳಿದು ಬಂದಿದೆ.

ಟೆಲಿಕಾಂ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ 916.02 ಎಕರೆ, ನ್ಯಾಯಾಂಗ ಇಲಾಖೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ 318.02 ಎಕರೆ, ಕರ್ನಾಟಕ ಟೆಲಿಕಾಂ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ 1,603 ಎಕರೆ, ಕರ್ನಾಟಕ ವಸತಿ ಮಹಾಮಂಡಲ 285.08 ಎಕರೆ, ಬೆಮೆಲ್ ನೌಕರರ ಸಂಘ 465.47 ಎಕರೆ, ಬಿಎಚ್‌ಇಎಲ್ 460.76 ಎಕರೆ, ಮಿನಿಸ್ಟ್ರಿ ಆಫ್ ಕಮ್ಯುನಿಕೇಷನ್ಸ್ 667.44 ಎಕರೆ, ನ್ಯಾಯಾಂಗ ಇಲಾಖೆ ನೌಕರರ ಸಂಘ 315.26 ಎಕರೆ ಸೇರಿದಂತೆ ಒಟ್ಟು 5,027 ಎಕರೆ ಕೃಷಿ ಜಮೀನನ್ನು ಖರೀದಿಸಿರುವುದು ಲೆಕ್ಕ ಪರಿಶೋಧನೆ ವರದಿಯಲ್ಲಿ ವಿವರಿಸಿದೆ.

ಮಧ್ಯವರ್ತಿಗಳ ಮೂಲಕ ಜಮೀನು ಖರೀದಿಸಿರುವ ಗೃಹ ನಿರ್ಮಾಣ ಸಹಕಾರ ಸಂಘಗಳು ನೋಂದಣಿ ಮುದ್ರಾಂಕ ಶುಲ್ಕದಲ್ಲಿಯೂ ಸರಕಾರಕ್ಕೆ ವಂಚನೆ ಮಾಡಿವೆ ಎಂದು ಹೇಳಲಾಗಿದೆ. ಕಲಂ 79-ಎ ಮತ್ತು 79-ಬಿ ಉಲ್ಲಂಘಿಸಿ ಕೃಷಿ ಜಮೀನು ಖರೀದಿಸಿರುವ ಆರೋಪದ ಮೇಲೆ ಈವರೆಗೆ ರಾಜ್ಯದಾದ್ಯಂತ 17,574 ಪ್ರಕರಣಗಳು ದಾಖಲಾಗಿದ್ದವು.

ಈ ಪೈಕಿ 12,490 ಪ್ರಕರಣಗಳು ವಿಲೇವಾರಿ ಆಗಿವೆ. 5,490 ಪ್ರಕರಣಗಳಲ್ಲಿ ಭೂ ಸುಧಾರಣಾ ಕಾಯ್ದೆಯ ಉಲ್ಲಂಘನೆ ಆಗಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 9,316 ಪ್ರಕರಣಗಳು ದಾಖಲಾಗಿದ್ದು, 6,769 ಪ್ರಕರಣಗಳ ವಿಲೇವಾರಿ ಆಗಿದೆ. 319 ಪ್ರಕರಣಗಳಲ್ಲಿ ಉಲ್ಲಂಘನೆ ಆಗಿರುವುದು ಖಚಿತಪಟ್ಟಿದೆ ಎಂದು ತಿಳಿದು ಬಂದಿದೆ. ಆದರೆ ಈ ಕಲಂನ್ನು ಉಲ್ಲಂಘಿಸಿರುವ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಗಳ ವಿರುದ್ಧ ಹಿಂದಿನ ಯಾವ ಸರಕಾರಗಳೂ ಕ್ರಮ ಕೈಗೊಂಡಿರಲಿಲ್ಲ.

ಬಹುತೇಕ ಗೃಹ ನಿರ್ಮಾಣ ಸಹಕಾರ ಸಂಘಗಳಿಗೆ ರಾಜಕೀಯದ ನಂಟು ಹೊಂದಿವೆ. ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಹಕಾರ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಲಕ್ಷ್ಮಣ ಸವದಿ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಚ್.ಎಸ್. ಮಹದೇವಪ್ರಸಾದ್ ಹಾಗೂ ಜೆಡಿಎಸ್, ಕಾಂಗ್ರೆಸ್ ಮೈತ್ರಿಕೂಟದ ಸರಕಾರದಲ್ಲಿ ಬಂಡೆಪ್ಪ ಕಾಶೆಂಪೂರ ಅವರು ಸಹಕಾರ ಸಚಿವರಾಗಿದ್ದ ಅವಧಿಯಲ್ಲಿಯೂ ಒಂದೇ ಒಂದು ಗೃಹ ನಿರ್ಮಾಣ ಸಹಕಾರ ಸಂಘದ ವಿರುದ್ಧ ಕ್ರಮ ಕೈಗೊಂಡ ಉದಾಹರಣೆಗಳಿಲ್ಲ. ಅದರಲ್ಲೂ ಡಿ.ಕೆ. ಶಿವಕುಮಾರ್ ಅವರು ಸಹಕಾರ ಸಚಿವರಾಗಿದ್ದ ಅವಧಿಯಲ್ಲೇ ಬಹುತೇಕ ಗೃಹ ನಿರ್ಮಾಣ ಸಹಕಾರ ಸಂಘಗಳ ಹೆಸರಿನಲ್ಲಿದ್ದ ಜಮೀನುಗಳು ಬೃಹತ್ ಕಟ್ಟಡ ನಿರ್ಮಾಣ ಕಂಪೆನಿಗಳು, ರಿಯಲ್ ಎಸ್ಟೇಟ್ ಕುಳಗಳು, ಡೆವಲಪರ್‌ಗಳ ಪಾಲಾಗಿವೆ ಎಂದು ಗೊತ್ತಾಗಿದೆ.

20 ಸಾವಿರ ಕೋಟಿ ರೂ. ಅಂದಾಜು ಮೌಲ್ಯ

ಗೃಹ ನಿರ್ಮಾಣ ಸಹಕಾರ ಸಂಘಗಳು 79 ಎ ಮತ್ತು ಬಿ ಕಲಂನ್ನು ಉಲ್ಲಂಘಿಸಿ ಕೃಷಿ ಜಮೀನು ಖರೀದಿ ಮಾಡಿರುವ ಪ್ರಕರಣಗಳು ಮುನ್ನೆಲೆಗೆ ಬಂದಿದೆ. ಕಾಯ್ದೆ ಉಲ್ಲಂಘಿಸಿ ಹಲವು ವರ್ಷಗಳ ಹಿಂದೆಯೇ ಕೃಷಿ ಜಮೀನು ಖರೀದಿಸಿದ್ದರೂ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸರಕಾರಗಳು ಯಾವ ಕ್ರಮವನ್ನೂ ಕೈಗೊಂಡಿರಲಿಲ್ಲ.

ಪ್ರತಿಷ್ಠಿತ ಗೃಹ ನಿರ್ಮಾಣ ಸಹಕಾರ ಸಂಘಗಳು ಬೆಂಗಳೂರು ನಗರದ ಯಲಹಂಕ, ಹೆಜ್ಜಾಲ, ಸರ್ಜಾಪುರ ರಸ್ತೆ, ಆನೇಕಲ್, ಜಾಲಿಗೆ, ಅರದೇಶನಹಳ್ಳಿ, ಚಿಕ್ಕಜಾಲ, ಕೊಡಿಗೆಹಳ್ಳಿ, ಹೆಸರಘಟ್ಟ, ತಿಂಡ್ಲು ಸೇರಿದಂತೆ ವಿವಿಧೆಡೆ 79 ಎ ಮತ್ತು ಬಿ ಕಲಂ ಉಲ್ಲಂಘಿಸಿ ಕೃಷಿ ಜಮೀನು ಖರೀದಿಸಿರುವುದು ಸಂಘಗಳ ಲೆಕ್ಕ ಪರಿಶೋಧನೆ ವರದಿಗಳಲ್ಲಿ ಉಲ್ಲೇಖವಾಗಿವೆ. ಮಧ್ಯವರ್ತಿ, ಅಭಿವೃದ್ಧಿದಾರರ ಜತೆಗೆ ಗೃಹ ನಿರ್ಮಾಣ ಸಹಕಾರ ಸಂಘಗಳ ಮಧ್ಯೆ ಆಗಿರುವ ಎಂಒಯು ಪ್ರಕಾರ ಎಕರೆಗೆ 1.50 ಕೋಟಿ ರೂ.ನಿಂದ 2 ಕೋಟಿ ರೂ.ವರೆಗೆ ಜಮೀನು ಖರೀದಿಸಲಾಗಿದೆ. ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ದರದಲ್ಲಿ ಖರೀದಿಸಿರುವ ಈ ಜಮೀನುಗಳ ಅಂದಾಜು ಮೌಲ್ಯ 20 ಸಾವಿರ ಕೋಟಿ ರೂ. ಗೂ ಅಧಿಕ ಎಂದು ಹೇಳಲಾಗಿದೆ.

Tags

agricultural land
share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X