Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮರಿಮಲ್ಲಪ್ಪ ವಿದ್ಯಾಸಂಸ್ಥೆಯಿಂದ ನಿಯಮ,...

ಮರಿಮಲ್ಲಪ್ಪ ವಿದ್ಯಾಸಂಸ್ಥೆಯಿಂದ ನಿಯಮ, ಕಾಯ್ದೆಗಳ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಿಸಲು ಮುಂದಾದ ರಾಜ್ಯ ಸರಕಾರ

ಜಿ. ಮಹಾಂತೇಶ್ಜಿ. ಮಹಾಂತೇಶ್17 Oct 2026 8:20 AM IST
share
ಮರಿಮಲ್ಲಪ್ಪ ವಿದ್ಯಾಸಂಸ್ಥೆಯಿಂದ ನಿಯಮ, ಕಾಯ್ದೆಗಳ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಿಸಲು ಮುಂದಾದ ರಾಜ್ಯ ಸರಕಾರ

ಬೆಂಗಳೂರು : ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು, ನಿಯಮ ಮತ್ತು ಕಾಯ್ದೆಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಸರಕಾರವು ಇದೀಗ ಆಡಳಿತಾಧಿಕಾರಿಯನ್ನು ನೇಮಿಸಲು ಮುಂದಾಗಿದೆ.

ಮತ್ತೊಂದು ವಿಶೇಷವೆಂದರೇ ಮರಿಮಲ್ಲಪ್ಪ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯು ಸರಕಾರಕ್ಕೆ ಸಲ್ಲಿಸಿರುವ ದಾಖಲೆಗಳ ಪ್ರಕಾರ ಖಾಸಗಿ ಸಂಸ್ಥೆಯಲ್ಲ, ಬದಲಿಗೆ ಸಾರ್ವಜನಿಕ ಸಂಸ್ಥೆಯಂತೆ ಕಂಡು ಬರುತ್ತಿದೆ ಎಂದು ಸರಕಾರವೇ ಹೇಳಿದೆ. ಹೀಗಾಗಿ ಈ ಸಂಸ್ಥೆಗೆ ಮೈಸೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಅವರನ್ನು ಒಂದು ವರ್ಷದ ಅವಧಿಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಲು ಸಿದ್ಧತೆ ನಡೆಸಿದೆ. ಇಲಾಖೆಯು ಕೈಗೊಂಡಿರುವ ನಿರ್ಧಾರಕ್ಕೆ ಸಚಿವ ಮಧು ಬಂಗಾರಪ್ಪ ಅವರು ಅನುಮೋದಿಸಿರುವುದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳು "the-file.in'ಗೆ ಲಭ್ಯವಾಗಿವೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ಹಾಗೂ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) (ಶೈಕ್ಷಣಿಕ, ನೋಂದಣಿ, ಆಡಳಿತ, ಮತ್ತು ಸಹಾಯಾನುದಾನ ಇತರೆ) ನಿಯಮಗಳು 2024ನ್ನು ಪಾಲಿಸಬೇಕು. ಶೈಕ್ಷಣಿಕ ಅನುಮತಿಯನ್ನು ಪಡೆದಿರುವ ಎಲ್ಲಾ ಕಾಲೇಜುಗಳು, ನಿರ್ದೇಶಕರು ಮತ್ತು ಉಪ ನಿರ್ದೇಶಕರುಗಳು ಕಾಲಾಕಾಲಕ್ಕೆ ಹೊರಡಿಸುವ ಆದೇಶ, ಸುತ್ತೋಲೆ ಹಾಗೂ ನಿರ್ದೇಶನಗಳನ್ನು ಪಾಲಿಸಬೇಕು. ಆದರೆ ಮರಿಮಲ್ಲಪ್ಪ ಕಾಲೇಜು ನಿಯಮ ಮತ್ತು ಕಾಯ್ದೆ ಅನ್ವಯ ಇಲಾಖೆ ಮತ್ತು ಅದರ ಅಧೀನದ ಅಧಿಕಾರಿಗಳು ಹೊರಡಿಸುವ ನಿರ್ದೇಶನಗಳನ್ನು ಪಾಲಿಸದೇ ಉಲ್ಲಂಘಿಸುತ್ತಿದೆ ಎಂದು ತನ್ನ ಆದೇಶದಲ್ಲಿ ವಿವರಿಸಿದೆ.

ಆದೇಶದ ಪ್ರಸ್ತಾವದಲ್ಲೇನಿದೆ?: ಮರಿಮಲ್ಲಪ್ಪ ಪದವಿಪೂರ್ವ ಕಾಲೇಜು ಸ್ವತಂತ್ರ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಒಂದು ಪ್ರತಿಷ್ಠಿತ ಸಂಸ್ಥೆ. ಈ ಸಂಸ್ಥೆಯು ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸುತ್ತಿದೆ. 2023-24ರಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ 1,758 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು.

2024-25ರಲ್ಲಿ 1,293, 2025-26ರಲ್ಲಿ 1,027 ವಿದ್ಯಾರ್ಥಿಗಳು ದಾಖಲಾತಿಯಾಗಿದ್ದರು. ಈ ಕಾಲೇಜಿನ ಆಡಳಿತ ಮಂಡಳಿಯು ನೀಡಿರುವ ದಾಖಲಾತಿ ಪ್ರಕಾರ ಒಟ್ಟು ಅನುದಾನಕ್ಕೆ ಒಳಪಟ್ಟ 21 ಉಪನ್ಯಾಸಕರು ಮತ್ತು 76 ಮಂದಿ ಅನುದಾನ ರಹಿತ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

1987ರಿಂದ 1994-95ನೇ ಸಾಲಿನಲ್ಲಿ ಪ್ರಾರಂಭಿಸಿದ್ದ ಹೆಚ್ಚುವರಿ ವಿಷಯ, ಭಾಷೆ, ಸಂಯೋಜನೆ ಮತ್ತು ವಿಭಾಗಗಳ ಉಪನ್ಯಾಸಕರುಗಳನ್ನು ಅನುದಾನಕ್ಕೆ ಒಳಪಡಿಸಲು ಅವಕಾಶ ಕಲ್ಪಿಸಿದೆ. ಈ ಆದೇಶದಂತೆ ಮರಿಮಲ್ಲಪ್ಪ ಎಜುಕೇಷನಲ್ ಟ್ರಸ್ಟ್‌ನಿಂದ ನಡೆಯುತ್ತಿರುವ ಮರಿಮಲ್ಲಪ್ಪ ಪದವಿಪೂರ್ವ ಕಾಲೇಜಿನ 11 ಉಪನ್ಯಾಸಕರನ್ನು ಅನುದಾನಕ್ಕೆ ಒಳಪಡಿಸಲು ಅವಕಾಶ ಕಲ್ಪಿಸಿತ್ತು.

ಸರಕಾರದ ನಿರ್ದೇಶನದಂತೆ ಅನುದಾನಕ್ಕೆ ಒಳಪಡಿಸಲು ಅರ್ಹತೆ ನಿಗದಿಪಡಿಸಿರುವ ಮಾರ್ಗಸೂಚಿ, ಕರ್ನಾಟಕ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ (ನೋಂದಣಿ, ವೇತನ, ಪಿಂಚಣಿ, ಇತರೆ ಸೌಲಭ್ಯಗಳು) ನಿಯಮ 2014 ಹಾಗೂ ಕರ್ನಾಟಕ ಪದವಿಪೂರ್ವ ಶಿಕ್ಷಣ ( ಶೈಕ್ಷಣಿಕ, ನೋಂದಣಿ, ಆಡಳಿತ ಮತ್ತು ಸಹಾಯಾನುದಾನ, ಇತರೆ) ನಿಯಮಗಳು 2006ರ ಅನ್ವಯ ಮತ್ತು ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅನ್ವಯ ಪರಿಶೀಲಿಸಿ ಉಪನ್ಯಾಸಕರು ನೇಮಕಾತಿ ಮತ್ತು ಅನುದಾನಕ್ಕೆ ಒಳಪಡಿಸಲು ನಿರ್ದೇಶಿಸಿತ್ತು.

ಮರಿಮಲ್ಲಪ್ಪ ಪದವಿಪೂರ್ವ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 11 ಉಪನ್ಯಾಸಕರಲ್ಲಿ 6 ಉಪನ್ಯಾಸಕರನ್ನು ಅನುದಾನಕ್ಕೆ ಒಳಪಡಿಸಲಾಗಿದೆ. ಉಳಿದಂತೆ ಈಗಾಗಲೇ ಅರ್ಹತೆಯಂತೆ ಅನುಮತಿಸಿದ್ದ ಪೈಕಿ ನಾಲ್ಕು ಉಪನ್ಯಾಸಕರು ಅಗತ್ಯ ಅರ್ಹತೆಯನ್ನು ಹೊಂದಿರಲಿಲ್ಲ. ಹೀಗಾಗಿ ಅವರು ನೇಮಕಾತಿಗೆ ಅನುಮೋದನೆ ಮತ್ತು ಅನುದಾನಕ್ಕೆ ಒಳಪಡಿಸಿರಲಿಲ್ಲ ಎಂದು ಆದೇಶದ ಪ್ರಸ್ತಾವದಲ್ಲಿ ವಿವರಿಸಿದೆ.

ಈಗಾಗಲೇ ಅನುದಾನಕ್ಕೆ ಒಳಪಡಿಸಲು ಅರ್ಹವಿದ್ದು ಅನುಮತಿ ನೀಡಿರುವ ಭೌತಶಾಸ್ತ್ರ ಉಪನ್ಯಾಸಕರಾದ ರಂಗನಾಥ್ ಎಚ್.ಎಸ್. ಅವರ ನೇಮಕಾತಿಯಲ್ಲಿ ಮರಿಮಲ್ಲಪ್ಪವಿದ್ಯಾಸಂಸ್ಥೆಯು ನಿಯಮ ಪಾಲನೆ ಮಾಡಿಲ್ಲ. ಹಾಗೂ ಈ ಕಾಲೇಜಿನಲ್ಲಿ ಭೌತಶಾಸ್ತ್ರ ವಿಷಯವನ್ನು ಬೋಧನೆ ಮಾಡಿರುವ ಹಿನ್ನೆಲೆಯಲ್ಲಿ ನೇಮಕಾತಿ ಮತ್ತು ಅನುದಾನಕ್ಕೆ ಅರ್ಹತೆ ಹೊಂದಿರುವುದಾಗಿ ಎಂದು ಎ.ಎಸ್.ಮಲ್ಲಿಕಾರ್ಜುನ ಸ್ವಾಮಿ ಎಂಬವರು ವಿವಿಧ ಪ್ರಾಧಿಕಾರ ಮತ್ತು ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಿದ್ದರು.

ಇವರ ಕೋರಿಕೆಯನ್ನು ಪರಿಶೀಲಿಸುವ ಸಲುವಾಗಿ ಆಡಳಿತ ಮಂಡಳಿಗೆ 2001ರ ಆಗಸ್ಟ್ 7ರಿಂದ 2011ರ ಮಾರ್ಚ್ 3ರವರೆಗೆ ಕರ್ತವ್ಯ ನಿರ್ವಹಿಸಿರುವ ಸೇವಾ ಮಾಹಿತಿಯನ್ನು ಒದಗಿಸಲು ಕೋರಿತ್ತು. ಆದರೆ ಆಡಳಿತ ಮಂಡಳಿಯು ಅಗತ್ಯ ದಾಖಲೆಗಳನ್ನು ಸರಕಾರಕ್ಕೆ ಒದಗಿಸಿರಲಿಲ್ಲ. ಆಡಳಿತ ಮಂಡಳಿಯು ದಾಖಲಾತಿ ಮಾಹಿತಿ ಒದಗಿಸದ ಹಿನ್ನೆಲೆಯಲ್ಲಿ ಸಂಸ್ಥೆಗೆ ಕಾರಣ ಕೇಳಿ ನೋಟಿ ಸ್ ನೀಡಲಾಗಿತ್ತು. ಆದರೆ ಆಡಳಿತ ಮಂಡಳಿಯು ಬೇಜವಾಬ್ದಾರಿಯ ಸಮಜಾಯಿಷಿ ನೀಡಿತ್ತು ಎಂದು ಆದೇಶದಲ್ಲಿ ವಿವರಿಸಿರುವುದು ಗೊತ್ತಾಗಿದೆ. ಹೀಗಾಗಿ ಈ ಕಾಲೇಜಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಪ್ರಸ್ತಾವ ಸಲ್ಲಿಸಿತ್ತು.

ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅನ್ವಯ ಹಾಗೂ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಿಯಮಗಳು 2024ರ ಅನ್ವಯ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಆಡಳಿತ ಮಂಡಳಿಗಳೇ ನೇಮಕಾತಿ ಪ್ರಾಧಿಕಾರವಾಗಿದೆ. ನಿಯಮಾನುಸಾರ ಮತ್ತು ಉಚ್ಛ ನ್ಯಾಯಾಲಯದ ಆದೇಶದಂತೆ ಪರಿಶೀಲನೆ ಮಾಡಿ ಕ್ರಮವಹಿಸಬೇಕು. ಆದರೆ ಮರಿಮಲ್ಲಪ್ಪ ವಿದ್ಯಾಸಂಸ್ಥೆಯು ಇಲಾಖೆ ನಿಯಮ ಹಾಗೂ ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಆದೇಶದಲ್ಲಿ ವಿವರಿಸಿದೆ.

ಅಲ್ಲದೆ ಮರಿಮಲ್ಲಪ್ಪ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯು ನೀಡಿದ್ದ ಸಮಜಾಯಿಷಿಯನ್ನು ಸರಕಾರವು ಪರಿಶೀಲಿಸಿದೆ. ಇದರ ಪ್ರಕಾರ ಆಡಳಿತ ಮಂಡಳಿಯು ಅಸ್ತಿತ್ವಕ್ಕೆ ಸಂಬಂಧಿಸಿದಂತೆ 1824ರಲ್ಲಿ ಆಯುಕ್ತರು ಅಸ್ಟಗ್ರಾಮ ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ಸಲ್ಲಿಸಿದೆ. ಈ ದಾಖಲಾತಿಗಳ ಪ್ರಕಾರ ಆಡಳಿತ ಮಂಡಳಿಯ ಅಸ್ತಿತ್ವ ಮತ್ತು ಆದೇಶದಲ್ಲಿನ ನೈಜತೆ ಇತ್ಯಾದಿಗಳ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಆದೇಶದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

ಅದೇ ರೀತಿ ಅನುಮೋದನೆ ಮತ್ತು ಅನುದಾನಕ್ಕೆ ಒಳಪಡಿಸಲು ಬಾಕಿ ಉಳಿದ ಹುದ್ದೆಗಳನ್ನು ಮತ್ತು ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿನ ನೇಮಕಾತಿಗಳನ್ನೂ ಸರಕಾರವು ಪರಿಶೀಲಿಸಿದೆ. ಇದರ ಪ್ರಕಾರವೂ ಮರಿಮಲ್ಲಪ್ಪಪದವಿಪೂರ್ವ ಕಾಲೇಜ ಆಡಳಿತ ಮಂಡಳಿ ನಿಯಮಾನುಸಾರ ಕಾಲೇಜಿನ ಆಡಳಿತ ಮಂಡಳಿ ನಿರ್ವಹಿಸುತ್ತಿಲ್ಲ ಎಂದು ಉಲ್ಲೇಖಿಸಿದೆ.

ಮರಿಮಲ್ಲಪ್ಪ ವಿದ್ಯಾಸಂಸ್ಥೆಯು ನಡೆಸುತ್ತಿರುವ ಮರಿಮಲ್ಲಪ್ಪಪದವಿಪೂರ್ವ ಕಾಲೇಜು ನೋಂದಣಿ ಮತ್ತು ನವೀಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿಯು ಸಲ್ಲಿಸಿರುವ ದಾಖಲಾತಿಗಳ ಪ್ರಕಾರ ಈ ಸಂಸ್ಥೆಯು ಖಾಸಗಿ ಸಂಸ್ಥೆಯಂತೆ ಕಂಡು ಬರುತ್ತಿಲ್ಲ. ಇದು ಒಂದು ಸಾರ್ವಜನಿಕ ಸಂಸ್ಥೆಯಂತೆ ಕಂಡು ಬರುತ್ತಿದೆ. ಈ ಸಂಸ್ಥೆಯಿಂದ ನಡೆಯುತ್ತಿರುವ ಮರಿಮಲ್ಲಪ್ಪಪದವಿಪೂರ್ವ ಕಾಲೇಜಿನ ನಿವೇಶನದ ಭೂಮಿಯ ಒಟ್ಟು ವಿಸ್ತೀರ್ಣ 18478.6 ಚದರ ಮೀಟರ್ ಇದೆ. ಈ ಸಂಬಂಧ ನಿರ್ದೇಶನಾಲಯವು ನೀಡಿದ್ದ ಸ್ಪಷ್ಟನೆ ಕೋರಿತ್ತು. ಆದರೆ ಈ ಸಂಬಂಧ ಆಡಳಿತ ಮಂಡಳಿಯು ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಆದೇಶದಲ್ಲಿ ವಿವರಿಸಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಗೆ ಆಡಳಿತಾಧಿಕಾರಿ ನೇಮಿಸಬೇಕು. ನಿಯಮಾನುಸಾರ ಪೂರ್ಣ ಆರ್ಥಿಕ ನಿರ್ವಹಣೆಮತ್ತು ಆಸ್ತಿಗಳ ಸಂರಕ್ಷಣೆ ಕುರಿತು ಪರಿಶೀಲನೆ ನಡೆಸಬೇಕು ಎಂದು ಆದೇಶದಲ್ಲಿ ಹೇಳಿರುವುದು ತಿಳಿದು ಬಂದಿದೆ.

‘ನಿರ್ದೇಶನಗಳನ್ನು ಪಾಲಿಸುತ್ತಿಲ್ಲ’

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯವರ ಕಾರ್ಯವೈಖರಿಯಿಂದ ಉಚ್ಛ ನ್ಯಾಯಾಲಯದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಅಲ್ಲದೇ ನಿರ್ದೇಶನಾಲಯದಿಂದ ಹೊರಡಿಸುವ ಸೂಚನೆ, ನಿರ್ದೇಶನಗಳನ್ನು ನಿಯಮಾನುಸಾರ ಪಾಲಿಸುತ್ತಿಲ್ಲ. ಕರ್ನಾಟಕ ಶಾಲಾ ಶಿಕ್ಷಣ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂದು ಸರಕಾರವು ತನ್ನ ಆದೇಶದಲ್ಲಿ ಪುನರುಚ್ಚರಿಸಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X