Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ...

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿಷತ್ ಸದಸ್ಯರ ನೇಮಕ: ಅಧಿನಿಯಮಕ್ಕೆ ಶೀಘ್ರ ತಿದ್ದುಪಡಿ?

ಜಿ. ಮಹಾಂತೆೇಶ್ಜಿ. ಮಹಾಂತೆೇಶ್24 Sept 2025 9:00 AM IST
share
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿಷತ್ ಸದಸ್ಯರ ನೇಮಕ:  ಅಧಿನಿಯಮಕ್ಕೆ ಶೀಘ್ರ ತಿದ್ದುಪಡಿ?

ಬೆಂಗಳೂರು : ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿಷತ್ ಸದಸ್ಯರನ್ನು ಕಾನೂನಾತ್ಮಕವಾಗಿ ನೇಮಕ ಮಾಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವು ಇದೀಗ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧಿನಿಯಮ 1991ಕ್ಕೆ ತಿದ್ದುಪಡಿ ತರಲು ಹೊರಟಿದೆ.

ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಸಚಿವ ಸಂಪುಟಕ್ಕೆ ಕಡತ (ಪಿಡಿಎಸ್ 15 ಮಪ್ರಮಂ 2019) ಮಂಡಿಸಿದೆ. ಇದೇ ತಿಂಗಳಾಂತ್ಯಕ್ಕೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿರುವ ರಹಸ್ಯ ಹಾಳೆಗಳು ‘the-file.in’ಗೆ ಲಭ್ಯವಾಗಿವೆ.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಕಾನೂನು ರೀತಿಯಲ್ಲಿ ವಿಧಾನ ಪರಿಷತ್ ಸದಸ್ಯರನ್ನು ನೇಮಕ ಮಾಡಲು ಮಂಡಳಿಯ ಅಧಿನಿಯಮ 1991ರಲ್ಲಿ ಅವಕಾಶವಿರಲಿಲ್ಲ. ಈ ಕುರಿತು ವಿಧಾನ ಪರಿಷತ್ ಸದಸ್ಯರು ಅಧಿನಿಯಮ ತಿದ್ದುಪಡಿಗೆ ಒತ್ತಾಯಿಸಿದ್ದರು. ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿಯೂ ಹರೀಶ್ ಕುಮಾರ್ ಅವರು ವಿಧಾನಪರಿಷತ್ ಅಧಿವೇಶನದಲ್ಲಿ ಈ ಕುರಿತು ಪ್ರಶ್ನೆ ಕೇಳಿದ್ದರು.

ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಕಾನೂನು ರೀತಿಯಲ್ಲಿ ಮಂಡಳಿಗೆ ವಿಧಾನ ಪರಿಷತ್ ಸದಸ್ಯರನ್ನು ನೇಮಕ ಮಾಡಲು ಅವಕಾಶವಿರುವುದಿಲ್ಲ ಎಂದು ಉತ್ತರಿಸಿದ್ದರು.ಇದೀಗ ಕಾಂಗ್ರೆಸ್ ಸರಕಾರವು ಮಂಡಳಿಯ ಈ ಅಧಿನಿಯಮಕ್ಕೆ ತಿದ್ದುಪಡಿ ತರಲು ಹೊರಟಿದೆ.

ಸಚಿವ ಸಂಪುಟ ಪ್ರಸ್ತಾವದಲ್ಲೇನಿದೆ?: ವಿಧಾನಸಭೆ ಸದಸ್ಯರಿಂದ ಚುನಾಯಿತರಾದ ವಿಧಾನ ಪರಿಷತ್ ಸದಸ್ಯರಿಗೆ ಚುನಾವಣೆ ಕ್ಷೇತ್ರವಿರುವುದಿಲ್ಲ. ವಿಧಾನ ಪರಿಷತ್ ಸದಸ್ಯರು ಮಂಡಳಿಯ ಅಧಿಕಾರ ವ್ಯಾಪ್ತಿಯೊಳಗಿನ ಜಿಲ್ಲೆಯನ್ನು ನೋಡಲ್ ಜಿಲ್ಲೆಯೆಂದು ಆಯ್ಕೆ ಮಾಡಿಕೊಂಡರೆ ಅಂತಹವರನ್ನು ಮಂಡಳಿಯ ಸದಸ್ಯರಂದು ಪರಿಗಣಿಸಿ ಅವರಿಗೂ ಇತರ ಸದಸ್ಯರಿಗೆ ದೊರೆಯುವ ಸ್ಥಾನಮಾನ, ಸೌಲಭ್ಯಗಳು, ಅನುದಾನ ಮತ್ತು ಮಾನ್ಯತೆ ದೊರೆಯುವಂತೆ ಮಾಡಬೇಕಿದೆ. ಹೀಗಾಗಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧಿನಿಯಮ 1991ಕ್ಕೆ ತಿದ್ದುಪಡಿ ತರಬೇಕು ಎಂದು ಯೋಜನೆ ಇಲಾಖೆಯು ಪ್ರಸ್ತಾವಿಸಿರುವುದು ಸಚಿವ ಸಂಪುಟದ ರಹಸ್ಯ ಹಾಳೆಯಿಂದ ತಿಳಿದು ಬಂದಿದೆ.

ಆರ್ಥಿಕ ಪರಿಣಾಮಗಳೇನು?: ಆಯವ್ಯ ಯದಲ್ಲಿ ಹಂಚಿಕೆಯಾಗುವ ಅನುದಾನವನ್ನು ಮಂಡಳಿ ವ್ಯಾಪ್ತಿಯ ಎಲ್ಲ ಸದಸ್ಯರಿಗೆ ಹಂಚಿಕೆ ಮಾಡಲಾಗುವುದು. ಸಭೆಯಲ್ಲಿ ಭಾಗವಹಿಸುವ ಹೆಚ್ಚುವರಿ ಸದಸ್ಯರಿಗೆ ಪ್ರತಿ ಸಭೆಗೆ ಆಸೀನ ಭತ್ಯೆ, ಪ್ರಯಾಣ ಭತ್ಯೆ ಮತ್ತು ಇತರ ವೆಚ್ಚಗಳು ಸೇರಿದಂತೆ ಒಟ್ಟು 2,00,000 ರೂ.ಯನ್ನು ಮಂಡಳಿಯ ಆಡಳಿತಾತ್ಮಕ ನಿಧಿಯಿಂದ ಭರಿಸಬೇಕಿದೆ.

ಆರ್ಥಿಕ ಇಲಾಖೆ ಅಭಿಪ್ರಾಯವೇನು?: ಆಡಳಿತ ಇಲಾಖೆಯು ನೀಡಿದ್ದ ಪ್ರಸ್ತಾವವನ್ನು ಆರ್ಥಿಕ ಇಲಾಖೆಯು ಪರಿಶೀಲಿಸಿದೆ. ಕರ್ನಾಟಕ ವಿಧಾನಸಭೆಯಿಂದ ಆಯ್ಕೆಗೊಂಡ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಹೊಸದಾಗಿ ಸೇರ್ಪ ಡೆಯಾಗಬಹುದಾದ ವಿಧಾನ ಪರಿಷತ್‌ನ 5 ಸದಸ್ಯರಿಗೆ ಸಭೆಯಗಳ ಅಸೀನತೆ ಶುಲ್ಕ ಮತ್ತು ಪ್ರಯಾಣ ಭತ್ಯೆಗೆ ಆಗುವ 2 ಲಕ್ಷ ರೂ.ಆಡಳಿತಾತ್ಮಕ ವೆಚ್ಚವನ್ನು ಮಾತ್ರ ಭರಿಸುವ ಷರತ್ತಿಗೊಳಪಟ್ಟು ಆರ್ಥಿಕ ಇಲಾಖೆಯು ಈ ಪ್ರಸ್ತಾವಕ್ಕೆ ಸಹಮತಿಸಿರುವುದು ಗೊತ್ತಾಗಿದೆ.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮಕ್ಕೆ ತರಲು ಹೊರಟಿರುವ ತಿದ್ದುಪಡಿ ಕುರಿತು 2023ರ ಜೂನ್ 21 ಮತ್ತು 2025ರ ಸೆ.17ರಂದು ಪರಿಶೀಲನಾ ಸಮಿತಿಯಲ್ಲಿ ಚರ್ಚೆಯಾಗಿದೆ. ಈ ತಿದ್ದುಪಡಿ ವಿಧೇಯಕವು ಭಾರತ ಸಂವಿಧಾನದ 7ನೇ ಅನುಸೂಚಿಯ 2ನೇ ಪಟ್ಟಿಯ 5ನೇ ಮತ್ತು 32ನೇ ನಮೂನೆ ಅಡಿಯಲ್ಲಿ ಬರಲಿದೆ.

ಹೀಗಾಗಿ ಈ ವಿಧೇಯಕವನ್ನು ಮಂಡಿಸಲು ರಾಜ್ಯ ವಿಧಾನ ಮಂಡಲಕ್ಕೆ ಅಧಿಕಾರವಿದೆ. ಇದು ಕಾನೂನಿನ ವಿಧೇಯಕದ ಉಪಬಂಧಗಳಿಗೆ ವ್ಯತಿರಿಕ್ತವಾಗುವುದು ಕಂಡು ಬಂದಿಲ್ಲ. ಇದನ್ನು ರಾಷ್ಟ್ರಪತಿಯವರ ಪರ್ಯಾಲೋಚನೆಗಾಗಿ ಕಾಯ್ದಿರಿಸುವ ಅಗತ್ಯ ಕಂಡು ಬಂದಿಲ್ಲ ಎಂದು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯು ಅಭಿಪ್ರಾಯ ನೀಡಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಈ ಪ್ರಸ್ತಾವವನ್ನು ಯೋಜನೆ, ಕಾರ್ಯಕ್ರಮ, ಸಾಂಖ್ಯಿಕ ಸಚಿವ ಡಿ ಸುಧಾಕರ್ ಅವರೂ ಸಹ ಅನುಮೋದನೆ ನೀಡಿರುವುದು ಗೊತ್ತಾಗಿದೆ.

ಮಂಡಳಿಯಲ್ಲಿ ನಾಮನಿರ್ದೇಶನಕ್ಕೆ ಮಾನದಂಡಗಳೇನು?: ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧಿನಿಯಮ 1991ರ ಪ್ರಕಾರ ನಾಮ ನಿರ್ದೇಶನಕ್ಕೆ ಹಲವು ಮಾನದಂಡಗಳನ್ನು ರೂಪಿಸಿದೆ. ಇದರ ಪ್ರಕಾರ ರಾಜ್ಯ ಸರಕಾರದಿಂದ ನಾಮನಿರ್ದೇಶಿತರಾದ ಹತ್ತು ಮಂದಿಯನ್ನು ಮೀರದ ಸದಸ್ಯರು, ಅವರ ಪೈಕಿ ಇಬ್ಬರು ಅನುಸೂಚಿತ ಜಾತಿಗಳು ಮತ್ತು ಒಬ್ಬರು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಗಳು ಸದಸ್ಯರಾಗಿರಬೇಕು ಎಂದು ಹೇಳಿದೆ.

ಮಂಡಳಿಯ ಅಧಿನಿಯಮ ಅಧ್ಯಾಯ 2, ಸೆಕ್ಷನ್ 5ರ ಪ್ರಕಾರ ಹುದ್ದೆಯ ಸದಸ್ಯತ್ವಕಕೆ ಅನರ್ಹತೆ ಬಗ್ಗೆಯೂ ವಿವರಿಸಿದೆ. 2020ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ಹರೀಶ್ ಕುಮಾರ್, ರುದ್ರೇಗೌಡ, ಎಸ್.ಎಲ್.ಧರ್ಮೇಗೌಡ ಅವರು ಮಂಡಳಿಗೆ ನೇಮಕವಾಗಿರಲಿಲ್ಲ.

share
ಜಿ. ಮಹಾಂತೆೇಶ್
ಜಿ. ಮಹಾಂತೆೇಶ್
Next Story
X