Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೆಳಗಾವಿ ಅಧಿವೇಶನ: ಧಾರ್ಮಿಕ...

ಬೆಳಗಾವಿ ಅಧಿವೇಶನ: ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆಗೆ ಸಿದ್ಧತೆ

ಜಿ. ಮಹಾಂತೇಶ್ಜಿ. ಮಹಾಂತೇಶ್28 Nov 2026 8:56 AM IST
share
ಬೆಳಗಾವಿ ಅಧಿವೇಶನ: ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆಗೆ ಸಿದ್ಧತೆ

ಬೆಂಗಳೂರು : ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು (ಮತಾಂತರ ನಿಷೇಧ ಕಾಯ್ದೆ) ರದ್ದುಗೊಳಿಸುವ ಭಾಗವಾಗಿ ಈ ವಿಧೇಯಕವನ್ನು ಹಿಂಪಡೆಯುವ ಸಂಬಂಧ ರಾಜ್ಯ ಕಾಂಗ್ರೆಸ್ ಸರಕಾರವು ಸಿದ್ಧಪಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2023 (ನಿರಸನ) ಮುನ್ನೆಲೆಗೆ ಬಂದಿದೆ.

ವಿಶೇಷವೆಂದರೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2023 (ನಿರಸನ)ವನ್ನು ಮಂಡಿಸಬೇಕು ಎಂದು ಗೃಹ ಸಚಿವರು ಸಭಾಧ್ಯಕ್ಷರಿಗೆ ಪತ್ರ ನೀಡಿದ್ದಾರಾದರೂ 2026ರ ಆಗಸ್ಟ್ ನಲ್ಲಿ ನಡೆದಿದ್ದ ವಿಧಾನಮಂಡಲದಲ್ಲಿ ಮಂಡನೆಯಾಗಿರಲಿಲ್ಲ. ಹೀಗಾಗಿ ಈ ವಿಧೇಯಕವನ್ನು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಅದೇ ರೀತಿ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಸಂಬಂಧ ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಉಪ ಸಮಿತಿಯು ಪರಿಶೀಲಿಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೆ ಸಂಬಂಧಿಸಿದ ಕಡತವನ್ನು ಹಿಂದಿನ ಗೃಹ ಸಚಿವರ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಲಾಗಿತ್ತು. ಆದರೆ ನೂತನ ಮಂತ್ರಿಮಂಡಲ ರಚನೆಯಾಗಿರಲಿಲ್ಲ. ಹೀಗಾಗಿ ಮುಖ್ಯಮಂತ್ರಿಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಕಡತವನ್ನು ಪರಿಶೀಲಿಸಿದ್ದರಲ್ಲದೇ ಇದನ್ನು ಅವಶ್ಯವಿದ್ದಲ್ಲಿ ಮರು ಮಂಡಿಸಲು ಕೋರಿ ಕಡತವನ್ನು 2026ರ ಜೂ.3ರಂದು ಹಿಂದಿರುಗಿಸಿದ್ದರು.

ನೂತನ ಮಂತ್ರಿಮಂಡಲ ರಚನೆಯಾದ ನಂತರ ಭೌತಿಕ ಕಡತವನ್ನು ಇ-ಆಫೀಸ್ ಗೆ

ಪರಿವರ್ತಿಸಿ ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರ ಮೂಲಕ ಮುಖ್ಯಮಂತ್ರಿಗೆ ಕಡತ ಸಲ್ಲಿಸಲಾಗಿದೆ. ಇದಾದ ನಂತರ ಮುಖ್ಯಮಂತ್ರಿಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇತರ ರಾಜ್ಯಗಳ ಶಾಸಕಾಂಗದದಲ್ಲಿ ಇದೇ ರೀತಿಯ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಮಾಹಿತಿ ಪಡೆದಿದ್ದರು. ಅವುಗಳನ್ನು ಪರಿಶೀಲಿಸಿ ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಮೇಲೆ ಕೈಗೊಳ್ಳಬೇಕಾದ ವರದಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಬೇಕು ಎಂದು 2026ರ ಜುಲೈ 15ರಂದು ಸೂಚಿಸಿದ್ದರು. ಅದೇ ರೀತಿ ಈ ಬಗ್ಗೆ ಡಿಜಿ ಮತ್ತು ಐಜಿಪಿ ಅವರಿಗೂ 2026ರ ಸೆ.7ರಂದು ಪತ್ರ ಬರೆಯಲಾಗಿತ್ತು. ಆದರೆ ಈವರೆಗೂ ಯಾವುದೇ ಮಾಹಿತಿಯು ಸರಕಾರದಲ್ಲಿ ಸ್ವೀಕೃತವಾಗಿಲ್ಲ.

ಈ ವಿಧೇಯಕವಲ್ಲದೇ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020, ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳು-ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ 2022, ಮುಸ್ಲಿಮರಿಗೆ ನಿಗದಿಪಡಿಸಿದ್ದ ಶೇ.4ರಷ್ಟು ಮೀಸಲಾತಿಯನ್ನು ಪುನರ್ ವರ್ಗೀಕರಿಸುವ ಭಾಗವಾಗಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಯ ಮರು ವರ್ಗೀ

ಕರಣ ಕುರಿತು ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಉಪ ಸಮಿತಿಯು ಚರ್ಚಿಸಲು ಮುಂದಾಗಿದೆ.

ಈ ಉಪ ಸಮಿತಿಯು ನ.30ರಂದು ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮಿತಿ ಸಭಾಂಗಣದಲ್ಲಿ ಚರ್ಚಿಸಲಿದೆ. ಈ ಸಂಬಂಧ ಒಳಾಡಳಿತ ಇಲಾಖೆ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಇಲಾಖೆಯು ಈ ಎಲ್ಲ ವಿಧೇಯಕಗಳ ಬಗ್ಗೆ ಪೂರಕ ಟಿಪ್ಪಣಿಗಳನ್ನು 2026ರ ನ.23 ಮತ್ತು 24ರಂದು ಒದಗಿಸಿದೆ.

ಕೆಲವೊಂದು ಮಹತ್ವದ ರಾಜಕೀಯ, ದೂರಗಾಮಿ ಪರಿಣಾಮ ಇರುವ ವಿಷಯಗಳು, ಅಂತರ್‌ರಾಜ್ಯ ಹಾಗೂ ಕೇಂದ್ರ-ರಾಜ್ಯ ಸಂಬಂಧಿತ ಸೂಕ್ಷ್ಮ ವಿಷಯಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಡಿ.ಕೆ .

ಶಿವಕುಮಾರ್ ಅಧ್ಯಕ್ಷತೆಯಲ್ಲಿ 10 ಮಂದಿ ಸಚಿವರು ಸದಸ್ಯರನ್ನೊಳಗೊಂಡ ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಉಪ ಸಮಿತಿ ರಚಿಸಿದೆ.

ಮತಾಂತರ ನಿಷೇಧ ಕಾಯ್ದೆಯ ಪ್ರಸ್ತುತ ಸ್ಥಿತಿ, ಪೂರಕ ಟಿಪ್ಪಣಿ, ಕಾಲಾನುಕ್ರಮದ ಘಟನಾವಳಿಗಳ ಮಾಹಿತಿ ಮತ್ತು ಹಲವು ದಾಖಲೆಗಳನ್ನು (ಎಚ್‌ಡಿ 460 ಎಸ್‌ಎಸ್‌ಟಿ-2021) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜಕೀಯ ಶಾಖೆಗೆ 2026ರ ನವೆಂಬರ್ 23ರಂದು ಸಲ್ಲಿಸಿದೆ.

<ಒಳಾಡಳಿತ ಇಲಾಖೆಯ ಪೂರಕ ಟಿಪ್ಪಣಿಯಲ್ಲೇನಿದೆ?: ‘ರಾಜ್ಯದ ವಿವಿಧ ಭಾಗಗಳಲ್ಲಿ ಬಲವಂತವಾಗಿ ಆಮಿಷಗಳನ್ನು ಒಡ್ಡಿ ಮತಾಂತರ ಮಾಡಲಾಗುತ್ತಿದೆ. ಈ ಬಗ್ಗೆ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಇಂತಹ ಕೃತ್ಯಗಳು ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಿ, ಸಾಮಾಜಿಕ ಕ್ಷೋಭೆಗಳಿಗೆ ಕಾರಣವಾಗುವುದಲ್ಲದೇ ಸಾರ್ವಜನಿಕರ ರಕ್ಷಣೆ ಹೊಣೆ ಹೊತ್ತಿರುವ ಸಿಬ್ಬಂದಿಗೆ ನಿಯಂತ್ರಣ ಕಷ್ಟಸಾಧ್ಯವಾಗಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಗುರುತರ ಜವಾಬ್ದಾರಿ ಸರಕಾರದ ಮೇಲಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿವೆ. ನಮ್ಮ ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ನಿಟ್ಟಿನಲ್ಲಿ ವಿವಿಧ ರಾಜ್ಯಗಳಲ್ಲಿ ಈ ವಿಷಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಯ್ದೆಯ ಕರಡನ್ನು ತಯಾರಿಸಿ ಕಾನೂನು ಇಲಾಖೆಯ ಅಭಿಪ್ರಾಯಕ್ಕೆ ಕಳಿಸಿದೆ’ ಎಂದು ಹಿಂದಿನ ಬಿಜೆಪಿ ಸರಕಾರದ ನಡಾವಳಿಯನ್ನು ರಾಜಕೀಯ ವ್ಯವಹಾರಗಳ ಸಂಪುಟ ಉಪ ಸಮಿತಿಗೆ ಸಲ್ಲಿಸಿರುವುದು ಗೊತ್ತಾಗಿದೆ.

ಅದೇ ರೀತಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ 2022ನ್ನು ನಿರಸನಗೊಳಿಸುವ ಬಗ್ಗೆ ಕಡತ ಮಂಡಿಸಲು ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಅವರು ಸೂಚಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಮೂಲಕ ಕಡತವನ್ನು ಪರಿಶೀಲನಾ ಸಮಿತಿ ಮುಂದೆ ಮಂಡಿಸಿತ್ತು. ಈ ವಿಧೇಯಕದ ಕುರಿತು 2023ರ ಜೂ.14ರಂದು ಪರಿಶೀಲನಾ ಸಮಿತಿಯಲ್ಲಿಯೂ ಚರ್ಚಿಸಲಾಗಿದೆ. ಸಚಿವರು ಮತ್ತು ಪರಿಶೀಲನಾ ಸಮಿತಿ ಅಧ್ಯಕ್ಷರು ಅನುಮೋದಿಸಿದ್ದ ವಿಧೇಯಕದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ಒಳಾಡಳಿತ ಇಲಾಖೆಗೆ ಕಡತ ರವಾನಿಸಿರುವುದು ಪೂರಕ ಟಿಪ್ಪಣಿಯಿಂದ ತಿಳಿದು ಬಂದಿದೆ.

<ಜಾನುವಾರು ಹತ್ಯೆ ಪ್ರತಿಬಂಧಕ-ಸಂರಕ್ಷಣಾ ಅಧಿನಿಯಮದ ಪ್ರಸ್ತುತ ಸ್ಥಿತಿಯೇನು?: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ಕ್ಕೆ ಸಂಬಂಧಿಸಿದಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯು ಪ್ರಸ್ತುತ ಸ್ಥಿತಿ ಮತ್ತು ಪೂರಕ ದಾಖಲೆಗಳನ್ನು 2026ರ ನ.21ರಂದು ಒದಗಿಸಿದೆ.

ಇಲಾಖೆಯು ಈ ವಿಧೇಯಕಕ್ಕೆ ಸಂಬಂಧಿಸಿ ನೀಡಿರುವ ಕಾಲಾನುಕ್ರಮ ಘಟನಾವಳಿಗಳ ಮಾಹಿತಿ ಪ್ರಕಾರ ಈ ಕಾಯ್ದೆ ಜಾರಿಯಿಂದ ಸಂರಕ್ಷಿಸಲ್ಪಡುವ ಜಾನುವಾರುಗಳ ನಿರ್ವಹಣೆಗೆ ರಾಜ್ಯದಲ್ಲಿ 100 ಸರಕಾರಿ ಗೋಶಾಲೆಗಳನ್ನು ನಿರ್ಮಿಸಲು ತೀರ್ಮಾನಿಸಿದೆ.

<ಪುಣ್ಯಕೋಟಿ ದತ್ತು ಯೋಜನೆಯಿಂದ 29.63 ಕೋಟಿ ರೂ. ದೇಣಿಗೆ ಸಂಗ್ರಹ: ಅದೇ ರೀತಿ ಸರಕಾರಿ ಹಾಗೂ ಖಾಸಗಿ ಗೋ ಶಾಲೆಗಳಲ್ಲಿರುವ ಜಾನುವಾರುಗಳ ನಿರ್ವಹಣೆಗೆ ರಾಜ್ಯ ಸರಕಾರವು ಪ್ರತೀ ವರ್ಷ 5 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಈ ಅನುದಾನದಲ್ಲಿ ಹೆಚ್ಚಿನ ಪ್ರಮಾಣದ ಅನುದಾನವು ಸರಕಾರಿ ಗೋ ಶಾಲೆಗಳಿಗೆ ವೆಚ್ಚವಾಗುತ್ತಿದೆ. ಖಾಸಗಿ ಗೋ ಶಾಲೆಗಳಲ್ಲಿನ ಜಾನುವಾರುಗಳ ನಿರ್ವಹಣೆಗೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಅನುದಾನ ನೀಡಲಾಗುತ್ತಿದೆ. ಪುಣ್ಯಕೋಟಿ ದತ್ತು ಯೋಜನೆಯ ಮೂಲಕ ಸಾರ್ವಜನಿಕರು ಮತ್ತು ಸರಕಾರಿ ನೌಕರರು ಹಾಗೂ ಖಾಸಗಿ ಸಂಸ್ಥೆಗಳಿಂದ ಒಟ್ಟು 29,63,58,535 ರೂ. ದೇಣಿಗೆ ಸಂಗ್ರಹಿಸಿದೆ. ಈ ಹಣದ ಮೂಲಕ 26,942 ಜಾನುವಾರುಗಳನ್ನು ದತ್ತು ಪಡೆಯಲಾಗಿದೆ ಎಂಬ ಮಾಹಿತಿಯನ್ನು ಸಮಿತಿಗೆ ಒದಗಿಸಿರುವುದು ತಿಳಿದು ಬಂದಿದೆ.

<14,535 ಜಾನುವಾರು, 2042 ವಾಹನ ವಶ: ರಾಜ್ಯದ 23 ಜಿಲ್ಲೆಗಳಲ್ಲಿರುವ 24 ಗೋ ಶಾಲೆಗಳಲ್ಲಿ ಒಟ್ಟು 1,600 ಜಾನುವಾರುಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಕಾಯ್ದೆ ಜಾರಿಗೆ ಬಂದಾಗಿನಿಂದ ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ 2026ರ

ಆಗಸ್ಟ್‌ವರೆಗೆ 14,535 ಜಾನುವಾರುಗಳನ್ನು ಹಾಗೂ 2,042 ವಾಹನಗಳನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿದೆ. ಈ ಕಾಯ್ದೆ ಜಾರಿಯಾದ ನಂತರ ಈ ಕಾಯ್ದೆಯನ್ನು ರದ್ದುಗೊಳಿಸಲು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿವೆ ಎಂದು ಇಲಾಖೆಯು ವಿವರಿಸಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X