Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಂಗ್ರೆಸ್ ಭವನ ಟ್ರಸ್ಟ್‌ಗೆ ರಿಯಾಯಿತಿ...

ಕಾಂಗ್ರೆಸ್ ಭವನ ಟ್ರಸ್ಟ್‌ಗೆ ರಿಯಾಯಿತಿ ದರದಲ್ಲಿ ಸಿಎ ನಿವೇಶನಗಳ ಮಂಜೂರು: 16.89 ಕೋಟಿ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ17 Jan 2026 2:35 PM IST
share
ಕಾಂಗ್ರೆಸ್ ಭವನ ಟ್ರಸ್ಟ್‌ಗೆ ರಿಯಾಯಿತಿ ದರದಲ್ಲಿ ಸಿಎ ನಿವೇಶನಗಳ ಮಂಜೂರು: 16.89 ಕೋಟಿ ರೂ. ನಷ್ಟ

ಬೆಂಗಳೂರು: ರಾಜ್ಯದ 6 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿದ್ದ ಸಿಎ ನಿವೇಶನಗಳನ್ನು ನಿಯಮ ಮೀರಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕೇವಲ ಶೇ.5ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಪರಿಣಾಮ ಸರಕಾರದ ಬೊಕ್ಕಸಕ್ಕೆ 16.89 ಕೋಟಿ ರೂ.ನಷ್ಟು ನಷ್ಟ ಸಂಭವಿಸಿದೆ.

2023ರಿಂದ 2025ರ ಡಿಸೆಂಬರ್‌ವರೆಗೆ ಒಟ್ಟು 11 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಎ ನಿವೇಶನಗಳನ್ನು ಮಂಜೂರು ಮಾಡುವ ಸಂಬಂಧ ಕಾಂಗ್ರೆಸ್ ಭವನ ಟ್ರಸ್ಟ್ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಈ ಪೈಕಿ 5 ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಅಳತೆಯ ಸಿಎ ನಿವೇಶನಗಳನ್ನು ಪೌರಾಡಳಿತ ಇಲಾಖೆಯು ಕಾಂಗ್ರೆಸ್ ಭವನ ಟ್ರಸ್ಟ್‌ಗೆ

ಮಂಜೂರು ಮಾಡಿತ್ತು. ಮಂಜೂರಾತಿಗೆ ಬಾಕಿ ಇದ್ದ 6 ಸ್ಥಳೀಯ ಸಂಸ್ಥೆಗಳ ಪ್ರಸ್ತಾವಗಳನ್ನು ಸಚಿವ ಸಂಪುಟವು ಅನುಮೋದಿಸಿದೆ.

ರಾಜಕೀಯ ಪಕ್ಷಗಳ ಭವನಗಳಿಗೆ ನಾಗರಿಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲು ಕೆಟಿಸಿಪಿ (ಸಿಎ ನಿವೇಶನ ಹಂಚಿಕೆ) ನಿಯಮಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನೆ ಆಯುಕ್ತಾಲಯವು ಸರಕಾರಕ್ಕೆ ಸ್ಪಷ್ಟ ಅಭಿಪ್ರಾಯ ನೀಡಿತ್ತು. ಆದರೂ ಈ ಎಲ್ಲ ಅಭಿಪ್ರಾಯಗಳನ್ನು ಬದಿಗೊತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರವು ನಿವೇಶನ ಮೌಲ್ಯದ ಶೇ.5ರಷ್ಟು ದರ ವಿಧಿಸಿ ಖಾಯಂ ಆಗಿ ಮಂಜೂರು ಮಾಡಿದೆ. ಈ ಸಂಬಂಧ 2026ರ ಜನವರಿ 13ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯು "The-file.in" ಗೆ ಲಭ್ಯವಾಗಿದೆ.

ಕೇಳಿದ್ದು ಗುತ್ತಿಗೆಗೆ, ಆದೇಶವಾಗಿದ್ದು ಖಾಯಂ ಮಂಜೂರಾತಿಗೆ: ಕಲಬುರಗಿ ಜಿಲ್ಲೆಯ ಅಫ್ಜ ಲಪುರ ಪುರಸಭೆ ವ್ಯಾಪ್ತಿಯಲ್ಲಿ 1,120.60 ಚದರ ಮೀಟರ್ ವಿಸ್ತೀರ್ಣದ ಜಾಗವನ್ನು ನಾಗರಿಕ ಸೌಲಭ್ಯ ನಿವೇಶನಕ್ಕಾಗಿ ಕಾಯ್ದರಿಸಿತ್ತು. ಈ ನಿವೇಶನವನ್ನು ಸಾಮಾಜಿಕ ಉದ್ದೇಶಕ್ಕಾಗಿ ಮಾರುಕಟ್ಟೆ ಮೌಲ್ಯದಂತೆ ಶೇ.100ರಷ್ಟು ನಿಗದಿಪಡಿಸಿ 30 ವರ್ಷ ಗುತ್ತಿಗೆ ಆಧಾರದದ ಮೇಲೆ ಮಂಜೂರು ಮಾಡಲು ಕಲಬುರಗಿ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕೋರಿದ್ದರು.

ಈ ಪ್ರಸ್ತಾವವನ್ನು ಪೌರಾಡಳಿತ ಇಲಾಖೆಯು ತಿರಸ್ಕರಿಸಿತ್ತು. ಕರ್ನಾಟಕ ಯೋಜನಾ ಪ್ರಾಧಿಕಾರಗಳ ನಿಯಿಮ 2016-17ರ ನಿಯಮ 2(3) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಹೇಳಿತ್ತು. ಆದರೆ ನಗರಾಭಿವೃದ್ಧಿ ಇಲಾಖೆಯು ಕಡತವನ್ನು ಸಚಿವ ಸಂಪುಟದ ಮುಂದಿರಿಸಿ ಮಂಜೂರಾತಿಗೆ ಒಪ್ಪಿಗೆ ಪಡೆದಿದೆ. ಸ್ಥಳೀಯ ನಗರಾಭಿವೃದ್ಧಿ ಯೋಜನಾ ಕೋಶವು 30 ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಮಂಜೂರಾತಿಗೆ ಕೋರಿದ್ದರೇ ನಗರಾಭಿವೃದ್ಧಿ ಇಲಾಖೆಯು ಖಾಯಂ ಆಗಿ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಕಾಳಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸರ್ವೇ ನಂಬರ್ 230/3 ಹಾಗೂ ಚಿಂಚೋಳಿ ಪುರಸಭೆ ವ್ಯಾಪ್ತಿಯಲ್ಲಿ ಸರ್ವೇ ನಂಬರ್ 143/2ರಲ್ಲಿನ 1,086.50 ಚದರ ಮೀಟರ್ ವಿಸ್ತೀರ್ಣವನ್ನು ನಾಗರಿಕ ಸೌಲಭ್ಯಕ್ಕಾಗಿ ಮೀಸಲಿರಿಸಿತ್ತು.

ಸಿಎ ನಿವೇಶನವನ್ನು 30 ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಮಂಜೂರಾತಿಗೆ ಪ್ರಸ್ತಾವ ಸಲ್ಲಿಕೆಯಾಗಿತ್ತು. ಈ ಪ್ರಕರಣದಲ್ಲಿಯೂ ಸಹ ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಪೌರಾಡಳಿತ ಇಲಾಖೆ ಹೇಳಿತ್ತು. ಆದರೆ, ಪೌರಾಡಳಿತ ಸಚಿವ ರಹೀಂ ಖಾನ್ ಅವರು ಆದೇಶದಂತೆ ಈ ವಿಷಯವನ್ನು ಸಚಿವ ಸಂಪುಟದ ಮುಂದಿಡಲಾಗಿತ್ತು. ಕಡೆಯಲ್ಲಿ ಈ ಪ್ರಕರಣದಲ್ಲಿಯೂ ಸಚಿವ ಸಂಪುಟವು ಅನುಮೋದನೆ ನೀಡಿತ್ತು.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಲಿಗುಡ್ಡ ಗ್ರಾಮದ ಸರ್ವೇ ನಂಬರ್ 13/8ರಲ್ಲಿ ಇದ್ದ 5 ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕೆ ಕೋರಿದ್ದರು. ಮಾರುಕಟ್ಟೆ ದರದ ಪ್ರಕಾರ 4,400 ರೂ..ಗಳಂತೆ ಒಟ್ಟು 1,068 ವಿಸ್ತೀರ್ಣದ ಚದರ ಮೀಟರ್ ಜಾಗಕ್ಕೆ 46,99,200 ರೂ.ಆಗಲಿದೆ. ಆದರೆ ಈ ಪ್ರಕರಣದಲ್ಲಿಯೂ ನಗರಾಭಿವೃದ್ಧಿ ಇಲಾಖೆಯು ಶೇ.5ರ ದರದಲ್ಲಿ ಮಂಜೂರು ಮಾಡಲು ಆದೇಶಿಸಿದೆ.

ಆರ್ಥಿಕ ಪರಿಣಾಮಗಳನ್ನು ಪರಿಗಣಿಸಲಿಲ್ಲವೇಕೆ?: ನಗರ ಸ್ಥಳೀಯ ಸಂಸ್ಥೆ ಮಾಲಕತ್ವದ ನಿವೇಶನಗಳನ್ನು ಮಾರುಕಟ್ಟೆ ಮಾರ್ಗಸೂಚಿ ಬೆಲೆ ಮಂಜೂರು ಮಾಡಲು 2017ರ ಅನ್ವಯ ಅವಕಾಶವಿಲ್ಲ. ಸಾರ್ವಜನಿಕ ಹರಾಜು ಮೂಲಕವೇ ವಿಲೇವಾರಿ ಮಾಡಬೇಕು. ಸಾರ್ವಜನಿಕ ಹರಾಜು ಮಾಡದಿದ್ದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ನಷ್ಟ ಉಂಟಾಗಲಿದೆ. ಇದರಿಂದ ನಗರ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ದುರ್ಬಲವಾಗುತ್ತದೆ ಎಂದು ಅರ್ಥಿಕ ಇಲಾಖೆಯು ಸ್ಪಷ್ಟವಾಗಿ ಅಭಿಪ್ರಾಯಿಸಿತ್ತು.

ಹಾಗೆಯೇ ರಾಜ್ಯದ ನಗರ ಯೋಜನಾ ಪ್ರಾಧಿಕಾರಗಳಿಗೆ ಸರಕಾರದಿಂದ ಯಾವುದೇ ಅನುದಾನವೂ ಇಲ್ಲ. ಪ್ರಾಧಿಕಾರಗಳು ಸ್ವ-ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಕಾರ್ಯನಿರ್ವಹಿಸುತ್ತವೆ. ಕರ್ನಾಟಕ ಯೋಜನಾ ಪ್ರಾಧಿಕಾರಗಳ 2017ರ ಅಧಿಸೂಚನೆ ಪ್ರಕಾರ ನಾಗರಿಕ ಸೌಲಭ್ಯ ಉದ್ದೇಶದ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ

ಮಂಜೂರು ಮಾಡಲು ಅವಕಾಶವೇ ಇಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿತ್ತು. ಆದರೆ, ಸಚಿವ ಸಂಪುಟವು ಈ ಆರ್ಥಿಕ ಪರಿಣಾಮಗಳನ್ನು ಪರಿಗಣಿಸಿಲ್ಲ.

ಬದಲಿಗೆ ವಿವಿಧ ನಗರ ಯೋಜನಾ ಪ್ರಾಧಿಕಾರಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶನಗಳನ್ನು ಬ್ಲಾಕ್ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡುವ ಸಲುವಾಗಿ ಶೇ. 5ರ ದರದಲ್ಲಿ ಖಾಯಂ ಆಗಿ ಮಂಜೂರು ಮಾಡಲು ಸಚಿವ ಸಂಪುಟವು ತೀರ್ಮಾನಿಸಿದೆ. ಈ ನಿರ್ಣಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ವ್ಯಕ್ತಪಡಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಈ ಕುರಿತು ವಿಧಾನ ಪರಿಷತ್‌ನಲ್ಲಿ ಸದಸ್ಯ ಚಿದಾನಂದ ಎಂ. ಗೌಡ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮಾಹಿತಿ ಒದಗಿಸಿದ್ದರು.

ಈಗಾಗಲೇ ಮಂಜೂರು ಮಾಡಿರುವ ಮತ್ತು ಮಂಜೂರಾತಿಗೆ ಬಾಕಿ ಇರುವ ಸಿಎ ನಿವೇಶನಗಳ ಮಾರುಕಟ್ಟೆಯ ಮೌಲ್ಯ 4.07 ಕೋಟಿ ರೂ. ಇದೆ. ಈ ಪೈಕಿ 5 ಸ್ಥಳೀಯ ಸಂಸ್ಥೆಗಳಿಗೆ ಸೇರಿದ ಸಿಎ ನಿವೇಶನಗಳ ಮಾರುಕಟ್ಟೆ ಮೌಲ್ಯವು 1,82,75,528 ರೂ. ಇದೆ. ಆದರೆ ಈ 5 ಸ್ಥಳೀಯ ಸಂಸ್ಥೆಗಳಿಗೆ ಸೇರಿದ ಸಿಎ ನಿವೇಶನಗಳಿಗೆ ಸರಕಾರವು 9,13,776 ರೂ. ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ಅನುಮೋದಿಸಿತ್ತು.

ರಿಯಾಯಿತಿ ದರದಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಸಿಎ ನಿವೇಶನ ಮಂಜೂರು ಮಾಡಿರುವುದರಿಂದ ಒಟ್ಟು ಎಷ್ಟು ನಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ಅವರು ಕೇಳಿದ್ದರು. ಆದರೆ ಸರಕಾರವು ನಷ್ಟದ ಮೊತ್ತವನ್ನು ಉತ್ತರದಲ್ಲಿ ತಿಳಿಸಿರಲಿಲ್ಲ.

ದೇವನಹಳ್ಳಿಯಲ್ಲೇ 16.45 ಕೋಟಿ ರೂ. ನಷ್ಟ

ದೇವನಹಳ್ಳಿ ಪುರಸಭೆ ವ್ಯಾಪ್ತಿಯ ವಾರ್ಡ್ ನಂ-10ರಲ್ಲಿರುವ ಅಜ್ಮಲ್ ಬಡಾವಣೆಯಲ್ಲಿ 6,841.97 ಚ.ಮೀಟರ್ ವಿಸ್ತೀರ್ಣದ ನಿವೇಶನವನ್ನು (ಖಾತೆ ಸಂಖ್ಯೆ; 3224/49/2/5/51/52/2) ನಾಗರಿಕ ಸೌಲಭ್ಯಕ್ಕಾಗಿ ಮೀಸಲಿರಿಸಿ ಕಾಯ್ದಿರಿಸಿತ್ತು. 2025-26ನೇ ಸಾಲಿನ ಮಾರ್ಗಸೂಚಿ ದರ ಪಟ್ಟಿಯಂತೆ ಪ್ರತಿ ಚದರ ಮೀಟರ್‌ಗೆ 23,000 ಇದೆ. ಅಲ್ಲದೇ ಈ ನಿವೇಶನವು ಮೂಲೆ ನಿವೇಶನವಾಗಿದ್ದರಿಂದ ಪ್ರತಿ ಚದರ ಮೀಟರ್‌ಗೆ ಶೇ.10ರಷ್ಟು ಅಂದರೇ 2,300 ರೂ.ನಂತೆ ಒಟ್ಟು 25,300 ರೂ.ಆಗಲಿದೆ.

ಇದರ ಪ್ರಕಾರ 6,841.97 ಚದರ ಮೀಟರ್ ವಿಸ್ತೀರ್ಣದ ಈ ನಿವೇಶನಕ್ಕೆ 17,31,01,841 ರೂ.ಇದೆ. ಈ ನಿವೇಶನವನ್ನು 30 ವರ್ಷಗಳ ಅವಧಿಗೆ ಲೀಸ್ ಆಧಾರದ ಮೇಲೆ ಮಂಜೂರು ಮಾಡಲು ಕೋರಿತ್ತು. ಆದರೆ, ನಿಯಮಗಳ ಪ್ರಕಾರ ಕೇಂದ್ರ ಮತ್ತು ರಾಜ್ಯ ಸರಕಾರದ ಸ್ವಾಮ್ಯದಲ್ಲಿರುವ ಮಂಡಳಿ, ಶಾಲೆ, ಹಾಸ್ಟೆಲ್‌ಗಳು, ಸಂಘ ಸಂಸ್ಥೆಗಳು, ಇನ್ನಿತರ ಸಂಘ ಸಂಸ್ಥೆಗಳಿಗೆ ಮಾರ್ಗಸೂಚಿ ದರದ ಶೇ.25, ಶೇ. 50 ಹಾಗೂ ಪ್ರಸ್ತುತ ಮಾರುಕಟ್ಟೆ ದರದಲ್ಲಿ ನಿವೇಶನ ಮಾಡಬೇಕಿತ್ತು. ಅಲ್ಲದೇ ಸಾರ್ವಜನಿಕ ಹರಾಜು ಮೂಲಕವೇ ಮಾರಾಟ ಮಾಡಬೇಕಿತ್ತು.

ಮತ್ತೊಂದು ವಿಶೇಷವೆಂದರೇ ಈ ಪ್ರಸ್ತಾವದಲ್ಲಿ ಯಾವ ದರದಲ್ಲಿ ಮಂಜೂರು ಮಾಡಬೇಕು ಎಂದು ಸಚಿವ ಸಂಪುಟದ ಟಿಪ್ಪಣಿಯಲ್ಲಿಯೂ ಪ್ರಸ್ತಾವಿಸಿರಲಿಲ್ಲ. ಆದರೆ, 2026ರ ಜ.13ರಂದು ಹೊರಡಿಸಿರುವ ಆದೇಶದ ಪ್ರಕಾರ ನಿವೇಶನ ಮೌಲ್ಯದ ಶೇ.5ರಷ್ಟನ್ನು ವಿಧಿಸಿ ಖಾಯಂ ಆಗಿ ಮಂಜೂರು ಮಾಡಿದೆ. ನಗರಾಭಿವೃದ್ಧಿ ಇಲಾಖೆಯ ಈ ನಿರ್ಧಾರದಿಂದಾಗಿ ಸ್ಥಳೀಯ ಪುರಸಭೆಗೆ ಅಂದಾಜು 16.45 ಕೋಟಿ ರೂ.ನಷ್ಟು ನಷ್ಟವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X