Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನ.8ರಂದು ಉತ್ತರ ಕರ್ನಾಟಕದಲ್ಲಿಯೇ ಪ್ರಥಮ...

ನ.8ರಂದು ಉತ್ತರ ಕರ್ನಾಟಕದಲ್ಲಿಯೇ ಪ್ರಥಮ ಬಾರಿಗೆ ‘ತಾಯಿಹಾಲು ಬ್ಯಾಂಕ್’ ಸ್ಥಾಪನೆ

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್6 Nov 2025 12:41 PM IST
share
ನ.8ರಂದು ಉತ್ತರ ಕರ್ನಾಟಕದಲ್ಲಿಯೇ ಪ್ರಥಮ ಬಾರಿಗೆ ‘ತಾಯಿಹಾಲು ಬ್ಯಾಂಕ್’ ಸ್ಥಾಪನೆ

ವಿಜಯಪುರ: ತಾಯಿ ಹಾಲಿನ ಕೊರತೆ ಯಿಂದ ಅನೇಕ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದನ್ನು ತಪ್ಪಿಸಲು ಸರಕಾರಿ ಆಸ್ಪತ್ರೆಯಲ್ಲಿ ಉತ್ತರ ಕರ್ನಾಟಕದಲ್ಲಿಯೇ ಪ್ರಥಮ ಬಾರಿಗೆ ತಾಯಿಹಾಲು ಬ್ಯಾಂಕ್ ಸ್ಥಾಪನೆಯಾಗಲಿದೆ.

ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನ.8 ರಂದು ನೂತನ ಕೇಂದ್ರ ಆರಂಭಗೊಳ್ಳಲಿದ್ದು, ವಾರ್ಷಿಕ 2 ಸಾವಿರ ನವಜಾತ ಶಿಶುಗಳಿಗೆ ಸೇವೆ ಒದಗಿಸುವ ಗುರಿ ಹೊಂದಿದೆ.

ಸುಶೇನಾ ಹೆಲ್ತ್ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ಸಂತೋಷ್ ಕರ್ಲೆಟ್ಟಿ ನೇತೃತ್ವದಲ್ಲಿ ಎದೆ ಹಾಲು ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದ್ದು, ಅಕಾಲಿಕ ಮತ್ತು ಅನಾರೋಗ್ಯದ ಶಿಶುಗಳ ಪೌಷ್ಠಿಕಾಂಶದ ಅಗತ್ಯಗಳನ್ನು ಪರಿಹರಿಸುವ ಗುರಿ ಹೊಂದಲಾಗಿದೆ.

ಜಾಗತಿಕವಾಗಿ ಅತಿ ಹೆಚ್ಚು ಅವಧಿಪೂರ್ವ ಜನನ ಭಾರತದಲ್ಲಿ ಆಗುತ್ತಿದ್ದು, ಎಲ್ಲ ಹೆರಿಗೆಗಳಲ್ಲಿ ಶೇ.12ರಷ್ಟು ಅವಧಿಪೂರ್ವ ಶಿಶುಗಳ ಜನನಕ್ಕೆ ಕಾರಣವಾಗುತ್ತಿದೆ. ಇಂತಹ ಹಲವು ನವಜಾತ ಶಿಶುಗಳು ವಿಶೇಷವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಈ ಸಮಸ್ಯೆ ಅಧಿಕವಾಗಿ ಕಾಡುತ್ತಿದ್ದು, ಈ ಸಮಸ್ಯೆ ನಿವಾರಣೆ ಮಾಡಿ ನವಜಾತ ಶಿಶುಗಳ ಉತ್ತಮ ಆರೋಗ್ಯಕ್ಕಾಗಿ ಈ ವಿನೂತನ ಯೋಜನೆ ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಲಿದೆ.

ಆರೋಗ್ಯ ಮತ್ತಿತತರ ಕಾರಣಗಳಿಂದಾಗಿ ತಾಯಿಯಂದರು ಎದೆಹಾಲು ನೀಡಲು ಸಾಧ್ಯವಾಗದಂತಹ ದುರ್ಬಲ ಮಕ್ಕಳಿಗೆ ಎದೆಹಾಲು ಒದಗಿಸುವ ಮೂಲಕ ನವಜಾತ ಶಿಶುಗಳ ಮರಣ ಕಡಿಮೆ ಮಾಡುವಲ್ಲಿ ಈ ಕೇಂದ್ರ ವರದಾನವಾಗಲಿದೆ.

ಆಸ್ಪತ್ರೆಯಲ್ಲಿ ಪ್ರತಿ ವರ್ಷ ಸುಮಾರು 10,000 ಹೆರಿಗೆಗಳನ್ನು ಮಾಡಲಾಗುತ್ತದೆ. ಸುಮಾರು 1,000 ಅವಧಿ ಪೂರ್ವ ಶಿಶುಗಳು ಸೇರಿದಂತೆ 2,000 ನವಜಾತ ಶಿಶುಗಳಿಗೆ ನವಜಾತ ತೀವ್ರ ಆರೈಕೆಯ ಅಗತ್ಯವಿರುತ್ತದೆ. ಅಂತಹ ಶಿಶುಗಳಿಗೆ ಎದೆ ಹಾಲು ಅತ್ಯುತ್ತಮ ಪೌಷ್ಠಿಕಾಂಶದ ಆಯ್ಕೆಯಾಗಿದೆ. ಇದು ಸೋಂಕಿನ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ಮರಣವನ್ನು ಶೇಕಡಾ 20ಕ್ಕಿಂತ ಕಡಿಮೆ ಮಾಡುತ್ತದೆ ಎಂದು ಡಾ.ಕಾರ್ಲೆಟ್ಟಿ ವಿವರಣೆ ನೀಡಿದರು.

ತಾಯಿಯ ಸಾವು, ಅನಾರೋಗ್ಯ ಅಥವಾ ಸಾಕಷ್ಟು ಪ್ರಮಾಣ ಹಾಲು ಉತ್ಪಾದನೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಸುಮಾರು ಶೇ.20ರಷ್ಟು ನವ ಶಿಶುಗಳಿಗೆ ದಾನಿ ತಾಯಿಯ ಹಾಲು ಅಗತ್ಯವಿದೆ. ಆಸ್ಪತ್ರೆಯಲ್ಲಿ ಹೆರಿಗೆ ಮಾಡುವ 900 ತಾಯಂದಿರಲ್ಲಿ 150 ತಾಯಂದಿರನ್ನು ಹಾಲು ದಾನ ಮಾಡಲು ಮನವೊಲಿಸುವುದು ಸಹ ಬ್ಯಾಂಕಿನ ಆರಂಭಿಕ ಗುರಿಗಳನ್ನು ಪೂರೈಸುತ್ತದೆ. ಉತ್ತರ ಕರ್ನಾಟಕ ಪ್ರದೇಶಗಳಿಗೆ ಹೆಚ್ಚಿನ ಪ್ರಯೋಜನ ಕಲ್ಪಿಸುವ ನಿಟ್ಟಿನಲ್ಲಿ ಈ ಹಾಲಿನ ಬ್ಯಾಂಕ್ ಸ್ಥಾಪಿಸಲಾಗುತ್ತಿದೆ. ಬೀದರ್ ಮತ್ತು ಕಲಬುರಗಿಯಂತಹ ಇತರ ಜಿಲ್ಲೆಗಳಿಗೆ ಹಾಲು ವಿತರಣೆಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.

-ಡಾ.ಶಿವಾನಂದ ಮಾಸ್ತಿಹೊಳಿ, ವಿಜಯಪುರ ಸರಕಾರಿ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ

ದಾನ ಮಾಡಿದ ಎಲ್ಲ ಹಾಲು ಪ್ರಮುಖ ಪೋಷಕಾಂಶಗಳು ಮತ್ತು ಪ್ರತಿಕಾಯಗಳನ್ನು ಸಂರಕ್ಷಿಸಲು ಪಾಶ್ಚರೀಕರಣಕ್ಕೆ ಒಳಗಾಗುತ್ತದೆ. ಆರು ತಿಂಗಳವರೆಗೆ ಸಂರಕ್ಷಿಸಲಾಗುತ್ತದೆ. ಹಾಲನ್ನು ಮೈನಸ್ 20 ಡಿಗ್ರಿ ಸೆಲ್ಸಿಯಸ್‌ನಲ್ಲಿ ಸಂಗ್ರಹಿಸಲಾಗುತ್ತದೆ ಆರೋಗ್ಯವಂತ ತಾಯಂದಿರು ಮಾತ್ರ ಹಾಲನ್ನು ದಾನ ಮಾಡಬಹುದು. ಕ್ಯಾನ್ಸರ್ ಅಥವಾ ಎಚ್‌ಐವಿಯಂತಹ ಗಂಭೀರ ಕಾಯಿಲೆ ಇರುವವರು ಅನರ್ಹರು.

-ಡಾ.ಸಂತೋಷ್ ಕರ್ಲೆಟ್ಟಿ, ಸುಶೇನಾ ಹೆಲ್ತ್ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ

share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X