Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೆಣ್ಣುಮಕ್ಕಳ ಮಾರಾಟ ಜಾಲ: ಗೃಹ ಸಚಿವರ...

ಹೆಣ್ಣುಮಕ್ಕಳ ಮಾರಾಟ ಜಾಲ: ಗೃಹ ಸಚಿವರ ಉತ್ತರದಲ್ಲಿ ಗೊಂದಲ

ಜಿ. ಮಹಾಂತೇಶ್ಜಿ. ಮಹಾಂತೇಶ್2 Sept 2026 7:30 AM IST
share
ಹೆಣ್ಣುಮಕ್ಕಳ ಮಾರಾಟ ಜಾಲ: ಗೃಹ ಸಚಿವರ ಉತ್ತರದಲ್ಲಿ ಗೊಂದಲ

ಬೆಂಗಳೂರು : ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದರೂ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲ ಇರುವುದಿಲ್ಲ ಎಂದು ಗೃಹ ಇಲಾಖೆಯು ಲಿಖಿತ ಉತ್ತರ ನೀಡಿದೆ.

ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲ ಏನಾದರೂ ಇರಬಹುದೇ ಎಂದು ವಿಧಾನ ಪರಿಷತ್ ಸದಸ್ಯೆ ಹಾಗೂ ಉಪ ಸಭಾಪತಿ ಡಾ ಉಮಾಶ್ರಿ ಅವರು ಚುಕ್ಕೆ ಗುರುತಿಲ್ಲದ 2026ರ ಆಗಸ್ಟ್ 20ರಂದು ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಉತ್ತರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲ ಇರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಇದೇ ಉತ್ತರದಲ್ಲಿ ಒದಗಿಸಿರುವ ಅನುಬಂಧ (ಎ) ನಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯನ್ನು ಒದಗಿಸಿದ್ದಾರೆ.

ಒಂದೇ ಉತ್ತರದಲ್ಲಿ ವಿಭಿನ್ನ ಉತ್ತರಗಳನ್ನು ನೀಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪ್ರಿಯಾಂಕ್ ಖರ್ಗೆ ನೀಡಿರುವ ಉತ್ತರದಲ್ಲೇನಿದೆ?: ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲ ಇರುವುದಿಲ್ಲ. ಮಕ್ಕಳ ಮಾರಾಟಕ್ಕೆ ಸಂಬಂಧಿಸಿದಂತೆ 2024ರಿಂದ 2026 ಜುಲೈವರೆಗೆ ಒಟ್ಟು 8 ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ ಒಟ್ಟು 35 ಆರೋಪಿತರನ್ನು ಬಂಧಿಸಲಾಗಿದೆ. ಅವರಿಂದ 8 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಉತ್ತರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದಕ್ಕೆ ಅನುಬಂಧವನ್ನು ಒದಗಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಅನುಬಂಧದಲ್ಲಿಯೂ ಹೆಣ್ಣು ಮಕ್ಕಳ ಮಾರಾಟ ಜಾಲಕ್ಕೆ ಸಂಬಂಧಪಟ್ಟಂತೆ ದಾಖಲಾದ ಪ್ರಕರಣಗಳ ಸಂಖ್ಯೆ, ಮಾರಾಟ ಜಾಲಕ್ಕೆ ಒಳಪಟ್ಟ ಹೆಣ್ಣು ಮಕ್ಕಳ ಸಂಖ್ಯೆ, ಮಾರಾಟ ಜಾಲದಿಂದ ರಕ್ಷಿಸಲ್ಪಟ್ಟ ಹೆಣ್ಣು ಮಕ್ಕಳ ಸಂಖ್ಯೆ ಒದಗಿಸಿದ್ದಾರೆ. ಆದರೆ ಮಾರಾಟ ಜಾಲಗಳ ಸಂಖ್ಯೆಯನ್ನು ಶೂನ್ಯ ಎಂದು ತೋರಿಸಿದ್ದಾರೆ. 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉತ್ತರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಒಬ್ಬರಿಗೂ ಶಿಕ್ಷೆಯಾಗಿಲ್ಲ ಎಂದು ಮಾಹಿತಿ ಒದಗಿಸಿರುವುದು ಉತ್ತರದಿಂದ ತಿಳಿದು ಬಂದಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟವಾಗಿ ಹೆಣ್ಣು ಮಕ್ಕಳ ಮಾರಾಟ ಜಾಲ ಮತ್ತು ಅದರ ವಿವರಗಳನ್ನು ಅನುಬಂಧದಲ್ಲಿ ಒದಗಿಸಿದ್ದರೂ ಉತ್ತರದಲ್ಲಿ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲಗಳು ಇರುವುದಿಲ್ಲ ಎಂದು ನೀಡಿರುವ ಉತ್ತರವೇ ವಿರೋಧಾಭಾಸದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಅದೇ ರೀತಿ ರಾಜ್ಯದಲ್ಲಿ 2024ರಿಂದ 2026ರ ಜುಲೈವರೆಗೆ ಕಾಣೆಯಾದ, ಅಪಹರಣವಾದ ಯುವತಿಯರು ಮತ್ತು ಅಪ್ರಾಪ್ತರ ಸಂಖ್ಯೆಯನ್ನು ಇದೇ ಉತ್ತರದಲ್ಲಿ ಮಾಹಿತಿ ಒದಗಿಸಿದ್ದಾರೆ.

ಈ ಉತ್ತರದ ಪ್ರಕಾರ 2024ರಲ್ಲಿ ಒಟ್ಟು 2,500 ಮಂದಿ ಅಪ್ರಾಪ್ತರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಈ ಪೈಕಿ 2,433 ಮಂದಿ ಪತ್ತೆಯಾಗಿದ್ದರು. ಇನ್ನೂ 67 ಮಂದಿ ನಾಪತ್ತೆಯಾಗಿದ್ದಾರೆ. 2025ರಲ್ಲಿ 2,645 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿತ್ತು. ಈ ಪೈಕಿ 2,505 ಮಂದಿ ಪತ್ತೆಯಾಗಿದ್ದರೇ ಇನ್ನು 140 ಮಂದಿ ನಾಪತ್ತೆಯಾಗಿದ್ದಾರೆ. 2026ರಲ್ಲಿ 1,731 ನಾಪತ್ತೆ ಪ್ರಕರಣಗಳು ವರದಿಯಾಗಿದ್ದರೇ ಈ ಪೈಕಿ 900 ಮಂದಿ ಪತ್ತೆಯಾಗಿದ್ದರು. ಇನ್ನೂ 831 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಂಕಿ ಅಂಶಗಳನ್ನು ಒದಗಿಸಿರುವುದು ತಿಳಿದು ಬಂದಿದೆ.

ಇನ್ನು 18 ವರ್ಷ ಮತ್ತು ಮೇಲ್ಪಟ್ಟ ಮಹಿಳೆಯರು ನಾಪತ್ತೆಯಾಗಿ ವರದಿಯಾಗಿರುವ ಪ್ರಕರಣಗಳ ವಿವರಗಳನ್ನು ಒದಗಿಸಿದ್ದಾರೆ. ಈ ಪಟ್ಟಿಯ ಪ್ರಕಾರ 2024ರಲ್ಲಿ ಒಟ್ಟು 14,413 ಮಂದಿ ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಈ ಪೈಕಿ 14,096 ಮಹಿಳೆಯರು ಪತ್ತೆಯಾಗಿದ್ದಾರೆ. ಇನ್ನೂ 317 ಮಂದಿ ಪತ್ತೆಯೇ ಆಗಿಲ್ಲ. 2025ರಲ್ಲಿ 15,159 ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದ ಪ್ರಕರಣಗಳಲ್ಲಿ 14,763 ಮಹಿಳೆಯರನ್ನು ಪತ್ತೆ ಹಚ್ಚಲಾಗಿತ್ತು. ಇನ್ನು 396 ಮಂದಿ ನಾಪತ್ತೆಯಾಗಿದ್ದಾರೆ. 2026ರಲ್ಲಿ 9,909 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಈ ಪೈಕಿ 8,150 ಮಹಿಳೆಯರನ್ನು ಪತ್ತೆ ಹಚ್ಚಲಾಗಿತ್ತು. ಇನ್ನೂ 1,759 ಮಂದಿಯನ್ನು ಪತ್ತೆ ಹಚ್ಚುವಲ್ಲಿ ಇಲಾಖೆಯು ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಒಟ್ಟಾರೆ ಕಳೆದ ಮೂರು ವರ್ಷದಲ್ಲಿ 1,038 ಅಪ್ರಾಪ್ತರು, 2,471 ಮಂದಿ ಮಹಿಳೆಯರು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಿಂದ ತಿಳಿದು

ಬಂದಿದೆ.

Tags

Girls' trafficking networkHome Minister
share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X