Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಳ್ಳಾರಿಯ ಸಂಡೂರಿನಲ್ಲಿ ಎಂಎಸ್‌ಪಿಎಲ್...

ಬಳ್ಳಾರಿಯ ಸಂಡೂರಿನಲ್ಲಿ ಎಂಎಸ್‌ಪಿಎಲ್ ಲಿಮಿಟೆಡ್‌ಗೆ 191.73 ಎಕರೆ ವಿಸ್ತೀರ್ಣದ ಸರಕಾರಿ ಜಮೀನು ಮಂಜೂರು

ಜಿ.ಮಹಾಂತೇಶ್ಜಿ.ಮಹಾಂತೇಶ್14 July 2025 1:06 PM IST
share

ಬೆಂಗಳೂರು, ಜು.13: ಕೈಗಾರಿಕೆ ಉದ್ದೇಶಕ್ಕೆ 900 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿಸಿಕೊಂಡು ಹಲವು ವರ್ಷಗಳಾದರೂ ಕೈಗಾರಿಕೆಯನ್ನೇ ಸ್ಥಾಪಿಸಿಲ್ಲ ಎಂಬ ಆರೋಪಕ್ಕೆ ಗುರಿಯಾಗಿರುವ ಪ್ರತಿಷ್ಠಿತ ಎಂಎಸ್‌ಪಿಎಲ್ ಲಿಮಿಟೆಡ್‌ಗೆ ಇದೀಗ ಬಳ್ಳಾರಿಯ ಸಂಡೂರಿನಲ್ಲಿಯೂ 191.73 ಎಕರೆ ವಿಸ್ತೀರ್ಣದ ಸರಕಾರಿ ಜಮೀನು ಮಂಜೂರು ಮಾಡಲು ಹೊರಟಿದೆ.

ಪ್ರತಿಷ್ಠಿತ ಎಂಎಸ್‌ಪಿಎಲ್ ಲಿಮಿಟೆಡ್ ಕಂಪೆನಿ ಒಡೆತನದ ಮತ್ತೊಂದು ಕಂಪೆನಿ ಆರ್.ಎಸ್. ಐರನ್ ಸ್ಟೀಲ್ ಕಂಪೆನಿ (AARESS IRON STEEL LIMITED) ಕೈಗಾರಿಕೆ ಉದ್ದೇಶಕ್ಕೆ ಮಂಜೂರು ಮಾಡಿಸಿಕೊಂಡಿದ್ದ 900 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಒಂದೇ ಒಂದು ಕೈಗಾರಿಕೆಯನ್ನು ಸ್ಥಾಪಿಸಿರಲಿಲ್ಲ. ಆದರೂ ಈ ಜಮೀನನ್ನು ಹಿಂದಿನ ಬಿಜೆಪಿ ಸರಕಾರವೂ ವಶಪಡಿಸಿಕೊಂಡಿರಲಿಲ್ಲ.

ಆದರೆ ಈಗ ಕಾಂಗ್ರೆಸ್ ಸರಕಾರವು ಎಂಎಸ್‌ಪಿಎಲ್ ಲಿಮಿಟೆಡ್‌ನ ಬೆನ್ನಿಗೆ ನಿಂತಿದೆ. ಅಲ್ಲದೇ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಕಾಳಿಂಗೇರಿ, ಅಂಕಮನಾಳ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿರುವ ಸರಕಾರಿ ಜಮೀನುಗಳನ್ನು ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ತುದಿಗಾಲಲ್ಲಿ ನಿಂತಿದೆ. ಈ ಸಂಬಂಧ ಕೆಲವು ದಾಖಲೆಗಳು "the-file.in"ಗೆ ಲಭ್ಯವಾಗಿವೆ.

191.73 ಎಕರೆ ವಿಸ್ತೀರ್ಣದ ಸರಕಾರಿ ಜಮೀನು ಮಂಜೂರು ಮಾಡುವ ಸಂಬಂಧದ ಕಡತವು ಕಂದಾಯ ಇಲಾಖೆಯಲ್ಲಿ ಬಿರುಸಿನ ವೇಗದಲ್ಲಿ ಚಲಿಸುತ್ತಿದೆ.

ಸಂಡೂರು ತಾಲೂಕಿನ ಚೋರನೂರು ಹೋಬಳಿ ಕಾಳಿಂಗೇರಿ ಗ್ರಾಮ ಮತ್ತು ಅಂಕಮನಾಳ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿ 201.92 ಎಕರೆ ಪೈಕಿ 191 ಎಕರೆ 71 ಗುಂಟೆ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡುವ ಕಲಬುರಗಿ ಪ್ರಾದೇಶಿಕ ಆಯುಕ್ತರು 2024ರ ಜನವರಿ 19ರಂದೇ ಪ್ರಸ್ತಾವ ಸಲ್ಲಿಸಿದ್ದಾರೆ. ಈ ಪ್ರಸ್ತಾವದ ಪ್ರತಿಯು "the-file.in"ಗೆ ಲಭ್ಯವಾಗಿದೆ.

ಪ್ರಸ್ತಾವದಲ್ಲೇನಿದೆ?

ಎಂಎಸ್‌ಪಿಎಲ್ ಕಂಪೆನಿಯು 5.00 ಎಂಟಿಪಿಎ ಮತ್ತು 3.00 ಎಂಟಿಪಿಎ ಕಬ್ಬಿಣದ ಅದಿರು ಸಂಸ್ಕರಿಸುವ ಘಟಕ ಸ್ಥಾಪಿಸಲು ಮುಂದಾಗಿದೆ.

ಕೈಗಾರಿಕೆ ಉದ್ದೇಶಕ್ಕಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳೀಂಗೇರಿ ಮತ್ತು ಅಂಕಮನಾಳ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿ 201.92 ಎಕರೆ ಇದೆ. ಇದರಲ್ಲಿ 191.71 ಎಕರೆ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ 2024ರ ಜನವರಿ 6ರಂದು ಪ್ರಾದೇಶಿಕ ಆಯುಕ್ತರಿಗೆ ಪ್ರಸ್ತಾವ ಸಲ್ಲಿಸಿದ್ದರು.

ಅಂಕಮನಾಳ ಗ್ರಾಮದ ಸರ್ವೇ ನಂಬರ್ 302ರಲ್ಲಿ ಪಹಣಿ ಪ್ರಕಾರ 147.56 ಎಕರೆ ಇದೆ. ಇದರಲ್ಲಿ ಕೈಗಾರಿಕೆಗಾಗಿ 20.00 ಎಕರೆ ಕೋರಿದೆ. ಕಾಳಿಂಗೇರಿ ಗ್ರಾಮದ ಸರ್ವೇ ನಂಬರ್ 30ರಲ್ಲಿರುವ 10.06 ಎಕರೆ, ಸರ್ವೇ ನಂಬರ್ 31ರಲ್ಲಿರುವ 10.92 ಎಕರೆ, 32ರಲ್ಲಿ 30.83 ಎಕರೆ, 35ರಲ್ಲಿ 99.90 ಎಕರೆ ಮತ್ತು 240ರಲ್ಲಿ 795. 57 ಎಕರೆಯಲ್ಲಿ 20.00 ಎಕರೆ ಸೇರಿ ಒಟ್ಟಾರೆ 191.71 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕೆ ಉದ್ದೇಶಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಬೇಕು ಎಂದು ಪ್ರಸ್ತಾವದಲ್ಲಿ ಕೋರಿತ್ತು.

ಪ್ರಸ್ತಾಪಿತ ಜಮೀನು ಕೈಗಾರಿಕೆ ಯೋಜನೆಗೆ ಅವಶ್ಯಕತೆಗೆ ಅನುಗುಣವಾದ ವಿಸ್ತೀರ್ಣಕ್ಕೆ ಸೀಮಿತಗೊಳಿಸಿ ಕರ್ನಾಟಕ ಭೂ ಮಂಜೂರಾತಿ ನಿಯಮ 1969ರ ನಿಯಮ 19 ಹಾಗೂ 22ರ ಅಡಿಯಲ್ಲಿ ಸರಕಾರಕ್ಕೆ ಮೂಲ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಸರಕಾರಕ್ಕೆ ತಿಳಿಸಿದ್ದರು.

ಈ ಹಿಂದೆಯೂ ಇದೇ ಎಂಎಸ್‌ಪಿಎಲ್‌ಕಂಪೆನಿಯು ಕಬ್ಬಿಣ ಅದಿರು ಸಂಸ್ಕರಣೆ ಘಟಕ ಸ್ಥಾಪಿಸಲು ಸರಕಾರದಿಂದ 922 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಕರ್ನಾಟಕ ಭೂ ಸುಧಾರಣೆ ಕಾಯ್ದೆಯನ್ನು ಎಂಎಸ್‌ಪಿಎಲ್ ಸಮೂಹದ ಆರ್.ಎಸ್.ಸ್ಟೀಲ್ ಕಂಪೆನಿ ನೇರನೇರಾ ಉಲ್ಲಂಘಿಸಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿತ್ತು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X