Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರಕ್ಕೆ ಜಮೆಯಾಗದ ರೈತ ಸಂಪರ್ಕ ಕೇಂದ್ರ...

ಸರಕಾರಕ್ಕೆ ಜಮೆಯಾಗದ ರೈತ ಸಂಪರ್ಕ ಕೇಂದ್ರ ಸೇವಾ ಶುಲ್ಕ

ವಿವರಣೆ ಕೇಳಿದ ಕೃಷಿ ಇಲಾಖೆ ಕಾರ್ಯದರ್ಶಿ

ಜಿ.ಮಹಾಂತೇಶ್ಜಿ.ಮಹಾಂತೇಶ್20 Jun 2024 2:13 PM IST
share
ಸರಕಾರಕ್ಕೆ ಜಮೆಯಾಗದ ರೈತ ಸಂಪರ್ಕ ಕೇಂದ್ರ ಸೇವಾ ಶುಲ್ಕ

ಬೆಂಗಳೂರು, ಜೂ.19: ರಾಜ್ಯದ 742ಕ್ಕೂ ಅಧಿಕ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವು ಸರಕಾರಕ್ಕೆ ಜಮೆ ಆಗುತ್ತಿಲ್ಲ. ಅಲ್ಲದೇ ಆರ್ಥಿಕ ಇಲಾಖೆಯ ಅನುಮತಿ ಇಲ್ಲದೆಯೇ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.

ಹೆಚ್ಚುವರಿ ಮಾರಾಟ ಮಳಿಗೆಗಳ ಗೋಡೌನ್ ಬಾಡಿಗೆ ಹಾಗೂ ತಾತ್ಕಾಲಿಕವಾಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಹೆಚ್ಚುವರಿ ಮಾರಾಟ ಮಳಿಗೆಗಳಲ್ಲಿ ನೇಮಿಸಿಕೊಳ್ಳುವ ಸಿಬ್ಬಂದಿ ಗೌರವ ಧನ ಪರಿಷ್ಕರಣೆ ಸಂಬಂಧ ಕೃಷಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಸೇವಾ ಶುಲ್ಕವು ಸರಕಾರಕ್ಕೆ ಜಮೆ ಆಗುತ್ತಿಲ್ಲ ಎಂಬುದನ್ನು ಪ್ರಸ್ತಾಪಿಸಲಾಗಿದೆ.

ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿ ಅವರು ಈ ಸಂಬಂಧ 2024ರ ಮೇ 29ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನು ಸರಕಾರಕ್ಕೆ ಜಮೆ ಮಾಡದಿರಲು ಕಾರಣಗಳೇನು ಎಂಬ ವಿವರಣೆಯನ್ನೂ ಇದೇ ಪತ್ರದಲ್ಲಿ ಕೇಳಿರುವುದು ಗೊತ್ತಾಗಿದೆ. ಈ ಕುರಿತು ಕೃಷಿ ಇಲಾಖೆಯ ಆಯುಕ್ತ ವೈ.ಎಸ್. ಪಾಟೀಲ ಅವರು ಸಚಿವ ಚೆಲುವರಾಯಸ್ವಾಮಿ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಸರಬರಾಜುದಾರರಿಗೆ ಪ್ರತೀ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ರೈತರ ಭಾಗದ ಹಣವನ್ನು ಸಂಬಂಧಪಟ್ಟ ಸಂಸ್ಥೆಗೆ ಪಾವತಿಸಲಾಗುತ್ತಿದೆ. ಹೀಗೆ ಪಾವತಿಸುವಾಗ ಮಾರಾಟ ಮಾಡಿದ ಪ್ರಮಾಣದ ಒಟ್ಟು ಮೊತ್ತಕ್ಕೆ ಶೇ.2ರಂತೆ ಸೇವಾ ಶುಲ್ಕವನ್ನು ಪಡೆದು ಉಳಿದ ಹಣವನ್ನು ಪಾವತಿಸಲಾಗುತ್ತಿದೆ ಎಂದು ಗೊತ್ತಾಗಿದೆ.

ಶೇಂಗಾ ಮತ್ತು ಸೋಯಾ ಅವರೆ ಬೆಳೆಗಳಲ್ಲಿ ಸೇವಾ ಶುಲ್ಕವನ್ನು ಮಾರಾಟ ಮಾಡಿದ ಒಟ್ಟು ಪ್ರಮಾಣಕ್ಕೆ ಅನುಸಾರವಾಗಿ ಪ್ರತಿ ಕ್ವಿಂಟಾಲ್‌ಗೆ 25 ರೂ.ನಂತೆ ಪಡೆದುಕೊಳ್ಳಲಾಗುತ್ತಿದೆ. ಹೆಚ್ಚುವರಿ ಮಾರಾಟ ಕೇಂದ್ರಗಳು, ಪ್ರಾಥಮಿಕ ಕೃಷಿ ಸಹಕಾರಿ ಪತ್ತಿನ ಸಹಕಾರಿ ಸಂಘಗಳಲ್ಲಿ ಮಾರಾಟ ಮಾಡಲು ಗುರುತಿಸಿಕೊಂಡಾಗ ಆಯಾ ಕೇಂದ್ರಗಳಲ್ಲಿನ ಬಿತ್ತನೆ ಬೀಜ ಮಾರಾಟ ಮಾಡಿದ ನಂತರ ಸೇವಾ ಶುಲ್ಕ ಪಡೆಯಲಾಗುತ್ತದೆ.

ಅಲ್ಲದೇ ಬೀಜ ವಿತರಣೆಯಿಂದ ಪಡೆದ ರೈತರ ವಂತಿಗೆಯನ್ನು ಪ್ರತೀ ದಿನ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಖಾತೆಗೆ ಜಮೆ ಮಾಡಲಾಗುತ್ತದೆ. ಹಾಗೂ ಸಂಬಂಧಿಸಿದ ಸಂಸ್ಥೆಗಳಿಗೆ ರೈತರ ವಂತಿಗೆಯನ್ನು 15 ದಿನದೊಳಗೆ ಪಾವತಿಸಬೇಕು. ಇದು ಸಹಾಯಕ ಕೃಷಿ ನಿರ್ದೇಶಕರು ಮತ್ತು ಉಪ ಕೃಷಿ ನಿರ್ದೇಶಕರ ಜವಾಬ್ದಾರಿಯಾಗಿದೆ.

ಹೆಚ್ಚುವರಿ ಮಾರಾಟ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಿಸಿದ್ದಲ್ಲಿ ಈ ಕೇಂದ್ರಗಳಲ್ಲಿ ಮಾರಾಟವಾದ ಪ್ರಮಾಣಕ್ಕೆ ಒಟ್ಟು ಮೌಲ್ಯದ ಸೇವಾ ಶುಲ್ಕವನ್ನು ರೈತ ಸಂಪರ್ಕ ಕೇಂದ್ರ ಮತ್ತು ಮಾರಾಟ ಮಳಿಗೆಗೆ 50:50ರ ಅನುಪಾತದಂತೆ ಹಂಚಿಕೊಳ್ಳಲಾಗುತ್ತದೆ.

ಬೆಳೆ ಆಯ್ಕೆ, ಬೆಳೆ ಉತ್ಪಾದನಾ ಕಾರ್ಯಕ್ರಮಗಳು, ಮಾರುಕಟ್ಟೆ ಮಾಹಿತಿ, ರೈತರಿಗೆ ಆಧುನಿಕ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರದ ಮೂಲಕ ನೀಡಲಾಗುತ್ತಿದೆ. ಬೀಜ, ರಸಗೊಬ್ಬರ, ಸಸ್ಯ ಸಂರಕ್ಷಣಾ ಔಷಧ, ಬೀಜ ಮೊಳಕೆ ಮತ್ತು ಗುಣಮಟ್ಟ, ಮಣ್ಣು ಪರೀಕ್ಷೆ ಸೇರಿದಂತೆ ಪರೀಕ್ಷಾ ಸೌಲಭ್ಯಗಳನ್ನು ಸ್ಥಳೀಯವಾಗಿ ಒದಗಿಸಲಾಗುತ್ತದೆ.

ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಬಿತ್ತನೆ ಮತ್ತು ಇತರ ಪರಿಕರಗಳ ಪ್ರಾತ್ಯಕ್ಷಿಕೆಗೆ ಸೌಲಭ್ಯ ಒದಗಿಸುವುದರಲ್ಲಿ ಸಾರ್ವಜನಿಕ ಹಾಗೂ ಖಾಸಗಿ ರಂಗಗಳ ಮೂಲಕ ತಂತ್ರಜ್ಞಾನ ಮತ್ತು ಪರಿಕರಗಳ ತುಲನೆ, ಪರಿಶೀಲನೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗುತ್ತದೆ.

► ಸರಕಾರ ಕೋರಿರುವ ಮಾಹಿತಿಯಲ್ಲೇನಿದೆ?

ಹೆಚ್ಚುವರಿ ಮಾರಾಟ ಮಳಿಗೆಗಳ ಗೋಡೌನ್ ಬಾಡಿಗೆ ವೆಚ್ಚವನ್ನು ಹಾಗೂ ತಾತ್ಕಾಲಿಕವಾಗಿ ರೈತ ಸಂಪರ್ಕ ಕೇಂದ್ರ, ಹೆಚ್ಚುವರಿ ಮಾರಾಟ ಮಳಿಗೆಗಳಲ್ಲಿ ನೇಮಿಸಿಕೊಳ್ಳುವ ಸಿಬ್ಬಂದಿಯ ಗೌರವ ಧನವನ್ನು ಆರ್‌ಎಸ್‌ಕೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಲ್ಲಿ ವೆಚ್ಚ ಭರಿಸಲು ಆರ್ಥಿಕ ಇಲಾಖೆ, ಸಕ್ಷಮ ಪ್ರಾಧಿಕಾರದ ಸಹಮತಿ ಪಡೆಯಲಾಗಿದೆಯೇ ಎಂಬ ಮಾಹಿತಿ ಕೋರಿರುವುದು ಪತ್ರದಿಂದ ತಿಳಿದು ಬಂದಿದೆ.

ರೈತ ಸಂಪರ್ಕ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ಮತ್ತು ಹೆಚ್ಚುವರಿ ಮಾರಾಟ ಮಳಿಗೆಗಳಲ್ಲಿ ನೇಮಿಸಿಕೊಳ್ಳುವ ಪ್ರತೀ ಸಿಬ್ಬಂದಿಗೆ ಪ್ರಸ್ತುತ ಪಾವತಿಸುತ್ತಿರುವ ಮಾಹೆಯಾನ ಗೌರವ ಧನದ ವಿವರ, ಹೆಚ್ಚುವರಿಯಾಗಿ ನೇಮಿಸಿಕೊಳ್ಳುವ ಗರಿಷ್ಠ ಸಿಬ್ಬಂದಿಯ ಸಂಖ್ಯೆಯ ವಿವರವನ್ನೂ ಕೋರಿದೆ.

ಹೆಚ್ಚುವರಿ ಸಿಬ್ಬಂದಿಯ ಗೌರವ ಧನ ಹೆಚ್ಚಳದಿಂದ ವಾರ್ಷಿಕವಾಗಿ ತಗಲುವ ಒಟ್ಟಾರೆ ವೆಚ್ಚದ ಮಾಹಿತಿ, ನೇಮಕ ಮಾಡಿಕೊಳ್ಳುವಾಗ ಆರ್ಥಿಕ ಇಲಾಖೆಯ ಸಹಮತಿಯನ್ನು ಪಡೆಯದೇ ಯಾವ ಆರ್ಥಿಕ ಅಧಿಕಾರದನ್ವಯ ನೇಮಕ ಮಾಡಿಕೊಳ್ಳಲಾಗಿದೆ, ಹೆಚ್ಚುವರಿ ಸಿಬ್ಬಂದಿಗೆ 100 ರೂ. ಕೂಲಿ ದರವನ್ನು ಯಾವ ಸಕ್ಷಮ ಪ್ರಾಧಿಕಾರದ ಆದೇಶವನ್ನು ಅನ್ವಯಿಸಿಕೊಂಡು ನಿಗದಿಪಡಿಸಲಾಗಿದೆ ಎಂಬ ಮಾಹಿತಿ ಕೇಳಿರುವುದು ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X