Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲಾರಿ ಚಾಲಕನ ಕೈ ಹಿಡಿದ ‘ಗುಲಾಬಿ’

ಲಾರಿ ಚಾಲಕನ ಕೈ ಹಿಡಿದ ‘ಗುಲಾಬಿ’

ನರೇಗಾ ನೆರವಿನಲ್ಲಿ ಗುಲಾಬಿ ಬೆಳೆ

ಸಿ.ವಿ.ನಾಗರಾಜ್, ಕೋಲಾರಸಿ.ವಿ.ನಾಗರಾಜ್, ಕೋಲಾರ16 Dec 2024 11:18 AM IST
share
ಲಾರಿ ಚಾಲಕನ ಕೈ ಹಿಡಿದ ‘ಗುಲಾಬಿ’

ಕೋಲಾರ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ನೆರವು ಪಡೆದು ಲಾರಿ ಚಾಲಕರೊಬ್ಬರು, ಈಗ

ಗುಲಾಬಿ ಹೂ ಬೆಳೆದು ಸ್ವತಃ ಊರಿನಲ್ಲೇ ಕೈತುಂಬ ಆದಾಯ ಗಳಿಸುತ್ತಿದ್ದಾರೆ. ಕೋಲಾರ ತಾಲೂಕು ಅರಾಭಿಕೊತ್ತನೂರ ಗ್ರಾಮ ಪಂಚಾಯತ್‌ನ ಚಿಕ್ಕ ಅಯ್ಯೂರು ಗ್ರಾಮದ ಸತೀಶ್ ಎಂಬುವರು, ಉದ್ಯೋಗ ಖಾತ್ರಿಯಡಿ, ಹೂ ಬೆಳೆದು, ಹೊಸ

ಬದುಕು ರೂಪಿಸಿಕೊಂಡಿದ್ದಾರೆ.

ಸತೀಶ್ ಈ ಹಿಂದೆ ತಮ್ಮ ಕುಟುಂಬದ ಪೋಷಣೆಗಾಗಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಪೂರ್ವಜರಿಂದ ಬಂದಿದ್ದ 30 ಗುಂಟೆ ಜಮೀನಿನಲ್ಲಿ ನೀಲಗಿರಿ ಬೆಳೆದಿದ್ದರು. ಆದರೆ ಅದರಿಂದ ಹೆಚ್ಚು ಪ್ರಯೋಜನವೇನು ಇರಲಿಲ್ಲ. ನಿತ್ಯ ದೂರದ ಊರಿಗೆ ಹೋಗಿ ಅನ್ಯರ ಬಳಿಯ ದುಡಿಮೆ ತೃಪ್ತಿ ತರಲಿಲ್ಲ. ಸ್ವ ಉದ್ಯೋಗ ಮಾಡುವ ನಿಟ್ಟಿನಲ್ಲಿ, ಜಮೀನಿನಲ್ಲಿದ್ದ ನೀಲಗಿರಿಯನ್ನು ಸಂಪೂರ್ಣ ತೆಗೆದು, ಪಕ್ಕದ ಜಮೀನಿನಿಂದ ನೀರು ಪಡೆದು ಕೃಷಿ ಮಾಡಲು ಮುಂದಾದರು.

ಆದರೆ ಯಾವ ಬೆಳೆಯನ್ನು ಬೆಳೆಯಬೇಕು, ಎಂಬ ಯೋಚನೆಗೆ ಬಿದ್ದ ಸತೀಶ್‌ಗೆ ಸಾರ್ವಕಾಲಿಕ ಲಾಭದ ಬೆಳೆಯಾಗಿ ಕಂಡಿದ್ದು ಗುಲಾಬಿ. ಅಲ್ಲದೆ ಗುಲಾಬಿ ಹೂ ಬೆಳೆಯಲು ನರೇಗಾದಡಿಯಲ್ಲಿ ನೆರವು ನೀಡುವ ಮಾಹಿತಿ ಪಡೆದ ಅವರು ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ, ಹೂ ಬೆಳೆಯುವ ಬಗ್ಗೆ ತಿಳಿದುಕೊಂಡರು. ತಮಿಳುನಾಡಿನ ಅಗಲಕೋಟೆಯಿಂದ 1,300 ಮೆರಾಬುಲ್ ಕೆಂಪು ತಳಿಯ ಗುಲಾಬಿ ಗಿಡಗಳನ್ನು ತಂದು ತಮ್ಮ ಜಮೀನಿನಲ್ಲಿ ನಾಟಿ ಮಾಡಿದರು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದು, ಸತೀಶ್ ಕುಟುಂಬದವರೇ ಗುಲಾಬಿ ತೋಟದ ನಿರ್ವಹಣೆ ಮಾಡುತ್ತಿದ್ದಾರೆ. ನರೇಗಾದಿಂದ 72,512 ರೂ. ನೆರವು ದೊರೆತಿದೆ.

ಗುಲಾಬಿ ಹೂವಿಗೆ ಸರ್ವ ಕಾಲದಲ್ಲೂ ಬೇಡಿಕೆ ಇದ್ದು, ಹಬ್ಬದ ದಿನಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತದೆ. ದಿನ ಬಿಟ್ಟು ದಿನ ಕೊಯ್ಲು ಮಾಡುತ್ತಿದ್ದು, 80ರಿಂದ 100 ಕೆಜಿ ಹೂ ದೊರೆಯುತ್ತದೆ. ಸತೀಶ್ ತಮ್ಮ ಗುಲಾಬಿ ಹೂಗಳನ್ನು ಕೋಲಾರ ಮಾರುಕಟ್ಟೆಯಲ್ಲಿ

ಮಾರಾಟ ಮಾಡುತ್ತಿದ್ದಾರೆ. ಗುಲಾಬಿಗೆ ಸಾಮಾನ್ಯ ದಿನಗಳಲ್ಲಿ 60ರಿಂದ 100 ರೂಪಾಯಿ ಇದ್ದರೆ, ಹಬ್ಬದ ದಿನಗಳಲ್ಲಿ 150ರಿಂದ 200 ರೂಪಾಯಿಗೆ ಮಾರಾಟವಾಗುತ್ತದೆ. ಇದರಿಂದ ರೈತ ಸತೀಶ್ ತಿಂಗಳಿಗೆ ಸರಾಸರಿ 40 ರಿಂದ 50 ಸಾವಿರ ಆದಾಯ ಗಳಿಸುತ್ತಿದ್ದಾರೆ.

ಲಾರಿ ಚಾಲಕನ ಕೃಷಿ ಪಯಣಕ್ಕೆ ಮಹಾತ್ಮ ಗಾಂಧಿ ನರೇಗಾ ನೆರವಾಗಿದ್ದು, ಸ್ವಗ್ರಾಮದಲ್ಲಿ ಉತ್ತಮ ಆದಾಯ ಗಳಿಸುತ್ತಿರುವ ಸತೀಶ್ ಈಗ ಗ್ರಾಮದ ಜನರಿಗೆ ಮಾದರಿಯಾಗಿದ್ದಾರೆ. ಸತೀಶ್‌ರನ್ನು ಅನುಸರಿಸಿ, ಈಗ ಗ್ರಾಮದಲ್ಲಿ ಅನೇಕ ರೈತರು ನರೇಗಾ ನೆರವು ಪಡೆದು ಗುಲಾಬಿ ಬೆಳೆದು, ಹೆಚ್ಚಿನ ಲಾಭ ಪಡೆಯುತ್ತಿದ್ದಾರೆ.

ಲಾರಿ ಚಾಲಕನಾಗಿದ್ದ ನಾನು, ಈಗ ನರೇಗಾ ನೆರವು ಪಡೆದು ಗುಲಾಬಿ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದೇನೆ. ಗುಲಾಬಿ ಹೂವಿಗೆ ಸದಾ ಬೇಡಿಕೆ ಇದ್ದು, ನಷ್ಟ ಆಗುವುದಿಲ್ಲ. ತೋಟವನ್ನ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿದರೆ, ಉತ್ತಮ ಲಾಭ ಪಡೆಯಬಹುದು. ಉದ್ಯೋಗ ಖಾತ್ರಿ ಯೋಜನೆ ಬಡ ರೈತರಿಗೆ ತುಂಬ ಉಪಯುಕ್ತವಾಗಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು.

ಸತೀಶ್, ಗುಲಾಬಿ ಬೆಳೆಗಾರ

share
ಸಿ.ವಿ.ನಾಗರಾಜ್, ಕೋಲಾರ
ಸಿ.ವಿ.ನಾಗರಾಜ್, ಕೋಲಾರ
Next Story
X