Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಕಲಿ ಬ್ರ್ಯಾಂಡ್ ಗಳಿಂದಾಗಿ ರೂ. 500...

ನಕಲಿ ಬ್ರ್ಯಾಂಡ್ ಗಳಿಂದಾಗಿ ರೂ. 500 ಕೋಟಿಗೂ ಹೆಚ್ಚು ನಷ್ಟ ಕಂಡ ವಿಶ್ವಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್

ನಕಲಿ ಜಾಲ ಪತ್ತೆಯಾಗಿದ್ದು ಹೇಗೆ?; The Hindu ವಿಶೆಷ ವರದಿ ಇಲ್ಲಿದೆ…

ವಾರ್ತಾಭಾರತಿವಾರ್ತಾಭಾರತಿ25 Jan 2024 2:36 PM IST
share
ನಕಲಿ ಬ್ರ್ಯಾಂಡ್ ಗಳಿಂದಾಗಿ ರೂ. 500 ಕೋಟಿಗೂ ಹೆಚ್ಚು ನಷ್ಟ ಕಂಡ ವಿಶ್ವಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್

ಬೆಂಗಳೂರು: ಶತಮಾನದ ಇತಿಹಾಸ ಹೊಂದಿರುವ ಕರ್ನಾಟಕ ಸರ್ಕಾರಿ ಸ್ವಾಮ್ಯದ ವಿಶ್ವಪ್ರಸಿದ್ಧ ಬ್ರಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೂ ಈಗ ನಕಲಿ ಆತಂಕ ಎದುರಾಗಿದೆ.ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಇತ್ತೀಚೆಗೆ ಹೈದರಾಬಾದಿನಲ್ಲಿ ಭೇದಿಸಲಾಗಿದೆ.

ಇಂಥದೊಂದು ನಕಲಿ ಜಾಲ ಮೈಸೂರು ಸ್ಯಾಂಡಲ್ ಸೋಪ್ ಕಂಪನಿಯ ವ್ಯವಹಾರಕ್ಕೆ ಕೊಟ್ಟಿರುವ ಏಟು ಮಾತ್ರ ಸಣ್ಣದಲ್ಲ. ಬ್ರಾಂಡ್‌ನ ಈ ಅಕ್ರಮ ಉತ್ಪಾದನೆಯ ಪರಿಣಾಮವಾಗಿ ಕಳೆದ ಒಂದು ದಶಕದಲ್ಲಿ ಕರ್ನಾಟಕ ಸಾಬೂನುಗಳು ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) 500ರಿಂದ 600 ಕೋಟಿ ರೂ. ನಷ್ಟ ಕಾಣುವಂತಾಗಿದೆ.

ನಕಲಿ ಜಾಲ ಪತ್ತೆಯಾಗಿದ್ದು ಹೇಗೆ?

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆಎಸ್‌ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂಬಿ ಪಾಟೀಲ್‌ ಅವರಿಗೆ ಅನಾಮಧೇಯ ಕರೆಯೊಂದು ಬಂದಿತ್ತು. ಆ ಹಿನ್ನೆಲೆಯಲ್ಲಿ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು.

ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು. ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ.

ಪೊಲೀಸರಿಗೆ ದೂರು ನೀಡುವ ಮೊದಲೇ ಕೆಎಸ್‌ಡಿಎಲ್ ಅಧಿಕಾರಿಗಳು ನಕಲಿ ಉತ್ಪನ್ನಗಳು ಮತ್ತು ಉತ್ಪಾದನಾ ಸೌಲಭ್ಯದ ಬಗ್ಗೆ ತನಿಖೆ ನಡೆಸಿದರು. ಆಗ ಕೆಎಸ್‌ಡಿಎಲ್ ಸಿಬ್ಬಂದಿ ಸ್ವತಃ 5 ಲಕ್ಷ ರೂ. ಮೌಲ್ಯದ ನಕಲಿ ಉತ್ಪನ್ನಗಳನ್ನು ಖರೀದಿಸಿ, ಪರಿಶೀಲಿಸಿದ್ದಾರೆ. ನಂತರ ನಕಲಿ ಉತ್ಪನ್ನಗಳನ್ನು ಎಲ್ಲಿ ತಯಾರಿಸಲಾಗಿದೆ ಎಂಬುದರ ಮೂಲ ಪತ್ತೆಗೆ ತೊಡಗಿದ್ದರು.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಡಲಾಯಿತು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುತ್ತೇವೆ ಎಂದು ಹೇಳಿ ಉತ್ಪಾದನೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ಪೊಲೀಸರೊಂದಿಗೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಗಿದೆ.

ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬವರನ್ನು ಬಂಧಿಸಲಾಗಿದೆ. ಈ ಸಂಬಂಧ ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು 2 ಕೋಟಿ ರೂ. ಮೌಲ್ಯದ ಮಾಲು ಪತ್ತೆಯಾಗಿದೆ.

ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1,800 ಪೀಸ್ ಗಳು), ತಲಾ 75 ಗ್ರಾಂನ 47 ಕಾರ್ಟನ್ ಬಾಕ್ಸ್ ಗಳು (9,400 ಪೀಸ್‌ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳನ್ನು ನಕಲಿ ಘಟಕದಲ್ಲಿ ವಶಪಡಿಸಿಕೊಳ್ಳಲಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ ಸಂಪೂರ್ಣ ಗಂಧದೆಣ್ಣೆಯಿಂದ ತಯಾರಿಸಲಾಗುವ ಸಾಬೂನು. 1916ರಿಂದಲೂ ತಯಾರಾಗುತ್ತಿದೆ. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಸೋಪ್ ಫ್ಯಾಕ್ಟರಿ ಸ್ಥಾಪನೆಯಾಯಿತು. ನಾಲ್ವಡಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ, ಎಸ್. ಜಿ. ಶಾಸ್ತ್ರಿ ಈ ಮೂವರು ಮೈಸೂರು ಸ್ಯಾಂಡಲ್ ಸೋಪ್ ನ ಪ್ರವರ್ತಕರು ಎಂದು ಇತಿಹಾಸ ಹೇಳುತ್ತದೆ.

ನಂತರ 1944ರಲ್ಲಿ ಶಿವಮೊಗ್ಗದಲ್ಲಿ ಶ್ರೀಗಂಧದೆಣ್ಣೆ ಕಾರ್ಖಾನೆ ಸ್ಥಾಪಿಸಲಾಯಿತು. 1980ರಲ್ಲಿ ಸರ್ಕಾರಿ ಸೋಪ್ ಕಾರ್ಖಾನೆ ಮತ್ತು ಶಿವಮೊಗ್ಗದ ಗಂಧದೆಣ್ಣೆ ಕಾರ್ಖಾನೆಗಳು ಸೇರಿ ಕರ್ನಾಟಕ ಸಾಬೂನುಗಳು ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಎಂದಾಯಿತು.

ಈ ಸಾಬೂನಿನ ಬ್ರ್ಯಾಂಡ್ ಹೆಸರು ಬಳಕೆ, ಗುಣಮಟ್ಟದ ಕಾಪಾಡುವಿಕೆ, ನಕಲಿ ತಡೆಯುವಿಕೆ ಮತ್ತು ಅನಧಿಕೃತ ಬಳಕೆ ತಡೆಯುವಿಕೆಗೆ ಕೆಎಸ್‌ಡಿಎಲ್ ಹಕ್ಕುಸ್ವಾಮ್ಯ ಹೊಂದಿದೆ. 1937ರಷ್ಟು ಹಿಂದೆಯೇ ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತು ಮದ್ರಾಸ್ ಪ್ರಾಂತ್ಯದ ಜಸ್ಟೀಸ್ ಪತ್ರಿಕೆಯಲ್ಲಿ ಪ್ರಕಟಗೊಂಡಿದ್ದ ದಾಖಲೆಯಿದೆ.

2006ರಲ್ಲಿ ಕ್ರಿಕೆಟಿಗ ಎಂಎಸ್ ಧೋನಿ ಮೈಸೂರು ಸ್ಯಾಂಡಲ್ ಸೋಪಿನ ಮೊದಲ ಬ್ರಾಂಡ್ ಅಂಬಾಸಿಡರ್ ಆದರು.

ಆದರೆ ಇಂಥ ಸಾಬೂನು ಬ್ರಾಂಡ್ ಗೆ ಕಂಟಕಪ್ರಾಯವಾಗಿ ನಕಲಿ ಉತ್ಪಾದಕರು ತೊಡಗಿಕೊಂಡಿದ್ದರು. ನಕಲಿ ತಯಾರಕರಿಂದಾಗಿ ಕಂಪನಿ ದೊಡ್ಡ ಸವಾಲನ್ನು ಎದುರಿಸುವಂತಾಯಿತು. ಬ್ರಾಂಡ್ ನ ನಕಲಿ ಉತ್ಪನ್ನಗಳು ಕಂಪನಿಗೆ ದೊಡ್ಡ ಮಟ್ಟದ ಹಾನಿ ತಂದವು. ಈ 10 ವರ್ಷಗಳಲ್ಲಿ ನಕಲಿಗಳ ಹೊಡೆತದಿಮದಾಗಿ ಅನುಭವಿಸಿರುವ ನಷ್ಟ 500ರಿಂದ 600 ಕೋಟಿ ರೂ.ಗಳು ಎಂದು ಹೇಳಲಾಗಿದೆ.

ಕರ್ನಾಟಕದ ಹೊರತಾಗಿ, ಮೈಸೂರು ಸ್ಯಾಂಡಲ್ ಸೋಪ್ ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ಮಾರುಕಟ್ಟೆಯನ್ನು ಹೊಂದಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಗೆ ದೊಡ್ಡ ಪ್ರಮಾಣದ ಮಾರುಕಟ್ಟೆಯಿದೆ.

ಕೆಎಸ್ಡಿಎಲ್ ಅಧಿಕಾರಿಗಳ ಪ್ರಕಾರ, ಕಳೆದ 25 ವರ್ಷಗಳಿಂದ ಕಂಪನಿ ತನ್ನ ಅತ್ಯುತ್ತಮ ಗುಣಮಟ್ಟ ಮತ್ತು ಶ್ರೀಗಂಧದ ಅನನ್ಯತೆಯಿಂದಾಗಿ ತನ್ನ ಉತ್ಪನ್ನಗಳನ್ನು ವಿಶ್ವದಾದ್ಯಂತ ರಫ್ತು ಮಾಡುತ್ತಿದೆ. ದುಬೈ, ಅಮೆರಿಕ, ಕೆನಡಾ, ಸಿಂಗಾಪುರ್, ಕುವೈತ್, ಮಲೇಷ್ಯಾ, ಯುರೋಪಿಯನ್ ದೇಶಗಳು, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನೆರೆಯ ರಾಷ್ಟ್ರಗಳಾದ ನೇಪಾಳ, ಚೀನಾ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಪಾಕಿಸ್ತಾನಗಳಲ್ಲೂ ಮೈಸೂರು ಸ್ಯಾಂಡಲ್ ಸೋಪ್ ಗೆ ಬೇಡಿಕೆ ಇದೆ.

ಕೆಎಸ್‌ಡಿಎಲ್ 2022-23ರಲ್ಲಿ 1,375 ಕೋಟಿ ವಹಿವಾಟು ಹೊಂದಿತ್ತು. ಇದು 2021-22ರಲ್ಲಿನ 1,104 ಕೋಟಿಗಿಂತಲೂ ಶೇ.25 ಹೆಚ್ಚಳ. ಕಂಪನಿ 2023-24ರಲ್ಲಿ 2,000 ಕೋಟಿ ವಹಿವಾಟು ಸಾಧಿಸುವ ನಿರೀಕ್ಷೆಯಿದೆ.

ಕೆಎಸ್‌ಡಿಎಲ್ ತಯಾರಿಸಿದ 21 ಹೊಸ ಸಾಬೂನುಗಳು ಮತ್ತು ಡಿಟರ್ಜೆಂಟ್ ಉತ್ಪನ್ನಗಳನ್ನು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದರು. ಕೆಎಸ್‌ಡಿಎಲ್ ಈ ಹಣಕಾಸು ವರ್ಷದಲ್ಲಿ ಈವರೆಗೆ 182 ಕೋಟಿ ರೂ. ಲಾಭ ಗಳಿಸಿದೆ ಎಂದು ಅವರು ಪ್ರಕಟಿಸಿದ್ದಾರೆ.

2022-23ರಲ್ಲಿ 132 ಕೋಟಿ ರೂ. ಲಾಭವಾಗಿತ್ತು. ಆದರೆ ಈ ವರ್ಷ ಈಗಾಗಲೇ ಅದನ್ನೂ ದಾಟಿ 50 ಕೋಟಿ ರೂ.ಗಳ ಹೆಚ್ಚಿನ ಲಾಭವನ್ನು ಕೆಎಸ್ಡಿಎಲ್ ಗಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X