Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹುಬ್ಬಳ್ಳಿಯ ಮರ್ಯಾದೆಗೇಡು ಹತ್ಯೆ:...

ಹುಬ್ಬಳ್ಳಿಯ ಮರ್ಯಾದೆಗೇಡು ಹತ್ಯೆ: ತ್ವರಿತಗತಿಯಲ್ಲಿ ವಿಚಾರಣೆಗೆ ಸರಕಾರಕ್ಕೆ ಪತ್ರ

ಜಿ. ಮಹಾಂತೆೇಶ್ಜಿ. ಮಹಾಂತೆೇಶ್23 Jan 2026 7:28 AM IST
share
ಹುಬ್ಬಳ್ಳಿಯ ಮರ್ಯಾದೆಗೇಡು ಹತ್ಯೆ: ತ್ವರಿತಗತಿಯಲ್ಲಿ ವಿಚಾರಣೆಗೆ ಸರಕಾರಕ್ಕೆ ಪತ್ರ

ಬೆಂಗಳೂರು : ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಈಚೆಗೆ ನಡೆದಿರುವ ಮರ್ಯಾದೆಗೇಡು ಹತ್ಯೆ ಪ್ರಕರಣದ ಕುರಿತು ತ್ವರಿತಗತಿಯಲ್ಲಿ ವಿಚಾರಣೆ ನಡೆಸದಿದ್ದಲ್ಲಿ ಕುಟುಂಬದ ಸದಸ್ಯರಿಗೆ ಸಮಾಜದ ಒತ್ತಡ ಹೆಚ್ಚಾಗಲಿದೆ. ಅಲ್ಲದೇ ದೀರ್ಘ ಕಾಲೀನ ವಿಚಾರಣೆಯಿಂದ ಪೀಡಿತರ ಕುಟುಂಬವು ಮಾನಸಿಕ ಯಾತನೆ ಅನುಭವಿಸುವ ಸಾಧ್ಯತೆ ಇರಲಿದೆ ಎಂದು ನಾಗರಿಕ ಹಕ್ಕು ಪೊಲೀಸ್ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕ ಡಾ.ಕೆ.ರಾಮಚಂದ್ರರಾವ್ ಅವರು ಸರಕಾರಕ್ಕೆ ಪತ್ರ ಬರೆದಿದ್ದಾರೆ.

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಕೆ.ರಾಮಚಂದ್ರರಾವ್, ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಅಮಾನತಾಗಿದ್ದಾರೆ. ಅಮಾನತಾಗಿ ಅತ್ಯಲ್ಪ ದಿನದಲ್ಲೇ ಮರ್ಯಾದೆ ಹತ್ಯೆ ಪ್ರಕರಣದ ಕುರಿತು ಡಾ. ಕೆ.ರಾಮಚಂದ್ರರಾವ್ ಸರಕಾರಕ್ಕೆ ಬರೆದಿದ್ದ ಪತ್ರವೂ ಬಹಿರಂಗವಾಗಿದೆ. ಅಲ್ಲದೇ ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಕುರಿತು ವಿಳಂಬವಾಗಿರುವ ನಡುವೆಯೇ ಈ ಪತ್ರವು ಮುನ್ನೆಲೆಗೆ ಬಂದಿದೆ. 2026ರ ಜನವರಿ 7ರಂದು ಬರೆದಿದ್ದ ಪತ್ರವು "The-file.in"ಗೆ ಲಭ್ಯವಾಗಿದೆ.

ಪತ್ರದಲ್ಲೇನಿದೆ?: ಅಂತರ್ಜಾತಿ ವಿವಾಹದ ಕಾರಣದಿಂದ ಯುವತಿಯೊಬ್ಬಳನ್ನು ಕ್ರೂರವಾಗಿ ಹತ್ಯೆ ಮಾಡಿರುವುದು ತನಿಖೆಯಿಂದ ಕಂಡು ಬಂದಿದೆ. ಈ ಪ್ರಕರಣವು ಕ್ರಿಮಿನಲ್ ಸಂಚು, ಪ್ರಚೋದನೆ ಹಾಗೂ ಜಾತಿ ಆಧಾರಿತ ದೌರ್ಜನ್ಯ ಅಂಶಗಳನ್ನು ಒಳಗೊಂಡಿದೆ. ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ತಡೆ ) ಕಾಯ್ದೆ ಅಡಿಯಲ್ಲಿ ಬರುವ ಗಂಭೀರ ಸ್ವರೂಪದ ಅಪರಾಧಗಳನ್ನು ಒಳಗೊಂಡಿದೆ. ಈ ಪ್ರಕರಣದಲ್ಲಿ 14 ಜನ ಆರೋಪಿತರು ಕೃತ್ಯ ಎಸಗಿದ್ದಾರೆ ಎಂದು ದೂರು ಸಲ್ಲಿಕೆಯಾಗಿದೆ.

ಇಲ್ಲಿಯವರೆಗೆ 8 ಜನ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿತರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸರಕಾರಕ್ಕೆ ಮಾಹಿತಿ ನೀಡಿರುವುದು ಪತ್ರದಿಂದ ಗೊತ್ತಾಗಿದೆ.

ಈ ಪ್ರಕರಣದಲ್ಲಿ ವಿಚಾರಣೆಯು ವಿಳಂಬವಾದಲ್ಲಿ ಪಿರ್ಯಾದುದಾರರ ಆರೋಪಿಗಳು ಅಭಿಯೋಜನೆ ಪರ ಸಾಕ್ಷಿಗಳಿಗೆ ಬೆದರಿಕೆ, ಪ್ರಲೋಭನೆ ಮತ್ತು ಪ್ರಭಾವ ಬೀರುವ ಸಾಧ್ಯತೆ ಹೆಚ್ಚಾಗಿದೆ ಎಂಬ ಅಂಶವನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ವಿಚಾರಣೆಯನ್ನು ತ್ವರಿತಗತಿ ನ್ಯಾಯಾಲಯದಿಂದ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದ್ದ ರಾಮಚಂದ್ರರಾವ್, ಈ ಪ್ರಕರಣದಲ್ಲಿ ಸಂಚು ಕಂಡು ಬಂದಿದೆ. ಹೀಗಾಗಿ ಪ್ರಕರಣವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ನಿರಂತರ ವಿಚಾರಣೆಯ ಅವಶ್ಯಕತೆ ಇದೆ ಎಂದು ಸರಕಾರದ ಗಮನಕ್ಕೆ ತಂದಿರುವುದು ಪತ್ರದಿಂದ ಗೊತ್ತಾಗಿದೆ.

‘ಇಂತಹ ಪ್ರಕರಣದಿಂದ ಸಾರ್ವಜನಿಕ ಶಾಂತಿ ಸೌಹಾರ್ದವು ಹದಗೆಡುವ ಸಂಭವವಿದೆ. ಶೀಘ್ರ ನ್ಯಾಯವು ಕಾನೂನು ಪ್ರಭುತ್ವದ ಮೇಲಿನ ಜನರ ವಿಶ್ವಾಸವನ್ನು ಬಲಪಡಿಸುತ್ತದೆ. ದೀರ್ಘ ಕಾಲದ ವಿಚಾರಣೆಯಿಂದ ಪೀಡಿತರ ಕುಟುಂಬವು ಮಾನಸಿಕ ಯಾತನೆ ಅನುಭವಿಸುವ ಸಾಧ್ಯತೆ ಇರುತ್ತದೆ ಎಂದು ವಿವರಿಸಿರುವುದು ತಿಳಿದು ಬಂದಿದೆ.

ಅದೇ ರೀತಿ ಈ ಪ್ರಕರಣವನ್ನು ಶೀಘ್ರ ವಿಚಾರಣೆಗೆ ಒಳಪಡಿಸಿದ್ದೇ ಆದಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಪ್ರವೃತ್ತಿಯನ್ನು ನಿಗ್ರಹಿಸುವ ಮಾದರಿ ನ್ಯಾಯ ಒದಗಿಸುತ್ತದೆ. ಅಲ್ಲದೇ ಅನಗತ್ಯ ಮುಂದೂಡಿಕೆ

ಮತ್ತು ಪ್ರಕ್ರಿಯಾತ್ಮಕ ವಿಳಂಬಗಳು ಕಡಿಮೆಯಾಗುತ್ತವೆ. ಶಕ್ತಿ ವಾಹಿನಿ/ಭಾರತ ಸರಕಾರದ 2018ರ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಮರ್ಯಾದೆಗೇಡು ಹತ್ಯೆ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ಸೇರಿದಂತೆ ತಡೆಗಟ್ಟುವ ಪರಿಹಾರಾತ್ಮಕ ಮತ್ತು ಶಿಕ್ಷಾತ್ಮಕ ಕ್ರಮಗಳನ್ನು ಕೈಗೊಳ್ಳಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ ಎಂದು ಸರಕಾರದ ಗಮನ ಸೆಳೆದಿರುವುದು ಗೊತ್ತಾಗಿದೆ.

ಅಲ್ಲದೇ ಈ ಪ್ರಕರಣದಲ್ಲಿ ನೊಂದ ಸಂತ್ರಸ್ತರಿಗೆ ಕಾನೂನು ನೆರವು ಮತ್ತು ರಕ್ಷಣೆ ನೀಡುವಲ್ಲಿ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಸಮಾಜ ಕಲ್ಯಾಣ ಇಲಾಖೆಯೂ ಸಹ 2026ರ ಜನವರಿ 6ರಂದು ನಿರ್ದೇಶನ ನೀಡಿದೆ. ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯು ಆಯುಕ್ತರಿಗೆ ಬರೆದಿರುವ ಪತ್ರದ ಪ್ರತಿಯೂ "ಣhe-ಜಿiಟe.iಟಿ"ಗೆ ಲಭ್ಯವಾಗಿದೆ.

ಹುಬ್ಬಳ್ಳಿ ತಾಲೂಕು ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಘಟನೆಯು, ಭಾರತದ ಸಂವಿಧಾನದ ವಿಧಿ 14,15,37, 21ರ ಘೋರ ಉಲ್ಲಂಘನೆಯಾಗಿದೆ. ಅಲ್ಲದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 2015ರ ತಿದ್ದುಪಡಿ ಕಾಯ್ದೆಯಡಿಯಲ್ಲಿಯೂ ಅಪರಾಧವಾಗಿದೆ. ಈ ಘಟನೆ ನಡೆದ ಬಳಿಕವೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ತಹಶೀಲ್ದಾರ್ ಕಾನೂನುಬದ್ಧವಾಗಿರುವ ಕರ್ತವ್ಯವನ್ನು ಉದ್ದೇಶಪೂರ್ವಕವಾಗಿ ನಿಭಾಯಿಸಿಲ್ಲ. ಹಲವು ಲೋಪಗಳನ್ನು ಎಸಗಿದ್ದಾರೆ ಎಂದು ಸಂಜೀವ ಹನುಮಂತಪ್ಪ ಬಂಡಿವಡ್ಡರ ಎಂಬವರು 2025ರ ಡಿಸೆಂಬರ್ 29ರಂದು ದೂರು ನೀಡಿದ್ದರು.

ಈ ಘಟನೆ ನಡೆದ ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿದ್ದರೂ ಸಹ ಯಾವುದೇ ಕರೆಗಳಿಗೆ ಸ್ಪಂದಿಸಿಲ್ಲ. ಗಂಭೀರ ಪ್ರಕರಣವಾಗಿದ್ದರೂ ಮೂರು ದಿನಗಳ ನಂತರ ಗಾಯಾಳುಗಳನ್ನು ನೋಡಲು ಬಂದಿದ್ದಾರೆ. ಮಾನ್ಯಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದೇ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಂಜೀವ ಬಂಡಿವಡ್ಡರ ಅವರು ದೂರಿರುವುದು ಗೊತ್ತಾಗಿದೆ.

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು 2026ರ ಜನವರಿ 16ರಂದು ನಡೆದಿದ್ದ ಸಭೆಗೆ ಸಮಾಜ ಕಲ್ಯಾಣ ಇಲಾಖೆಯು ಈ ಪ್ರಕರಣದ ಬಗ್ಗೆ ಇತ್ತೀಚಿನ ಮಾಹಿತಿಯನ್ನು ಹಂಚಿಕೊಂಡಿದೆ. ಇದರ ಪ್ರತಿಯೂ "The-file.in"ಗೆ ಲಭ್ಯವಾಗಿದೆ.

ನೊಂದ ಸಂತ್ರಸ್ತರಿಗೆ ಸರಕಾರದಿಂದ ಪರಿಹಾರ ಧನ ಮಂಜೂರು ಮಾಡಲಾಗಿದೆ. ಮಹಿಳಾ ಸಂತ್ರಸ್ತರಿಗೆ ತಲಾ 1,00,000 ರೂ. ನಾಲ್ವರು ಪುರುಷರಿಗೆ 25,000 ರೂ. ಯಂತೆ ಒಟ್ಟು 5,00,000 ರೂ. ಪರಿಹಾರ ಧನ ಮಂಜೂರು ಮಾಡಲಾಗಿದೆ. ಸಂತ್ರಸ್ತರ ಕುಟುಂಬಕ್ಕೆ 3 ತಿಂಗಳ ಆಹಾರ ಸಾಮಗ್ರಿಗಳನ್ನು ಸಮಾಜ ಕಲ್ಯಾಣ ಇಲಾಖೆಯು ಪೂರೈಸಿದೆ ಎಂದು ಸಮಾಜ ಕಲ್ಯಾಣ ಇಲಾಖೆಯು ವಿಧಾನಮಂಡಲದ ಸಮಿತಿಗೆ ಮಾಹಿತಿ ಒದಗಿಸಿದೆ.

ಯಲ್ಲಪ್ಪದೇವಪ್ಪಾ ದೊಡ್ಡಮನಿ, ಸಂಗೀತಾ ಯಲ್ಲಪ್ಪ ದೊಡ್ಡಮನಿ, ರೇಣುಕಾ ಮರಿಯಪ್ಪ ದೊಡ್ಡಮನಿ, ಉವಮ್ಮಾ ಮರಿಯಪ್ಪ ದೊಡ್ಡಮನಿ, ಅನನ್ಯಾ ಮರಿಯಪ್ಪ ದೊಡ್ಡಮನಿ, ಮರಿಯಪ್ಪದೇವಪ್ಪ ದೊಡ್ಡಮಲನಿ, ವಿವೇಕಾನಂದ ಮರಿಯಪ್ಪ ದೊಡ್ಡಮನಿ, ಸುನೀಲ ಬಸವರಾಜ ಹರಿಜನ ಇವರಿಗೆ ತಲಾ 2 ಲಕ್ಷ ರೂ.ಯಂತೆ ಒಟ್ಟಾರೆ 16.00 ಲಕ್ಷ ರೂ. ಇಲಾಖೆ ನೀಡಿದೆ. ಹಾಗೆಯೇ ಈ ಪ್ರಕರಣದಲ್ಲಿ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸರಕಾರ ಅನುಮತಿ ನೀಡಿದೆ ಎಂದು ಸಮಿತಿಗೆ ಮಾಹಿತಿ ನೀಡಿರುವುದು ತಿಳಿದು ಬಂದಿದೆ.

ಇನಾಂ ವೀರಾಪುರ ಗ್ರಾಮದಲ್ಲಿ ಒಟ್ಟಾರೆ 635 ಮಂದಿ ಇದ್ದಾರೆ. ಇದರಲ್ಲಿ 325 ಪುರುಷರು, 310 ಮಹಿಳೆಯರಿದ್ದಾರೆ. ಈ ಪೈಕಿ 98 ಮಂದಿ ಪರಿಶಿಷ್ಟ ಜಾತಿಗೆ ಸೇರಿದವರಿದ್ದಾರೆ. 157 ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದವರಿದ್ಧಾರೆ. 99 ಮಂದಿ ಮುಸ್ಲಿಮ್ ಜನಸಂಖ್ಯೆ ಇದ್ದರೆ, ಲಿಂಗಾಯತ ಜಾತಿಗೆ ಸೇರಿದವರು 281 ಮಂದಿ ಇದ್ದಾರೆ ಎಂಬ ಅಂಕಿ ಅಂಶಗಳನ್ನೂ ಸಮಿತಿಗೆ ನೀಡಿರುವುದು ಗೊತ್ತಾಗಿದೆ.

Tags

Hubballihonour killinggovernmentinvestigation
share
ಜಿ. ಮಹಾಂತೆೇಶ್
ಜಿ. ಮಹಾಂತೆೇಶ್
Next Story
X