Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ...

ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಐಸಿಎಂಆರ್‌ನಿಂದ ಸೀರೋ ಸರ್ವೇ

ಶರತ್ ಪುರದಾಳ್ಶರತ್ ಪುರದಾಳ್21 April 2025 4:49 PM IST
share
ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಐಸಿಎಂಆರ್‌ನಿಂದ ಸೀರೋ ಸರ್ವೇ

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಸಾವುನೋವು ಸಂಭವಿಸುತ್ತಿರುವ ಬೆನ್ನಲ್ಲೇ ಕಾಯಿಲೆ ನಿಯಂತ್ರಣಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ(ಐಸಿಎಂಆರ್) ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿಯು ಜಿಲ್ಲೆಯಲ್ಲಿ ಸೀರೋ ಸರ್ವೇ (ರಕ್ತಸಾರ ಸಮೀಕ್ಷೆ) ನಡೆಸಿದೆ.

ಮಂಗನ ಕಾಯಿಲೆ ಹರಡುವಿಕೆ ಪ್ರಮಾಣವನ್ನು ಅರ್ಥ ಮಾಡಿಕೊಂಡು ನಿಯಂತ್ರಣ ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲೆಯಲ್ಲಿ ಸೀರೋ ಸರ್ವೇ ನಡೆಸಲಾಗಿದೆ. ಕ್ಯಾಸನೂರು ಫಾರೆಸ್ಟ್ ಡಿಸೀಜ್ (ಕೆಎಫ್‌ಡಿ) ಸಾಮಾನ್ಯವಾಗಿ ಮಂಗನ ಜ್ವರವೆಂದು ಕರೆಯಲ್ಪಡುವ ಈ ರೋಗವು ಪಶ್ಚಿಮಘಟ್ಟದ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತದೆ.

ಆರಂಭದಲ್ಲಿ ಈ ರೋಗವು ಕೇವಲ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಕಂಡು ಬಂದಿದ್ದರೆ, ಈಗ ಇದು ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಹಾಗೂ ಪಕ್ಕದ ರಾಜ್ಯಗಳಲ್ಲಿಯೂ ಹರಡಿದೆ. ಹಾಗಾಗಿ ಈ ರೋಗದ ಹರಡುವಿಕೆ ಪ್ರಮಾಣವನ್ನು ಅರ್ಥಮಾಡಿಕೊಳ್ಳಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ(ಐಸಿಎಂಆರ್) ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ(ಎನ್‌ಐಇ) ವಿಭಾಗವು ಪಶ್ಚಿಮಘಟ್ಟದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳ ಹಾಗೂ ವಯಸ್ಕರಲ್ಲಿ ಕೆಎಫ್‌ಡಿ ಸೀರೋ ಸರ್ವೇ(ರಕ್ತಸಾರ ಸಮೀಕ್ಷೆ) ನಡೆಸುತ್ತಿದೆ. ಈ ಸೀರೋ ಸರ್ವೇಯನ್ನು ಕರ್ನಾಟಕ, ಮಹಾರಾಷ್ಟ್ರ, ಗೋವಾ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ನಡೆಸುತ್ತಿದೆ.

ರಾಜ್ಯದ 51 ಗ್ರಾಮಗಳಲ್ಲಿ ಸಮೀಕ್ಷೆ :

ಕರ್ನಾಟಕದಲ್ಲಿ ಈ ಸೀರೋ ಸರ್ವೇ ಅನ್ನು ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗ ಹಾಗೂ ರಾಜ್ಯ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಅಧ್ಯಯನಕ್ಕಾಗಿ ಕರ್ನಾಟಕದ ಎಂಟು ಜಿಲ್ಲೆಗಳ 51 ಗ್ರಾಮಗಳಲ್ಲಿ ಸೀರೋ ಸರ್ವೇ ನಡೆಸಲಾಗುತ್ತದೆ. ಇವುಗಳಲ್ಲಿ ಹಿಂದೆ ಕೆಎಫ್‌ಡಿ ಪ್ರಕರಣಗಳು ಕಂಡುಬಂದ 20 ಗ್ರಾಮಗಳನ್ನು ವಿಶೇಷವಾಗಿ ಆಯ್ಕೆ ಮಾಡಲಾಗಿದೆ.

ಸಮೀಕ್ಷೆ ಯೋಜನೆಯಂತೆ, ಎನ್‌ಐಇ ಚೆನ್ನೈ ತಂಡವು ಉತ್ತರ ಕನ್ನಡ ಜಿಲ್ಲೆಯ 10 ಗ್ರಾಮಗಳು, ಉಡುಪಿ ಜಿಲ್ಲೆಯ 6, ಶಿವಮೊಗ್ಗದ 7, ಕೊಡಗಿನ 8, ಹಾಸನದ 1, ದಕ್ಷಿಣ ಕನ್ನಡದ 14, ಚಿಕ್ಕಮಗಳೂರಿನ 4 ಹಾಗೂ ಬೆಳಗಾವಿಯ 1 ಗ್ರಾಮಗಳಲ್ಲಿ ಸಿರೋಸರ್ವೇ ನಡೆಸಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಮಾ.22ರಿಂದ ಎ.15ರವರೆಗೆ ಸರ್ವೇ ನಡೆಸಲಾಗಿದೆ.

ಪ್ರತಿ ಗ್ರಾಮದಲ್ಲಿ 6ರಿಂದ 18 ವರ್ಷದೊಳಗಿನ 14 ಮಕ್ಕಳಿಂದ ಹಾಗೂ 18ರಿಂದ 50 ವರ್ಷದೊಳಗಿನ 22 ಜನ ವಯಸ್ಕರಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಿದೆ. ಈ 36 ಜನರನ್ನು ಸದರಿ ಗ್ರಾಮಗಳಲ್ಲಿ ರ್ಯಾಂಡಮ್ ಆಗಿ ಆಯ್ಕೆ ಮಾಡಿ ಸಂಗ್ರಹಿಸಿದ ರಕ್ತದ ಮಾದರಿಗಳನ್ನು ಪುಣೆಯ ಐಸಿಎಮ್‌ಆರ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರೋಲಾಜಿಗೆ ಕಳುಹಿಸಿ, ಕೆಎಫ್‌ಡಿ ವೈರಸ್ ವಿರೋಧಿ ಪ್ರತಿಕಾಯ ಗಳನ್ನು ಪರೀಕ್ಷಿಸ ಲಾಗುತ್ತದೆ.

ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳ ಹಾಗೂ ವಯಸ್ಕರ ಪೈಕಿ ಎಷ್ಟು ಮಂದಿ ಈಗಾಗಲೇ ಕೆಎಫ್‌ಡಿ ಸೋಂಕು ಹೊಂದಿದ್ದಾರೆ ಮತ್ತು ಎಷ್ಟು ಮಂದಿ ಈ ಸೋಂಕಿಗೆ ಅತಿ ಸಂಭಾವ್ಯರಾಗಿ ಉಳಿದಿದ್ದಾರೆ ಎಂಬುದನ್ನು ತಿಳಿಯುವುದಕ್ಕಾಗಿ ಐಸಿಎಂಆರ್-ಎನ್‌ಐಇ ಈ ಸಂಶೋಧನೆ ನಡೆಸುತ್ತಿದೆ.

ಈ ಸೀರೋ ಸರ್ವೇ ಮೂಲಕ ವೈರಸ್ ಹೆಚ್ಚು ಹರಡಿರುವ ಭೌಗೋಳಿಕ ಪ್ರದೇಶಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಹಾಗೂ ವೈರಸ್‌ನ ಶಾಂತ ಸಂಚಾರ (ಸೈಲೆಂಟ್ ಟ್ರಾನ್ಸ್ ಮಿಷನ್) ನಡೆಯುತ್ತಿರುವ ಪ್ರದೇಶಗಳ ಪತ್ತೆಯೂ ಸಾಧ್ಯ ವಾಗುತ್ತದೆ.

ಹೆಚ್ಚಿನ ಅಪಾಯ ವಿರುವ ಜಿಲ್ಲೆಗಳಲ್ಲಿ ಮತ್ತು ವಯೋ ವರ್ಗಗಳಲ್ಲಿ ಲಸಿಕೀ ಕರಣವನ್ನು ಆದ್ಯತೆಯಾಗಿಸಲು ಈ ಮಾಹಿತಿಯು ಸಹಾಯ ಮಾಡುತ್ತದೆ. ಜೊತೆಗೆ, ಈ ಅಧ್ಯಯನದಿಂದ ದೊರೆಯುವ ಸಾಕ್ಷ್ಯಾಧಾರಗಳು ರೋಗದ ನಿಗಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಹಕರಿಸುತ್ತದೆ ಹಾಗೂ ಇದರಿಂದ ಕೆಎಫ್‌ಡಿ ಪ್ರಭಾವಿತ ಪ್ರದೇಶಗಳಲ್ಲಿ ರೋಗವನ್ನು ಬೇಗನೆ ಪತ್ತೆ ಹಚ್ಚುವುದು ಸುಲಭವಾಗಲಿದೆ.

ಸಮೀಕ್ಷೆ ಕುರಿತು ಕಾರ್ಯಾಗಾರ :

ಇತ್ತೀಚೆಗೆ ಈ ಸಮೀಕ್ಷೆಯ ಕುರಿತಂತೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ , ಐಸಿಎಮ್‌ಆರ್‌ನ ನಿರ್ದೇಶಕ ಡಾ. ಮನೋಜ್ ಮುರೇಕರ್ ಇವರ ನೇತೃತ್ವದಲ್ಲಿ ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಾರ್ಯಾಗಾರವನ್ನು ನಡೆಸಲಾಯಿತು. ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಬಾಲು ಪಿ. ಎಸ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ, ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕಿ ಡಾ.ಲತಾ ಆರ್. ತೆಲಂಗ್, ಪ್ರಾಂಶುಪಾಲ ಡಾ.ಸಿದ್ದಲಿಂಗಪ್ಪ, ಡೀನ್ ಡಾ.ವಿನಾಯಕ್ ಮುಂತಾದವರು ಭಾಗಿಯಾಗಿ ಚರ್ಚೆ ನಡೆಸಲಾಯಿತು.

ಪ್ರಸಕ್ತ ವರ್ಷದಲ್ಲಿ ಇಬ್ಬರ ಮೃತ್ಯು :

ಪ್ರಸಕ್ತ ಸಾಲಿನಲ್ಲಿ ಮಂಗನ ಕಾಯಿಲೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದ ಎಂಟು ವರ್ಷದ ಬಾಲಕ ಸೇರಿ ಈ ವರ್ಷ ಇಬ್ಬರು ಮೃತಪಟ್ಟಿದ್ದಾರೆ. ಬಾಲಕನ ಸಾವಿನ ಕುರಿತು ಒಂದು ವಾರದಲ್ಲಿ ಡೆತ್ ಅಡಿಟ್ ವರದಿ ನೀಡಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.

share
ಶರತ್ ಪುರದಾಳ್
ಶರತ್ ಪುರದಾಳ್
Next Story
X