Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗುತ್ತಿಗೆದಾರರಿಂದ ಅಕ್ರಮ ಕಟ್ಟಡ ಕಲ್ಲು...

ಗುತ್ತಿಗೆದಾರರಿಂದ ಅಕ್ರಮ ಕಟ್ಟಡ ಕಲ್ಲು ಸಾಗಣೆ

459.61 ಕೋಟಿ ರೂ. ದಂಡ ವಸೂಲಿ ಬಾಕಿ

ಜಿ. ಮಹಾಂತೇಶ್ಜಿ. ಮಹಾಂತೇಶ್29 July 2023 9:54 AM IST
share
ಗುತ್ತಿಗೆದಾರರಿಂದ ಅಕ್ರಮ ಕಟ್ಟಡ ಕಲ್ಲು ಸಾಗಣೆ

ಬೆಂಗಳೂರು, ಜು.28: ಖನಿಜ ರವಾನೆ ಪರವಾನಿಗೆ ಪಡೆಯದೇ ರಾಜ್ಯದ ಒಟ್ಟು 12 ಜಿಲ್ಲೆಗಳಲ್ಲಿ ಕಲ್ಲು ಗಣಿ ಗುತ್ತಿಗೆದಾರರು ಕಟ್ಟಡ ಕಲ್ಲನ್ನು ಸಾಗಣೆ ಮಾಡಿದ್ದರಿಂದಾಗಿ ಸರಕಾರಕ್ಕೆ ನಷ್ಟವಾಗಿರುವ 520.0 ಕೋಟಿ ರೂ.ಗಳ ಪೈಕಿ ಕೇವಲ 60.39 ಕೋಟಿ ರೂ.ಯಷ್ಟನ್ನೇ ವಸೂಲು ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಬಾಕಿ 459.61 ಕೋಟಿ ರೂ. ವಸೂಲಿಗೆ ಕಠಿಣ ಕ್ರಮಕೈಗೊಂಡಿಲ್ಲ.

ವಿವಿಧ ಪರವಾನಿಗೆ ಉಲ್ಲಂಘನೆಗಳಿಗಾಗಿ ರಾಜ್ಯದಲ್ಲಿ ಒಟ್ಟಾರೆ 6,105 ಕೋಟಿ ರೂ. ದಂಡ ವಿಧಿಸಲಾಗಿದ್ದು ಇದನ್ನು ಒಟಿಎಸ್ ಮೂಲಕ ಜಾರಿಗೊಳಿಸಲು ನಿರ್ಧಾರ ಕೈಗೊಂಡಿರುವ ಬೆನ್ನಲ್ಲೇ 459.61 ಕೋಟಿ ರೂ. ಬಾಕಿ ಉಳಿದಿರುವ ಸಂಗತಿಯು ಮುನ್ನೆಲೆಗೆ ಬಂದಿದೆ.

the-file.inಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಮಂಡಿಸಿರುವ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ. ಇಲಾಖೆಯು ಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಗೆ ಮಂಡಿಸಿರುವ ಅಂಕಿ ಅಂಶಗಳಲ್ಲಿ ಈ ವಿವರಗಳಿವೆ. ಅಂಕಿ ಅಂಶಗಳನ್ನೊಳಗೊಂಡ ಪ್ರಾತ್ಯಕ್ಷಿಕೆಯು ‘’ಗೆ ಲಭ್ಯವಾಗಿವೆ.

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅವಧಿ ಮುಗಿದ ‘ಎ’ ಮತ್ತು ‘ಬಿ’ ಕೆಟಗರಿ ಹಾಗೂ ರದ್ದುಪಡಿಸಿರುವ ‘ಸಿ’ ಕೆಟಗರಿ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಇಲಾಖೆಯು ವಶಪಡಿಸಿಕೊಂಡು ದಾಸ್ತಾನಿರಿಸಿರುವ (ಹಳೆಯ ದಾಸ್ತಾನು) ಕಬ್ಬಿಣ ಅದಿರು ಹರಾಜು, ಚಾಲ್ತಿಯಲ್ಲಿರುವ ಉಪ ಖನಿಜ ಗಣಿಗುತ್ತಿಗೆಗಳಿಂದ ಒಟ್ಟಾರೆ 9,115.55 ಕೋಟಿ ರೂ. ಮೊತ್ತದಲ್ಲಿ ರಾಜಸ್ವ ಸಂಗ್ರಹಿಸಬಹುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಅಂದಾಜಿಸಿದೆ.

ಅದೇ ರೀತಿ ಉಪ ಖನಿಜಗಳ ಮೇಲಿನ ರಾಜಧನವನ್ನು ಶೇ.15ರಷ್ಟು ಹೆಚ್ಚಿ

ಸಲು ಇಲಾಖೆ ಚಿಂತಿಸಿದೆ. ಸರಕಾರಿ ಸಂಸ್ಥೆಗಳ ಗಣಿಗಾರಿಕೆಗೆ ಹೆಚ್ಚುವರಿ ರಾಜಧನ ನಿಗದಿಪಡಿಸಿದ್ದು, ಅದರಂತೆಯೇ ಹರಾಜೇತರ ಗುತ್ತಿಗೆಗಳಿಗೂ ಕನಿಷ್ಠ ಶೇ.22ರಷ್ಟು ಹೆಚ್ಚುವರಿ ಮೊತ್ತವನ್ನು ವಿಧಿಸಿದಲ್ಲಿ ಪ್ರತೀ ವರ್ಷ ಸರಕಾರಕ್ಕೆ 1,000 ಕೋಟಿಗೂ ಅಧಿಕ ರಾಜಸ್ವ ಸಂಗ್ರಹವಾಗುವ ಸಾಧ್ಯತೆ ಇದೆ ಎಂದ ಅಂದಾಜಿಸಿದೆ.

the-file.inಗೃಹಲಕ್ಷ್ಮಿ ಸೇರಿದಂತೆ ಒಟ್ಟು 5 ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಿಸುವ ನಿಟ್ಟಿನಲ್ಲಿ ಲೆಕ್ಕಚಾರ ಮಾಡುತ್ತಿರುವ ಹೊತ್ತಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಮಂಡಿಸಿರುವ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ. ಇಲಾಖೆಯು ಸಭೆಗೆ ಮಂಡಿಸಿರುವ ಅಂಕಿ ಅಂಶಗಳು ‘’ಗೆ ಲಭ್ಯವಾಗಿವೆ.

2023ರ ಜುಲೈ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಸಭೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ವಾರ್ಷಿಕ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಲು 9,115.55 ಕೋಟಿ ರೂ. ಸಂಗ್ರಹ ಗುರಿಯ ಲೆಕ್ಕಾಚಾರವನ್ನು ಮಂಡಿಸಿತ್ತು.

ರಾಜಸ್ವ ಗುರಿ ಸಾಧಿಸುವ ಸಂಬಂಧ ಹರಾಜು ಮಾಡಲಾದ ಕಬ್ಬಿಣ ಅದಿರಿನ ಬ್ಲಾಕ್‌ಗಳಿಗೆ ಎಂಎಂಡಿಆರ್ ಕಾಯ್ದೆ 1957ರ ಕಲಂ 8 ಬಿ ಅನ್ವಯ ಅರಣ್ಯ ಅನುಮತಿಗಳನ್ನು ವರ್ಗಾಯಿಸುವುದು, ಅರಣ್ಯ ಅನುಮತಿ ನೀಡುವ ಸಂದರ್ಭದಲ್ಲಿ ಪರಿಹಾರಾತ್ಮಕ ನೆಡುತೋಪುಗೆ ಭೂಮಿ ನೀಡುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳು, ಸಿ ವರ್ಗದ ಅದಿರಿನ ಬ್ಲಾಕ್‌ಗಳಿಗೆ ಸರ್ವೋಚ್ಛ ನ್ಯಾಯಾಲಯದ ಆದೇಶದ ಅನ್ವಯ ಅರಣ್ಯ ಅನುಮತಿಗಳನ್ನು ವರ್ಗಾಯಿಸಲು ಸಹಕಾರ ಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಕೋರಿತ್ತು.

ಹಾಗೆಯೇ ಸಿ ವರ್ಗದ ಗಣಿ ಗುತ್ತಿಗೆ, ರದ್ದಾದ ಗಣಿ ಗುತ್ತಿಗೆಗಳು, ಸ್ಟಾಕ್ ಯಾರ್ಡ್ ಮತ್ತು ವಿವಿಧೆಡೆ ಜಪ್ತಿ ಮಾಡಲಾದ ಕಬ್ಬಿಣದ ಅದಿರನ್ನು ಹರಾಜು ಮೂಲಕ ವಿಲೇ ಮಾಡಲು ಕ್ರಮ ವಹಿಸುತ್ತಿರುವ ಇಲಾಖೆಯು ಕಬ್ಬಿಣ ಅದಿರಿನ ಪೈಕಿ 2.71 ಎಂಎಂಟಿ ಪ್ರಮಾಣದಷ್ಟು ಅದಿರು ಅರಣ್ಯ ಪ್ರದೇಶದಲ್ಲಿ ದಾಸ್ತಾನಿದೆ ಎಂದು ಸಭೆಗೆ ಮಾಹಿತಿ ಒದಗಿಸಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅವಧಿ ಮುಗಿದ ಎ ಮತ್ತು ಬಿ ಕೆಟಗರಿ ಹಾಗೂ ರದ್ದುಪಡಿಸಿರುವ ಸಿ ಕೆಟಗರಿ ಗಣಿ ಗುತ್ತಿಗೆ ಪ್ರದೇಶಗಳಲ್ಲಿ 5.89 ಎಂಎಂಟಿ ಪ್ರಮಾಣದಲ್ಲಿ ಕಬ್ಬಿಣ ಅದಿರನ್ನು ವಶಪಡಿಸಿಕೊಂಡು ಇಲಾಖೆಯು ದಾಸ್ತಾನಿನಲ್ಲಿರಿಸಿದೆ. ಇದನ್ನು ಹರಾಜು ಮಾಡಿದಲ್ಲಿ ಅಂದಾಜು 1,200.00 ಕೋಟಿ ರೂ. ರಾಜಸ್ವ ಸಂಗ್ರಹಿಸಬಹುದು ಎಂದು ಇಲಾಖೆಯು ಅಂದಾಜಿಸಿದೆ.

ಯಾರ್ಡ್‌ಗಳಲ್ಲಿ 0.9 ಎಂಎಂಟಿ ಪ್ರಮಾಣದಲ್ಲಿರುವ ಕಬ್ಬಿಣ ಅದಿರನ್ನು ಇಲಾಖೆಯು ವಶಪಡಿಸಿಕೊಂಡಿದೆ. ಇದನ್ನು ಹರಾಜು ಹಾಕಿದಲ್ಲಿ 50 ಕೋಟಿ ರೂ., ಚಾಲ್ತಿಯಲ್ಲಿರುವ ಕಬ್ಬಿಣ ಅದಿರು ಗಣಿಗುತ್ತಿಗೆಗಳಿಂದ (ಹರಾಜು ಮತ್ತು ಹರಾಜು ರಹಿತ ಗಣಿ ಗುತ್ತಿಗೆಗಳು 42.19 ಎಂಎಟಿ) 3,664.00 ಕೋಟಿ ರೂ., ಹರಾಜು ಪ್ರಕ್ರಿಯೆ ಮುಗಿದಿರುವ 27 ಗಣಿ ಗುತ್ತಿಗೆ ಬ್ಲಾಕ್‌ಗಳಿಗೆ ಶಾಶನ ಬದ್ಧ ದಾಖಲೆಗಳು ಸಲ್ಲಿಕೆಯಾಗಿ ಗಣಿ ಕಾರ್ಯ ನಿರ್ವಹಿಸಿದ್ದಲ್ಲಿ (27 ಗಣಿ ಗುತ್ತಿಗೆ ಬ್ಲಾಕ್‌ಗಳ ಪೈಕಿ ಪ್ರಸ್ತುತ ಸಾಲಿನಲ್ಲಿ 12 ಬ್ಲಾಕ್‌ಗಳಲ್ಲಿ 9 ಕಬ್ಬಿಣ ಅದಿರು, 3 ಸುಣ್ಣದ ಕಲ್ಲು- 4.607 ಎಂಎಂಟಿ) 589.55 ಕೋಟಿ ರೂ., ಇತರ ಮುಖ್ಯ ಖನಿಜಗಳಿಂದ (ಸುಣ್ಣದ ಕಲ್ಲು ಮತ್ತು ಚಿನ್ನದ ಅದಿರು- 33.46 ಎಂಎಂಟಿ) 342 ಕೋಟಿ ರೂ.ಗಳ ರಾಜಸ್ವ ಸಂಗ್ರಹಿಸಬಹುದು ಎಂದು ಅಂಕಿ ಅಂಶಗಳ ವಿವರಗಳನ್ನು ಮಂಡಿಸಿರುವುದು ತಿಳಿದು ಬಂದಿದೆ.

ಚಾಲ್ತಿ ಉಪಖನಿಜ ಗಣಿ ಗುತ್ತಿಗೆಗಳಿಂದ 2,600 ಕೋಟಿ ರೂ., ಉಪ ಖನಿಜಗಳ ಮೇಲಿನ ರಾಜಧನವನ್ನು ಶೇ.15ರಷ್ಟು ಹೆಚ್ಚಿಸಿದಲ್ಲಿ 390 ಕೋಟಿ ರೂ., ಹೊಸ ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಮತ್ತು ಬಾಕಿ ವಸೂಲಾತಿಯಿಂದ 300 ಕೋಟಿ ರೂ.ಗಳ ರಾಜಸ್ವ ಸಂಗ್ರಹಿಸಬಹುದು ಎಂದು ಅಂದಾಜಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಎ ಮತ್ತು ಬಿ ವರ್ಗದ ಗಣಿ ಗುತ್ತಿಗೆ (11)ಗಳಲ್ಲಿ 4,81,209 ಟನ್, ಸಿ ವರ್ಗ (41)ದಲ್ಲಿ 13,27,214 ಪ್ರಮಾಣದಲ್ಲಿ ಕಬ್ಬಿಣ ಅದಿರು ದಾಸ್ತಾನಿದೆ. ಅದೇ ರೀತಿ ಇದೇ ಜಿಲ್ಲೆಯಲ್ಲಿ ಎ ಮತ್ತು ಬಿ ವರ್ಗದಲ್ಲಿ (4) 1,25,856 ಟನ್, ಸಿ ವರ್ಗದಲ್ಲಿ (2) 903 ಟನ್ನಷ್ಟು ಮ್ಯಾಂಗನೀಸ್ ಅದಿರು ದಾಸ್ತಾನಿದೆ. ವಿಜಯನಗರ ಜಿಲ್ಲೆಯಲ್ಲಿ ಎ ಮತ್ತು ಬಿ (23) 1,96,186.62 ಟನ್, ಸಿ ವರ್ಗದಲ್ಲಿ (6) 97009 ಟನ್, ಚಿತ್ರದುರ್ಗ ಜಿಲ್ಲೆಯಲ್ಲಿ ಎ ಮತ್ತು ಬಿ (9) 11850 ಟನ್ ಸೇರಿದಂತೆ ಒಟ್ಟಾರೆ 815101.62 ಟನ್ನಷ್ಟು, ತುಮಕೂರು ಜಿಲ್ಲೆಯಲ್ಲಿ ಸಿ ವರ್ಗ (112) ಟನ್ ಅದಿರು ಸೇರಿದಂತೆ ಒಟ್ಟಾರೆ 1880587.3 ಟನ್ನಷ್ಟು ಅದಿರು ಇದೆ ಎಂದು ಇಲಾಖೆಯು ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

ಎಂಎಂಡಿಆರ್ ಕಾಯ್ದೆಗೆ ತಿದ್ದುಪಡಿ ತಂದು ನವೀಕರಣ ಪದ್ಧತಿ ಕೈ ಬಿಟ್ಟು ಚಾಲ್ತಿ ಗಣಿ ಗುತ್ತಿಗೆಗಳ ಅವಧಿ ವಿಸ್ತರಿಸಲು ನಿಯಮಗಳಲ್ಲಿ ಅವಕಾಶ ಕಲ್ಪಿಸಿದೆ. ಈ ಗಣಿ ಗುತ್ತಿಗೆಗಳಿಂದ ಸರಕಾರಕ್ಕೆ ರಾಜಧನ ಮಾತ್ರ ಸಂದಾಯವಾಗುತ್ತಿದೆ. ಎಂಎಂಡಿಆರ್ ತಿದ್ದುಪಡಿ ಕಾಯ್ದೆ 2015 ಅನ್ವಯ ಗಣಿ ಗುತ್ತಿಗೆಗಳನ್ನು ಹರಾಜು ಮೂಲಕವೇ ವಿಲೇ ಮಾಡುತ್ತಿದ್ದರೂ ಈ ಪ್ರಕರಣಗಳಲ್ಲಿ ಸರಕಾರಕ್ಕೆ ರಾಜಧನ ಜತೆ ಹರಾಜು ಮೊತ್ತವೂ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿದೆ. ಕರ್ನಾಟಕದಲ್ಲಿ ಕಬ್ಬಿಣದ ಅದಿರಿನ ಗಣಿ ಪ್ರದೇಶಗಳು ಐಬಿಎಂ ಪ್ರಕಟಿಸುವ ಬೆಲೆ ಮೇಲೆ ಕನಿಷ್ಠ ಶೇ. 26ರಿಂದ ಶೇ. 145.80ಗೆ ಹರಾಜಾಗಿದೆ ಎಂದು ಗೊತ್ತಾಗಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X