Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಚಿತ್ರದುರ್ಗದಲ್ಲಿ ರಾಜಾರೋಷವಾಗಿ...

ಚಿತ್ರದುರ್ಗದಲ್ಲಿ ರಾಜಾರೋಷವಾಗಿ ಲಕ್ಷಾಂತರ ಟನ್‌ ಕಬ್ಬಿಣದ ಅದಿರು ಅಕ್ರಮ ಸಾಗಾಟ

►ಎನ್‌ಒಸಿ ಇಲ್ಲದೆ ಸರಕಾರಿ ಜಮೀನುಗಳಲ್ಲಿನ ಅದಿರು ಹರಾಜು ►ಅರಣ್ಯ ಪ್ರದೇಶಗಳಲ್ಲಿನ ಶ್ರೀಗಂಧ ಮತ್ತಿತರ ಅಮೂಲ್ಯ ಮರಗಳ ನಾಶ

ಜಿ.ಮಹಾಂತೇಶ್ಜಿ.ಮಹಾಂತೇಶ್22 April 2025 8:00 AM IST
share
ಚಿತ್ರದುರ್ಗದಲ್ಲಿ ರಾಜಾರೋಷವಾಗಿ ಲಕ್ಷಾಂತರ ಟನ್‌ ಕಬ್ಬಿಣದ ಅದಿರು ಅಕ್ರಮ ಸಾಗಾಟ

ಬೆಂಗಳೂರು, ಎ.21; ರಾಜ್ಯದ ಚಿತ್ರದುರ್ಗ ಜಿಲ್ಲೆಯ ದಿಂಡದಹಳ್ಳಿ ಮತ್ತು ಇತರ ಕಡೆಗಳಲ್ಲಿ ಅದಿರು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಗಳು, ಕಂಪೆನಿಗಳು ಅರಣ್ಯ ಪ್ರದೇಶದಿಂದ ಲಕ್ಷಾಂತರ ಟನ್ ಕಬ್ಬಿಣದ ಅದಿರು ಮತ್ತು ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿವೆ. ಅಲ್ಲದೆ, ಎನ್‌ಒಸಿ ಇಲ್ಲದೆಯೇ ಖಾಸಗಿ ಜಮೀನು ಸೇರಿದಂತೆ ಸರಕಾರಿ ಜಮೀನುಗಳಲ್ಲಿನ ಕಬ್ಬಿಣದ ಅದಿರನ್ನು ಹರಾಜು ಮಾಡುತ್ತಿವೆ ಎಂದು ‘the-file.in’ ವರದಿ ಮಾಡಿದೆ.

ಅರಣ್ಯ ಮತ್ತು ಗಣಿ ಭೂ ವಿಜ್ಞಾನ ಇಲಾಖೆಯ ಕಣ್ಣು ತಪ್ಪಿಸಿ ಲಕ್ಷಾಂತರ ಮೆಟ್ರಿಕ್ ಟನ್ ಪ್ರಮಾಣದ ಅದಿರು ಸಾಗಿಸಲಾಗುತ್ತಿದೆ. ಹಾಗೆಯೇ ಇನ್ನು ಕೆಲವು ಪ್ರಕರಣಗಳಲ್ಲಿ ಜಮೀನುಗಳ ಮಾಲಕರ ಪೂರ್ವಾನುಮತಿ ಪಡೆಯದೇ ಕಬ್ಬಿಣದ ಅದಿರನ್ನು ಸಾಗಣೆ ಮಾಡುವ ಸಂದರ್ಭದಲ್ಲಿ ಬೆಲೆಬಾಳುವ ಶ್ರೀಗಂಧ ಮತ್ತು ಇತರ ಜಾತಿಯ ಮರಗಳನ್ನೂ ಹಾಳುಗೆಡವುತ್ತಿರುವ ಪ್ರಕರಣಗಳು ಬಹಿರಂಗವಾಗಿವೆ.

ಕೇಂದ್ರ ಸರಕಾರದ ಎರಡನೇ ಹಂತದ ಫಾರೆಸ್ಟ್ ಕ್ಲಿಯರೆನ್ಸ್ ಪ್ರಸ್ತಾವನೆ ಪಡೆಯದೇ ಅರಣ್ಯ ಕಾಯ್ದೆ ಉಲ್ಲಂಘನೆ ಮತ್ತು ಅದಿರು ಸಾಗಣೆ ರಸ್ತೆಯನ್ನು ಬಳಸಲು ಸರಕಾರದ ಅನುಮತಿ ಮುಕ್ತಾಯಗೊಂಡ ನಂತರವೂ ಜೆಎಸ್‌ಡಬ್ಲ್ಯು ಅಕ್ರಮವಾಗಿ ಅದಿರು ಸಾಗಣೆ ಮಾಡಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಗುರುತರವಾದ ಆರೋಪ ಮಾಡಿದ್ದರ ಬೆನ್ನಲ್ಲೇ ಅದೇ ಹೋಬಳಿಯ ದಿಂಡದಹಳ್ಳಿಯಲ್ಲಿ ಮತ್ತೊಂದು ಕಂಪೆನಿಯ ಪ್ರಕರಣವು ಬಹಿರಂಗವಾಗಿರುವುದು ಮುನ್ನೆಲೆಗೆ ಬಂದಿದೆ.

ಹಾಗೆಯೇ ಅಧಿಕಾರಿಗಳು ಒಂದೇ ಗ್ರಾಮದ ಒಂದೇ ಸರ್ವೇ ನಂಬರ್‌ನ ಪ್ರದೇಶದಲ್ಲಿ ದಾಸ್ತಾನು ಇರುವ ಅದಿರು ಮತ್ತು ಗಿಡಮರಗಳ ಕಟಾವಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ವರದಿಗಳನ್ನು ಸಲ್ಲಿಸಿದ್ದರು. ಎರಡು ಪ್ರತ್ಯೇಕ ಅಳತೆ ಪಟ್ಟಿಗಳನ್ನು ಸಹ ಕೂಲಂಕಶವಾಗಿ ಪರಿಶೀಲಿಸುತ್ತಿಲ್ಲ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಸಂಗತಿಯು ಅಕ್ರಮ ಅದಿರು ಸಾಗಣೆಯು ನಿರಂತರವಾಗಿ ನಡೆಯುತ್ತಿದೆ ಎಂಬುದಕ್ಕೆ ಪುರಾವೆ ಸಿಕ್ಕಂತಾಗಿದೆ.

ಶ್ರೀ ಸಾಯಿ ಬಾಲಾಜಿ ಐರನ್ ಇಂಡಿಯಾ ಪ್ರೈ. ಲಿಮಿಟೆಡ್ ಈ ಹಿಂದೆ ದಿಂಡದಹಳ್ಳಿಯ ಸರ್ವೇ ನಂಬರ್ 35 ಮತ್ತು 38ರಲ್ಲಿ ದಾಸ್ತಾನು ಮಾಡಿದ್ದ 2,48,500.00 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಖಾಸಗಿ ಜಮೀನಿನಲ್ಲಿ ದಾಸ್ತಾನು ಮಾಡಿತ್ತು. ಅದನ್ನು ಸಾಗಿಸಲು ಜಮೀನಿನ ಮಾಲಕರ ಪೂರ್ವಾನುಮತಿ ಪಡೆಯದೇ ಸಾಗಣೆ ಮಾಡಲು 25ರಿಂದ 35 ಸೆಂ.ಮೀ. ಸುತ್ತಳತೆಯುಳ್ಳ ಬೆಲೆಬಾಳುವ ಶ್ರೀಗಂಧ ಹಾಗೂ ಇತರ ಜಾತಿಯ ಮರಗಳನ್ನು ಹಾಳು ಮಾಡಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯ ಪ್ರತಿ ಮತ್ತು ಇದಕ್ಕೆ ಸಂಬಂಧಿಸಿದಂತೆ ಹಲವು ದಾಖಲೆಗಳು ‘ದಿ ಫೈಲ್’ಗೆ ಲಭ್ಯವಾಗಿವೆ.

ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದ ಸರ್ವೇ ನಂಬರ್ 35 ಮತ್ತು ರಿ ಸ ನಂ. 38ರ ಈ ಜಮೀನಿನಲ್ಲಿ ಕಬ್ಬಿಣದ ಅದಿರಿನ ಮಣ್ಣನ್ನು ದಾಸ್ತಾನು ಮಾಡಿರುವ ಕುರಿತು ಶಿವಕುಮಾರ್ ಮತ್ತಿತರರು ವಲಯ ಅರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ಕಬ್ಬಿಣದ ಅದಿರು ದಾಸ್ತಾನಿನ ಮೇಲೆ ನೈಸರ್ಗಿಕವಾಗಿ ಶ್ರೀಗಂಧ, ತೇಗ, ಬೀಟೆ, ಅಕೇಶಿಯಾ, ನೀಲಗಿರಿ, ಬೇವು ಸೇರಿದಂತೆ ಇನ್ನಿತರ ನೂರಾರು ಮರಗಿಡಗಳು ಬೆಳೆದಿದ್ದವು. ಈ ಮರಗಿಡಗಳನ್ನು ಕಡಿದು ಆ ಜಾಗದಲ್ಲಿ ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿತ್ತು.

ಹಾಗೆಯೇ ಈ ಜಾಗದಲ್ಲಿ ದಾಸ್ತಾನಾಗಿದ್ದ 2.5 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಹರಾಜು ಮಾಡಿಸಿ ಅರಣ್ಯ ಪ್ರದೇಶದಿಂದ ದಾಸ್ತಾನು ಮಾಡಿರುವ ಕಬ್ಬಿಣದ ಅದಿರನ್ನು ಸಾಗಣೆ ಮಾಡಲು ಯತ್ನಿಸಿದ್ದಾರೆ. ಈ ಸರ್ವೇ ನಂಬರ್‌ನಲ್ಲಿ 2.5 ಲಕ್ಷ ಟನ್ ಕಬ್ಬಿಣದ ಅದಿರು ಸಂಗ್ರಹಣೆಯಾಗಿಲ್ಲ. ಅಲ್ಲಿ ಸುಮಾರು 1 ಲಕ್ಷ ಟನ್ ಕಬ್ಬಿಣದ ಅದಿರು ಇತ್ತು. ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡಲು 2.5 ಲಕ್ಷ ಟನ್ ಕಬ್ಬಿಣದ ಅದಿರು ಇದೆ ಎಂದು ಹರಾಜು ಹಾಕಲಾಗಿದೆ ಎಂದು ದೂರಿನಲ್ಲಿ ವಿವರಿಸಿರುವುದು ಗೊತ್ತಾಗಿದೆ. ನಿಯಮಾವಳಿಗಳ ಪ್ರಕಾರ ಖಾಸಗಿ ಜಮೀನು ಮತ್ತು ಸರಕಾರಿ ಜಮೀನುಗಳಲ್ಲಿ ಕಬ್ಬಿಣದ ಅದಿರನ್ನು ಹರಾಜು ಹಾಕುವಾಗ ಅರಣ್ಯ ಇಲಾಖೆಯಿಂದ ಎನ್‌ಒಸಿ ಪಡೆಯಬೇಕು. ಆದರೆ ಈ ಪ್ರಕರಣದಲ್ಲಿ ಎನ್‌ಒಸಿ ಪಡೆದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಈ ದೂರಿನ ಅನ್ವಯ ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಶ್ರೀ ಸಾಯಿ ಬಾಲಾಜಿ ಸ್ಪಾಂಜ್ ಐರನ್ ಇಂಡಿಯಾ ಪ್ರೈ. ಲಿಮಿಟೆಡ್, ಸಾಗಣೆ ಮಾಡುತ್ತಿದ್ದವರ ವಿರುದ್ಧ 2024ರ ಅಕ್ಟೋಬರ್ 15ರಂದು ಅರಣ್ಯ ಮೊಕದ್ದಮೆ ದಾಖಲಿಸಿದ್ದರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X