Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರಿ ಶಾಲೆಗಳತ್ತ ಸೆಳೆಯಲು ದ್ವಿಭಾಷಾ...

ಸರಕಾರಿ ಶಾಲೆಗಳತ್ತ ಸೆಳೆಯಲು ದ್ವಿಭಾಷಾ ಮಾಧ್ಯಮ ಅನುಷ್ಠಾನ

ಜಿ.ಮಹಾಂತೇಶ್ಜಿ.ಮಹಾಂತೇಶ್13 Jan 2024 8:12 AM IST
share
ಸರಕಾರಿ ಶಾಲೆಗಳತ್ತ ಸೆಳೆಯಲು ದ್ವಿಭಾಷಾ ಮಾಧ್ಯಮ ಅನುಷ್ಠಾನ

ಬೆಂಗಳೂರು, ಜ.12: ಸರಕಾರಿ ಶಾಲೆಗಳ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಶುಚಿಗೊಳಿಸುತ್ತಿರುವ ಪ್ರಕರಣಗಳ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯೋಗಿಸಿ ಆ್ಯಪ್ ಮೂಲಕ ಸರಕಾರಿ ಶಾಲೆಗಳ ಶೌಚಾಲಯ ನಿರ್ವಹಿಸಲು ರಾಜ್ಯ ಸರಕಾರವು ಮುಂದಾಗಿದೆ.

ಅದೇ ರೀತಿ ಖಾಸಗಿ ಶಾಲೆಗಳತ್ತ ಒಲವು ತೋರಿಸುವ ಪೋಷಕರನ್ನು ಸರಕಾರಿ ಶಾಲೆಗಳತ್ತ ಸೆಳೆಯಲು ರಾಜ್ಯದ 2,000 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಅನುಷ್ಠಾನಗೊಳಿಸಲು ಚಿಂತಿಸಿದೆ.

2024-25ನೇ ಸಾಲಿನ ಆಯವ್ಯಯದಲ್ಲಿ ಇದನ್ನು ಘೋಷಣೆ ಮಾಡುವುದು ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. ಇದರ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

ಸರಕಾರಿ ಶಾಲೆಗಳ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಶುಚಿಗೊಳಿಸುತ್ತಿರುವ ಕುರಿತು ಬಹಿರಂಗಗೊಂಡಿರುವ ಪ್ರಕರಣಗಳನ್ನೇ ಪ್ರತಿಪಕ್ಷಗಳು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದವು. ಇದರಿಂದ ತೀವ್ರವಾಗಿ ಮುಜುಗರಕ್ಕೊಳಗಾಗಿದ್ದ ಸರಕಾರವು ಇದೀಗ ಕೃತಕ ಬುದ್ಧಿಮತ್ತೆಯ ಆ್ಯಪ್ ಮೂಲಕ ಸರಕಾರಿ ಶಾಲೆಗಳ ಶೌಚಾಲಯಗಳ ನಿರ್ವಹಣೆಯ ಪ್ರಸ್ತಾವನೆಯನ್ನು ಮುನ್ನೆಲೆಗೆ ತಂದಿದೆ.

ರಾಜ್ಯದ ಸರಕಾರಿ ಶಾಲೆಗಳ ಶೌಚಾಲಯ ಒಳಗೊಂಡಂತೆ ಒಟ್ಟಾರೆ ನಿರ್ವಹಣೆಗಾಗಿ 241 ಕೋಟಿ ರೂ. ಅನುದಾನವನ್ನು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲಿದೆ ಎಂದು ಗೊತ್ತಾಗಿದೆ.

ಇನ್ನುಳಿದಂತೆ ಸರಕಾರಿ ಶಾಲಾ ಕಾಲೇಜುಗಳ ಕೊಠಡಿ ಹಾಗೂ ಶೌಚಾಲಯಗಳ ನಿರ್ಮಾಣ, ದುರಸ್ತಿಗಾಗಿ ಒಟ್ಟಾರೆಯಾಗಿ 1,388 ಕೋಟಿ ರೂ. ಅನುದಾನ ಕೋರಿದೆ. ಬೆಂಚ್, ಡೆಸ್ಕ್ ಒಳಗೊಂಡಂತೆ ಪೀಠೋಪಕರಣಗಳಿಗಾಗಿ 417 ಕೋಟಿ ರೂ. ಕೋರಿರುವುದು ಗೊತ್ತಾಗಿದೆ.

ರಾಜ್ಯದ ಸರಕಾರಿ ಪದವಿಪೂರ್ವ ಕಾಲೇಜುಗಳ ಅಂದಾಜು 20,000 ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿ ನೀಡಲು 20 ಕೋಟಿ ರೂ., 74 ಆದರ್ಶ ವಿದ್ಯಾನಿಲಯಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಉನ್ನತೀಕರಣಕ್ಕೆ 74 ಕೋಟಿ ರೂ., 200 ಪದವಿ ಪೂರ್ವ ಕಾಲೇಜುಗಳಲ್ಲಿ ಗಣಕ ವಿಜ್ಞಾನ ಸಂಯೋಜನೆಗೆ 20 ಕೋಟಿ ರೂ. ಅನುದಾನ ಆಯವ್ಯಯದಲ್ಲಿ ಘೋಷಣೆ ಯಾಗಲಿದೆ ಎಂದು ತಿಳಿದು ಬಂದಿದೆ.

ಆಯ್ದ 200 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಹಾಗೂ 100 ಸರಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು 352 ಕೋಟಿ ರೂ.,ರಾಜ್ಯದ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ 10 ಸಾವಿರ ಶಿಕ್ಷಕರು, 2 ಸಾವಿರ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಕುರಿತು ಘೋಷಣೆ ಮಾಡಲಿದೆ. ಇದಕ್ಕಾಗಿ ಒಟ್ಟಾರೆಯಾಗಿ 723 ಕೋಟಿ ರೂ. ಅನುದಾನವನ್ನು ಹಂತ ಹಂತವಾಗಿ ಒದಗಿಸಲಿದೆ ಎಂದು ಪ್ರಸ್ತಾವನೆಯಿಂದ ಗೊತ್ತಾಗಿದೆ.

ಸರಕಾರಿ ಪದವಿಪೂರ್ವ ಕಾಲೇಜುಗಳ ಪ್ರಯೋಗಾಲಯಗಳಿಗೆ 10.30 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯ ಪರಿಕರಗಳನ್ನು ಒದಗಿಸಲಿದೆ. ಮಹತ್ವಾಕಾಂಕ್ಷಿ ತಾಲೂಕುಗಳಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿಗಳ ವಿದ್ಯಾರ್ಥಿಗಳ ಬುನಾದಿ ಸಾಮರ್ಥ್ಯ, ಕಲಿಕಾ ಸಾಮರ್ಥ್ಯ ಸುಧಾರಣೆಗಾಗಿ ಮರು ಸಿಂಚನ ಕಾರ್ಯಕ್ರಮಕ್ಕೆ 10 ಕೋಟಿ ರೂ. ಅನುದಾನ ಘೋಷಿಸಲಿದೆ ಎಂದು ತಿಳಿದು ಬಂದಿದೆ.

ರಾಜ್ಯದ 500 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಗುರುತಿಸಲಿದೆ. ಈ ಶಾಲೆಗಳಿಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಡಿಯಲ್ಲಿ ಪ್ರತೀ ಶಾಲೆಗೆ 3.50 ಕೋಟಿ ರೂ. ಘಟಕ ವೆಚ್ಚ, ಕಲಿಕಾ ಉಪಕರಣಗಳು, ಪ್ರಯೋಗಾಲಯ ಮತ್ತು ಆಟೋಪಕರಣಗಳನ್ನು ಪ್ರತೀ ಶಾಲೆಗೆ ಘಟಕ ವೆಚ್ಚ 1.50 ಕೋಟಿ ರೂ. ಒಟ್ಟಾರೆಯಾಗಿ 5 ಕೋಟಿ ಘಟಕ ವೆಚ್ಚದಂತೆ 500 ಶಾಲೆಗಳಿಗೆ 2,500 ಕೋಟಿ ರೂ. ಅನುದಾನವನ್ನು ಸಿಎಸ್‌ಆರ್ ಫಂಡ್ ಮೂಲಕ ಒದಗಿಸಲು ಘೋಷಣೆ ಮಾಡಲಿದೆ ಎಂದು ಗೊತ್ತಾಗಿದೆ. ಕೆಕೆಜಿಬಿವಿ ವಸತಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ 32 ಕೋಟಿ ರೂ., ಸರಕಾರಿ ಪ್ರೌಢಶಾಲೆಗಳ ಸಬಲೀಕರಣಕ್ಕೆ 121 ಕೋಟಿ ರೂ., ಮಧ್ಯಾಹ್ನದ ಉಪಾಹಾರ ಯೋಜನೆಗೆ 663 ಕೋಟಿ ರೂ., ಅಡುಗೆ ಸಿಬ್ಬಂದಿಗೆ 33.92 ಕೋಟಿ ರೂ. ಇಡುಗಂಟು, ಬೈಸಿಕಲ್ ವಿತರಣೆಗಾಗಿ 325 ಕೋಟಿ ರೂ. ರಾಜ್ಯದ 2,000 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಅನುಷ್ಠಾನಗೊಳಿಸಲು 22.27 ಕೋಟಿ ರೂ. ಅನುದಾನ ಘೋಷಿಸಲಿದೆ ಎಂದು ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X