Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೆಎಎಸ್ ಪರೀಕ್ಷೆ ಕರ್ಮಕಾಂಡ:...

ಕೆಎಎಸ್ ಪರೀಕ್ಷೆ ಕರ್ಮಕಾಂಡ: ಸಂದರ್ಶನದಲ್ಲೂ ಅತ್ಯಧಿಕ ಅಂಕ ನೀಡಲು 3 ಕೋಟಿ ರೂ.ವರೆಗೆ ಲಂಚ ಸಂಗ್ರಹಿಸಿದ ಮಧ್ಯವರ್ತಿಗಳು

ಜಿ. ಮಹಾಂತೇಶ್ಜಿ. ಮಹಾಂತೇಶ್24 Nov 2026 8:20 AM IST
share
ಕೆಎಎಸ್ ಪರೀಕ್ಷೆ ಕರ್ಮಕಾಂಡ: ಸಂದರ್ಶನದಲ್ಲೂ ಅತ್ಯಧಿಕ ಅಂಕ ನೀಡಲು 3 ಕೋಟಿ ರೂ.ವರೆಗೆ ಲಂಚ ಸಂಗ್ರಹಿಸಿದ ಮಧ್ಯವರ್ತಿಗಳು

ಬೆಂಗಳೂರು : ಗ್ರೂಪ್ ಎ ಮತ್ತು ಬಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಕೆಲವು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿಯೂ ಅತ್ಯಧಿಕ ಅಂಕ ನೀಡಲು ಮಧ್ಯವರ್ತಿಗಳು 1.50 ಕೋಟಿ ರೂ.ಯಿಂದ 3 ಕೋಟಿ ರೂ.ವರೆಗೆ ಲಂಚ ಸಂಗ್ರಹಿಸುತ್ತಿದ್ದರು ಎಂಬ ಸ್ಫೋಟಕ ಸಂಗತಿಯನ್ನು ಜಾರಿ ನಿರ್ದೇಶನಾಲಯವು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಹಿಂದಿನ ಹಲವು ರಹಸ್ಯಗಳನ್ನು ಇಂಚಿಂಚಾಗಿ ಹೊರತೆಗೆದಿರುವ ಜಾರಿ ನಿರ್ದೇಶಾಲಯವು ಕೆಎಎಸ್ ಪರೀಕ್ಷೆಯ ಸಂದರ್ಶನದಲ್ಲಿ ನಡೆದಿದ್ದ ಭಾರೀ ಪ್ರಮಾಣದ ಲಂಚಾವತಾರವನ್ನೂ ಬಹಿರಂಗಪಡಿಸಿದೆ.

ಜಾರಿ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯ ಪ್ರತಿಯು "the-file.in'ಗೆ ಲಭ್ಯವಾಗಿದೆ.

ಪ್ರತೀ ಅಭ್ಯರ್ಥಿಯಿಂದ 1.50 ಕೋಟಿಯಿಂದ 3 ಕೋಟಿ ರೂ. ಸಂಗ್ರಹ: ಕೆಎಎಸ್ ಸಂದರ್ಶನದಲ್ಲಿ ಪ್ರತಿ ಅಭ್ಯರ್ಥಿಯಿಂದ ರೂ.1.50 ಕೋಟಿಯಿಂದ 3 ಕೋಟಿ ರೂ.ವರೆಗೆ ಲಂಚ ಸಂಗ್ರಹಿಸುತ್ತಿದ್ದರು. ಶಿವಶಂಕರಪ್ಪಸಾಹುಕಾರ್ ಅವರ ಆಪ್ತ ಸಹವರ್ತಿಯಾಗಿದ್ದ ಎಂದು ಹೇಳಲಾಗಿರುವ ಡಿ.ಎಸ್.ಮ್ಯಾಕ್ಸ್‌ನ

ಎಸ್.ಪಿ.ದಯಾನಂದ್ ಅವರು, ಕೆಪಿಎಸ್ಸಿ ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಖಚಿತವಾಗಿ ಆಯ್ಕೆಯಾಗುವಂತೆ ಮಾಡುವುದಕ್ಕಾಗಿ ಅಥವಾ ಸಂದರ್ಶನದಲ್ಲಿ ಹೆಚ್ಚಿನ ಅಂಕಗಳನ್ನು ಕೊಡಿಸುವ ಉದ್ದೇಶದಿಂದ ಕೆಲವು ಅಭ್ಯರ್ಥಿಗಳನ್ನು ಶಿವಶಂಕರಪ್ಪ ಸಾಹುಕಾರ್ ಅವರಿಗೆ ಪರಿಚಯಿಸುವ ಮತ್ತು ಶಿಫಾರಸು ಮಾಡುವ ಕೆಲಸವನ್ನು ಮಾಡುತ್ತಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಅಂತಹ ಅಭ್ಯರ್ಥಿಗಳ ವಿವರಗಳು ಹಾಗೂ ಅವರಿಂದ ಬೇಡಿಕೆ ಇಡಲಾಗಿದ್ದ ಅಕ್ರಮ ಲಂಚದ ಮೊತ್ತಗಳ ವಿವರಗಳನ್ನು ಜಾರಿ ನಿರ್ದೇಶನಾಲಯವು ದೋಷಾರೋಪ ಪಟ್ಟಿಯಲ್ಲಿ ಒದಗಿಸಿದೆ.

ಕೆಎಎಸ್ ಗ್ರೂಪ್‌ಗಳ ಸಂದರ್ಶನದಲ್ಲಿ ಹೆಚ್ಚಿನ ಅಂಕಗಳನ್ನು ಕೊಡಿಸುವ ಉದ್ದೇಶದಿಂದ ಸಂತೋಷ್ ಅವರು ಒಬ್ಬ ಅಭ್ಯರ್ಥಿಯನ್ನು ಶಿಫಾರಸು ಮಾಡಿದ್ದರು. ಈ ಅಭ್ಯರ್ಥಿಗೆ ಹೆಚ್ಚಿನ ಸಂದರ್ಶನ ಅಂಕಗಳನ್ನು ಕೊಡಿಸಲು ಶಿವಶಂಕರಪ್ಪ ಸಾಹುಕಾರ್ ಅವರು 1.25 ಕೋಟಿ ರೂ. ಮೊತ್ತಕ್ಕೆ ಬೇಡಿಕೆ ಇಟ್ಟಿದ್ದರು. ಎಇಇ ಪರೀಕ್ಷೆಯಲ್ಲಿ ಖಚಿತವಾಗಿ ಆಯ್ಕೆಯಾಗುವಂತೆ ಮಾಡಲು ಬಂಡೇರ್ಪನಹಳ್ಳಿ ಮುತ್ಯಾ ಅವರು ಒಬ್ಬ ಅಭ್ಯರ್ಥಿಯನ್ನು ಶಿಫಾರಸು ಮಾಡಿದ್ದರು. ಈ ಅಭ್ಯರ್ಥಿಯ ಆಯ್ಕೆಗಾಗಿ ಶಿವಶಂಕರಪ್ಪ ಸಾಹುಕಾರ್ ಅವರು ಒಟ್ಟು 30 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇದಕ್ಕೆ ಪೂರಕವಾಗಿ ಡಿ.ಎಸ್.ಮ್ಯಾಕ್ಸ್‌ನ ಎಸ್. ಪಿ.ದಯಾನಂದ್ ಅವರೊಂದಿಗೆ ನಡೆಸಿದ ವಿಚಾರಣೆಯ ಮಾಹಿತಿಯನ್ನೂ ದೋಷಾರೋಪ ಪಟ್ಟಿಯಲ್ಲಿ ನೀಡಿದೆ. ಶಿವಶಂಕರಪ್ಪಸಾಹುಕಾರ್ ಅವರೊಂದಿಗೆ ನಿಮಗೆ ಬೇರೆ ಯಾವುದೇ ವ್ಯವಹಾರಗಳು ಅಥವಾ ಸಂಪರ್ಕಗಳಿವೆಯೇ ಎಂದು ಜಾರಿ ನಿರ್ದೇಶನಾಲಯವು ಪ್ರಶ್ನಿಸಿತ್ತು.

‘ಶಿವಶಂಕರಪ್ಪ ಸಾಹುಕಾರ್ ಅವರು ಕೆಪಿಎಸ್ಸಿಯ ಅಧ್ಯಕ್ಷರಾಗಿದ್ದಾರೆ ಮತ್ತು ಆಯೋಗದ ಮೇಲೆ ಉತ್ತಮ ಹಿಡಿತ ಹೊಂದಿದ್ದಾರೆ ಎಂಬುದು ನನಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ, ಕೆಪಿಎಸ್ಸಿ ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗಿದ್ದ

ವಿವಿಧ ಅಭ್ಯರ್ಥಿಗಳನ್ನು ಅಂತಿಮ ಆಯ್ಕೆಯಲ್ಲಿ ಸಹಾಯ ಮಾಡುವಂತೆ ಅವರ ಬಳಿ ನಾನು ಶಿಫಾರಸು ಮಾಡುತ್ತಿದ್ದೆ,’ ಎಂದು ಹೇಳಿಕೆಯಲ್ಲಿ ಎಸ್.ಪಿ.ದಯಾನಂದ್ ಅವರು ಒಪ್ಪಿಕೊಂಡಿರುವುದು ಹೇಳಿಕೆಯಿಂದ ತಿಳಿದು ಬಂದಿದೆ.

ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯವು ಶೋಧ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ 16 ಪ್ರಶ್ನೆಪತ್ರಿಕೆಗಳ ಕೀ ಉತ್ತರಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಶ್ನೆಪತ್ರಿಕೆಗಳ ಉತ್ತರಗಳು ಕೆಪಿಎಸ್ಸಿ ನಡೆಸಿದ್ದ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಿಸಿದ್ದವು.

ಕೆಎಎಸ್ ಪೂರ್ವಭಾವಿ ಪರೀಕ್ಷೆ, ಸಹಾಯಕ ನಿಯಂತ್ರಕರು, ಮೋಟಾರು ವಾಹನ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಭೂವಿಜ್ಞಾನಿಗಳು, ಗ್ರೂಪ್-ಸಿ ಹುದ್ದೆಗಳು ಸೇರಿದಂತೆ ವಿವಿಧ ಪರೀಕ್ಷೆಗಳು ಸೇರಿದ್ದವು.

ಇದಲ್ಲದೆ ಎಸ್.ಪಿ.ದಯಾನಂದ್ ಅವರು ಖಚಿತ ಆಯ್ಕೆ ಮಾಡಿಸುವ ಉದ್ದೇಶದಿಂದ ಅಭ್ಯರ್ಥಿಗಳನ್ನು ಶಿವಶಂಕರಪ್ಪ ಸಾಹುಕಾರ್ ಅವರಿಗೆ ಶಿಫಾರಸು ಮಾಡುತ್ತಿದ್ದುದಾಗಿ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದ ಒಬ್ಬ ಅಭ್ಯರ್ಥಿಯ ಆಯ್ಕೆಗಾಗಿ ಸಂತೋಷ್ ಎಂಬವರ ಮೂಲಕ 1.25 ಕೋಟಿ ರೂ. ಮೊತ್ತದ ವ್ಯವಹಾರ ನಡೆದಿರುವುದೂ ಸೇರಿದೆ.

<ಎಸ್.ಪಿ.ದಯಾನಂದ್ ಬಳಿ ನಗದು ಹಣ ಇರಿಸಿದ್ದರೇ ಸಾಹುಕಾರ್?: ಎಸ್.ಪಿ.ದಯಾನಂದ್ ಅವರ ಬಳಿ ನಗದು ಹಣವನ್ನು ಇರಿಸುವ ಮೂಲಕ ಶಿವಶಂಕರಪ್ಪ ಸಾಹುಕಾರ್ ಅವರು ಅಪರಾಧದ ಆದಾಯವನ್ನು ನಗದು ರೂಪದಲ್ಲಿ ಹೊಂದಿದ್ದು ಮತ್ತು ಮರೆಮಾಚಿದ್ದರು ಎಂದು ಜಾರಿ ನಿರ್ದೇಶನಾಲಯವು ದೋಷಾರೋಪ ಪಟ್ಟಿಯಲ್ಲಿ ಹೇಳಿದೆ.

Tags

KAS ExamMiddlemenBribesInterviews
share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X