Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಟ್ರಯತ್ಲಾನ್ ಕ್ರೀಡೆಯ ಆಶಾಕಿರಣ ‘ಮಂಡ್ಯದ...

ಟ್ರಯತ್ಲಾನ್ ಕ್ರೀಡೆಯ ಆಶಾಕಿರಣ ‘ಮಂಡ್ಯದ ಭರತ್ ದ್ಯಾವಪ್ಪ’

ವಾರ್ತಾಭಾರತಿವಾರ್ತಾಭಾರತಿ25 Dec 2023 11:43 AM IST
share
ಟ್ರಯತ್ಲಾನ್ ಕ್ರೀಡೆಯ ಆಶಾಕಿರಣ ‘ಮಂಡ್ಯದ ಭರತ್ ದ್ಯಾವಪ್ಪ’

✍️ ಕುಂಟನಹಳ್ಳಿ ಮಲ್ಲೇಶ

ಮಂಡ್ಯ, ಡಿ.25: ಟ್ರಯತ್ಲಾನ್ ಕ್ರೀಡೆಯಲ್ಲಿ ಮಂಡ್ಯ ಜಿಲ್ಲೆಯಿಂದ ಭರವಸೆ ಮೂಡಿಸಿರುವ ಏಕೈಕ ಕ್ರೀಡಾಪಟು ಎಂದರೆ ಅದು ಭರತ್ ದ್ಯಾವಪ್ಪ.

ಭರತ್ ಅವರು ತಾನು ನಂಬಿರುವ ಕ್ರೀಡೆಯಲ್ಲಿಯೇ ಸಾಧನೆ ಮಾಡಬೇಕೆಂದು ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ 3 ಮತ್ತು 4ನೇ ಸ್ಥಾನವನ್ನು ಖಚಿತಪಡಿಸಿಕೊಂಡು ಆತ್ಮವಿಶ್ವಾಸದಿಂದ ಮುನ್ನುಗ್ಗು ತ್ತಿದ್ದಾರೆ.


ಪ್ರಸ್ತುತ ಮಂಡ್ಯದ ಸರಕಾರಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಭರತ್ ಹಲವು ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಹೆಸರು ತಂದಿದ್ದಾರೆ. ಭಾರತೀಯ ಟ್ರಯತ್ಲಾನ್ ಒಕ್ಕೂಟ(ಐಟಿಎಫ್) ಜೂನ್ 2019ರಲ್ಲಿ ನಡೆಸಿದ ಅಕ್ವಾತ್ಲಾನ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ 4ನೇ ಸ್ಥಾನ ತಮ್ಮದಾಗಿಸಿಕೊಳ್ಳುವ ಮೂಲಕ ವಿಶ್ವಾಸದ ಹೆಜ್ಜೆ ಗುರುತು ಮೂಡಿಸಿದರು. 2021ರ ಸೆಪ್ಟಂಬರ್ನಲ್ಲಿ ನಡೆದ ಧನುಷ್ಕೋಡಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಮೂರನೇ ಸ್ಥಾನ ಗಳಿಸಿದ್ದಾರೆ.

2022ರ ಸೆಪ್ಟಂಬರ್ನಲ್ಲಿ ಉದಯಪುರದಲ್ಲಿ ನಡೆದ ಕ್ರೀಡಾಕೂಟದಲ್ಲಿ 3ನೇ ಸ್ಥಾನ ತಮ್ಮದಾಗಿಸಿಕೊಳ್ಳುವ ಮೂಲಕ ತಮ್ಮ ಸಾಧನೆಯನ್ನು ಮತ್ತಷ್ಟು ಖಚಿತಪಡಿಸಿದ ಅವರು, ಎಪ್ರಿಲ್ 2023ರಲ್ಲಿ, ಚಿಕ್ಕಬಳ್ಳಾಪುರ, ಅದೇ ತಿಂಗಳು ತಮಿಳುನಾಡು, ಆಗಸ್ಟ್ನಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರೀಯ ಕೂಟದಲ್ಲಿ ಭಾಗವಹಿಸಿ ಗಮನಾರ್ಹ ಆಟಗಾರ ಎನಿಸಿದ್ದಾರೆ. ಈಚೆಗೆ ಗೋವಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿಯೂ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಈಜು, ಓಟ, ಸೈಕ್ಲಿಂಗ್ ಒಳಗೊಂಡ ಈ ಟ್ರಯತ್ಲಾನ್ ಕ್ರೀಡೆಗೆ ಆರಂಭದಲ್ಲಿ ಚೆನ್ನೈನಲ್ಲಿ ತರಬೇತಿ ಪಡೆದ ಭರತ್, ಈಗ ಈಜಿನ ತರಬೇತಿಯನ್ನು ಮಂಡ್ಯದ ಪ್ರತಿಷ್ಠಿತ ಪಿಇಎಸ್ ಈಜು ಕೊಳದಲ್ಲಿ ಪಡೆಯುತ್ತಿದ್ದಾರೆ.

► ಇದೊಂದು ಅಪ್ಪಟ ದೇಶಿ ಪ್ರತಿಭೆ: ಮಂಡ್ಯ ತಾಲೂಕಿನ ಚಿಕ್ಕಬಳ್ಳಿ ಗ್ರಾಮದ ಸಿ.ಎಂ.ದ್ಯಾವಪ್ಪ ಮತ್ತು ಕೆ.ಆರ್.ರುಕ್ಮಿಣಿ ಅವರ ಮಗನಾಗಿದ್ದು, ತಂದೆ, ತಾಯಿ ಮಗನ ಆಸೆಯನ್ನು ಅರ್ಥಮಾಡಿಕೊಂಡು ಭರತ್ಗೆ ಪ್ರೋತ್ಸಾಹ ನೀಡುತಿದ್ದಾರೆ.


"ಟ್ರಯತ್ಲಾನ್ ಕ್ರೀಡೆಯಲ್ಲಿ ಸಾಧನೆ ಮಾಡುವ ಮಹದಾಸೆ ಹೊಂದಿದ್ದೇನೆ. ಅದರ ಜತೆಗೆ ಶಿಕ್ಷಣವೂ ಬೇಕು. ಆದರೆ, ಕ್ರೀಡೆ ನನ್ನ ಮೊದಲ ಆದ್ಯತೆ. ಈ ಹಾದಿಯಲ್ಲಿ ಯಶಸ್ವಿಯಾಗುತ್ತೇನೆ ಎಂಬ ವಿಶ್ವಾಸವಿದೆ. ನನ್ನ ಆಶಯಕ್ಕೆ ನನ್ನ ತಂದೆ, ತಾಯಿ ನೀಡುತ್ತಿದ್ದಾರೆ ಅವರಿಗೆ ನಾನು ಚಿರಋಣಿ"

-ಭರತ್ ದ್ಯಾವಪ್ಪ, ಕ್ರೀಡಾಪಟು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X