Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿದ್ಯುತ್ ತಂತಿ ತುಳಿದು ಮಹಿಳೆ-ಮಗು ಸಾವು...

ವಿದ್ಯುತ್ ತಂತಿ ತುಳಿದು ಮಹಿಳೆ-ಮಗು ಸಾವು ಪ್ರಕರಣ: ನಿರ್ಲಕ್ಷ್ಯ, ಕರ್ತವ್ಯಲೋಪ ದುರಂತಕ್ಕೆ ಕಾರಣ?

ಜಿ.ಮಹಾಂತೇಶ್ಜಿ.ಮಹಾಂತೇಶ್13 Dec 2023 9:52 AM IST
share
ವಿದ್ಯುತ್ ತಂತಿ ತುಳಿದು ಮಹಿಳೆ-ಮಗು ಸಾವು ಪ್ರಕರಣ: ನಿರ್ಲಕ್ಷ್ಯ, ಕರ್ತವ್ಯಲೋಪ ದುರಂತಕ್ಕೆ ಕಾರಣ?

ಬೆಂಗಳೂರು: ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ದಾರುಣವಾಗಿ ಸಾವಿಗೀಡಾದ ಪ್ರಕರಣದಲ್ಲಿ ದೂರು ಸುರಕ್ಷತಾ ವಿಭಾಗ ಮತ್ತು ಸಹಾಯವಾಣಿಯ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪವೇ ಮೂಲ ಕಾರಣವಾಗಿತ್ತೇ ಎಂಬ ಅಂಶವು ಇದೀಗ ಮುನ್ನೆಲೆಗೆ ಬಂದಿದೆ.

‘ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದು ಬೆಂಕಿ ಬರುತ್ತಿದೆ,’ ಎಂದು ಸುಮಾರು ೦೩.೫೮ ಎಎಂ ರಿಂದ ೩.೫೯ ಎಎಂನಲ್ಲಿ ಗ್ರಾಹಕರು ತಿಳಿಸಿದ್ದರೂ ಸಹ ದೂರು ಸುರಕ್ಷತಾ ವಿಭಾಗದ ಸಿಬ್ಬಂದಿ ಮತ್ತು ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಕ್ರಮ ಕೈಗೊಂಡಿರಲಿಲ್ಲ. ಇವರ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪದಿಂದಾಗಿಯೇ ಈ ಮಾರಣಾಂತಿಕ ವಿದ್ಯುತ್ ಅಪಘಾತ ನಡೆದಿದೆ ಎಂಬ ತೀರ್ಮಾನಕ್ಕೆ ಬೆಸ್ಕಾಂ ಬಂದಿದೆ ಎಂದು ಗೊತ್ತಾಗಿದೆ.

ವಿದ್ಯುತ್ ತಂತಿ ತುಂಡಾಗಲು ಇಲಿ ಕಾರಣ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತದ ಅಧಿಕಾರಿಗಳು ಹೇಳಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ನೀಡಿರುವ ಮತ್ತೊಂದು ಅಭಿಪ್ರಾಯವು ಮುನ್ನೆಲೆಗೆ ಬಂದಿದೆ.

ಇದರ ಪ್ರತಿಯು (FILE;BESCOM/BC-48/GM9(CR/2023/24) ‘the-file.in’ಗೆ ಲಭ್ಯವಾಗಿದೆ. ಬೆಂಗಳೂರು ನಗರದ ಹೊರವಲಯದಲ್ಲಿರುವ ವೈಟ್ಫೀಲ್ಡ್ನಲ್ಲಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಆಕೆಯ ೯ ತಿಂಗಳ ಮಗು ೨೦೨೩ರ ನವೆಂಬರ್೧೯ರಂದು ಸಾವಿಗೀಡಾಗಿದ್ದ ಘಟನೆ ಕುರಿತು ನಾಲ್ಕು ತಂಡಗಳು ತನಿಖೆ ನಡೆಸುತ್ತಿದೆ. ಈ ನಡುವೆಯೇ ಘಟನೆಗೆ ಸಹಾಯಕ ಇಂಜಿನಿಯರ್ ಕೆ ಎಸ್ ರಾಜೇಶ್ ಅವರ ಕರ್ತವ್ಯಲೋಪ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ.

ವಿದ್ಯುತ್ ತಂತಿ ಕಡಿತಗೊಂಡು ನೆಲಕ್ಕೆ ಬಿದ್ದು ಬೆಂಕಿ ಬರುತ್ತಿದೆ ಎಂದು ಗ್ರಾಹಕ ಸೇವಾ ಪ್ರತಿನಿಧಿಗಳು ದೂರು ಸಲ್ಲಿಸಿದ್ದರೂ ಸಹಾಯಕ ಇಂಜಿನಿಯರ್ ರಾಜೇಶ್ ಎಂಬವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬುದನ್ನು ಅಭಿಪ್ರಾಯದಲ್ಲಿ ಉಲ್ಲೇಖಿಸಿರುವುದು ತಿಳಿದು ಬಂದಿದೆ.

ಕರ್ತವ್ಯಲೋಪದ ವಿವರಣೆ: ವಿದ್ಯುತ್ ಅವಘಡದ ಕುರಿತು ೪ ದೂರುಗಳನ್ನು ಗ್ರಾಹಕ ಸೇವಾ ಪ್ರತಿನಿಧಿಗಳು ದಾಖಲು ಮಾಡಿದ್ದರು. ಈ ದೂರು ಸುರಕ್ಷತೆಗೆ ಸಂಬಂಧಪಟ್ಟಿರುತ್ತದೆ. ಗ್ರಾಹಕರು ಬೆವಿಕಂನ 24/7 , 1912 ಸಹಾಯವಾಣಿಗೆ ವಿದ್ಯುತ್ ಅವಘಡದ ಬಗ್ಗೆ ಕರೆ ಮಾಡಿ ದೂರನ್ನು ದಾಖಲು ಮಾಡಿದ್ದರು.

ಈ ದೂರಿನಲ್ಲಿ ಗ್ರಾಹಕರು ಖಚಿತವಾಗಿ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದು ಬೆಂಕಿ ಬರುತ್ತಿದೆ ಎಂದು ತಿಳಿಸಿದ್ದರು. ಸುರಕ್ಷತೆಯ ದೂರುಗಳನ್ನು ನಿರ್ವಹಿಸುವ ಗ್ರಾಹಕ ಸೇವಾ ಪ್ರತಿನಿಧಿಯ ತಂಡದ ನಾಯಕರು, (ಇವರೆಲ್ಲರೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಸಿಬ್ಬಂದಿ) ವ್ಯವಸ್ಥಾಪಕರು ಇದರ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿರುತ್ತಾರೆ ಎಂದು ಅಭಿಪ್ರಾಯದಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.

‘ಆದರೆ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಯು ಬೆವಿಕಂನ ಸರಕಾರಿ ಅಧಿಕಾರಿಯಾಗಿದ್ದು ಸಹಾಯವಾಣಿಯ ರಾತ್ರಿ ಪಾಳಿಯ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಸದರಿ ದೂರಿಗೆ ಸಂಬಂಧಿಸಿದಂತೆ ಸಹಾಯವಾಣಿಯಲ್ಲಿ ದಾಖಲಾದ ದೂರುಗಳ ಕುರಿತು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಕೆ.ಎಸ್.ರಾಜೇಶ್ ಅವರು ಕರ್ತವ್ಯಕ್ಕೆ ಚ್ಯುತಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ,’ ಎಂದು ಅಭಿಪ್ರಾಯದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

ಇವರ ವಿರುದ್ಧ ಬೆವಿಕಂನ ನಿಯಮಾನುಸಾರ ಸಿಡಿಸಿಎ ಅನ್ವಯ ಕ್ರಮ ಕೈಗೊಳ್ಳಬಹುದು ಎಂದು ಅಭಿಪ್ರಾಯವನ್ನು ನೀಡಿದೆ ಎಂದು ಗೊತ್ತಾಗಿದೆ.

ಕೆ ಎಸ್ ರಾಜೇಶ್ ಅವರ ಕರ್ತವ್ಯದ ಪಾಳಿಯ ಅವಧಿಯಲ್ಲಿನ ಸಹಾಯವಾಣಿ ಕುರಿತು ದೈನಂದಿನ ವರದಿ, Schedule interruption ಕುರಿತು ದೂರವಾಣಿ ಮೂಲಕ ಹಲವು ಬಾರಿ ಸಂಪರ್ಕಿಸಲಾಗಿತ್ತು. ಆದರೆ ಈ ವಿಷಯಗಳ ಕುರಿತು ಮಾಹಿತಿಯು ಲಭ್ಯವಿಲ್ಲ ಎಂದು ಬೆಸ್ಕಾಂ ತನ್ನ ಅಭಿಪ್ರಾಯದಲ್ಲಿ ಹೇಳಿರುವುದು ತಿಳಿದು ಬಂದಿದೆ.

ಆಸನದಲ್ಲಿ ಇರಲಿಲ್ಲ: ‘ಸದರಿ ಅಧಿಕಾರಿಯು ರಾತ್ರಿ ಪಾಳಿಯ ಅವಧಿಯಲ್ಲಿ ಸಹಾಯವಾಣಿಯಲ್ಲಿ ದಾಖಲು ಮಾಡಿರುವ ಸಿಸಿ ಕ್ಯಾಮರಾದಲ್ಲಿ ವೀಕ್ಷಿಸಿದಾಗ ಸದರಿ ಅಧಿಕಾರಿಯು ಸಹಾಯವಾಣಿಯಲ್ಲಿ ಕೂಡುವ ಆಸನದಲ್ಲಿ ಹಲವಾರು ಬಾರಿ ಅನುಪಸ್ಥಿತಿಯಲ್ಲಿ ಇರುವುದು ಕಂಡುಬಂದಿರುತ್ತದೆ,’ ಎಂದೂ ವಿವರಿಸಿರುವುದು ಗೊತ್ತಾಗಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ (ಬೆಸ್ಕಾಂ) ಒಂದು ತಂಡ, ಪೊಲೀಸರ ಇನ್ನೊಂದು ತಂಡ, ರಾಜ್ಯ ವಿದ್ಯುತ್ ಇಲಾಖೆಯಿಂದ ಮೂರನೇ ತಂಡ ಮತ್ತು ಸ್ವತಂತ್ರ ಸಂಸ್ಥೆಯಾಗಿರುವ ನಾಲ್ಕನೇ ತಂಡ ಸಾವಿನ ತನಿಖೆ ನಡೆಸಲಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X