Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಷ್ಟ್ರಮಟ್ಟದ ಫುಟ್ಬಾಲ್...

ರಾಷ್ಟ್ರಮಟ್ಟದ ಫುಟ್ಬಾಲ್ ಚಾಂಪಿಯನ್‌ಶಿಪ್: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಿನು ಎಚ್.ಆರ್.

ಎರಡು ಬಾರಿ ಯೂನಿವರ್ಸಿಟಿ ಪ್ರತಿನಿಧಿಸಿದ ಆಟಗಾರ

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ14 Nov 2023 12:52 PM IST
share
ರಾಷ್ಟ್ರಮಟ್ಟದ ಫುಟ್ಬಾಲ್ ಚಾಂಪಿಯನ್‌ಶಿಪ್: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಿನು ಎಚ್.ಆರ್.
ಬೆಂಗಳೂರಿನ ವಿದ್ಯಾನಗರದಲ್ಲಿರುವ ಕ್ರೀಡಾ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವಾಗ ಮೊದಲ ಬಾರಿ ವಿನು ಅವರು ಕರ್ನಾಟಕ ತಂಡವನ್ನು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಿದ್ದರು. 2017ರ ಡಿಸೆಂಬರ್ 11 ರಿಂದ 15ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 63ನೇ ನ್ಯಾಶನಲ್ ಸ್ಕೂಲ್ ಫುಟ್ಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವಾಗ, 2018ರಲ್ಲಿ ರಾಜಸ್ಥಾನದಲ್ಲಿ ನ.15 ರಿಂದ 19ರವರೆಗೆ ನಡೆದ 64ನೇ ರಾಷ್ಟ್ರೀಯ ಸ್ಕೂಲ್ ಫುಟ್ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ತಂಡದ ಪರವಾಗಿ ಆಡಿದ್ದರು. ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವಾಗ ಅಂಡಮಾನ್ ನಿಕೋಬಾರ್‌ನಲ್ಲಿ 2019ರ ನ.27 ರಿಂದ ಡಿ.6ರವರೆಗೆ ನಡೆದ 65ನೇ ರಾಷ್ಟ್ರೀಯ ಸ್ಕೂಲ್ ಫುಟ್ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದರು. ಜಿಲ್ಲಾ ಹಾಗೂ ರಾಜ್ಯ ಮಟ್ಟದ ಶಾಲಾ ಹಾಗೂ ಕಾಲೇಜು ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿನು ಅವರು ತಮ್ಮ ಕಾಲ್ಚೆಂಡು ಪ್ರತಿಭೆಯ ಮೂಲಕ ಸತತ ಮೂರು ವರ್ಷಗಳ ಕಾಲ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮಡಿಕೇರಿ, ನ.13: ಕೊಡಗು ಜಿಲ್ಲೆಯ ಫುಟ್ಬಾಲ್ ಆಟಗಾರ ಪಾಲೆಬೆಟ್ಟ ಗ್ರಾಮದ ವಿನು ಎಚ್.ಆರ್. ಸತತ ಮೂರು ಬಾರಿ ಕರ್ನಾಟಕ ತಂಡವನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ.

ವಿನು ಎಚ್.ಆರ್. ಪ್ರಸ್ತುತ ಜಿಲ್ಲೆಯ ಪ್ರಖ್ಯಾತ ತಂಡವಾದ ನೆಹರೂ ಎಫ್.ಸಿ. ಪಾಲಿಬೆಟ್ಟ ತಂಡದ ಭರವಸೆಯ ಡಿಫೆಂಡರ್ ಆಗಿ ರಾಜ್ಯ ಹಾಗೂ ಹಲವಾರು ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯನ್ನು ಆಡಿ ಪ್ರಶಸ್ತಿ ಗೆದ್ದಿದ್ದಾರೆ. ಬೆಂಗಳೂರಿನ ನಡೆದ ಸೂಪರ್ ಡಿವಿಷನ್ ಪಂದ್ಯಾವಳಿಯಲ್ಲಿ ಕೊಡಗು ಎಫ್.ಸಿ. ತಂಡವನ್ನು ಕೂಡ ಪ್ರತಿನಿಧಿಸಿದ್ದಾರೆ. ಚಿಕ್ಕ ವಯಸ್ಸಿನಿಂದಲೇ ಫುಟ್ಬಾಲ್‌ನಲ್ಲಿ ಆಸಕ್ತಿ ಬೆಳೆಸಿಕೊಂಡಿರುವ ವಿನು ಎಚ್.ಆರ್. ತನ್ನ ವಿಶೇಷ ಶೈಲಿಯ ಆಟದ ಮೂಲಕ ಜಿಲ್ಲೆಯ ಜನರ ಮನಸ್ಸು ಗೆದ್ದಿದ್ದಾರೆ. ಎದುರಾಳಿ ತಂಡದ ಆಟಗಾರರು ಹಾಗೂ ತೀರ್ಪುಗಾರರೊಂದಿಗೆ ಕ್ರೀಡಾ ಮನೋಭಾವದಿಂದ ವರ್ತಿಸುವ ವಿನು ಅವರು ತನ್ನ ಶಿಸ್ತುಬದ್ಧ ಆಟದ ಮೂಲಕ ಜಿಲ್ಲೆಯ ಬೆಳೆದು ಬರುತ್ತಿರುವ ಯುವ ಫುಟ್ಬಾಲ್ ಆಟಗಾರರಿಗೆ ಮಾದರಿಯಾಗಿದ್ದಾರೆ.

ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ರಾಜ ಎಚ್.ವಿ ಹಾಗೂ ಲತಾ.ಆರ್ ಅವರ ಮಗನಾದ ವಿನು ಎಚ್.ಆರ್. ತನ್ನ ಪದವಿ ವ್ಯಾಸಂಗವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸೇಕ್ರೆಡ್ ಹಾರ್ಟ್ ಮಡಂತ್ಯಾರ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. ಪದವಿ ಶಿಕ್ಷಣ ಪಡೆಯುವಾಗ 2021 ಹಾಗೂ 2022ರಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ತಂಡದ ಪರವಾಗಿ ಆಡಿದ್ದಾರೆ.

ಅದಲ್ಲದೆ ಅಂತರ್ ಕಾಲೇಜು ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿ ಗೆಲ್ಲುವುದರ ಮೂಲಕ ಅತ್ಯುತ್ತಮ ಡಿಫೆಂಡರ್ ಪ್ರಶಸ್ತಿಗೂ

ಭಾಜನರಾಗಿದ್ದಾರೆ. 21 ವರ್ಷದ ಯುವ ಫುಟ್ಬಾಲ್ ಆಟಗಾರ ವಿನು ಅವರಿಗೆ ಕೊಡಗು ಜಿಲ್ಲೆಯ ಫುಟ್ಬಾಲ್ ಪ್ರೇಮಿಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಿ, ಬೆಳೆದು ಬರುತ್ತಿರುವ ಫುಟ್ಬಾಲ್ ಆಟಗಾರರ ಬೆಳವಣಿಗೆಗೆ ವೇದಿಕೆ ಒದಗಿಸಬೇಕಾಗಿದೆ.

2017 ರಿಂದ ಸತತವಾಗಿ ಮೂರು ವರ್ಷಗಳ ಕಾಲ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದೇನೆ ಹಾಗೂ ಎರಡು ಬಾರಿ ಮಂಗಳೂರು ವಿಶ್ವ ವಿದ್ಯಾನಿಲಯ ತಂಡದ ಪರವಾಗಿ ಆಡಿದ್ದೇನೆ. ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ವಿವಿಧ ತಂಡದ ಪರವಾಗಿ ಆಡಿ ಪ್ರಶಸ್ತಿ ಗೆದ್ದಿದ್ದೇನೆ. ಇದೀಗ ಕೊಡಗು ಜಿಲ್ಲೆಯ ಪಾಲಿಬೆಟ್ಟದ ನೆಹರೂ ಎಫ್.ಸಿ. ತಂಡದ ಪರವಾಗಿ ಆಡುತ್ತಿದ್ದೇನೆ.

- ವಿನು ಎಚ್.ಆರ್.

ರಾಷ್ಟ್ರ ಮಟ್ಟದ ಫುಟ್ಬಾಲ್ ಆಟಗಾರ.

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X