Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೊಸ ಯೋಜನೆಗಳಿಗಾಗಿ ಗ್ರಾಮೀಣಾಭಿವೃದ್ಧಿ,...

ಹೊಸ ಯೋಜನೆಗಳಿಗಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಿಂದ 37,621.96 ಕೋಟಿ ರೂ.ಗಳ ಬೇಡಿಕೆ

ಜಿ.ಮಹಾಂತೇಶ್ಜಿ.ಮಹಾಂತೇಶ್8 Feb 2024 11:22 AM IST
share
ಹೊಸ ಯೋಜನೆಗಳಿಗಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಿಂದ 37,621.96 ಕೋಟಿ ರೂ.ಗಳ ಬೇಡಿಕೆ

ಬೆಂಗಳೂರು: ರಾಜ್ಯ, ಜಿಲ್ಲಾ ವಲಯದ ಅಭಿವೃದ್ಧಿ, ವೇತನ ಮತ್ತು ಹೊಸ ಯೋಜನೆಗಳಿಗಾಗಿ 2024-25ನೇ ಸಾಲಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ಒಟ್ಟಾರೆ 37,621.96 ಕೋಟಿ ರೂ.ಗಳ ಬೇಡಿಕೆಯನ್ನು ಮಂಡಿಸಿದೆ.

2023-24ನೇ ಸಾಲಿನಲ್ಲಿ ಈ ವಲಯಗಳಿಗೆ ಒಟ್ಟಾರೆ 17,904.06 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. 2024-25ನೇ ಸಾಲಿನಲ್ಲಿ 19,717.9 ಕೋಟಿ ರೂ. ಹೆಚ್ಚುವರಿ ಬೇಡಿಕೆ ಪಟ್ಟಿಯನ್ನು ಸರಕಾರದ ಮುಂದಿರಿಸಿದೆ. ಇದರಲ್ಲಿ ಜಲಧಾರೆ, ಜಲಜೀವನ್ ಮಿಷನ್, ಗ್ರಾಮೀಣ ನೀರು ಸರಬರಾಜು, ಗ್ರಾಮ ಸಡಕ್, ಕೆರೆಗಳ ಪುನರುಜ್ಜೀವನ ಸೇರಿದಂತೆ ಇನ್ನಿತರ ಮಹತ್ವಾಕಾಂಕ್ಷೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಗೆ 22,647.04 ಕೋಟಿ ರೂ. ಅನುದಾನ ಬೇಕಿದೆ.

5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಿರುವ ರಾಜ್ಯ ಸರಕಾರವು ಇಲಾಖೆಗಳು ಹೊಸ ಯೋಜನೆಗಳನ್ನೂ ಒಳಗೊಂಡಂತೆ ಚಾಲ್ತಿಯಲ್ಲಿರುವ ಕಾರ್ಯಕ್ರಮಗಳನ್ನು ಮುಂದುವರಿಸಲು ಸಲ್ಲಿಸುತ್ತಿರುವ ಅಂದಾಜು ಪ್ರಸ್ತಾವ ಕಂಡು ಸರಕಾರವು ದಿಗಿಲು ಬಿದ್ದಿದೆ.

2024-25ನೇ ಸಾಲಿನಲ್ಲಿ 37,621.96 ಕೋಟಿ ರೂ. ಅನುದಾನ ಒದಗಿಸಬೇಕು ಎಂದು ಇಲಾಖೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವೆ ಸಲ್ಲಿಸಿದೆ. ಇದರ ಪ್ರತಿಯು ‘the-file,in’ಗೆ ಲಭ್ಯವಾಗಿದೆ.

2023-24ನೇ ಸಾಲಿನಲ್ಲಿ ಒಟ್ಟು 27 ಕಾರ್ಯಕ್ರಮಗಳಿಗೆ 7,370.93 ಕೋಟಿ ರೂ. ಒದಗಿಸಲಾಗಿತ್ತು. ಈ ಪೈಕಿ ಇದುವರೆಗೂ 6,211.20 ಕೋಟಿ ರೂ. ವೆಚ್ಚವಾಗಿದೆ. ಈ ಕಾರ್ಯಕ್ರಮಗಳಿಗೆ ಆರ್ಥಿಕ ಇಲಾಖೆಯು 5,321.06ಕೋಟಿ ರೂ.ಗಳನ್ನು ಸೂಚಿಸಿತ್ತು. ಆದರೆ 890.14 ಕೋಟಿ ರೂ. ಹೆಚ್ಚುವರಿಯಾಗಿ ವೆಚ್ಚ ಮಾಡಿದೆ. ಅಲ್ಲದೇ 17,325.98 ಕೋಟಿ ರೂ. ಹೆಚ್ಚುವರಿ ಸೇರಿ 2024-25ನೇ ಸಾಲಿಗೆ ಒಟ್ಟಾರೆ 22,647.04 ಕೋಟಿ ರೂ. ಒದಗಿಸಬೇಕು ಎಂದು ಪ್ರಸ್ತಾವ ಸಲ್ಲಿಸಿದೆ.

ಜಿಲ್ಲಾ ವಲಯಗಳಲ್ಲಿರುವ 19 ಯೋಜನೆಗಳಿಗೆ 2023-24ನೇ ಸಾಲಿನಲ್ಲಿ 7,693.81 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ಈ ಪೈಕಿ ಇದುವರೆಗೆ 3,843.83 ಕೋಟಿ ರೂ. ವೆಚ್ಚವಾಗಿದೆ. ಈ ವಲಯದ ಕಾರ್ಯಕ್ರಮಗಳಿಗೆ ಹೆಚ್ಚುವರಿ 2,467.89 ಕೋಟಿ ರೂ. ಸೇರಿ ಒಟ್ಟಾರೆ 10,161.70 ಕೋಟಿ ರೂ. ಒದಗಿಸಬೇಕು ಎಂದು ಕೋರಿದೆ.

ಸಚಿವರು, ಶಾಸಕರು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ರಸ್ತೆ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಸಲ್ಲಿಸಿರುವ ಕೋರಿಕೆ ಈಡೇರಿಸಲು ಸರಕಾರದ ಬಳಿ 245.37 ಕೋಟಿ ರೂ. ಅನುದಾನವಿಲ್ಲ ಎಂದ ಇಲಾಖೆ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿರುವ ಬೆನ್ನಲ್ಲೇ ರಾಜ್ಯ ವಲಯಕ್ಕೆ ಕೋರಿರುವ ಅನುದಾನ ಒದಗಿಸದೇ ಇದ್ದಲ್ಲಿ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನೇ ಅರ್ಧಕ್ಕೆ ನಿಲ್ಲಿಸಬೇಕಾದ ಸ್ಥಿತಿಯೂ ಎದುರಾಗಬಹುದು ಎಂದು ಹೇಳಲಾಗುತ್ತಿದೆ.

ರಾಜ್ಯದ ಎಲ್ಲಾ ಗ್ರಾಮೀಣ ಮನೆಗಳ ನಳ ಸಂಪರ್ಕ ಒದಗಿಸುವ ಗುರಿ ತಲುಪಲು ಒಟ್ಟಾರೆ 73,434.40 ಕೋಟಿ ರೂ. ಅವಶ್ಯಕತೆ ಇದೆ. 2024-25ನೇ ಸಾಲಿನಲ್ಲಿ ಒಟ್ಟು 14,300 ಕೋಟಿ ರೂ. ಅಗತ್ಯವಿದೆ. ಈ ಪೈಕಿ ಕೇಂದ್ರ ಸರಕಾರದ ಪಾಲು 8,800 ಕೋಟಿ ರೂ., ರಾಜ್ಯದ ಪಾಲು 5,500 ಕೋಟಿ ರೂ. ಒದಗಿಸಬೇಕಿದೆ ಎಂದು ಪ್ರಸ್ತಾವದಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಜಲಧಾರೆ ಒಳಗೊಂಡಂತೆ ಗ್ರಾಮೀಣ ನೀರು ಸರಬರಾಜು ಯೋಜನೆ (ಲೆಕ್ಕ ಶೀರ್ಷಿಕೆ; 4215-01-102-2-01) ಅಡಿಯಲ್ಲಿ 300 ಕೋಟಿ ರೂ. ನೀಡಿದ್ದರೂ ಇದುವರೆಗೆ ಕೇವಲ 15.39 ಕೋಟಿಯಷ್ಟೇ ವೆಚ್ಚವಾಗಿದೆ. ಆದರೂ 2024-25ನೇ ಸಾಲಿಗೆ ಹೆಚ್ಚುವರಿ 185 ಕೋಟಿ ರೂ. ಸೇರಿದಂತೆ ಒಟ್ಟಾರೆ 485 ಕೋಟಿ ರೂ. ಅವಶ್ಯಕತೆ ಇದೆ ಎಂದು ಅಂದಾಜಿಸಿದೆ.

ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಜಲಜೀವನ್ ಮಿಷನ್ಗೆ ಕೇಂದ್ರದ ಪಾಲು (ಗ್ರಾಮೀಣ ಕುಡಿಯುವ ನೀರು) 2023-24ರಲ್ಲಿ 1,500 ಕೋಟಿ ರೂ. ಮತ್ತು ರಾಜ್ಯದ ಪಾಲು 3,233.76 ಕೋಟಿ ರೂ. ಅಂದಾಜಿಸಲಾಗಿತ್ತು. ಈ ಪೈಕಿ 5,213.06 ಕೋಟಿ ರೂ. ವೆಚ್ಚವಾಗಿದೆ. ಹಿಂದಿನ ವರ್ಷದ ಅಂದಾಜಿಗಿಂತ ಹೆಚ್ಚುವರಿಯಾಗಿ 3,000 ಕೋಟಿ ರೂ. ಒದಗಿಸಬೇಕು ಎಂದು ಪ್ರಸ್ತಾವದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

ಗ್ರಾಮೀಣ ನೀರು ಸರಬರಾಜು ಯೋಜನೆಗಳು ಮತ್ತು ಕೊಳವೆ ಬಾವಿಗಳ ಯೋಜನೆಗಳ ನಿರ್ವಹಣೆಗೆ ಹಿಂದಿನ ಸಾಲಿನಲ್ಲಿ ನೀಡಿದ್ದ 250 ಕೋಟಿ ರು.ನಲ್ಲಿ 225.62 ಕೋಟಿ ರೂ. ವೆಚ್ಚವಾಗಿದೆ. ಹೀಗಾಗಿ ಬಾಕಿ ಕಾಮಗಾರಿಗಳನ್ನು ಪೂರೈಸಲು 2024-25ನೇ ಸಾಲಿನಲ್ಲಿ 15 ಕೋಟಿ ರೂ. ಹೆಚ್ಚುವರಿ ಸೇರಿದಂತೆ ಒಟ್ಟಾರೆ 715 ಕೋಟಿ ರೂ. ಅವಶ್ಯಕತೆ ಇದೆ ಎಂದು ಹೇಳಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 2020-21, 2021-22, 2022-23ರಲ್ಲಿ ಒಟ್ಟಾರೆ 3,330.30 ಕೋಟಿ ರೂ.ಬಿಡುಗಡೆಯಾಗಿತ್ತು. ಉಳಿದ ಮೊತ್ತಕ್ಕೆ ಹೆಚ್ಚುವರಿ ಜಿಎಸ್ಟಿ ಮೊತ್ತ ಶೇ.6ರಷ್ಟು ಒಳಗೊಂಡಂತೆ ಒಟ್ಟಾರೆ 350 ಕೋಟಿ ರೂ. ಅವಶ್ಯಕತೆ ಇದೆ.

ಇದೇ ಯೋಜನೆಯಡಿ ರಸ್ತೆ ನಿರ್ವಹಣೆಗಾಗಿ 2023-24ನೇ ಸಾಲಿನಲ್ಲಿ 100 ಕೋಟಿ ರೂ. ನಿಗದಿಪಡಿಸಿತ್ತು. ಈ ಪೈಕಿ ಬಿಡಿಗಾಸನ್ನೂ ನೀಡಿಲ್ಲ. 2024-25ನೇ ಸಾಲಿನಲ್ಲಿ 50 ಕೋಟಿ ರೂ. ಕೋರಿದೆ. ಅದೇ ರೀತಿ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನಕ್ಕೆ ಕೇಂದ್ರದ ಪಾಲಿನಲ್ಲಿ ಹೆಚ್ಚುವರಿಯಾಗಿ 76 ಕೋಟಿ ರೂ. ಸೇರಿ ಒಟ್ಟಾರೆ 96 ಕೋಟಿ ರೂ. ಬೇಕಿದೆ. ಇದೇ ಯೋಜನೆಗೆ ರಾಜ್ಯದ ಪಾಲಿನ ರೂಪದಲ್ಲಿ 54 ಕೋಟಿ ರೂ. ಹೆಚ್ಚುವರಿ ಸೇರಿದಂತೆ ಒಟ್ಟಾರೆ 64 ಕೋಟಿ ರೂ. ಅನುದಾನ ನಿಗದಿಪಡಿಸಬಹುದು ಎಂದು ಹೇಳಿದೆ.

ನಮ್ಮ ಗ್ರಾಮ ನಮ್ಮರಸ್ತೆ ಯೋಜನೆ, ಇತರ ಗ್ರಾಮೀಣ ರಸ್ತೆಗಳ ಯೋಜನೆಗಳಿಗಾಗಿ ಹೆಚ್ಚುವರಿ 275 ಕೋಟಿ ರೂ. ಸೇರಿ 2024-25ನೇ ಸಾಲಿನಲ್ಲಿ ಒಟ್ಟಾರೆ 425 ಕೋಟಿ ರೂ. ಬೇಕು. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಕೆರೆಗಳ ಜೀರ್ಣೋದ್ಧಾರ ಮತ್ತು ಪುನರುಜ್ಜೀವನಕ್ಕಾಗಿ ಹೆಚ್ಚುವರಿ 100 ಕೋಟಿ ರೂ. ಸೇರಿ ಒಟ್ಟಾರೆ 150 ಕೋಟಿ ರೂ. ಬೇಕಿದೆ.

ಗ್ರಾಮೀಣ ರಸ್ತೆಗಳಿಗಾಗಿ ಕಳೆದ 5 ವರ್ಷಗಳಲ್ಲಿ ಮುಖ್ಯಮಂತ್ರಿಯ ವಿಶೇಷ ಮಂಜೂರಾತಿ, ಮಳೆ ಪರಿಹಾರ ಕಾರ್ಯಕ್ರಮ ಮತ್ತು ಗ್ರಾಮೀಣ ರಸ್ತೆಗಳು ಕಾರ್ಯಕ್ರಮದಡಿ 10,505.02 ಕೋಟಿ ರೂ. ಮಂಜೂರಾತಿ ದೊರೆತಿದೆ. ಈ ಪೈಕಿ ಇದುವರೆಗೂ 5,543.82 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನೂ 4,961.20 ಕೋಟಿ ರೂ. ಬಿಡುಗಡೆಗೆ ಬಾಕಿ ಇದೆ. ಇದನ್ನು 2024-25ನೇ ಸಾಲಿನಲ್ಲಿ ಬಿಡುಗಡೆ ಮಾಡಬೇಕು ಎಂದು ಕೋರಿಕೆ ಸಲ್ಲಿಸಿರುವುದು ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X