Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪೇಟಿಎಂ ಎಂದರೆ ‘ಪೇ ಟು ಮೋದಿ’ ಎಂದಿದ್ದ...

ಪೇಟಿಎಂ ಎಂದರೆ ‘ಪೇ ಟು ಮೋದಿ’ ಎಂದಿದ್ದ ವೀಡಿಯೊ ಮತ್ತೆ ಮುನ್ನೆಲೆಗೆ

UPIಗೆ ಶುಲ್ಕದ ಕುರಿತು ಹತ್ತು ವರ್ಷದ ಹಿಂದೆಯೇ ರಾಹುಲ್ ಗಾಂಧಿ ಎಚ್ಚರಿಸಿದ್ದರೇ?

ವಾರ್ತಾಭಾರತಿವಾರ್ತಾಭಾರತಿ16 Sept 2026 11:51 PM IST
share
ಪೇಟಿಎಂ ಎಂದರೆ ‘ಪೇ ಟು ಮೋದಿ’ ಎಂದಿದ್ದ ವೀಡಿಯೊ ಮತ್ತೆ ಮುನ್ನೆಲೆಗೆ

ಹೊಸದಿಲ್ಲಿ: 2 ಸಾವಿರ ರೂ.ಗಳ ಮೇಲಿನ UPI ಪಾವತಿಗಳಿಗೆ ಶುಲ್ಕ ವಿಧಿಸುವ ಸರಕಾರದ ಕ್ರಮದ ಬಗ್ಗೆ ವಿರೋಧಗಳು ವ್ಯಕ್ತವಾಗುತ್ತಿರುವುದರ ನಡುವೆಯೇ, 2016ರಲ್ಲಿ UPI ಪಾವತಿಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ಮತ್ತೆ ಮುನ್ನೆಲೆಗೆ ಬಂದಿವೆ.

2016ರ ಡಿಸೆಂಬರ್ 8ರಂದು ರಾಹುಲ್ ಗಾಂಧಿ, ನಗದುರಹಿತ ಆರ್ಥಿಕತೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ವೇಳೆ “PayTM means Pay To Modi” ಎಂದು ಹೇಳಿದ್ದರು. ನೋಟು ಅಮಾನ್ಯೀಕರಣದಿಂದ ಕೆಲವು ಜನರು ಮತ್ತು ಸಂಸ್ಥೆಗಳು ಹೆಚ್ಚಿನ ಲಾಭ ಪಡೆಯಲಿವೆ ಎಂದು ಆರೋಪಿಸಿದ್ದರು. ಅದಾಗಿ, 10 ವರ್ಷಗಳ ಬಳಿಕ, ಇದೀಗ ಕೇಂದ್ರ ಸರಕಾರವು UPI ವಹಿವಾಟುಗಳಿಗೆ ಶುಲ್ಕ ವಿಧಿಸಿರುವುದು ರಾಹುಲ್ ಗಾಂಧಿ ಅವರು 10 ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಸಾಬೀತು ಮಾಡಿದೆ ಎಂದು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಈ ಹೇಳಿಕೆಯ ಜೊತೆಗೇ ನೆಟ್ಟಿಗರು 2016ರ ನವೆಂಬರ್ ನ ಒಂದು ಬೆಳವಣಿಗೆಯನ್ನೂ ನೆನಪಿಸುತ್ತಿದ್ದಾರೆ. ನೋಟು ಅಮಾನ್ಯೀಕರಣ ಘೋಷಣೆಯ ಮರುದಿನ ಪತ್ರಿಕೆಗಳ ಮುಖಪುಟಗಳಲ್ಲಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೂರ್ಣಪುಟ ಜಾಹೀರಾತನ್ನು ಪೇಟಿಎಂ ಪ್ರಕಟಿಸಿತ್ತು. ಜಾಹೀರಾತಿನಲ್ಲಿ ನೋಟು ಅಮಾನ್ಯೀಕರಣದ ನಿರ್ಧಾರವನ್ನು Paytm ಅಭಿನಂದಿಸಿತ್ತು. Business Standard ವರದಿ ಪ್ರಕಾರ, ಜಾಹೀರಾತಿನ ಬಳಿಕ Paytmನ ವಹಿವಾಟುಗಳಲ್ಲಿ ತೀವ್ರ ಏರಿಕೆ ಕಂಡುಬಂದಿತ್ತು.

ಈ ಹಳೆಯ ಘಟನೆಗಳನ್ನು ಈಗಿನ UPI ಶುಲ್ಕ ಚರ್ಚೆಯೊಂದಿಗೆ ಜೋಡಿಸಿರುವ ಹಲವು ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಹಲವರು ಸಾಮಾಜಿಕ ಜಾಲತಾಣಗಳಲ್ಲಿ, “2016ರಲ್ಲಿ ರಾಹುಲ್ ಗಾಂಧಿ ಹೇಳಿದ್ದ Pay To Modi ಮಾತು ಈಗ ಅರ್ಥವಾಗುತ್ತಿದೆ” ಎಂಬ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ರಾಹುಲ್ ಗಾಂಧಿಯನ್ನು ರಾಜಕೀಯದ ನಾಸ್ಟ್ರಡಾಮಸ್ (Nostradamus) ಎಂದು ವ್ಯಂಗ್ಯಾತ್ಮಕವಾಗಿ ಕರೆದಿದ್ದಾರೆ. ಇನ್ನೂ ಕೆಲವರು, ರಾಹುಲ್ ಗಾಂಧಿಯವರು ಹಿಂದೆ ನೀಡಿದ್ದ ಹಲವು ಎಚ್ಚರಿಕೆಗಳನ್ನು ನೆನಪಿಸಿಕೊಂಡು, ಅವರಿಗೆ ರಾಜಕೀಯ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

►ಕೋವಿಡ್ ಸಂದರ್ಭದ ‘ಎಚ್ಚರಿಕೆ’ ನೆನಪಿಸಿದ ನೆಟ್ಟಿಗರು

COVID-19 ಮತ್ತು ಆರ್ಥಿಕತೆಯ ಕುರಿತ ರಾಹುಲ್ ಗಾಂಧಿ ಅವರ ಎಚ್ಚರಿಕೆಗಳೂ ಈ ಹಿಂದೆ ಚರ್ಚೆಯಾಗಿದ್ದವು.

2020ರ ಫೆಬ್ರವರಿ 12ರಂದು, ಭಾರತದಲ್ಲಿ ಕೇವಲ ಮೂರು ಕೋವಿಡ್ ಪ್ರಕರಣಗಳು ದಾಖಲಾಗಿದ್ದ ಸಂದರ್ಭದಲ್ಲಿ, ರಾಹುಲ್ ಗಾಂಧಿ ಕೊರೊನಾ ವೈರಸ್ ಜನರು ಮತ್ತು ಆರ್ಥಿಕತೆಗೆ ಅತ್ಯಂತ ಗಂಭೀರ ಅಪಾಯ ಎಂದು ಎಚ್ಚರಿಸಿದ್ದರು. ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ ಒತ್ತಾಯಿಸಿದ್ದರು.

ಮಾರ್ಚ್ 17, 2020ರಂದು ಅವರು ಇನ್ನಷ್ಟು ಸ್ಪಷ್ಟವಾಗಿ “ಆರ್ಥಿಕ ಸುನಾಮಿ” ಬರುತ್ತಿದೆ ಎಂದು ಎಚ್ಚರಿಸಿದ್ದರು. ಕೋವಿಡ್ನ ಆರೋಗ್ಯ ಪರಿಣಾಮಗಳ ಜೊತೆಗೆ ಆರ್ಥಿಕ ಹಾನಿಗೂ ದೇಶ ಸಿದ್ಧವಾಗಬೇಕು; ಇಲ್ಲದಿದ್ದರೆ ಮುಂದಿನ ತಿಂಗಳುಗಳಲ್ಲಿ ಜನರು ತೀವ್ರ ಸಂಕಷ್ಟ ಎದುರಿಸಲಿದ್ದಾರೆ ಎಂದು ಅವರು ಹೇಳಿದ್ದರು. ಆ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು “ರಾಜಕೀಯ ಪಪ್ಪು” ಎಂದು ಬಿಜೆಪಿ ಹಾಗೂ ಬಲಪಂಥೀಯ ಟ್ರೋಲ್ ಪಡೆಗಳು ಮೂದಲಿಸುತ್ತಿದ್ದವು. ಆದರೆ, ರಾಹುಲ್ ಗಾಂಧಿ ನೀಡಿದ್ದ ಎಚ್ಚರಿಕೆಯಂತೆಯೇ ಕೊರೊನಾ ದೇಶದ ಆರ್ಥಿಕ, ಆರೋಗ್ಯ ಕ್ಷೇತ್ರಕ್ಕೆ ಬಹುದೊಡ್ಡ ಹೊಡೆತವನ್ನು ನೀಡಿತ್ತು.

Tags

Paytm
share
ವಾರ್ತಾಭಾರತಿ
ವಾರ್ತಾಭಾರತಿ
Next Story
X