Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಶೇಷಚೇತನರ ಬದುಕಿಗೆ ಆಸರೆಯಾದ ಸಮರ್ಥನಂ...

ವಿಶೇಷಚೇತನರ ಬದುಕಿಗೆ ಆಸರೆಯಾದ ಸಮರ್ಥನಂ ಸಂಸ್ಥೆ

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್3 Feb 2025 12:47 PM IST
share
ವಿಶೇಷಚೇತನರ ಬದುಕಿಗೆ ಆಸರೆಯಾದ ಸಮರ್ಥನಂ ಸಂಸ್ಥೆ
ತರಬೇತಿ ಕೇಂದ್ರ ಆರ್ಥಿಕವಾಗಿ ಹಿಂದುಳಿದ ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯ ಮೂಲಕ ತಮ್ಮ ಜೀವನವನ್ನು ಸುಧಾರಿಸಿಕೊಳ್ಳುವಲ್ಲಿ ತುಂಬಾ ಪರಿಣಾಮಕಾರಿಯಾಗಿದ್ದು, ಸಮರ್ಥನಂ ಸಂಸ್ಥೆಯು ಬಡ ಯುವತಿಯರಿಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು ಹಮ್ಮಿಕೊಳ್ಳುತ್ತಿದೆ. 18 ರಿಂದ 35 ವರ್ಷ ಒಳಗಿನ ಬಡ ವಿದ್ಯಾವಂತ ನಿರುದ್ಯೋಗಿ ಯುವತಿಯರಿಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು ಮೈಸೂರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಅಗ್ರಹಾರದಲ್ಲಿ ನೀಡುತ್ತಿದ್ದಾರೆ. ನಿರುದ್ಯೋಗಿ ಯುವತಿಯರು ಮತ್ತು ಮಹಿಳೆಯರು ತಮ್ಮ ಕೌಶಲ್ಯಗಳ ಮೂಲಕ ಅದರಲ್ಲಿಯೂ ಕಂಪ್ಯೂಟರ್ ತರಬೇತಿಯ ಮೂಲಕ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ತರಬೇತಿಯ ಜೊತೆಯಲ್ಲೇ ಉದ್ಯೋಗ ವಿಕಸನ ಕಾರ್ಯಕ್ರಮವನ್ನು ಕೂಡ ಇಲ್ಲಿ ನಡೆಸಲಾಗುತ್ತಿದೆ. ಇಲ್ಲಿ ತರಬೇತಿ ಪಡೆದ ಶೇಕಡಾ 80 ಯುವತಿಯರು ಉದ್ಯೋಗ ಸೇರಿ ಜೀವನ ನಡೆಸುತ್ತಿದ್ದಾರೆ.

ಮೈಸೂರು: ದೃಷ್ಟಿ ಹೀನರು, ವಿಶೇಷಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಮತ್ತು ಅವಕಾಶ ವಂಚಿತರ ಸಬಲೀಕರಣಕ್ಕಾಗಿ ಗುಣಮಟ್ಟದ ಶಿಕ್ಷಣ, ವಸತಿ, ಪೌಷ್ಟಿಕ ಆಹಾರ, ವೃತ್ತಿಪರ ತರಬೇತಿ, ಉದ್ಯೋಗಾವಕಾಶ ಮತ್ತು ಪುನರ್ವಸತೀಕರಣದ ಸೌಲಭ್ಯಗಳನ್ನು ಒದಗಿಸಲು 1997 ರಲ್ಲಿ ಸ್ಥಾಪನೆಯಾದ ಸಮರ್ಥನಂ ಅಂಗವಿಕಲರ ಕಲ್ಯಾಣಕ್ಕೆ ಶ್ರಮಿಸುತ್ತಿರುವ ಒಂದು ಸಾಮಾಜಿಕ ಕಳಕಳಿಯ ಸಂಸ್ಥೆಯಾಗಿ ಗಮನ ಸೆಳೆದಿದೆ.

ವಿಶೇಷಚೇತನರ ಶೈಕ್ಷಣಿಕ ಅಭಿವೃದ್ಧಿಯ ಜತೆ ಅವರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನೀಡುವ ಮೂಲಕ ಅವರ ಸಮಗ್ರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ.

ಡಾ.ಮಹಾಂತೇಶ್ ಜಿ.ಕೆ. ಮತ್ತು ಅವರ ಸ್ನೇಹಿತರು ಸ್ಥಾಪಿಸಿದ ಸಂಸ್ಥೆಯು ಇಂದು ಅಂತರ್‌ರಾಷ್ಟ್ರೀಯ ಪುನರ್ವಸತಿ ಕೇಂದ್ರ ಮತ್ತು ವಿಶ್ವ ಅಂಧರ ಒಕ್ಕೂಟದಿಂದ ಮಾನ್ಯತೆ ಪಡೆದಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಮೈಸೂರಿನಲ್ಲಿ ವಿಜಯನಗರ ಎರಡನೇ ಹಂತ ಹಾಗೂ ಚಾಮರಾಜ ಜೋಡಿ ರಸ್ತೆಯಲ್ಲಿಯೂ ಈ ಸಂಸ್ಥೆ ಕಾರ್ಯನಿರ್ವಹಿಸುವ ಮೂಲಕ ಈ ಭಾಗದ ವಿಕಲ ಚೇತನರಿಗೆ ಆಸರೆಯಾಗಿ ನಿಂತಿದೆ.

ವಿಶೇಷಚೇತನರು ಸಮಾಜದಲ್ಲಿ ಘನತೆ ಮತ್ತು ಗೌರವದಿಂದ ಬಾಳುವ ಹಾಗು ತಮ್ಮದೇ ಆದಂತಹ ಕೊಡುಗೆಯನ್ನು ನೀಡುವಲ್ಲಿ ಸಮರ್ಥರಾಗಬಲ್ಲ. ತಾರತಮ್ಯರಹಿತ ಸಮಗ್ರ ಸಮಾಜವನ್ನು ಸೃಷ್ಟಿಸುವುದು ಈ ಸಂಸ್ಥೆಯ ಗುರಿಯಾಗಿದೆ.

ಅಭಿವೃದ್ಧಿಪರ ಸಂಸ್ಥೆಗಳ ಸಹಾಯದಿಂದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಅಂಶಗಳ ಮೇಲೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಅಂಧರ, ವಿಶೇಷಚೇತನರ ಮತ್ತು ಅವಕಾಶವಂಚಿತರನ್ನು ಸಶಕ್ತಗೊಳಿಸುವುದು ಸಹ ಈ ಸಂಸ್ಥೆಯ ಉದ್ದೇಶವಾಗಿದೆ.

ಮೈಸೂರಿನಲ್ಲಿ ವಿಶೇಷಚೇತನ ಮಕ್ಕಳ ಶಾಲೆ: 6ರಿಂದ 23 ವರ್ಷ ವಯೋಮಾನದ ಸೌಮ್ಯ ಹಾಗೂ ಸಾಧಾರಣ ಬುದ್ಧಿ ವಿಶೇಷಚೇತನರ ಮಕ್ಕಳ ವಿಶೇಷ ಶಾಲೆಯನ್ನು ವಿಜಯನಗರ ಎರಡನೇ ಹಂತದಲ್ಲಿ ಪ್ರಾರಂಭಿಸಲಾಗಿದೆ. ಇಲ್ಲಿ ವಿಶೇಷ ತರಬೇತಿ ಹೊಂದಿದ ಮತ್ತು ನುರಿತ ಶಿಕ್ಷಕರು ಇದ್ದು, ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡುತ್ತಿದ್ದಾರೆ.

ಅಲ್ಲದೇ ಈ ಸಂಸ್ಥೆಯಲ್ಲಿ ದಾಖಲಾಗುತ್ತಿರುವ ಮಕ್ಕಳಿಗೆ ಸಮವಸ್ತ್ರ, ಪಠ್ಯ ಪುಸ್ತಕ, ನೋಟ್ ಬುಕ್, ಬ್ಯಾಗ್ ವಾಹನದ ಸೌಲಭ್ಯ ಜೊತೆಗೆ ಇನ್ನಿತರ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ವಿಶೇಷವೆಂದರೆ ಈ ಶಾಲೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗೆ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ.

ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಪದವಿ ಪೂರೈಸಿದ ವಿಶೇಷಚೇತನ ವಿದ್ಯಾರ್ಥಿಗಳು ಹಾಗೂ ವಿಶೇಷಚೇತನ ಪೋಷಕರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿಯನ್ನು ಅಕ್ಕ ಐಎಎಸ್ ಅಕಾಡಮಿ ಕೇಂದ್ರದಲ್ಲಿ ನೀಡುತ್ತಿದ್ದಾರೆ. ಕೇಂದ್ರ ಮತ್ತು ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಯನ್ನು ನೀಡುತ್ತಿದ್ದಾರೆ. ಇದು ಸಂಪೂರ್ಣ ಉಚಿತವಾಗಿದ್ದು ಊಟ, ವಸತಿ ಹಾಗೂ ಸಾರಿಗೆ ಸೌಲಭ್ಯವನ್ನೂ ನೀಡಲಾಗುತ್ತಿದೆ.

ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹಾಗೂ ವಿಶೇಷಚೇತನ ಪೋಷಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸಹ ಇಲ್ಲಿ ನೀಡಲಾಗುತ್ತಿದೆ. ದೇಶದಲ್ಲಿ ಒಟ್ಟು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಮೈಸೂರು ವಿಭಾಗದಲ್ಲಿ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿ ವೇತನದ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಹೊಸ ಆಲೋಚನೆಗಳನ್ನು ಕಂಡುಹಿಡಿಯಲು ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳಿಗೆ ಸೃಜನಾತ್ಮಕವಾಗಿ ಯೋಚಿಸಲು, ತಂತ್ರಗಳನ್ನು ಅಭಿವೃದ್ಧಿಪಡಿಸಲು ಮತ್ತು ಅವರ ಆಸಕ್ತಿಗಳನ್ನು ಅನ್ವೇಷಿಸಲು ವಿವಿಧ ಅವಕಾಶಗಳನ್ನು ನೀಡಲಾಗುತ್ತಿದೆ. ಇದಲ್ಲದೆ ಸಂಸ್ಥೆಯು ಪರಿಸರ, ಕ್ರೀಡೆ, ಆಹಾರ ಮತ್ತು ಪೌಷ್ಟಿಕತೆ, ಪುನರ್ವಸತಿ, ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ವಿಶೇಷಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ಕ್ಷೇಮಾಭಿವೃದ್ಧಿಗೆ ದುಡಿಯುತ್ತಿದೆ.

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X