Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮೂಲಭೂತ ಸೌಲಭ್ಯಗಳಿಲ್ಲದೆ ಶೆಡ್‌ಗೆ...

ಮೂಲಭೂತ ಸೌಲಭ್ಯಗಳಿಲ್ಲದೆ ಶೆಡ್‌ಗೆ ಸ್ಥಳಾಂತರ

ರಾಮಕೃಷ್ಣ ಹೆಗಡೆ ನಗರ ನಿವಾಸಿಗಳಿಗೆ ಸಂಕಷ್ಟ

ಪ್ರಕಾಶ್ ಎಚ್.ಎನ್ಪ್ರಕಾಶ್ ಎಚ್.ಎನ್28 Dec 2023 12:54 PM IST
share
ಮೂಲಭೂತ ಸೌಲಭ್ಯಗಳಿಲ್ಲದೆ ಶೆಡ್‌ಗೆ ಸ್ಥಳಾಂತರ

ದಾವಣಗೆರೆ, ಡಿ.27: ರಾಮಕೃಷ್ಣ ಹೆಗಡೆ ನಗರದಿಂದ ತೆರವುಗೊಂಡ ನಿವಾಸಿಗಳು ದೊಡ್ಡ ಬಾತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಲಿ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್‌ಗಳಿಗೆ ಸ್ಥಳಾಂತರಗೊಂಡಿದ್ದು, ಮೂಲಭೂತ ಸೌಲಭ್ಯಗಳು ಇಲ್ಲದೆ ಪರದಾಡುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ನಗರದ ಪಿಬಿ ರಸ್ತೆಯಿಂದ ಮಾಗಾನಹಳ್ಳಿ ರಸ್ತೆಯವರೆಗೆ ವರ್ತುಲ ರಸ್ತೆ ನಿರ್ಮಾಣಕ್ಕಾಗಿ ರಾಮಕೃಷ್ಣ ಹೆಗಡೆ ನಗರದಲ್ಲಿ ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಿಸಿಕೊಂಡಿದ್ದ ಕುಟುಂಬಗಳನ್ನು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತವು ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಕಾರ್ಯಾಚರಣೆ ಮೂಲಕ ತೆರವುಗೊಳಿಸಿತ್ತು. ಅಲ್ಲದೆ ಆ ಕುಟುಂಬಗಳನ್ನು ತಾತ್ಕಾಲಿಕವಾಗಿ ನಗರದಿಂದ ದೂರ ಇರುವ ದೊಡ್ಡಬಾತಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ಸ್ಥಳದಲ್ಲಿ ತಾತ್ಕಾಲಿಕ ಶೆಡ್‌ಗಳಿಗೆ ಸ್ಥಳಾಂತರಗೊಳಿಸಲಾಗಿತ್ತು.

ಕಾರ್ಯಾಚರಣೆ ನಡೆಸಿದ ಪರಿಣಾಮ ಅಲ್ಲಿನ ನಿವಾಸಿಗಳು ಅವರ ವಸ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ತೆಗೆದುಕೊಂಡು ಹೋಗಲು ಸಾಧ್ಯವಾಗಿರಲಿಲ್ಲ. ಮೈ ಕೊರೆಯುವ ಚಳಿಯಲ್ಲಿ ಬೆಚ್ಚಗಿನ ಹಾಸಿಗೆಗಳಿಲ್ಲದೆ ಹಸುಗೂಸುಗಳು, ವೃದ್ಧರು, ಕಾಯಿಲೆ ಪೀಡಿತ ಮಕ್ಕಳು ರಾತ್ರಿ ಪೂರ್ಣ ನಿದ್ದೆ ಇಲ್ಲದೆ ಕಷ್ಟಪಡುವಂತಾಗಿದೆ. ಅಲ್ಲದೆ, ಛಾವಣಿ ಇಲ್ಲದ ಶೆಡ್ಡುಗಳಲ್ಲಿ ರಾತ್ರಿ ವೇಳೆ ನರಿಗಳ, ವಿಷಜಂತುಗಳ ಉಪಟಳದಿಂದ ಭಯಭೀತರಾಗಿದ್ದೇವೆ ಎಂದು ನಿರಾಶ್ರಿತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವ ಕುಟುಂಬಗಳು ಹಗಲಿನಲ್ಲಿ ಇಲ್ಲಿ ಇದ್ದು, ರಾತ್ರಿಯಾದ ತಕ್ಷಣ ನಗರದ ಬಾಡಿಗೆ ಮನೆಯಲ್ಲಿ ಆಶ್ರಯ ಪಡೆಯುತ್ತಾರೆ. ಆದರೆ, ಅತ್ಯಂತ ಬಡತನದ ಕುಟುಂಬಗಳು ಇಲ್ಲಿಯೇ ಆಶ್ರಯ ಪಡೆದು ಜೀವನ ನಡೆಸುತ್ತಿವೆ. ಜಿಲ್ಲಾಡಳಿತ ಕನಿಷ್ಠ ಮೂಲಭೂತ ಸೌಕರ್ಯಗಳನ್ನಾದರೂ ಕಲ್ಪಿಸಿ ನಮ್ಮನ್ನು ಇಲ್ಲಿಗೆ ತಂದು ಬಿಟ್ಟಿದ್ದರೆ ನಾವು ಜೀವನ ಸಾಗಿಸುತ್ತಿದ್ದೆವು. ಆದರೆ, ಇಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಲ್ಲದೆ ನಾವು ಜೀವನ ನಡೆಸುವುದು ದುಸ್ತರವಾಗಿದೆ ಎಂದು ಅಲ್ಲಿನ ನಿವಾಸಿಗಳು ಅವಲತ್ತುಕೊಂಡಿದ್ದಾರೆ.

ಇಲ್ಲಿರುವ ಬಹುತೇಕ ಕುಟುಂಬಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದು, ಗ್ಯಾರೇಜ್, ಹೋಟೆಲ್, ಹಮಾಲಿ, ಆಟೊ ಓಡಿಸುವ, ಮಾರುಕಟ್ಟೆಗಳಲ್ಲಿ ಸೊಪ್ಪು, ಹಣ್ಣು ಮಾರಾಟ ಮಾಡುವವರಾಗಿದ್ದಾರೆ.

ನಮ್ಮನ್ನು ಶೆಡ್‌ಗೆ ಸ್ಥಳಾಂತರ ಮಾಡಿದ ಮೊದಲ ವಾರ ಜಿಲ್ಲಾಡಳಿತವು ವಿವಿಧ ವಸತಿನಿಲಯಗಳಿಂದ ಊಟದ ವ್ಯವಸ್ಥೆ ಮಾಡಿತ್ತು. ಆದರೆ, ನಂತರ ದಿನಗಳಲ್ಲಿ ನಿಂತು ಹೋಯಿತು. ಈಗ ಎಲ್ಲದಕ್ಕೂ ಪರದಾಡುವ ಸ್ಥಿತಿ ಬಂದಿದೆ. ಆದ್ದರಿಂದ ಶುದ್ಧ ಕುಡಿಯುವ ನೀರು, ಶೌಚಾಲಯ, ಅಂಗನವಾಡಿ, ನ್ಯಾಯಬೆಲೆ ಅಂಗಡಿ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಕಲ್ಪಿಸಿಕೊಡಬೇಕು.

► ಶಾಹೀದಾ ಬೀ, ಸ್ಥಳಾಂತರಗೊಂಡ ನಿವಾಸಿ

ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಮಹಾನಗರ ಪಾಲಿಕೆಯು ಅಲ್ಪಸಂಖ್ಯಾತ ಇಲಾಖೆಗೆ 6.5 ಕೋಟಿ ರೂ. ಪ್ರಸ್ತಾವ ಸಲ್ಲಿಸಿದ್ದು, ಅನುದಾನ ಬಿಡುಗಡೆಗೆ ಆದೇಶವೂ ಆಗಿದೆ. ಶೀಘ್ರವೇ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು. 1 ಸಾವಿರ ಮನೆ ನಿರ್ಮಾಣಕ್ಕೆ ಸರಕಾರಕ್ಕೆ ವರದಿಯನ್ನೂ ನೀಡಲಾಗಿದೆ. ಅಂಗನವಾಡಿ ಕೇಂದ್ರವೂ ಆರಂಭವಾಗಲಿದೆ. ಸ್ಥಳಾಂತರ ಸಂದರ್ಭದಲ್ಲಿ 15 ದಿನಗಳ ಕಾಲ ಊಟದ ವ್ಯವಸ್ಥೆ ಮಾಡಲಾಗಿದೆ. ತಾತ್ಕಾಲಿಕವಾಗಿ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳಿಗೆ ಸಮಸ್ಯೆಯಾಗಿದ್ದು, ಮುಂದಿನ ದಿನಗಳಲ್ಲಿ ಅಲ್ಲಿನ ಜನರಿಗೆ ಒಳ್ಳೇಯದಾಗಲಿದೆ.

► ರೇಣುಕಾ,

ದಾವಣಗೆರೆ ಮಹಾನಗರ

ಪಾಲಿಕೆ ಆಯುಕ್ತೆ

ಕನಿಷ್ಠ ಮೂಲಭೂತ ಸೌಕರ್ಯವಿಲ್ಲದಿರುವ ಜಾಗದಲ್ಲಿ ಜನರನ್ನು ಸ್ಥಳಾಂತರ ಮಾಡಿರುವುದು ಬಡಜನರನ್ನು ಶೋಷಣೆ ಮಾಡಿದಂತಾಗಿದೆ. ಕುಡಿಯುವ ನೀರು, ಆಹಾರ, ವಿದ್ಯುತ್, ಸಾರಿಗೆ ಈ ಸೌಕರ್ಯವೇ ಇಲ್ಲ. ಅಲ್ಲದೆ ನೂರಾರು ಮಕ್ಕಳು ವಿದ್ಯೆಯಿಲ್ಲದೆ, ಮುಂದಿನ ದಿನಗಳಲ್ಲಿ ಬಾಲ ಕಾರ್ಮಿಕರಾಗುವ ಸಾಧ್ಯತೆಯಿದೆ. ಈ ಬಗ್ಗೆ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರ ಪಾಲಿಕೆ, ಜಿಲ್ಲಾಡಳಿತ ಗಮನ ಹರಿಸಬೇಕು.

ಜಬೀನಾ ಖಾನಂ,

ನೆರಳು ಬೀಡಿ ಕಾರ್ಮಿಕರ ಯೂನಿಯನ್ ಅಧ್ಯಕ್ಷೆ

ಸ್ಥಳಾಂತರ ಮಾಡುವ ಮೊದಲು ಸ್ಲಮ್ ಬೋರ್ಡ್, ಮಹಾನಗರ ಪಾಲಿಕೆಯವರು ಕನಿಷ್ಠ ಮೂಲಭೂತ ಸೌಕರ್ಯ ನೀಡಬೇಕಿತ್ತು. ಆದರೆ, ಸೌಲಭ್ಯ ನೀಡದೆ ಸ್ಥಳಾಂತರ ಮಾಡಿರುವುದು ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಅಲ್ಲದೆ ಅಲ್ಲಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದು ಮಕ್ಕಳ ಹಕ್ಕು ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.

► ಮೈತ್ರೇಯಿ ಕೆ.,

ಹೈಕೋರ್ಟ್ ವಕೀಲರು, ಬೆಂಗಳೂರು

share
ಪ್ರಕಾಶ್ ಎಚ್.ಎನ್
ಪ್ರಕಾಶ್ ಎಚ್.ಎನ್
Next Story
X