Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರಿ ಕಚೇರಿಗಳಿಗೆ ನಿಗದಿತ ಸಮಯಕ್ಕೆ...

ಸರಕಾರಿ ಕಚೇರಿಗಳಿಗೆ ನಿಗದಿತ ಸಮಯಕ್ಕೆ ಹಾಜರಾಗದ ಸಿಬ್ಬಂದಿ: ಎಐ ಆಧಾರಿತ ಹಾಜರಾತಿ ನಿರ್ವಹಣೆ ವ್ಯವಸ್ಥೆಗೆ 19 ಇಲಾಖೆಗಳಷ್ಟೇ ಒಪ್ಪಿಗೆ

ಜಿ. ಮಹಾಂತೆೇಶ್ಜಿ. ಮಹಾಂತೆೇಶ್25 Sept 2025 9:53 AM IST
share
ಸರಕಾರಿ ಕಚೇರಿಗಳಿಗೆ ನಿಗದಿತ ಸಮಯಕ್ಕೆ ಹಾಜರಾಗದ ಸಿಬ್ಬಂದಿ: ಎಐ ಆಧಾರಿತ ಹಾಜರಾತಿ ನಿರ್ವಹಣೆ ವ್ಯವಸ್ಥೆಗೆ 19 ಇಲಾಖೆಗಳಷ್ಟೇ ಒಪ್ಪಿಗೆ

ಬೆಂಗಳೂರು: ವಿಧಾನಸೌಧ, ವಿಕಾಸ ಸೌಧ, ಬಹುಮಹಡಿ ಕಟ್ಟಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ, ತಾಲೂಕು, ಗ್ರಾಮೀಣ ಪ್ರದೇಶಗಳಲ್ಲಿರುವ ಸರಕಾರಿ ಕಚೇರಿಗಳಿಗೆ ಸರಕಾರಿ ನೌಕರರು, ಅಧಿಕಾರಿಗಳು ನಿಗದಿತ ಸಮಯದೊಳಗೇ ಹಾಜರಾಗುತ್ತಿಲ್ಲ. ಅಲ್ಲದೇ ಬೆಳಿಗ್ಗೆ 10 ಗಂಟೆಗೆ ಹಾಜರಾಗಬೇಕಿರುವ ಸರಕಾರಿ ನೌಕರರು 11 ಗಂಟೆಯಾದರೂ ಕಚೇರಿಗೆ ಬರುತ್ತಿಲ್ಲ.

ಸರಕಾರಿ ಕಚೇರಿಗಳಿಗೆ ನಿಗದಿತ ಅವಧಿಯೊಳಗೇ ಹಾಜರಾಗದ ಅಧಿಕಾರಿ, ನೌಕರರ ಕಳ್ಳಾಟ ಈಗಲೂ ಮುಂದುವರಿದಿದೆ. ಹಾಗೆಯೇ ಕರ್ನಾಟಕ ಸರಕಾರಿ ನೌಕರರ ಹಾಜರಾತಿ ನಿರ್ವಹಣೆಗಾಗಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆಗೆ ಕೇವಲ 19 ಇಲಾಖೆಗಳಷ್ಟೇ ಒಪ್ಪಿಗೆ ನೀಡಿವೆ. ಉಳಿದ ಇಲಾಖೆಗಳು ಈ ವ್ಯವಸ್ಥೆಯನ್ನು ಒಪ್ಪಿಕೊಳ್ಳಲು ಮೀನಮೇಷ ಮಾಡುತ್ತಿವೆ.

ಹಾಗೆಯೇ 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಸರಕಾರಿ ನೌಕರರು, ಅಧಿಕಾರಿಗಳ ಪೈಕಿ 2025ರ ಸೆ.24ರ ಹೊತ್ತಿಗೆ 3,15,907 ಸಂಖ್ಯೆಯಲ್ಲಿನ ಅಧಿಕಾರಿ, ನೌಕರರು, ಸಿಬ್ಬಂದಿಗಳಷ್ಟೇ ಈ ವ್ಯವಸ್ಥೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನುಳಿದ 2 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಅಧಿಕಾರಿ, ನೌಕರರು, ಸಿಬ್ಬಂದಿಗಳು ನೋಂದಣಿಯೇ ಅಗಿಲ್ಲ. ಹೀಗಾಗಿ ಕಚೇರಿಗಳಿಗೆ ಅನಧಿಕೃತವಾಗಿ ಗೈರು ಹಾಜರಾಗುವ ಅಧಿಕಾರಿ, ಸಿಬ್ಬಂದಿಯನ್ನು ಕಂಡು ಹಿಡಿಯಲು ಪೂರ್ಣ ಪ್ರಮಾಣದಲ್ಲಿ ಸಾಧ್ಯವಾಗಿಲ್ಲ. ಅಲ್ಲದೇ ಈ ವ್ಯವಸ್ಥೆಯನ್ನು ಇನ್ನೂ ಒಪ್ಪಿಕೊಳ್ಳದ ಇಲಾಖೆಗಳಲ್ಲಿ ಅಧಿಕಾರಿ, ಸಿಬ್ಬಂದಿ ಅನಧಿಕೃತವಾಗಿ ಗೈರು ಹಾಜರಾಗುವ ಓಟಕ್ಕೆ ಕಡಿವಾಣವೂ ಬಿದ್ದಿಲ್ಲ.

ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ 2025ರ ಸೆ.10ರಂದು ನಡೆದಿದ್ದ ಸರಕಾರದ ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳ ಸಭೆಯಲ್ಲಿ ಈ ಸಂಗತಿಯು ಬಯಲಾಗಿದೆ. ಈ ಸಭೆಯ ನಡವಳಿಗಳು 'the-file.in' ಗೆ ಲಭ್ಯವಾಗಿವೆ.

ಕರ್ನಾಟಕ ಸರಕಾರಿ ನೌಕರರ ಹಾಜರಾತಿ ನಿರ್ವಹಣೆ ವ್ಯವಸ್ಥೆ ಕಾರ್ಯವೈಖರಿ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ. ಸರ್ಕಾರಿ ಕಚೇರಿಗಳಲ್ಲಿನ ಹಿಂದಿನ ಹಾಜರಾತಿ ವ್ಯವಸ್ಥೆ ಹಾಗೂ ಹಾಲಿ ಕರ್ನಾಟಕ ಸರಕಾರಿ ನೌಕರರ ಹಾಜರಾತಿ ನಿರ್ವಹಣೆ ವ್ಯವಸ್ಥೆಯಲ್ಲಿ ಹಲವು ವ್ಯತ್ಯಾಸಗಳು ಇರುವುದು ಸಹ ನಡವಳಿಯಿಂದ ತಿಳಿದು ಬಂದಿದೆ.

ಬಜೆಟ್‌ನಲ್ಲಿ ಘೋಷಣೆ: ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾವ್ಯವಸ್ಥೆ (ಕೆಎಎಎಂಎಸ್) ಕಾರ್ಯ ವೈಖರಿಯನ್ನು ಬಜೆಟ್ ಘೋಷಣೆಯಲ್ಲಿಯೇ ಪರಿಚಯಿಸಲಾಗಿತ್ತು. ಅನಧಿಕೃತವಾಗಿ ಗೈರು ಹಾಜರಾಗುವ ಅಧಿಕಾರಿ, ನೌಕರರು, ಸಿಬ್ಬಂದಿಯನ್ನು ಕಂಡು ಹಿಡಿಯಲು ಈ ವ್ಯವಸ್ಥೆಯಿಂದ ಅನುಕೂಲವಾಗುತ್ತದೆ ಎಂದು ಬಜೆಟ್ ಘೋಷಣೆಯಲ್ಲಿ ಹೇಳಲಾಗಿತ್ತು. ಆದರೂ 19 ಇಲಾಖೆಗಳು ಹೊರತುಪಡಿಸಿ ಉಳಿದ ಇಲಾಖೆಗಳ ಅಧಿಕಾರಿ, ನೌಕರರು, ಸಿಬ್ಬಂದಿ ಈ ವ್ಯವಸ್ಥೆಯಡಿಯಲ್ಲಿ ಬರಲು ಹಿಂದೇಟು ಹಾಕಿರುವುದು ನಡವಳಿಯಿಂದ ಕಂಡು ಬಂದಿದೆ.

ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತಿದೆ, ಎಷ್ಟು ಸಂಖ್ಯೆಯ ಅಧಿಕಾರಿ, ನೌಕರರು, ಸಿಬ್ಬಂದಿ ನೋಂದಾಯಿಸಿಕೊಂಡಿದ್ದಾರೆ, ಎಷ್ಟು ಸಂಖ್ಯೆಯ ಅಧಿಕಾರಿ, ನೌಕರರು, ಸಿಬ್ಬಂದಿ ಎಷ್ಟು ಗಂಟೆಗೆ ಕಚೇರಿಗೆ ಹಾಜರಾಗುತ್ತಿದ್ದಾರೆ ಎಂಬ ಕುರಿತು 'the-file.in' ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ ಜಾಲತಾಣದಲ್ಲಿನ ಅಂಕಿಅಂಶಗಳ ಮೇಲೆ 2025ರ ಸೆ. 24ರಂದು ಕಣ್ಣಾಡಿಸಿತು.

ಸೆ.24ರಂದು ಹಾಜರಾತಿ ವಿವರ ಹೇಗಿತ್ತು?: 2205ರ ಸೆ.24 ಹೊತ್ತಿಗೆ ರಾಜ್ಯ ಸರಕಾರಿ ಇಲಾಖೆಗಳ ಒಟ್ಟಾರೆ 3,51,907 ನೌಕರರು ಈ ವ್ಯವಸ್ಥೆಗೆ ನೋಂದಾಯಿಸಿಕೊಂಡಿದ್ದರು. ಸೆಪ್ಟಂಬರ್ 24ರಂದು ಒಟ್ಟಾರೆ 44,164 ನೌಕರರು ಕಚೇರಿಗಳಿಗೆ ಹಾಜರಾಗಿದ್ದರು ಎಂಬುದು ಕೆಎಎಎಂಎಸ್‌ನ ಜಾಲತಾಣದಿಂದ ಕಂಡು ಬಂದಿತು.

ಬೆಳಗ್ಗೆ 9 ಗಂಟೆಯೊಳಗೆ ಶೇ. 29.6ರಷ್ಟು, ಬೆಳಗ್ಗೆ 9-30ರಿಂದ 10 ಗಂಟೆಯೊಳಗೆ ಶೇ.17.3ರಷ್ಟು, ಬೆಳಗ್ಗೆ 10 ಗಂಟೆಯಿಂದ 11 ಗಂಟೆಯೊಳಗೆ ಶೇ.20.4, 11 ಗಂಟೆ ನಂತರ ಶೇ. 14.3ರಷ್ಟು ನೌಕರರು, ಅಧಿಕಾರಿಗಳು, ಸಿಬ್ಬಂದಿ ಕಚೇರಿಗಳಿಗೆ ಹಾಜರಾಗಿದ್ದರು ಎಂಬುದು ಜಾಲತಾಣದಿಂದ ತಿಳಿದು ಬಂದಿದೆ.

ಕೆಎಎಎಂಎಸ್ ಹೇಗೆ ಕಾರ್ಯ ನಿರ್ವಹಿಸಲಿದೆ?

ರಾಜ್ಯ ಸರಕಾರವು ಪರಿಚಯಿಸಿರುವ ಈ ವ್ಯವಸ್ಥೆಗೆ ನೌಕರರ ಆಧಾರ್‌ಗೆ ಲಿಂಕ್ ಮಾಡಲಾದ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಅವರ ಹಾಜರಾತಿಯನ್ನು ಪರಿಶೀಲಿಸುತ್ತದೆ. ನೌಕರರು ತಮ್ಮ ಕೆಲಸದ ಸ್ಥಳದಲ್ಲಿರುವಾಗ ಕಚೇರಿಯ 100-200 ಮೀಟರ್ ವ್ಯಾಪ್ತಿಯಲ್ಲಿ ಸೆಲ್ಫಿ ತೆಗೆದುಕೊಳ್ಳಬೇಕು. ಈ ಅಪ್ಲಿಕೇಶನ್ ಮೂಲಕ ತಡವಾದ ಪ್ರವೇಶ ಅಥವಾ ಬೇಗನೆ ನಿರ್ಗಮನದಂತಹ ಉಲ್ಲಂಘನೆಗಳ ಬಗ್ಗೆ ಇಲಾಖೆ ಮುಖ್ಯಸ್ಥರಿಗೆ ಎಚ್ಚರಿಕೆ ನೀಡುತ್ತದೆ.

ನೌಕರರು, ಅಧಿಕಾರಿಗಳು, ಸಿಬ್ಬಂದಿ ತೆಗೆದುಕೊಳ್ಳುವ ಸೆಲ್ಫಿಯನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಆಧಾರ್‌ನಲ್ಲಿರುವ ಮೂಲ ಫೋಟೊ ಮತ್ತು ನೋಂದಣಿಯ ಸಮಯದಲ್ಲಿ ತೆಗೆದ ಸೆಲ್ಫಿಯೊಂದಿಗೆ ಹೋಲಿಸುತ್ತದೆ. ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಮ್ಮ ಬುದ್ಧಿವಂತಿಕೆಯಿಂದ ಬದಲಾಯಿಸಿ ನಿರ್ವಹಿಸಲು ಸಾಧ್ಯವಿದೆ. ಅಲ್ಲದೇ ಸಿಬ್ಬಂದಿ ತಮ್ಮ ಅನಿಯಮಿತ ಹಾಜರಾತಿಯನ್ನು ಮರೆಮಾಚಲು ಉಪಕರಣಗಳನ್ನು ಹಾನಿಗೊಳಿಸಬಹುದು ಅಥವಾ ಬೇರೆ ಯಾವುದಾದರೂ ತಂತ್ರವನ್ನು ಆಶ್ರಯಿಸಬಹುದು ಎಂದು ಹೇಳಲಾಗಿತ್ತು.

ಆದರೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ಕೇಂದ್ರವು ಅಭಿವೃದ್ಧಿಪಡಿಸಿರುವ ಕೆಎಎಎಂಎಸ್‌ನ್ನು ಜಿಯೋಫೆನ್ಸ್‌ನಿಂದ ವಿನ್ಯಾಸಗೊಳಿಸಿದೆ. ಹೀಗಾಗಿ ಅದನ್ನು ಹಾಳು ಮಾಡುವುದು ಅಸಾಧ್ಯವಾಗಿದೆ.

ಎಚ್‌ಆರ್‌ಎಂಎಸ್‌ನಲ್ಲಿನ ದತ್ತಾಂಶವು ಕೆಲಸದ ಸ್ಥಳದ ವಿವರಗಳನ್ನು ನೀಡಲಿದೆ. ಪ್ರತಿದಿನ, ಉದ್ಯೋಗಿ ತನ್ನ ಕೆಲಸದ ಸ್ಥಳಕ್ಕೆ ಬಂದಾಗ, ಅವನು/ಅವಳು ಸೆಲ್ಫಿ ತೆಗೆದುಕೊಳ್ಳಬೇಕು. ಈ ಫೋಟೊವನ್ನು ಅಪ್ಲಿಕೇಶನ್‌ನಲ್ಲಿ ನೋಂದಣಿ ಸಮಯದಲ್ಲಿ ತೆಗೆದ ಸೆಲ್ಫಿಯೊಂದಿಗೆ ಹೋಲಿಸಲಾಗುತ್ತದೆ. ಅವರ ಹಾಜರಾತಿಯನ್ನು ಗುರುತಿಸಲು ಯಾವುದೇ ಉಪಕರಣಗಳು ಅಥವಾ ಗ್ಯಾಜೆಟ್‌ಗಳು ಇರುವುದಿಲ್ಲ. ಮತ್ತು ಅವರ ಸೆಲ್‌ಫೋನ್ ಅನ್ನು ಮಾತ್ರ ಬಳಸಲಾಗುತ್ತದೆ.

share
ಜಿ. ಮಹಾಂತೆೇಶ್
ಜಿ. ಮಹಾಂತೆೇಶ್
Next Story
X