Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಿಗಮ, ಮಂಡಳಿಗಳ ಎನ್‌ಡಿಸಿ ಬಿಲ್ ಬಾಕಿ...

ನಿಗಮ, ಮಂಡಳಿಗಳ ಎನ್‌ಡಿಸಿ ಬಿಲ್ ಬಾಕಿ ಉಳಿಸಿದ ರಾಜ್ಯ ಸರಕಾರ

84,32,93,530 ರೂ. ಹೊಂದಾಣಿಕೆಯಾಗದೆ ಬಾಕಿ

ವಾರ್ತಾಭಾರತಿವಾರ್ತಾಭಾರತಿ24 Oct 2026 8:40 AM IST
share
ನಿಗಮ, ಮಂಡಳಿಗಳ ಎನ್‌ಡಿಸಿ ಬಿಲ್ ಬಾಕಿ ಉಳಿಸಿದ ರಾಜ್ಯ ಸರಕಾರ

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮ ಮಂಡಳಿಗಳು, ಇಲಾಖೆಗಳು ಮಾಡಿರುವ ವೆಚ್ಚಗಳಿಗೆ ಸಂಬಂಧಿಸಿದಂತೆ ಎನ್‌ಡಿಸಿ ಬಿಲ್‌ಗಳನ್ನು ರಾಜ್ಯ ಸರಕಾರವು ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರಕಾರವು ಈವರೆಗೆ ಒಟ್ಟು 84,32,93,530 ಮೊತ್ತವನ್ನು ಹಲವು ವರ್ಷಗಳಿಂದ ಹೊಂದಾಣಿಕೆ ಮಾಡಿಲ್ಲ.

ಈ ಸಂಬಂಧ ಪ್ರಧಾನ ಮಹಾಲೇಖಪಾಲರು ರಾಜ್ಯ ಸರಕಾರಕ್ಕೆ ಹಲವು ಬಾರಿ ಪತ್ರಗಳನ್ನು ಬರೆದಿದ್ದರೂ ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ಎನ್‌ಡಿಸಿ ಬಿಲ್‌ಗಳನ್ನು ಸಲ್ಲಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು 2026ರ ಅಕ್ಟೋಬರ್ 6ರಂದು ಪತ್ರ ಬರೆದು ಕೈತೊಳೆದುಕೊಂಡಿದೆ. ಉಳಿದ ಇಲಾಖೆಗಳಿಂದಲೂ ಈ ಬಗ್ಗೆ ಯಾವುದೇ ಕ್ರಮವಹಿಸಿಲ್ಲ. ಇದಕ್ಕೆ ಸಂಬಂಧಿಸಿದಂತೆ "the-file.in' ಗೆ ಕೆಲವು ದಾಖಲೆಗಳು ಲಭ್ಯವಾಗಿವೆ.

ಸಿಎಜಿಯ ಪತ್ರದಲ್ಲೇನಿದೆ?: ರಾಜ್ಯ ಸರಕಾರವು ಇದುವರೆಗೆ ಒಟ್ಟು 84,32,93,530 ರೂ. ಮೊತ್ತವು ಹಲವು ವರ್ಷಗಳಿಂದ ಹೊಂದಾಣಿಕೆಯಾಗದೆ ಬಾಕಿ ಉಳಿಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ 2026ರ ಮೇ 29ರಂದು ಪತ್ರ ಬರೆದಿದೆ.

ಮಾರ್ಚ್ 2026ರ ವೇಳೆಗೆ, ಒಟ್ಟು 1,587 ಎಸಿ ಬಿಲ್‌ಗಳಿಗೆ ಸಂಬಂಧಿಸಿದಂತೆ 84,32,93,530 ರೂ. ಮೊತ್ತವು ಹಲವು ವರ್ಷಗಳಿಂದ ಹೊಂದಾಣಿಕೆಯಾಗದೆ ಬಾಕಿ ಉಳಿದಿದೆ ವಿವರವಾದ ವೆಚ್ಚದ ಪ್ರಮಾಣಪತ್ರಗಳಿಲ್ಲದೆ ಸಲ್ಲಿಸಲಾಗುವ ಬಿಲ್‌ಗಳನ್ನು ನಿಗದಿತ ಸಮಯಕ್ಕೆ ಸಲ್ಲಿಸಿಲ್ಲ. ಹೀಗಾಗಿ ಗಂಭೀರ ಸಮಸ್ಯೆ ಉಂಟಾಗಿದೆ ಎಂದು ಪತ್ರದಲ್ಲಿ ಆರ್ಥಿಕ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ಪಿ.ಸಿ.ಜಾಫರ್ ಅವರ ಗಮನಸೆಳೆದಿರುವುದು ಪತ್ರದಿಂದ ತಿಳಿದು ಬಂದಿದೆ.

ಈ ಕಚೇರಿಯಲ್ಲಿ ಎನ್‌ಡಿಸಿ ಬಿಲ್‌ಗಳು ಸಲ್ಲಿಕೆಯಾಗಿಲ್ಲ. ಈ ಕಾರಣದಿಂದಾಗಿ ಹಲವು ಎಸಿ ಬಿಲ್‌ಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ, ಗೃಹ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಬೇಕು ಎಂದು 2026ರ ಮಾರ್ಚ್ 11ರಂದು ಆರ್ಥಿಕ ಇಲಾಖೆಯ ಸರಕಾರದ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ಆದರೆ 2026ರ ಮೇ 29ರವರೆಗೂ ಸರಕಾರವು ಯಾವುದೇ ಉತ್ತರವನ್ನೂ ನೀಡಿಲ್ಲ ಎಂದು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

‘ಮಾರ್ಚ್ 2026ರ ವೇಳೆಗೆ, ಒಟ್ಟು 1,587 ಬಿಲ್‌ಗಳಿಗೆ ಸಂಬಂಧಿಸಿದಂತೆ 84,32,93,530 ರೂ. ಮೊತ್ತವು ಹಲವು ವರ್ಷಗಳಿಂದ ಹೊಂದಾಣಿಕೆಯಾಗದೆ ಬಾಕಿ ಉಳಿದಿದೆ ಎಂಬುದು ಈ ಕಚೇರಿಯ ಗಮನಕ್ಕೆ ಬಂದಿದೆ. ಈ ಎಸಿ ಬಿಲ್‌ಗಳಲ್ಲಿ ಕೆಲವು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಬಾಕಿ ಇವೆ ಎಂದು ಸರಕಾರದ ಗಮನಸೆಳೆದಿದೆ.

ಯಾವುದೇ ಹೆಚ್ಚಿನ ವಿಳಂಬವಿಲ್ಲದೆ ಎನ್‌ಡಿಸಿ ಬಿಲ್‌ಗಳನ್ನು ಈ ಕಚೇರಿಗೆ ಸಲ್ಲಿಸಬೇಕು. 1958ರ ಆಕಸ್ಮಿಕ ವೆಚ್ಚಗಳ ಕೈಪಿಡಿಯ (Manual of Contingent Expenditure, 1958) ನಿಯಮಗಳ ನಿಯಮ 17 ತಕ್ಷಣದ ಪಾವತಿಗೆ ಅಗತ್ಯವಿರುವ ಸಂದರ್ಭಗಳನ್ನು ಹೊರತುಪಡಿಸಿ, ಸರಕಾರದ ಖಜಾನೆಯಿಂದ ಯಾವುದೇ ಹಣವನ್ನು ಹಿಂಪಡೆಯಬಾರದು ಎಂದು ಈ ನಿಯಮವು ಸ್ಪಷ್ಟಪಡಿಸುತ್ತದೆ.

ಡಿಸಿ ಬಿಲ್ ಕೈಪಿಡಿಯ ನಿಯಮ 36ರ ಪ್ರಕಾರ ಎಸಿ ಬಿಲ್‌ಗಳಿಗೆ ಸಂಬಂಧಿಸಿದ ಎನ್‌ಡಿಸಿ ಬಿಲ್‌ಗಳನ್ನು 30 ದಿನಗಳೊಳಗೆ ಸಲ್ಲಿಸಬೇಕು ಎಂದು ಈ ನಿಯಮದಲ್ಲಿ ಸ್ಪಷ್ಟಪಡಿಸಿದೆ. ನಿಯಮ 37(ಬಿ)(3) ಪ್ರಕಾರ ಸಂಬಂಧಪಟ್ಟ ತಿಂಗಳ ನಂತರದ ತಿಂಗಳ 15ನೇ ತಾರೀಖಿನೊಳಗೆ ಎಲ್ಲಾ ಎನ್‌ಡಿಸಿ ಬಿಲ್‌ಗಳನ್ನು ಕಡ್ಡಾಯವಾಗಿ ಮಹಾಲೇಖಪಾಲರಿಗೆ ಸಲ್ಲಿಸಬೇಕು ಎಂದು ಹೇಳಿದೆ.

ನಿಯಮ 37(ಬಿ)(4) ಪ್ರಕಾರ ನಿಗದಿತ ಅವಧಿಯೊಳಗೆ ಎನ್‌ಡಿಸಿ ಬಿಲ್‌ಗಳನ್ನು ಸಲ್ಲಿಸಲು ವಿಫಲವಾಗುವ ಕಚೇರಿಗಳಿಗೆ ಸಂಬಂಧಿಸಿದಂತೆ ಎಸಿ ಬಿಲ್‌ಗಳ ಮೂಲಕ ಮುಂದಿನ ಪಾವತಿಗಳನ್ನು ಖಜಾನೆಗಳು ಸ್ಥಗಿತಗೊಳಿಸಬೇಕು ಎಂದು ಹೇಳಿದೆ. ಹಣಕಾಸು ಇಲಾಖೆಯು 2018ರ ಡಿಸೆಂಬರ್ 31ರಂದು ಹೊರಡಿಸಿದ್ದ ಸುತ್ತೋಲೆ (ಸಂಖ್ಯೆ FD 02 TCE 2018) ಪ್ರಕಾರ ಬಾಕಿ ಬಿಲ್‌ಗಳನ್ನು ಸಲ್ಲಿಸದಿರುವ ಡಿಡಿಒಗಳ ವೇತನದ ಬಿಲ್‌ಗಳನ್ನು ಕೆ2 ವ್ಯವಸ್ಥೆಯಲ್ಲಿ ತಡೆಹಿಡಿಯಬೇಕು. ಹಾಗೂ ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ಖಜಾನೆಗಳಿಗೆ ಸೂಚನೆಗಳನ್ನು ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X