Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದತ್ತ ಪೀಠಕ್ಕೆ ತೆರಳುತ್ತಿದ್ದ...

ದತ್ತ ಪೀಠಕ್ಕೆ ತೆರಳುತ್ತಿದ್ದ ಮಾಲಾಧಾರಿಗಳ ದಾಂಧಲೆ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರಕಾರ

ಜಿ.ಮಹಾಂತೇಶ್ಜಿ.ಮಹಾಂತೇಶ್5 Jan 2024 9:49 AM IST
share
ದತ್ತ ಪೀಠಕ್ಕೆ ತೆರಳುತ್ತಿದ್ದ ಮಾಲಾಧಾರಿಗಳ ದಾಂಧಲೆ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರಕಾರ

ಬೆಂಗಳೂರು: ಉರೂಸ್ ಕಾರ್ಯಕ್ರಮಕ್ಕೆ ಕಟ್ಟಲಾಗಿದ್ದ ಧ್ವಜವನ್ನು ದತ್ತ ಪೀಠಕ್ಕೆ ತೆರಳುತ್ತಿದ್ದ ದತ್ತ ಮಾಲಾಧಾರಿಗಳು ಕಿತ್ತು ಹಾಕಿದ್ದ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆಯಲ್ಲಿಯೇ ಹಿಂದಿನ ಬಿಜೆಪಿ ಸರಕಾರವು ಪ್ರಕರಣವನ್ನು ಹಿಂಪಡೆದಿತ್ತು ಎಂಬುದು ಇದೀಗ ಮುನ್ನೆಲೆಗೆ ಬಂದಿದೆ.

ಬಾಬಾಬುಡನ್ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ಮರು ತನಿಖೆಗೆ ಆದೇಶ ನೀಡಲಾಗಿದೆ ಎಂದು ಪ್ರಸಾರವಾಗುತ್ತಿರುವ ಸುದ್ದಿಯು ಬಿಜೆಪಿಯನ್ನು ಕೆರಳಿಸಿದೆ. ಆದರೆ, ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಪೊಲೀಸ್ ಠಾಣೆಯಲ್ಲಿ 9 ವರ್ಷಗಳ ಹಿಂದೆಯೇ ದತ್ತಮಾಲಾಧಾರಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಯಡಿಯೂರಪ್ಪಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೇ ಹಿಂಪಡೆಯಲಾಗಿತ್ತು ಎಂಬುದು ಚರ್ಚೆಗೆ ಗ್ರಾಸವಾಗಿದೆ.

ದತ್ತಪೀಠ ಹೋರಾಟಗಾರರ ಮೇಲಿನ ಪ್ರಕರಣದ ಕುರಿತು ವಿಚಾರಣೆ ನಡೆಸಲು 2020ರ ಮಾರ್ಚ್ 19ರಂದು ಪೊಲೀಸರು ಸರಕಾರಕ್ಕೆ ಮನವಿ ಮಾಡಿದ್ದರು. ಆದರೆ, ಅಂದು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಈ ಪ್ರಕರಣವನ್ನು ವಿಚಾರಣೆಯಿಂದ ಹಿಂಪಡೆದಿರಲಿಲ್ಲ ಮತ್ತು ಪೊಲೀಸರ ಮನವಿಯನ್ನು ಪುರಸ್ಕರಿಸಿರಲಿಲ್ಲ.

ಬದಲಿಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ (ಮೊಕದ್ದಮೆ ಸಂಖ್ಯೆ; 114/2014) ಪ್ರಕರಣವನ್ನು 2020ರ ಮಾರ್ಚ್ 9ರಂದು ಹಿಂಪಡೆಯಲು ಅನುಮೋದಿಸಿದ್ದರು. ಈ ಕುರಿತು ‘ಣhe-ಜಿiಟe.iಟಿ’ ಆರ್ಟಿಐ ಅಡಿಯಲ್ಲಿ ದಾಖಲೆಗಳನ್ನು ಪಡೆದುಕೊಂಡಿದೆ.

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿಯು 2020ರ ಮಾರ್ಚ್ 9ರಂದು ಸಭೆ ನಡೆಸಿತ್ತು. ಈ ಸಭೆಯಲ್ಲಿ ಒಟ್ಟು 164 ಪ್ರಕರಣಗಳಿಗೆ ಸಂಬಂಧಿಸಿದ 19 ಕಡತಗಳನ್ನು ಪರಿಶೀಲನೆಗಾಗಿ ಸಮಿತಿ ಮುಂದೆ ಇರಿಸಿತ್ತು.

ಈ ಪೈಕಿ ದತ್ತ ಮಾಲಾಧಾರಿಗಳ ವಿರುದ್ಧದ ಪ್ರಕರಣದ ಕಡತವೂ ಪಟ್ಟಿಯಲ್ಲಿತ್ತು. 2014ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಆದರೂ ವಿಚಾರಣೆಯಿಂದ ಈ ಪ್ರಕರಣವನ್ನು ಹಿಂಪಡೆಯುವುದು ಸೂಕ್ತ ಎಂದು ಸಭೆಯು ತೀರ್ಮಾನಿಸಿತ್ತು ಎಂಬುದು ಸಭೆಯ ನಡಾವಳಿಯಿಂದ ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ: ಚಿಕ್ಕಮಗಳೂರಿನಲ್ಲಿರುವ ಇನಾಮ್ ದತ್ತಾತ್ರೇಯ ಪೀಠ (ದತ್ತ ಪೀಠ)ದಲ್ಲಿ ನಡೆಯುತ್ತಿದ್ದ ದತ್ತ ಜಯಂತಿಯಲ್ಲಿ ಪಾಲ್ಗೊಳ್ಳಲು ಸಹಕಾರ ಸಾರಿಗೆ ಬಸ್ನಲ್ಲಿ ( ಕೆಎ 18;7827)ಆರೋಪಿತರು ತೆರಳುತ್ತಿದ್ದರು. ಆ ವೇಳೆಯಲ್ಲಿ ವಾಹನವನ್ನು ನಿಲ್ಲಿಸಿ ಅಕ್ರಮಕೂಟ ಕಟ್ಟಿಕೊಂಡು ಮುಸ್ಲಿಮ್ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಕೂಗಿದ್ದರು. ಉರೂಸ್ ಕಾರ್ಯಕ್ರಮ್ಕಕೆಂದು ಕಟ್ಟಿದ್ದ ಬಾವುಟವನ್ನು ದತ್ತಪೀಠದಿಂದ ಬರುವಾಗ ಕಿತ್ತು ಸುಟ್ಟು ಹಾಕುವುದಾಗಿ ಕೂಗಾಡಿದ್ದರು. ಅದೇ ವಾಹನದಲ್ಲಿ ದತ್ತಪೀಠಕ್ಕೆ ಹೋಗಿರುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ವರದಿ ಮಾಡಿದ್ದರು.

ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐಪಿಸಿ 143, 147, 153(ಎ), 504, 506, ರೆ;ವಿ 149 ಅಡಿಯಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು ಎಂಬುದು ದಾಖಲೆಯಿಂದ ತಿಳಿದು ಬಂದಿದೆ.

ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ, ಅಂದು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2020ರ ಮಾರ್ಚ್ 9ರಂದು ನಡೆದಿದ್ದ ಸಚಿವ ಸಂಪುಟ ಉಪ ಸಮಿತಿಯ ಸಭೆಯು ಈ ಪ್ರಕರಣವನ್ನು ಹಿಂಪಡೆದಿತ್ತು.

‘ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ 187/2014, ಬಾಳೆಹೊನ್ನೂರು ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ 114/2014, 41/2015 ಹಾಗೂ ಹರಿಹರಪುರ ಪೊಲೀಸ್ ಠಾಣೆ ಮೊಕದ್ದಮೆ 39/2012ರ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟು ಸಚಿವ ಸಂಪುಟ ನಿರ್ಣಯಕ್ಕೆ ಮಂಡಿಸಲು ಶಿಫಾರಸು ಮಾಡಿತು,’ ಎಂದು ನಡಾವಳಿಯಲ್ಲಿ ದಾಖಲಿಸಿರುವುದು ಗೊತ್ತಾಗಿದೆ.

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ಮರುತನಿಖೆಗೆ ಆದೇಶ ನೀಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದನ್ನು ಸ್ಮರಿಸಬಹುದು.

‘ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X