Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ...

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ ತನಿಖೆಗೆ ರಾಜ್ಯ ಸರಕಾರ ಆದೇಶ

ವಿಚಾರಣಾಧಿಕಾರಿಯಾಗಿ ನ್ಯಾ.ರಾಧಾಕೃಷ್ಣ ಹೊಳ್ಳ ನೇಮಕ

ಜಿ.ಮಹಾಂತೇಶ್ಜಿ.ಮಹಾಂತೇಶ್28 Nov 2024 1:44 PM IST
share
Photo of Brahmavar Sugar Factory

ಬೆಂಗಳೂರು : ಉಡುಪಿಯ ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ವಿವಿಧ ಸ್ವರೂಪದ ಅಕ್ರಮ, ಅವ್ಯವಹಾರಗಳ ಕುರಿತು ವಿಸ್ತೃತವಾಗಿ ವಿಶೇಷ ತನಿಖೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ.

ಈ ಸಂಬಂಧ ನಿವೃತ್ತ ಜಿಲ್ಲಾ ನ್ಯಾಯಾಧೀಶ ರಾಧಾಕೃಷ್ಣ ಹೊಳ್ಳರನ್ನು ವಿಚಾರಣಾ ಅಧಿಕಾರಿಯನ್ನಾಗಿ ನೇಮಿಸಿರುವ ಸರಕಾರವು, 2024ರ ನ.20ರಂದು ಆದೇಶ ಹೊರಡಿಸಿದ್ದು, ಆದೇಶದ ಪ್ರತಿಯು ‘The file.in’ಗೆ ಲಭ್ಯವಾಗಿದೆ.

‘ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರು ಪ್ರಸ್ತಾವ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿರುವ ಸರಕಾರವು ಈ ಕುರಿತು ವಿಸ್ತೃತವಾದ ತನಿಖೆ ನಡೆಸಲು ವಿಶೇಷ ವಿಚಾರಣೆ ನಡೆಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ,’ ಎಂದು ಆದೇಶದಲ್ಲಿ ವಿವರಿಸಿರುವುದು ಗೊತ್ತಾಗಿದೆ.

1965ರಿಂದ 2002-03ನೇ ಸಾಲಿನವರೆಗೆ 38 ವರ್ಷ ಕಬ್ಬು ಅರೆಯುವ ಕಾರ್ಯ ನಿರ್ವಹಿಸಿತ್ತು. 2003-04ರಿಂದ ಕಬ್ಬು ಅರೆಯುವಿಕೆಯನ್ನು ಸ್ಥಗಿತಗೊಳಿಸಿ, 2006ರ ಏಪ್ರಿಲ್ 16ರಿಂದ ಮುಚ್ಚಿದೆ. ಕಾರ್ಖಾನೆಯು 18 ವರ್ಷಗಳಿಂದ ಕಾರ್ಯ ನಿರ್ವಹಿಸದೆ ಸ್ಥಗಿತಗೊಂಡಿದ್ದರಿಂದ ಕಾರ್ಖಾನೆಯ ಯಂತ್ರೋಪಕರಣಗಳ ಹರಾಜಿನಲ್ಲಿ ಅವ್ಯವಹಾರ ನಡೆದಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕರಿಂದ ದೂರು ಸಲ್ಲಿಕೆಯಾಗಿತ್ತು. ಈ ದೂರು ಅರ್ಜಿಯನ್ನು ಇಲಾಖೆಯು ಪರಿಶೀಲಿಸಿ, ವರದಿಸಲ್ಲಿಸಿರುವುದು ಆದೇಶದಿಂದ ತಿಳಿದು ಬಂದಿದೆ. ಕಾರ್ಖಾನೆಯು ಹಳೆಯ ಯಂತ್ರೋಪಕರಣಗಳ ಸ್ಕ್ರಾಪ್ ಮಾರಾಟ ಮಾಡಿದಾಗ ನಿಯಮಾನುಸಾರ ಕಾರ್ಖಾನೆಯಿಂದ ಇ-ವೇ ಬಿಲ್‌ಗಳನ್ನು ಜನರೇಟ್ ಮಾಡಿಲ್ಲ. ಕಾರ್ಖಾನೆಯಿಂದ ಗೇಟ್ ಪಾಸ್‌ಗಳನ್ನೂ ಸಹ ವಿತರಣೆ ಮಾಡಿಲ್ಲ ಎಂದು ತಿಳಿದುಬಂದಿದೆ.

ಯಾವ ಯಾವ ಯಂತ್ರೋಪಕರಣಗಳ ಸ್ಕ್ರಾಪ್ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ಅವುಗಳ ಪ್ರಮಾಣ ತೂಕದ ವಿವರ ದಾಸ್ತಾನುಗಳ ಪಟ್ಟಿಲಭ್ಯವಿಲ್ಲ. ಪ್ರತಿ ಲೋಡ್ ತೆಗೆದುಕೊಂಡು ಹೋದ ಬಗ್ಗೆ ಖರೀದಿದಾರರೇ ಇ-ವೇ ಬಿಲ್ ಮಾಡಿರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಕಾರ್ಖಾನೆಯಿಂದ ತೆಗೆದು ಕೊಂಡು ಹೋದ ತೂಕದ ಪ್ರಮಾಣದ ವಿವರ ಸಹ ಕಾರ್ಖಾನೆಯಲ್ಲಿ ಲಭ್ಯವಿಲ್ಲ. ಟೆಂಡರ್ ಕರಾರಿನಂತೆ ಖರೀದಿದಾರರಿಂದ ಬ್ಯಾಂಕ್ ಗ್ಯಾರಂಟಿ ಪಡೆದಿಲ್ಲ. ಖರೀದಿದಾರರು ನಿಯಮಾನುಸಾರ ಜಿಎಸ್‌ಟಿ ಕಟಾಯಿಸಿಲ್ಲ. ಸಂಘದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು ವಾರ್ಷಿಕ ಮಹಾಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆದಿಲ್ಲ.

ಸಂಘದ ಆಡಳಿತ ಮಂಡಳಿಯು 2022-23ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಪೂರ್ಣಗೊಳಿಸದೆ 2021-22 ಮತ್ತು 2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಂಡಿಸಲು ವಿಫಲವಾಗಿದೆ. ಇದು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಕಲಂ 29 ಸಿ ರೀತಿ ಆಡಳಿತ ಮಂಡಳಿಯ ಕರ್ತವ್ಯ ಲೋಪವಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

2023ರ ಸೆ.25ರಂದು ಸಕ್ಕರೆ ಕಾರ್ಖಾನೆಯ ವಾರ್ಷಿಕ ಮಹಾಸಭೆ ನಡೆದಿದ್ದು, ಈ ಸಭೆಯಲ್ಲಿ ಕಾರ್ಖಾನೆಯ ಯಂತ್ರೋಪಕರಣ ಹಾಗೂ ಕಟ್ಟಡ ಮಾರಾಟದಲ್ಲಿ ಅವ್ಯವಹಾರ ನಡೆದಿದ್ದು ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಪಾರದರ್ಶಕ ಕಾಯ್ದೆ ಅನುಸರಿಸಿಲ್ಲ. ಹಾಗೂ ಹಳೆಯ ಯಂತ್ರೋಪಕರಣಗಳ ಮಾರಾಟದ ನಂತರ ಅಗತ್ಯಕ್ಕಿಂತ ಹೆಚ್ಚಾಗಿ ಇ-ವೇ ಬಿಲ್ ಗೇಟ್ ಪಾಸ್ ನೀಡಿ ಅಕ್ರಮ ನಡೆಸಲಾಗಿದೆ.

ಟೆಂಡರ್‌ದಾರರಿಂದ ನಿಯಮಾನುಸಾರ ಗ್ಯಾರಂಟಿ ಹಣ ಪಡೆದಿಲ್ಲ ಮತ್ತು ಮಾರಾಟ ಮಾಡಲಾದ ವಸ್ತುಗಳ ಬಾಬ್ತು ಜಿಎಸ್‌ಟಿ ಪಡೆದಿಲ್ಲ ಎಂದು ತೀವ್ರವಾಗಿ ಆಕ್ಷೇಪಿಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನಿಸಿರು ವುದು ಗೊತ್ತಾಗಿದೆ.

ಕಾರ್ಖಾನೆಯ ಸ್ಕ್ರಾಪ್ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ನಿಯಮ ಬಾಹಿರ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರಕಲಂ 64ರ ಶಾಸನ ಬದ್ಧ ವಿಚಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಹಕಾರ ಸಂಘಗಳ ಉಪ ನಿಬಂಧಕರು 2023ರ ನವಂಬರ್ 24ರಂದು ಕೋರಿದ್ದರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X