Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶಿವಪುರ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ...

ಶಿವಪುರ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ತರಕಾರಿ ತೋಟ !

ವಾರ್ತಾಭಾರತಿವಾರ್ತಾಭಾರತಿ23 March 2026 9:10 AM IST
share
ಶಿವಪುರ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ತರಕಾರಿ ತೋಟ !
ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳೇ ಬೆಳೆಸಿದ ಸಾವಯವ ತರಕಾರಿ

ಉಡುಪಿ: ಮಕ್ಕಳಿಗೆ ಶಾಲಾ ಪಠ್ಯದೊಂದಿಗೆ ಕೃಷಿಯ ಬಗ್ಗೆ ಒಲವು, ಪರಿಸರ ಪ್ರೀತಿ, ಸ್ವಾವಲಂಬಿ ಬದುಕಿನ ಪಾಠವೂ ಬಹಳ ಮುಖ್ಯ. ಸುಂದರ ಭವಿಷ್ಯ ಕಟ್ಟಿಕೊಳ್ಳಲು ಇದು ಅನುಕೂಲವಾಗುತ್ತದೆ. ಈ ದಿಕ್ಕಿನಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಸರಕಾರಿ ಪ್ರಾಥಮಿಕ ಶಾಲೆ ಮುನ್ನಡೆಯುತ್ತಿದೆ. ಶಿಕ್ಷಣದ ಜೊತೆ ಜೀವನ ಮೌಲ್ಯಗಳನ್ನು ಬೆಳೆಸುವ ವಿಶಿಷ್ಟ ಪ್ರಯತ್ನ ಎಲ್ಲರ ಗಮನ ಸೆಳೆಯುತ್ತಿದೆ.

ಈ ಸರಕಾರಿ ಶಾಲೆಯ ಆವರಣದಲ್ಲೇ ಸಾವಯವ ವಿಧಾನದಲ್ಲಿ ತರಕಾರಿ ಬೆಳೆಯಲಾಗು ತ್ತಿದೆ. ಇಲ್ಲಿ ಬೆಳೆದ ಸಾವಯವ ತರಕಾರಿಗಳನ್ನೇ ಶಾಲೆಯ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಿ ಕೊಳ್ಳಲಾಗುತ್ತದೆ. ತಮಗೆ ಬೇಕಾದ ಎಲ್ಲ ರೀತಿಯ ತರಕಾರಿಗಳನ್ನು ತಾವೇ ಬೆಳೆಯುವ ಮೂಲಕ ಈ ಶಾಲೆ ಸ್ವಾವಲಂಬಿಗೆ ಮಾದರಿಯಾಗಿದೆ.

ಈ ಶಾಲೆಯಲ್ಲಿ ಎಲ್‌ಕೆಜಿಯಿಂದ ಏಳನೇ ತರಗತಿಯವರೆಗೆ ಸುಮಾರು 168 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಕ್ಕಳಿಗೆ ಪಠ್ಯದ ಜೊತೆ ಕೃಷಿಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ತರಕಾರಿ ತೋಟದ ಕಾರ್ಯಗಳಲ್ಲಿ ಭಾಗವಹಿಸುವಂತೆ ಮಾಡಲಾಗಿದೆ.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಮಾನಂದ ಶೆಟ್ಟಿಯವರ ಮಾರ್ಗದರ್ಶನ ಹಾಗೂ ವಿಶೇಷ ಮುತುವರ್ಜಿಯಲ್ಲಿ ಶಾಲಾ ಆವರಣದಲ್ಲಿ ರಾಷ್ಟ್ರೀಯ ಹಸಿರು ಪಡೆ ಜಲಬಿಂದು ಇಕೋ ಕ್ಲಬ್ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಹಕಾರದಿಂದ ತೋಟವನ್ನು ರೂಪಿಸಿಕೊಳ್ಳಲಾಗಿದೆ.

ಇಲ್ಲಿನ ಕೈತೋಟದಲ್ಲಿ ಬಸಳೆ ಸೊಪ್ಪು, ಚಾಪೆ ಹರಿವೆ ಸೊಪ್ಪು, ಬೆಂಡೆಕಾಯಿ, ಬದನೆಕಾಯಿ, ಸೌತೆಕಾಯಿ, ಮೂರು ಬಗೆಯ ಸೋರೆಕಾಯಿ ಸೇರಿದಂತೆ ವಿವಿಧ ತರಕಾರಿಗಳು ಸಮೃದ್ಧವಾಗಿ ಬೆಳೆದು ನಿಂತಿದೆ. ಅನುಭವಿ ಕೃಷಿಕರಿಗೆ ಸಾಟಿ ಇಲ್ಲದ ರೀತಿಯಲ್ಲಿ ಈ ತೋಟ ಎಲ್ಲ ಗಮನಸೆಳೆಯುತ್ತಿದೆ. ಈ ರೀತಿಯ ಕೃಷಿ ಚಟುವಟಿಕೆಯಿಂದ ಶಾಲಾ ಮಕ್ಕಳಿಗೆ ಆರೋಗ್ಯಕರ ಹಾಗೂ ತಾಜಾ ಆಹಾರ ಲಭಿಸುತ್ತಿದೆ. ಅದರ ಜೊತೆಗೆ ಅವರಿಗೆ ಕೃಷಿಯ ಮಹತ್ವವನ್ನು ಬಾಲ್ಯದಲ್ಲೇ ಅರಿಯುವ ಅವಕಾಶವೂ ಸಿಗುತ್ತಿದೆ.

‘ಕಳೆದ ಹತ್ತು ವರ್ಷಗಳಿಂದ ಈ ಶಾಲೆಯಲ್ಲಿ ವರ್ಷಕ್ಕೆ ಎರಡು ಬಾರಿ ತರಕಾರಿ ಬೆಳೆಯುತ್ತಿದ್ದು, ಮಕ್ಕಳಲ್ಲಿ ಕೃಷಿಯ ಬಗ್ಗೆ ಒಲವು ಆಸಕ್ತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಅಲ್ಲದೆ ಮುಂಬರುವ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಲ್ಲಿ ಈಗಲೇ ಕೃಷಿಯ ಬಗ್ಗೆ ಆಸಕ್ತಿ ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ ಎನ್ನುತ್ತಾರೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಮಾನಂದ.

ಗೈರುಹಾಜರಿ ಪ್ರಮಾಣ ಇಳಿಕೆ :

ಬಹುತೇಕ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ತೀರಾ ಕಡಿಮೆ. ಇರುವ ಮಕ್ಕಳು ಕೂಡ ಶಾಲೆಗೆ ಗೈರುಹಾಜರಾಗುವುದು ಕೂಡ ಹೆಚ್ಚು. ಆದರೆ ಶಿವಪುರ ಶಾಲೆ ಇದಕ್ಕೆಲ್ಲ ಅಪವಾದ ಎನಿಸಿಕೊಂಡಿದೆ. ಇಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಬಳಿಕ ಮಕ್ಕಳ ಗೈರು ಹಾಜರಾತಿ ಕಡಿಮೆಯಾಗಿರುವುದು ಬಹಳ ವಿಶೇಷ.

ಬಾಲ್ಯದಲ್ಲೇ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅವರು ಬಹಳ ಉತ್ಸುಕತೆಯಿಂದ ಅದರಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂಬುದಕ್ಕೆ ಈ ಶಾಲಾ ಮಕ್ಕಳೇ ನಿದರ್ಶನ. ತರಕಾರಿ ಬೆಳೆಯಲು ಆರಂಭಿಸಿದ ನಂತರ ವಿದ್ಯಾರ್ಥಿಗಳು ಬೆಳಗ್ಗೆ 8 ಗಂಟೆಗೆ ಶಾಲೆಗೆ ಬರುತ್ತಿದ್ದು, ಗೈರುಹಾಜರಿಯ ಪ್ರಮಾಣವೂ ಕಡಿಮೆಯಾಗಿದೆ.

ನಮ್ಮ ಶಾಲೆಯ ತರಕಾರಿ ಬೆಳೆಯ ಬಗ್ಗೆ ಬೇರೆ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಇಲಾಖೆ ಅಧಿಕಾರಿಗಳು ಬಂದು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾವಯವ ಕೃಷಿಯ ಮೂಲಕ ಶಿಕ್ಷಣ, ಆರೋಗ್ಯ ಮತ್ತು ಸ್ವಾವಲಂಬಿತ್ವವನ್ನು ಒಂದೇ ಸಮಯದಲ್ಲಿ ಮಕ್ಕಳಿಗೆ ಪರಿಚಯಿಸುವ ಈ ಪ್ರಯತ್ನಕ್ಕೆ ದಾನಿಗಳ ನೆರವು ಪೋಷಕರ ಸಹಕಾರ ಮತ್ತು ಶಿಕ್ಷಕ ವೃಂದದ ವಿಶೇಷ ಕಾಳಜಿಯಿಂದ ಸಾಕಾರವಾಗಿದೆ.

-ರಮಾನಂದ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರು

ಮಕ್ಕಳ ಶ್ರಮಕ್ಕೆ ಪೋಷಕರ ಸಾಥ್ :

ಬೆಳಗ್ಗೆ 8ರಿಂದ 9ರವರೆಗೆ ಹಾಗೂ ಸಂಜೆ 5ರಿಂದ 6ರವರೆಗೆ ವಿದ್ಯಾರ್ಥಿಗಳ ಜೊತೆ ಶಿಕ್ಷಕರು ಹಾಗೂ ಪೋಷಕರು ತರಕಾರಿ ಗಿಡಗಳಿಗೆ ನೀರುಣಿಸುವ, ಕಳೆ ಕೀಳುವ ಕಾಯಕದಲ್ಲಿ ತೊಡಗಿಸಿಕೊಳ್ಳುತ್ತಾರೆ.

ಪೋಷಕರು ತಮ್ಮ ಮನೆಯಿಂದ ಸಾವಯವ ಗೊಬ್ಬರವನ್ನೇ ತಂದು ತರಕಾರಿ ತೋಟಕ್ಕೆ ಹಾಕಿ ಪೋಷಣೆ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಕೆಲಸದ ಗೌರವ, ಶ್ರಮದ ಮೌಲ್ಯ ಮತ್ತು ಪ್ರಕೃತಿಯ ಮೇಲಿನ ಪ್ರೀತಿ ಮೂಡಿಸಲು ಸಾಧ್ಯವಾಗುತ್ತಿದೆ. ಮುಖ್ಯ ಶಿಕ್ಷಕಿ ಗುಲಾಬಿ, ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಪೂಜಾರಿ ಹಾಗೂ ಪೋಷಕರ ಹಾಗೂ ದಾನಿಗಳ ನೆರವಿನಿಂದ ಈ ತೋಟ ಸಮೃದ್ಧವಾಗಿ ಬೆಳೆದು ನಿಂತಿದೆ.

Tags

schoolstudents
share
ವಾರ್ತಾಭಾರತಿ
ವಾರ್ತಾಭಾರತಿ
Next Story
X