ಮಧ್ಯಪ್ರದೇಶದಲ್ಲಿ ಪ್ರತೀ ದಿನ 7 ಮಂದಿ ಪರಿಶಿಷ್ಟ ಜಾತಿ, ಬುಡಕಟ್ಟು ಮಹಿಳೆಯರ ಅತ್ಯಾಚಾರ!

ಸರಕಾರದ ವರದಿಯ ಪ್ರಕಾರ 2022ರಿಂದ 2024ರ ನಡುವೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಟ್ಟು 7,418 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಗಳು ದಾಖಲಾಗಿವೆ.
ಇವುಗಳಲ್ಲಿ 558 ಮಹಿಳೆಯರ ಹತ್ಯೆ; 338 ಮಹಿಳೆಯರ ಸಾಮೂಹಿಕ ಅತ್ಯಾಚಾರ ನಡೆದಿದೆ.
1906 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಗುರಿಯಾಗಿದ್ದಾರೆ.
5983 ಲೈಂಗಿಕ ಕಿರುಕುಳ ಪ್ರಕರಣಗಳೂ ದಾಖಲಾಗಿವೆ.
ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಿಳೆಯರ ಮೇಲಿನ ಒಟ್ಟು 44978 ಅಪರಾಧ ಪ್ರಕರಣಗಳು ದಾಖಲಾಗಿವೆ