HMPV ಪತ್ತೆ ಹಿನ್ನೆಲೆ: ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಪ್ರಕಟ

ಚೀನಾದಲ್ಲಿ ಪತ್ತೆಯಾಗಿರುವ HMPV ನ ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆ
ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ
ಮಾರ್ಗಸೂಚಿಯಲ್ಲಿರುವುದೇನು?
ಜನಸಂದಣಿ ಇರುವ ಸ್ಥಳಗಳಿಂದ ದೂರವಿರಿ
ಕೈಗಳನ್ನು ಸಾಬೂನು ಅಥವಾ ಸ್ಯಾನಿಟೈಜರ್ನಿಂದ ಹೆಚ್ಚಾಗಿ ತೊಳೆಯಿರಿ
ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ ನಿಂದ ಮುಚ್ಚಿಕೊಳ್ಳಿ
ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಿ
ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ
ಕಣ್ಣು, ಮೂಗು ಮತ್ತು ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸುವುದನ್ನು ತಪ್ಪಿಸಿ
ಅನಾರೋಗ್ಯಪೀಡಿತರ ಸಂಪರ್ಕದಿಂದ ದೂರವಿರಿ ಮತ್ತು ಅವರೊಂದಿಗೆ ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳಬೇಡಿ
ಟಿಶ್ಯೂ ಪೇಪರ್ ಮತ್ತು ಕೈ ಕರ್ಚೀಫ್ ಮರುಬಳಕೆ ಮಾಡಬೇಡಿ
ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಪ್ಪಿಸಿ
ಆರೋಗ್ಯದಲ್ಲಿ ಏರುಪೇರಾದರೆ ವೈದ್ಯರನ್ನು ಸಂಪರ್ಕಿಸಿ ಔಷಧಿಯನ್ನು ಪಡೆಯಿರಿ