ʼಆಪರೇಷನ್ ಸಿಂಧೂರʼ | ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿದ್ದ ಇಬ್ಬರು ಮಹಿಳಾ ಅಧಿಕಾರಿಗಳು

ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತೀಯ ಸೇನೆ ನಡೆಸಿದ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರು ಭಾಗಿ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕಾರದ ಬಗ್ಗೆ ಮಾಹಿತಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ
ಕರ್ನಲ್ ಸೋಫಿಯಾ ಕುರೇಷಿ ಯಾರು?
ಭಾರತೀಯ ಸೇನೆಯ ಸಿಗ್ನಲ್ಸ್ ಕಾರ್ಪ್ಸ್‌ನ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಗುಜರಾತ್ ಮೂಲದವರು
2016ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಸೋಫಿಯಾ ಖುರೇಷಿ
ಭಾರತ ಆಯೋಜಿಸಿದ್ದ ಅತಿದೊಡ್ಡ ವಿದೇಶಿ ಮಿಲಿಟರಿ ಕವಾಯತಿನಲ್ಲಿ ಭಾರತದ ತಂಡವನ್ನು ಮುನ್ನಡೆಸಿದ್ದ ಖುರೇಷಿ
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಯಾರು?
2004ರ ಡಿ.18ರಲ್ಲಿ ಭಾರತೀಯ ವಾಯುಪಡೆಗೆ ನಿಯೋಜನೆಗೊಂಡ ವ್ಯೂಮಿಕಾ ಸಿಂಗ್ ಅವರು ಪ್ರಸ್ತುತ ಅತ್ಯುತ್ತಮ ವಿಂಗ್ ಕಮಾಂಡರ್‌ಗಳಲ್ಲಿ ಒಬ್ಬರು.
ಚೀತಾ, ಚೇತಕ್‌ನಂತಹ ಯುದ್ಧ ಹೆಲಿಕಾಪ್ಟರ್‌ಗಳನ್ನು ಹಾರಿಸುವಲ್ಲಿ ಪರಿಣತಿ ಹೊಂದಿದ್ದಾರೆ.
ವಾಯುಪಡೆಗೆ ನಿಯೋಜನೆಗೊಂಡ ಆರಂಭದಲ್ಲಿ ಅವರು ಹೆಲಿಕಾಪ್ಟರ್ ಪೈಲಟ್ ಆಗಿದ್ದರು.
ಸತತ ಕಠಿಣ ಪರಿಶ್ರಮದಿಂದ 13 ವರ್ಷಗಳ ಬಳಿಕ 2017ರ ಡಿ.18ರಲ್ಲಿ ಇವರಿಗೆ ವಿಂಗ್ ಕಮಾಂಡರ್ ಹುದ್ದೆ ನೀಡಲಾಯಿತು.