Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ನೀವು ನನ್ನನ್ನು ಶೂಟ್ ಮಾಡುತ್ತೀರಾ?';...

'ನೀವು ನನ್ನನ್ನು ಶೂಟ್ ಮಾಡುತ್ತೀರಾ?'; ಬದುಕಿರುವವರೆಗೂ ಜನರಿಗೆ ಡಿಸೆಂಬರ್ 6 ಅನ್ನು ನೆನಪಿಸುತ್ತೇನೆ ಎಂದ ಅಸದುದ್ದೀನ್ ಉವೈಸಿ

ವಾರ್ತಾಭಾರತಿವಾರ್ತಾಭಾರತಿ4 Jan 2024 11:56 PM IST
share
ನೀವು ನನ್ನನ್ನು ಶೂಟ್ ಮಾಡುತ್ತೀರಾ?; ಬದುಕಿರುವವರೆಗೂ ಜನರಿಗೆ ಡಿಸೆಂಬರ್ 6 ಅನ್ನು ನೆನಪಿಸುತ್ತೇನೆ ಎಂದ ಅಸದುದ್ದೀನ್ ಉವೈಸಿ

ಹೈದರಾಬಾದ್: ಉತ್ತರ ಪ್ರದೇಶದ ಐತಿಹಾಸಿಕ ಬಾಬರಿ ಮಸೀದಿಯನ್ನು ಹಿಂದುತ್ವದ ಗುಂಪು ಧ್ವಂಸಗೊಳಿಸಿದ ಡಿಸೆಂಬರ್ 6 ರ ದಿನವನ್ನು ಜನರಿಗೆ ನಿರಂತರವಾಗಿ ನೆನಪಿಸುವ ತನ್ನ ಬದ್ಧತೆಯನ್ನು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸದುದ್ದೀನ್ ಉವೈಸಿ ಬುಧವಾರ ಪುನರುಚ್ಛರಿಸಿದ್ದಾರೆ.

"ನಾನು ಬದುಕಿರುವವರೆಗೂ, ಡಿಸೆಂಬರ್ 6 ರ ಬಗ್ಗೆ ಜನರಿಗೆ ನೆನಪಿಸುತ್ತೇನೆ. ಯಾರಾದರೂ ನಾನು ಹೇಳುವುದನ್ನು ಕೇಳಲು ಬಯಸದಿದ್ದರೆ, ಅವರು ತಮ್ಮ ಕಿವಿಯನ್ನು ಹತ್ತಿ ತುಂಬಿಕೊಳ್ಳಬಹುದು. ಈ ಬಗ್ಗೆ ಪ್ರಶ್ನಿಸದಿರಲು ನಾವು ಇಸ್ರೇಲ್ ಅಥವಾ ಉತ್ತರ ಕೊರಿಯಾದಲ್ಲಿ ಇದ್ದೇವೋ? ನಾನು ಎತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಲಿ. ಅವರು ನನ್ನನ್ನು ಶೂಟ್ ಮಾಡುತ್ತಾರೆಯೇ? ಅವರು ಈಗಾಗಲೇ ನನ್ನ ಕಾರಿಗೆ ಗುಂಡು ಹಾರಿಸಿದ್ದಾರೆ, ಅದನ್ನೂ ಮಾಡಲಿ" ಎಂದು ಉವೈಸಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮಸೀದಿಗಳ ರಕ್ಷಣೆಯ ಕುರಿತು ತಮ್ಮ ಹೇಳಿಕೆಗಳನ್ನು ಸಂಸದ ಅಸದುದ್ದೀನ್ ಉವೈಸಿ ಸಮರ್ಥಿಸಿಕೊಂಡರು. ತನ್ನ ಭಾಷಣವು ವಾಸ್ತವದ ಮೇಲೆ ನೆಲೆಗೊಂಡಿದೆ ಎಂದು ಅವರು ಒತ್ತಿ ಹೇಳಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೂಜಾ ಸ್ಥಳಗಳ ಕಾಯಿದೆಯನ್ನು ದೇಶದ ಕಾನೂನು ಎಂದು ದೃಢೀಕರಿಸಿದರೆ, ಮಸೀದಿಗಳ ಮೇಲಿನ ಅನಿಶ್ಚಿತತೆ ಮತ್ತು ಆತಂಕಗಳನ್ನು ಪರಿಹರಿಸಬಹುದು” ಎಂದು ಉವೈಸಿ ಹೇಳಿದ್ದಾರೆ.

"ನನ್ನ ಭಾಷಣವು ಸತ್ಯವನ್ನು ಆಧರಿಸಿದೆ. ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸವಾಗಲಿಲ್ಲವೇ? ಯಾರಿಗೂ ಶಿಕ್ಷೆಯಾಗಲಿಲ್ಲ ಎಂಬುದು ಸತ್ಯವಲ್ಲವೇ? ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೋದಿ ಸರ್ಕಾರ ಏಕೆ ಮೇಲ್ಮನವಿ ಸಲ್ಲಿಸಲಿಲ್ಲ? ಒಂದು ವೇಳೆ ಮಸೀದಿ ಇದ್ದಿದ್ದರೆ, ಸುಪ್ರೀಂ ಕೋರ್ಟ್‌ನಿಂದ ವಿಭಿನ್ನ ತೀರ್ಪು ಬರುತ್ತಿತ್ತೇ?” ಎಂದು ಪ್ರಶ್ನಿಸಿದ್ದಾರೆ.

ಇತರ ಮಸೀದಿಗಳಿಗೆ ಇತ್ತೀಚೆಗಿನ ಬೆದರಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಉವೈಸಿ, "ತೀರ್ಪು ನಂಬಿಕೆಯ ಮೇಲೆ ಆಧಾರಿತವಾಗಿದೆ ಎಂಬ ಆತಂಕ ನಮಗಿತ್ತು. ಸುನೆಹ್ರಿ ಮತ್ತು ಟೀಲೆ ವಾಲಿ ಮಸೀದಿಗಳಂತಹ ಇತರ ಮಸೀದಿಗಳು ಬೆದರಿಕೆಗಳನ್ನು ಎದುರಿಸುತ್ತಿರುವಾಗ ನಮ್ಮ ಆತಂಕಗಳು ಈಗ ನಿಜವೆಂದು ಸಾಬೀತಾಗಿದೆ. ಹೌದು, ತೀರ್ಪು ಅಂತಿಮವಾಗಿದೆ. ಆದರೆ ನ್ಯಾಯಮೂರ್ತಿ ವರ್ಮಾ ಹೇಳಿದಂತೆ, ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ದೋಷಾತೀತವೇನಲ್ಲ” ,ಎಂದು ಹೇಳಿದ್ದಾರೆ.

ರಾಮಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು (ಪ್ರಾಣ ಪ್ರತಿಷ್ಠಾ) ಜನವರಿ 22 ರಂದು ನಿಗದಿಪಡಿಸಲಾಗಿದೆ. ನವೆಂಬರ್ 9, 2019 ರಂದು ಭಾರತದ ಸರ್ವೋಚ್ಚ ನ್ಯಾಯಾಲಯವು ದೇವಾಲಯಕ್ಕೆ ಸಂಪೂರ್ಣ ಭೂಮಿಯನ್ನು ಮಂಜೂರು ಮಾಡುವಂತೆ ಆದೇಶಿಸಿದ ನಂತರ ದೇವಾಲಯದ ನಿರ್ಮಾಣವು ಪ್ರಾರಂಭವಾಯಿತು. ಈ ಸ್ಥಳವು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಡಿಸೆಂಬರ್ 6, 1992 ರಂದು ಹಿಂದೂ ರಾಷ್ಟ್ರೀಯವಾದಿಗಳ ಗುಂಪೊಂದು ಕೆಡವಲ್ಪಟ್ಟ ಬಾಬರಿ ಮಸೀದಿಯ ಸ್ಥಳವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X