ತೊಕ್ಕೊಟ್ಟು: ಜಮಾಅತೇ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಮಾಅತೇ ಇಸ್ಲಾಮೀ ಹಿಂದ್ ಮಹಿಳಾ ವಿಭಾಗ, ಉಳ್ಳಾಲ ಇದರ ವತಿಯಿಂದ ಮಹಿಳಾ ವಿಶೇಷ ಕಾರ್ಯಕ್ರಮ ತೊಕ್ಕೊಟಿನ ಕಾರುಣ್ಯ ಸದನದಲ್ಲಿ ಜೂನ್ 27ರಂದು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಡ್ಯಾರ್ ನ ಕೇಂಬ್ರಿಡ್ಜ್ ಇಂಟರ್ ನ್ಯಾಶನಲ್ ಸ್ಕೂಲ್ ಪ್ರಾಂಶುಪಾಲೆ ಬಬಿತಾ ಸೂರಜ್ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾತನಾಡಿದರು.
ಉಳ್ಳಾಲ ತಾಲೂಕು ಮಹಿಳಾ ಮಂಡಳಿ ಒಕ್ಕೂಟದ ಅಧ್ಯಕ್ಷೆ ದೇವಕಿ ಆರ್. ಉಳ್ಳಾಲ, ಡಿಸಿಸಿ ಉಪಾಧ್ಯಕ್ಷೆ ರಝಿಯಾ ಇಬ್ರಾಹೀಂ ಉಪಸ್ಥಿತರಿದ್ದರು.
ಸಕಿನಾ ಬರ್ವಾ ಕಿರಾಅತ್ ಪಠಿಸಿದರು. ಸಕೀನಾ ಅತಿಥಿಗಳನ್ನು ಸ್ವಾಗತಿಸಿದರು. ಝೀನತ್ ಹಸನ್ ಪ್ರಾಸ್ತಾವಿಕವಾಗಿ ಮಾನತಾಡಿದರು.
ಜಮಾಅತೇ ಇಸ್ಲಾಮೀ ಹಿಂದ್ ಮಹಿಳಾ ವಿಭಾಗ, ಉಳ್ಳಾಲ ಇದರ ಜೊತೆ ಕಾರ್ಯದರ್ಶಿ ಸುಮಯ್ಯ ನಿಝಾಮ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Next Story






