ರಸ್ತೆಯ ಇಕ್ಕೆಲಗಳಲ್ಲಿ ಆಳೆತ್ತರ ಬೆಳೆದ ಗಿಡಗಂಟಿಗಳು; ಸಂಕಷ್ಟದಲ್ಲಿ ಸ್ಥಳೀಯರು, ವಾಹನ ಸವಾರರು

ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಖಾನಾಪೂರದಿಂದ, ಕರಣಿಗಿ ಮತ್ತು ಬಲಕಲ್ ಕಡೆ ಹೋಗುವ ರಸ್ತೆಗಳಲ್ಲಿ ತೆಗ್ಗು ದಿನ್ನೆಗಳಿಂದ ಸಂಚಾರ ಸಂಪೂರ್ಣ ಹಾಳಾಗಿದ್ದು ರೈತರ ಎತ್ತಿನ ಗಾಡಿ, ಟಂಟಂ, ಟ್ರಾಕ್ಟರ್ ಸೇರಿದಂತೆ ಹಲವು ವಾಹನಗಳು ಹೋಗುವುದು ಕಷ್ಟವಾಗಿದ್ದು ರೈತರು ತೀವ್ರ ತೊಂದರೆಯಲ್ಲಿ ಸಿಲುಕಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಂಟಿಗಳು ಬೆಳೆದು ಎದುರಿಗೆ ಬರುವ ವಾಹನಗಳು ಕಾಣದೆ ಅಪಘಾತದ ಭೀತಿ ಉಂಟಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಅಖಿಲ ಭಾರತೀಯ ಕೊಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಮಾತನಾಡಿ, ರಸ್ತೆಯ ದುಸ್ಥಿತಿಯಿಂದ ದನಕರುಗಳು, ವಾಹನ ಸವಾರರು, ವಿದ್ಯಾರ್ಥಿಗಳು, ಸಾರ್ವಜನಿಕರು ಎಲ್ಲರೂ ಕಷ್ಟ ಪಡುವಂತಾಗಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಮಸ್ಯೆ ಕಡೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ರಸ್ತೆ ದುರಸ್ತಿ ಮತ್ತು ಜಾಲಿ ಕಂಟಿ ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ಯಾದಗಿರಿ–ಸುರಪುರ–ಶಹಾಪುರ ಮುಖ್ಯರಸ್ತೆ ಬಂದ್ ಮಾಡಿ ಹೋರಾಟಕ್ಕೆ ಮುಂದಾಗುತ್ತೇವೆ.
-ಉಮೇಶ್ ಕೆ ಮುದ್ನಾಳ
ಅಖಿಲ ಭಾರತೀಯ ಕೊಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ







