ಯಾದಗಿರಿ ಜಿಲ್ಲೆಯಲ್ಲಿ ನಿರಂತರ ಮಳೆ | ಆ.19 ಮತ್ತು 20ರಂದು ಶಾಲಾ-ಕಾಲೇಜುಗಳಿಗೆ ರಜೆ

ಸಾಂದರ್ಭಿಕ ಚಿತ್ರ
ಯಾದಗಿರಿ : ವಾಯುಭಾರ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಇನ್ನೂ 3-4 ದಿನಗಳವರೆಗೆ ಸುರಿಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಇಂದು(ಆ.19) ಮತ್ತು ನಾಳೆ (ಆ.20) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಇಂದು(ಆ.19)ರಂದು ಬೆಳಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ವಿಪರೀತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳು ಸಕಾಲಕ್ಕೆ ಶಾಲೆಗಳಿಗೆ ಹೋಗಿ ಬರಲು ಕಷ್ಟವಾಗುವ ಕಾರಣ ಮತ್ತು ಆರೋಗ್ಯದ ದೃಷ್ಟಿಯಿಂದ ಎರಡು ದಿನಗಳ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Next Story





