ಯಾದಗಿರಿ | ಡಿಸೆಂಬರ್ 6ರಂದು ನಮ್ಮ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ಗಡಿನಾಡ ಹಬ್ಬ ಹಾಗೂ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

ಯಾದಗಿರಿ: 70ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಡಿಸೆಂಬರ್ 6ರಂದು ಯಾದಗಿರಿಯಲ್ಲಿ ನಮ್ಮ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ಸ್ವಾಭಿಮಾನಿ ಕನ್ನಡಿಗರ ಗಡಿನಾಡ ಹಬ್ಬ ಹಾಗೂ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ನಮ್ಮ ಕರುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರವಿ. ಕೆ ಮುದ್ನಾಳ ಹೇಳಿದರು.
ಈ ಕುರಿತು ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿ. ಕೆ ಮುದ್ನಾಳ, ಯಾದಗಿರಿ ನಗರದ ಸ್ಟೇಷನ್ ರಸ್ತೆಯ ವಿದ್ಯಾ ಮಂಗಲ ಕಾರ್ಯಾಲಯದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸಮಾರಂಭದ ದಿವ್ಯ ಸಾನಿಧ್ಯವನ್ನು ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿ ಖಾಸಾ ಮಠ ಗುರುಮಿಠಕಲ್, ಶಹಾಪುರ ತಾಲೂಕಿನ ಮಹಲ್ ರೋಜಾ ಶ್ರೀಗಳಾದ ಮಲ್ಲಿಕಾರ್ಜುನ್ ಮುತ್ಯಾ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನುಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪೂರ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ಬಿಜೆಪಿ ಹಿರಿಯ ಮುಖಂಡ ರಾಚನ ಗೌಡ ಮುದ್ನಾಳ, ನಮ್ಮ ಕರುನಾಡು ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ ಶಂಕರೇಗೌಡ ಅವರು ನೆರವೇರಿಸುವರು.
ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರುತ್ವಿಕ್ ಶಂಕರ್, ನಗರ ಸಭೆ ಅಧ್ಯಕ್ಷೆ ಲಲಿತಾ ಅನಪುರ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ರವಿ. ಕೆ. ಮುದ್ನಾಳ ವಹಿಸುವರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಾಗೂ ಮುಖ್ಯ ಅತಿಥಿಗಳಾಗಿ ವಿವಿಧ ಪಕ್ಷ, ಸಂಘಟನೆಗಳ ಪ್ರಮುಖ ಮುಖಂಡರು ಕನ್ನಡ ಪರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಉತ್ತರ ಕರ್ನಾಟಕದ ಹೆಸರಾಂತ ಗಾಯಕರು, ಹಾಸ್ಯ ಕಲಾವಿದರಿಂದ ಜಾನಪದ ಹಾಗೂ ಹಾಸ್ಯಭರಿತ ರಸಮಂಜರಿ ಕಾರ್ಯಕ್ರಮಗಳು ನಡೆಯಲಿವೆ.
ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಶಂಕರ್ ಗೌಡ ಯಲಸತ್ತಿ, ಪ್ರಧಾನ ಕಾರ್ಯದರ್ಶಿ ತಿರುಪತಿ ಚವ್ಹಾಣ, ಕಾರ್ಯಾಧ್ಯಕ್ಷ ವಿಶ್ವನಾಥ ಎಸ್ ತಂಗಡಗಿ, ಗುರುಮಠಕಲ್ ತಾಲೂಕು ಅಧ್ಯಕ್ಷ ಅಶೋಕ್ ರೆಡ್ಡಿ ವಂಕಸಂಬ್ರ, ಯಾದಗಿರಿ ತಾಲೂಕು ಅಧ್ಯಕ್ಷ ಸಿದ್ದು ಸಾಹುಕಾರ, ಜಿಲ್ಲಾ ಸಂಚಾಲಕ ಬನ್ನಪ್ಪ ಪೂಜಾರಿ, ತಿಪ್ಪಯ್ಯ ವಂಕಸಂಬ್ರ, ಮಂಜುನಾಥ ಗೌಡ ಮಾಧ್ವರ, ಭರತ ಮಾಧ್ವಾರ, ವಸಂತ ಯಲಸತ್ತಿ, ರಫೀಕ್ ತುರುಕನದೊಡ್ಡಿ , ಅಂಬರೀಶ್ ಅಲಿಪುರ ಉಪಸ್ಥಿತರಿದ್ದರು.







