Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸಾಯಿಬಾಬಾರ ಮಾನವೀಯ ಸಂದೇಶಗಳಿಂದ ಸದೃಢ...

ಸಾಯಿಬಾಬಾರ ಮಾನವೀಯ ಸಂದೇಶಗಳಿಂದ ಸದೃಢ ಸಮಾಜ ನಿರ್ಮಾಣ: ನಟ ಡಾಲಿ ಧನಂಜಯ್‌

ವಾರ್ತಾಭಾರತಿವಾರ್ತಾಭಾರತಿ20 Jan 2026 11:59 PM IST
share
ಸಾಯಿಬಾಬಾರ ಮಾನವೀಯ ಸಂದೇಶಗಳಿಂದ ಸದೃಢ ಸಮಾಜ ನಿರ್ಮಾಣ: ನಟ ಡಾಲಿ ಧನಂಜಯ್‌

ಯಾದಗಿರಿ: ಈ ಭರತ ಭೂಮಿ ಪವಿತ್ರ ಶರಣರ, ಸೂಫಿ ಸಂತರ ನಾಡು. ಇಲ್ಲಿ ಆಧ್ಯಾತ್ಮಿಕಕ್ಕೆ ಮೊದಲಿನಿಂದಲೂ ಜನರು ಹೆಚ್ಚು ಪ್ರಾಮುಖ್ಯತೆ ಇರುವುದನ್ನು ಕಾಣುತ್ತೇವೆ, ಆಯಾ ಕಾಲಕ್ಕೆ ಆಧ್ಯಾತ್ಮಿಕ ಸಾಧಕರು ತಮ್ಮ ಬದುಕನ್ನೆ ಸಮಾಜದ ಪ್ರಗತಿಗೆ ಅರ್ಪಿಸಿದ್ದಾರೆ, ಅವರ ಸಾಲಿನಲ್ಲಿ ಶಿರಡಿ ಸಾಯಿಬಾಬಾ ಒಬ್ಬರು. ಅವರ ನೀಡಿರುವ ಮಾನವೀಯ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸುವುದು ಅವಶ್ಯಕವಾಗಿದೆ ಎಂದು ಕನ್ನಡದ ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ್‌ ಹೇಳಿದರು.

ಜಿಲ್ಲೆಯ ಶಹಾಪೂರ ತಾಲೂಕಿನ ಇಬ್ರಾಹಿಂಪೂರ ಗ್ರಾಮದಲ್ಲಿರುವ ಸಾಯಿ ಮಂದಿರದ ಆವರಣದಲ್ಲಿ ಹಮ್ಮಿಕೊಂಡಿದ್ದ ಅವರ 4ನೇ ವರ್ಷದ ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ನಾವೆಲ್ಲರೂ ಮೊದಲು ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು, ನಮ್ಮ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ, ಅವರಲ್ಲಿ ಉನ್ನತ ಗುರಿ ಮೂಡಿಸಿ ಸೂಕ್ತ ಪ್ರೋತ್ಸಾಹ ನೀಡಿದಾಗ ಮಾತ್ರ ಅವರು ಪರಿಶ್ರಮದಿಂದ ಗುರಿ ತಲುಪಿ ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡುತ್ತಾರೆ ಎಂದು ಅಭಿಪ್ರಾಯ ಪಟ್ಟರು.

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಜನರು ಬಹಳ ಮುಗ್ದರು, ಕನ್ನಡ ಚಲನಚಿತ್ರಗಳನ್ನು ಸದಾ ವೀಕ್ಷಿಸಿ, ಕಲಾವಿದರನ್ನು ಪ್ರೋತ್ಸಾಹಿಸಿದ ಪರಿಣಾಮ ಇನ್ನೂ ಕನ್ನಡ ಭಾಷೆ, ಸಂಸ್ಕೃತಿ ಗಟ್ಟಿಯಾಗಿ ಉಳಿದಿದೆ. ಈ ಭಾಗದಲ್ಲಿ ಕೂಡ ಹಲವಾರು ಪ್ರತಿಭೆಗಳಿವೆ. ನಾವೆಲ್ಲರೂ ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿ, ಬೆಂಬಲ ನೀಡಬೇಕು ಇದರಿಂದ ಅವರ ಪ್ರತಿಭೆ ಸಾರ್ವಜನಿಕವಾಗಿ ಅನಾವರಣಗೊಂಡು ನಾಡಿಗೆ ಪರಿಚಯಿಸಲು ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು.

ಗಡಿ ಜಿಲ್ಲೆಯ ಜನರಲ್ಲಿ ಬಸವಾದಿ ಶರಣರ ವೈಚಾರಿಕೆ ಚಿಂತನೆಗಳನ್ನು ತಲುಪಿಸುವ ಮೂಲಕ ಸಾಮಾಜಿಕವಾಗಿ ಪರಿವರ್ತನೆಗೆ ಎಲ್ಲರೂ ಶ್ರಮಿಸುವುದು ಅವಶ್ಯಕ. ಈ ಕ್ಷೇತ್ರ ಬರುವ ದಿನಗಳಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕಾಣುವ ಮೂಲಕ ಸಮಾಜ ಮುಖಿ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಎಲ್ಲರ ಗಮನ ಸೆಳೆಯಲಿ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಿ ಮಾತನಾಡಿ, ನಾವು ಇಂದು ಸದಾ ನಮ್ಮ ಚಟುವಟಿಕೆಗಳಿಗೆ ಹೆಚ್ಚು ಸಮಯ ನೀಡುತ್ತಿರುವುದರಿಂದ ಶಾಂತಿ, ನೆಮ್ಮದಿಯಿಂದ ದೂರವಾಗುತ್ತಿದ್ದೇವೆ ಎಂಬ ಅರಿವು ಕೂಡ ನಮಗಿದೆ, ಸ್ವಲ್ಪ ಸಮಯ ಇಂತಹ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಎಲ್ಲಾ ವರ್ಗದ ಜನರೊಂದಿಗೆ ಬೆರೆತು ನಿಮ್ಮ ಕಾರ್ಯಗಳಲ್ಲಿ ನಾವು ತೊಡಗಿಸಿಕೊಳ್ಳಬೇಕು ಅಂದಾಗ ಮಾತ್ರ ಎಲ್ಲರಿಗೂ ಭಾವೈಕ್ಯತೆಯ ಭಗವಂತ ಸಾಯಿಬಾಬಾರ ಆಶೀರ್ವಾದ ಎಲ್ಲರಿಗೂ ಸಿಗುತ್ತದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಮಹಿಳೆಯರಲ್ಲಿ ವಿಶೇಷವಾಗಿ ನಾವೇಲ್ಲರೂ ಜಾಗೃತಿ ಮೂಡಿಸುತ್ತಿದ್ದೇವೆ. ಆದರೂ ಅಲ್ಲಲ್ಲಿ ವಿದ್ಯಾರ್ಥಿನಿಯರ ಮೇಲೆ ಶೋಷಣೆ ಇನ್ನಿತರ ಘಟನೆಗಳು ಜರುಗುತ್ತಿವೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಇಲ್ಲಿ ಅಭಿವೃದ್ಧಿ ಸಾಧಿಸುವುದು ಬಹಳಷ್ಟಿದೆ ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ ಗುರುಮಿಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಇಂದು ನಾವು ಬದುಕಿನಲ್ಲಿ ದೈವದತ್ತವಾಗಿ ಒಲಿದಿರುವ ಕಾಯಕದಲ್ಲಿ ನಿಷ್ಠೆಯಿಂದ ಕೆಲಸ ಮಾಡಬೇಕು, ಆದಷ್ಟು ಕಡಿಮೆ ಆಸೆಗಳನ್ನು ಇಟ್ಟುಕೊಳ್ಳಬೇಕು. ಅಂದಾಗ ಮಾತ್ರ ಮನಸ್ಸಿಗೆ ಹೊಸ ಚೈತನ್ಯ ಶಕ್ತಿ ಪ್ರಾಪ್ತಿಯಾಗುತ್ತದೆ ಎಂದರು.

ಸಮಾರಂಭದಲ್ಲಿ ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಕರವೇ ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಶರಣು ಗದ್ದುಗೆ ಮಾತನಾಡಿ ಈ ಭಾಗದಲ್ಲಿ ದಿಗ್ಗಿ ಪರಿವಾರದ ಯುವಕರು ಕೈಗೊಂಡಿರುವ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳು ಇನ್ನೂ ವಿಸ್ತಾರವಾಗಿ ಎಲ್ಲರಿಗೂ ಅದರ ಲಾಭ ಸಿಗಲಿ ಎಂದರು.

ಈ ವೇಳೆ ಅರಕೇರಾ ಬಿ. ಗುರುಲಿಂಗ ಸ್ವಾಮೀಜಿ, ಶಹಾಪೂರ ಕಾಳ ಹಸ್ತೇಂದ್ರ ಸ್ವಾಮೀಜಿ ನಿಖಿಲ್‌ರಾಜ್ ಮೌರ್ಯ, ತಿಪ್ಪೇಸ್ವಾಮಿ, ನವೀನ್‌ ಕುಮಾರ್‌, ವಿ. ರವಿ, ಟ್ರಸ್ಟಿನ್ ಅಧ್ಯಕ್ಷ ಮಹಾರಾಜ್ ದಿಗ್ಗಿ, ಸಿದ್ದಪ್ಪಾಜಿ, ಕು. ಲಲಿತಾ ಅನಪೂರ, ಬಸ್ಸುಗೌಡ ಬಿಳ್ಹಾರ, ಜಹೀರುದ್ದೀನ್ ಸವೇರಾ, ಬಾಳು ಬೆಳಗುಂದಿ, ಮಲ್ಲಣ್ಣ ಐಕೂರ, ಶ್ರೀಧರ ಸಾಹುಕಾರ, ಗೌಡಪ್ಪಗೌಡ ಆಲ್ದಾಳ, ಬಾಷುಮಿಯಾ ವಡಗೇರಾ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Dhananjay
share
ವಾರ್ತಾಭಾರತಿ
ವಾರ್ತಾಭಾರತಿ
Next Story
X