Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿಯೂ...

ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿಯೂ ಸಕ್ರೀಯವಾಗಿ ಭಾಗವಹಿಸಿ : ಸಚಿವ ಶರಣಬಸಪ್ಪ ದರ್ಶನಾಪುರ

ವಾರ್ತಾಭಾರತಿವಾರ್ತಾಭಾರತಿ8 Sept 2025 6:03 PM IST
share
ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿಯೂ ಸಕ್ರೀಯವಾಗಿ ಭಾಗವಹಿಸಿ :  ಸಚಿವ ಶರಣಬಸಪ್ಪ ದರ್ಶನಾಪುರ
ಸಿಎಂ ಕಪ್ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಯಾದಗಿರಿ: ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರ ಮಟ್ಟದಲ್ಲಿಯೂ ಜಿಲ್ಲೆಯ ಕೀರ್ತಿ ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಸಿ.ಎಂ.ಕಪ್ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಪಟುಗಳು ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿಯೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಸರ್ಕಾರ ನೀಡಿದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಜಿಲ್ಲೆಯ ಕೀರ್ತಿ ಹೆಚ್ಚಿಸುವಂತೆ ಸಲಹೆ ನೀಡಿದರು.

ಕ್ರೀಡಾಪಟುಗಳು ಸೋಲು ಗೆಲುವಿಗೆ ಮಹತ್ವ ನೀಡದೇ ಆತ್ಮವಿಶ್ವಾಸದಿಂದ, ಕ್ರೀಡಾ ಮನೋಭಾವನೆಯೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಛಲ ಹಾಗೂ ಗುರಿ ಇದ್ದಾಗ ಮಾತ್ರ ಸಾಧನೆಗೈಯ್ಯಲು ಸಾಧ್ಯವೆಂದ ಅವರು, ತೀರ್ಪುಗಾರರ ತೀರ್ಮಾನಕ್ಕೆ ಬದ್ಧರಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಕ್ರೀಡಾಪಟುಗಳಿಗೆ ಸವಲತ್ತು ನೀಡುವ ಜವಾಬ್ದಾರಿ ತಮ್ಮ ಹಾಗೂ ಜನಪ್ರತಿನಿಧಿಗಳದ್ದಾಗಿದ್ದು, ಸರ್ಕಾರದಿಂದಲೂ ಅವಶ್ಯಕ ಸೌಲಭ್ಯ ಒದಗಿಸುವದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರ ಮಟ್ಟದ ಜಾವೆಲಿಯನ್ ಕ್ರೀಡಾಪಟು ರೋಹಿತ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು. ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಯುವಜನಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಸ್ವಾಗತಿಸಿದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಾಬೂರಾವ್ ಕಾಡ್ಲೂರ್, ಸಿದ್ದಲಿಂಗಯ್ಯ ರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣುಮಂತ ದುಪ್ಪಲ್ಲಿ, ಭೀಮರಾಯ ಇತರರು ಉಪಸ್ಥಿತರಿದ್ದರು.

Tags

Sharanabasappa Darshanapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X