ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯ ಜೊತೆಗೆ ಅವರ ತತ್ವ, ಆದರ್ಶಗಳನ್ನೂ ಅಳವಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ

ಯಾದಗಿರಿ: ಭಗವಾನ್ ಗೌತಮ ಬುದ್ಧ, ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಮಾನತೆ ಮತ್ತು ಸ್ವಾಭಿಮಾನದ ಆಶಯಗಳಿಗೆ ಅನುಗುಣವಾಗಿ ಸಮಾಜ ನಿರ್ಮಾಣವಾಗಬೇಕು. ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಾಪಿಸುವುದರ ಜೊತೆಗೆ ಅವರ ತತ್ವ, ಆದರ್ಶ ಹಾಗೂ ಚಿಂತನೆಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದ ಕೋಟಗರವಾಡಿ ಬಡಾವಣೆಯಲ್ಲಿ ಶುಕ್ರವಾರ ನೂತನವಾಗಿ ನಿರ್ಮಿಸಲಾದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದೆ. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನ ಅವಕಾಶ ಒದಗಿಸಿದೆ. ಸಂವಿಧಾನದ ಆಶಯಗಳನ್ನು ಗೌರವಿಸುವುದರ ಜತೆಗೆ ಅವುಗಳನ್ನು ಸಮಾಜದಲ್ಲಿ ಸಾಕಾರಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರಿನ ಶ್ರೀ ಉರಿಲಿಂಗ ಪೆದ್ದಿ ಮಠದ ಪೀಠಾಧಿಪತಿ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಚಂದಪ್ಪ ಗಿರೆಪ್ಪನೋರ್, ಸೈದಪ್ಪ ಕುಲೂರು, ಶಿವಕುಮಾರ್ ಗಿರೆಪ್ಪನೋರ್, ಗೋಪಾಲ ಗಿರೆಪ್ಪನೋರ್, ತಾಯಪ್ಪ ಭಂಡಾರಿ, ಬಸವರಾಜ್ ಗಿರೆಪ್ಪನೋರ್, ಆಂಜನೇಯ ಕೋಳೂರು, ರಾಹುಲ್ ಕೊಲ್ಲೂರು, ಮೌನೇಶ್ ಗಿರೆಪ್ಪನೋರ್, ತಿಪ್ಪಣ್ಣ ಹಳಿಗೇರಿ, ನಾಗರಾಜ ಕುಲೂರು, ಧರ್ಮಣ್ಣ ಗಿರೆಪ್ಪನೋರ್, ಮಾರೆಪ್ಪ ಗಿರೆಪ್ಪನೋರ್, ಸೈದಪ್ಪ ಅರಿಕೇರಾ ಸೇರಿದಂತೆ ಕೋಟಗರವಾಡಿ ಬಡಾವಣೆಯ ಸಾವಿರಾರು ಜನರು ಭಾಗವಹಿಸಿದ್ದರು.






